ತಿಂಗಳೊಳಗೆ 13 ಹೊಸ ಕಾರು ಶೋರೂಂ ತೆರೆಯಲು ಮುಂದಾದ ಚೀನಾ ಕಂಪನಿ: ಸ್ವದೇಶಿ ವಾಹನ ತಯಾರಕರಿಗೆ ಶಾಕ್!

ಚೀನಾ ಮೂಲದ ಬಿವೈಡಿ (BYD) ಜನಪ್ರಿಯ ಕಾರು ತಯಾರಕ ಕಂಪನಿಯಾಗಿದೆ. ಜಾಗತಿಕವಾಗಿ ಟೆಸ್ಲಾದೊಂದಿಗೆ ಸ್ಪರ್ಧಿಸುತ್ತದೆ. ಈ ಕಂಪನಿ ದೇಶೀಯ ಮಾರುಕಟ್ಟೆಯನ್ನು ಪ್ರವೇಶಿಸಿ ವರ್ಷಗಳಾಗಿದ್ದು, ಸೀಲ್, ಅಟ್ಟೊ 3 ಹಾಗೂ ಇಮ್ಯಾಕ್ಸ್ 7 ಎಲೆಕ್ಟ್ರಿಕ್ ಕಾರುಗಳನ್ನು ಯಶಸ್ವಿಯಾಗಿ ಮಾರಾಟಗೊಳಿಸುತ್ತಿದೆ. ಇವುಗಳು ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಹೊಂದಿದ್ದು, ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿ ಮಾಡುತ್ತಿದ್ದಾರೆ. ಕಂಪನಿ ಕಾರುಗಳಿಗೆ ಬೇಡಿಕೆ ಹೆಚ್ಚಾದ ಹಿನ್ನೆಲೆ, ಹೊಸ ಶೋರೂಂಗಳನ್ನು ತೆರೆಯಲು ಮುಂದಾಗಿದೆ. ಇದರಿಂದ ಸ್ವದೇಶಿ ವಾಹನ ತಯಾರಕ ಕಂಪನಿಗಳಿಗೆ ತೀವ್ರ ಪೈಪೋಟಿ ಎದುರಾಗಲಿದೆ.

ಇತ್ತೀಚೆಗೆ ಬಿವೈಡಿ ಕಂಪನಿ ಈ ತಿಂಗಳಾಂತ್ಯದೊಳಗೆ ದೇಶಾದ್ಯಂತ 13 ನೂತನ ಡೀಲರ್‌ಶಿಪ್‌ಗಳನ್ನು ತೆರೆಯಲು ಉದ್ದೇಶಿಸಲಾಗಿದೆ ಎಂದು ಘೋಷಣೆ ಮಾಡಿತ್ತು. ಸದ್ಯ, ಕಂಪನಿಯು ವಿವಿಧ ರಾಜ್ಯಗಳ ಪ್ರಮುಖ ನಗರಗಳಲ್ಲಿ ಬರೋಬ್ಬರಿ 27 ಡೀಲರ್‌ಶಿಪ್‌ಗಳನ್ನು ಹೊಂದಿದೆ. ಈ ಸಂಖ್ಯೆ ಜನವರಿ ಕೊನೆಯೊಳಗೆ 40ಕ್ಕೆ ಹೆಚ್ಚಾಗಲಿದೆ.

BYD Open 13 New Car Showroom By The End Of This Month Details

ಬಿವೈಡಿ, ಸೀಲಯನ್ 7 ಇವಿ (Sealion 7 EV) ಹೆಸರಿನ ಎಲೆಕ್ಟ್ರಿಕ್ ಕಾರನ್ನು ತಯಾರಿಸುತ್ತಿದೆ. ಈ ಕಾರನ್ನು ಇದೇ ಜನವರಿ 17ರಿಂದ ಆರಂಭವಾಗುವ 'ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋ 2025'ರಲ್ಲಿ ಅನಾವರಣಗೊಳಿಸುವ ನಿರೀಕ್ಷೆಯಿದೆ. ಇದು 82.5 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಮತ್ತು 91.3 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಹೊಂದಿದ್ದು, ಸಂಪೂರ್ಣ ಚಾರ್ಜ್‌ನಲ್ಲಿ 456 ರಿಂದ 502 ಕಿಲೋಮೀಟರ್‌ವರೆಗೆ ರೇಂಜ್ (ಮೈಲೇಜ್) ನೀಡುತ್ತದೆ.

ಪ್ರಸ್ತುತ ಬಿವೈಡಿ ಕಂಪನಿ ದೇಶೀಯ ಮಾರುಕಟ್ಟೆಯಲ್ಲಿ ಮಾರಾಟಗೊಳಿಸುವ ಇಮ್ಯಾಕ್ಸ್ (eMAX 7) ಪ್ರಖ್ಯಾತ ಎಂಪಿವಿಯಾಗಿ ಹೊರಹೊಮ್ಮಿದೆ. ರೂ.26.90 ರಿಂದ ರೂ.29.90 ಲಕ್ಷ (ಎಕ್ಸ್ ಶೋರೂಂ) ಬೆಲೆಯನ್ನು ಹೊಂದಿದೆ. 55.4 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಮತ್ತು 71.8 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಪಡೆದಿದೆ. ಭರ್ತಿ ಚಾರ್ಜ್‌ನಲ್ಲಿ 420 ರಿಂದ 530 ಕಿಲೋಮೀಟರ್ ಕ್ರಮಿಸುತ್ತದೆ.

BYD Open 13 New Car Showroom By The End Of This Month Details

ಈ ಬಿವೈಡಿ ಇಮ್ಯಾಕ್ಸ್ ಎಂಪಿವಿ 6 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ. 12.8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್, 5-ಇಂಚಿನ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು, ಆಟೋ ಎಸಿ ಮತ್ತು ವೈರ್‌ಲೆಸ್ ಫೋನ್ ಚಾರ್ಜರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳನ್ನು ಹೊಂದಿದೆ.

ಬಿವೈಡಿ ಸೀಲ್ (BYD Seal) ಬಗ್ಗೆ ಹೇಳುವುದಾದರೆ, ಇದೊಂದು ಎಲೆಕ್ಟ್ರಿಕ್ ಸೆಡಾನ್ ಆಗಿದೆ. ರೂ.41 ರಿಂದ ರೂ.53 ಲಕ್ಷ ಎಕ್ಸ್ ಶೋರೂಂ ದರದಲ್ಲಿ ಖರೀದಿಗೆ ದೊರೆಯುತ್ತದೆ. 61.44 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಹಾಗೂ 82.56 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಬ್ಯಾಟರಿ ಪ್ಯಾಕ್‌ನ್ನು ಒಳಗೊಂಡಿದೆ. ಪೂರ್ತಿ ಚಾರ್ಜ್‌ನಲ್ಲಿ 510 ರಿಂದ 650 ಕಿಲೋಮೀಟರ್ ಓಡುತ್ತದೆ. ಇದು 5 ಆಸನಗಳನ್ನು ಪಡೆದಿದೆ.

BYD Open 13 New Car Showroom By The End Of This Month Details

ಬಿವೈಡಿ ಅಟ್ಟೊ 3 (BYD Atto 3) ಎಲೆಕ್ಟ್ರಿಕ್ ಎಸ್‌ಯುವಿ ಕುರಿತಂತೆ ಮಾತನಾಡುವುದಾದರೆ, ಈ ಕಾರು ರೂ.24.99 ಲಕ್ಷದಿಂದ ರೂ.33.99 ಎಕ್ಸ್ ಶೋರೂಂ ಬೆಲೆಯನ್ನು ಒಳಗೊಂಡಿದೆ. 49.92 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಮತ್ತು 60.48 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಒಳಗೊಂಡಿದೆ. ಸಂಪೂರ್ಣ ಚಾರ್ಜ್‌ನಲ್ಲಿ 468 ರಿಂದ 521 ಕಿಲೋಮೀಟರ್ ರೇಂಜ್ (ಮೈಲೇಜ್) ನೀಡುತ್ತದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Saturday, January 11, 2025, 9:30 [IST]
English summary
Byd open 13 new car showroom by the end of this month details
Read more on byd india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+