Hybrid SUVs: ಬೈಕ್‌ನ್ನು ಮೀರಿಸುವಂತೆ 28 ಕಿ.ಮೀ ಮೈಲೇಜ್! 3 ಜನಪ್ರಿಯ ಹೈಬ್ರಿಡ್ ಎಸ್‌ಯುವಿಗಳಿವು.. ಬೆಲೆ ಎಷ್ಟು?
ಉತ್ತಮ ಇಂಧನ ದಕ್ಷತೆ ಹಾಗೂ ಪರಿಸರ ಸ್ನೇಹಿ ಕಾರುಗಳಿಗೆ ಹೈಬ್ರಿಡ್ ಎಸ್‌ಯುವಿಗಳು (Hybrid SUVs) ಅತ್ಯುತ್ತಮವಾದ ಉದಾಹರಣೆಯಾಗಿವೆ. ಇವುಗಳಲ್ಲಿ ಪೆಟ್ರೋಲ್/ ಡೀಸೆಲ್ ಎಂಜಿನ್ ಮತ್ತು ಎಲೆಕ್ಟ್ರಿಕ್ ಮೋಟರ್‌ನ್ನು ಬಳಸಲಾಗುತ್ತದೆ. ನೀವು ಹೊಚ್ಚ ಹೊಸ ಕಾರೊಂದನ್ನು ಖರೀದಿಸಲು ಆಲೋಚಿಸಿದ್ದೀರಾ.. ಹಾಗಾದರೆ ಮಾರುತಿ ಸುಜುಕಿ ವಿಕ್ಟೋರಿಸ್, ಟೊಯೊಟಾ ಅರ್ಬನ್ ಕ್ರೂಸರ್ ಹೈರೈಡರ್ ಹಾಗೂ ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ ಹೈಬ್ರಿಡ್ ಎಸ್‌ಯುವಿಗಳು ಸರಿಯಾದ ಆಯ್ಕೆಯಾಗಲಿವೆ. ಬನ್ನಿ.. ಇವುಗಳ ಬೆಲೆ ಎಷ್ಟು, ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಪೂರ್ಣವಾದ ವಿವರಗಳನ್ನು ತಿಳಿಯೋಣ.
ಮಾರುತಿ ಸುಜುಕಿ ವಿಕ್ಟೋರಿಸ್ (Maruti Suzuki Victoris):
ಇದೊಂದು ಪ್ರಖ್ಯಾತ ಎಸ್‌ಯುವಿಯಾಗಿದೆ. ಹೈಬ್ರಿಡ್ ರೂಪಾಂತರವು ರೂ.16.38 ಲಕ್ಷ (ಎಕ್ಸ್-ಶೋರೂಂ) ಆರಂಭಿಕ ದರವನ್ನು ಪಡೆದಿದೆ. 1.5-ಲೀ. ಸ್ಟ್ರಾಂಗ್ ಹೈಬ್ರಿಡ್ (ಪೆಟ್ರೋಲ್+ಎಲೆಕ್ಟ್ರಿಕ್) ಎಂಜಿನ್‌ನ್ನು ಹೊಂದಿದ್ದು, 116 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 141 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. ಇ-ಸಿವಿಟಿ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 28.65 ಕಿ.ಮೀವರಗೆ ಮೈಲೇಜ್ ನೀಡುತ್ತದೆ.

ಈ ಕಾರು ಅತ್ಯುತ್ತಮವಾದ ವಿನ್ಯಾಸವನ್ನು ಒಳಗೊಂಡಿದೆ. ಶಾರ್ಪ್ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಶಾರ್ಕ್ ಫಿನ್ ಆಂಟೆನಾ, ಕನೆಕ್ಟ್ಡ್ ಎಲ್ಇಡಿ ಟೈಲ್‌ಲ್ಯಾಂಪ್‌ಗಳು ಹಾಗೂ 18-ಇಂಚಿನ ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ. ಆರ್ಕ್ಟಿಕ್ ವೈಟ್, ಸ್ಪ್ಲೆಂಡಿಡ್ ಸಿಲ್ವರ್, ಎಟರ್ನಲ್ ಬ್ಲೂ, ಸಿಜ್ಲಿಂಗ್ ರೆಡ್, ಬ್ಲೂಯಿಶ್ ಬ್ಲ್ಯಾಕ್ ಮತ್ತು ಮ್ಯಾಗ್ಮಾ ಗ್ರೇ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. 210 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,600 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿದೆ.
ನೂತನ 'ವಿಕ್ಟೋರಿಸ್' 5 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದೆ. ಪ್ರಯಾಣಿಕರು ಸುಲಭವಾಗಿ ಸಂಚರಿಸಬಹುದು. 10.1 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಪನೋರಮಿಕ್ ಸನ್‌ರೂಫ್, 64-ಕಲರ್ ಆಂಬಿಯೆಂಟ್ ಲೈಟಿಂಗ್ ಮತ್ತು ಆಟೋ ಎಸಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ. ಸುರಕ್ಷತೆಯ ದೃಷ್ಟಿಯಿಂದ 6 ಏರ್‌ಬ್ಯಾಗ್‌ಗಳು, ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.

ಟೊಯೊಟಾ ಅರ್ಬನ್ ಕ್ರೂಸರ್ ಹೈರೈಡರ್ (Toyota Urban Cruiser Hyryder):
ಈ ಎಸ್‌ಯುವಿಯ ಹೈಬ್ರಿಡ್ ರೂಪಾಂತರದ ಬೆಲೆಯೂ ರೂ.16.46 ಲಕ್ಷದಿಂದ ಶುರುವಾಗುತ್ತದೆ. 1.5-ಲೀ. ಸ್ಟ್ರಾಂಗ್ ಹೈಬ್ರಿಡ್ (ಪೆಟ್ರೋಲ್+ಎಲೆಕ್ಟ್ರಿಕ್) ಎಂಜಿನ್‌ನ್ನು ಒಳಗೊಂಡಿದ್ದು, 116 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 141 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಇ-ಸಿವಿಟಿ ಗೇರ್‌ಬಾಕ್ಸ್‌ನ್ನು ಪಡೆದಿದೆ. 27.97 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ.
ಹೊಸ 'ಹೈರೈಡರ್' ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಪಡೆದಿದೆ. 5 ಆಸನಗಳನ್ನು ತನ್ನದಾಗಿಸಿಕೊಂಡಿದೆ. 9 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಸನ್‌ರೂಫ್ ಹಾಗೂ ಯುಎಸ್‌ಬಿ ಚಾರ್ಜಿಂಗ್ ಪೋರ್ಟ್‌ಗಳು ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಯಾಣಿಕರ ರಕ್ಷಣೆಗಾಗಿ 6 ಏರ್‌ಬ್ಯಾಗ್‌ಗಳು, ವಿಎಸ್‌ಸಿ (ವೆಹಿಕಲ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.

ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ (Maruti Suzuki Grand Vitara):
ಇದೊಂದು ಜಗಮೆಚ್ಚಿದ ಎಸ್‌ಯುವಿಯಾಗಿದೆ. ಹೈಬ್ರಿಡ್ ರೂಪಾಂತರವು ರೂ.16.63 ಲಕ್ಷ ಪ್ರಾರಂಭಿಕ ದರವನ್ನು ಹೊಂದಿದೆ. 1.5-ಲೀ. ಸ್ಟ್ರಾಂಗ್-ಹೈಬ್ರಿಡ್ (ಪೆಟ್ರೋಲ್+ಎಲೆಕ್ಟ್ರಿಕ್) ಎಂಜಿನ್‌ನ್ನು ಪಡೆದಿದ್ದು, 115.5 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 141 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. ಇ-ಸಿವಿಟಿ ಗೇರ್‌ಬಾಕ್ಸ್‌ನ್ನು ಹೊಂದಿದೆ. 27.97 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ.
ನೂತನ 'ಗ್ರ್ಯಾಂಡ್ ವಿಟಾರಾ' 5 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದೆ. ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಓಡಾಟ ನಡೆಸಬಹುದು. 9 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಸನ್‌ರೂಫ್, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು ಮತ್ತು ವೈರ್‌ಲೆಸ್ ಚಾರ್ಜಿಂಗ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ. ಸುರಕ್ಷತೆಯ ದೃಷ್ಟಿಯಿಂದ 6 ಏರ್‌ಬ್ಯಾಗ್‌ಗಳು, ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ) ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.


Click it and Unblock the Notifications








