20 Km ಮೈಲೇಜ್.. 5 ಸೀಟರ್, ಕಂಪನಿಗೆ ಕಾಮಧೇನು ಆಯ್ತು 8 ಲಕ್ಷದ ಈ ಸೇಫ್ಟಿ ಕಾರು!
ಸಿಟ್ರನ್ ಬಸಾಲ್ಟ್ (Citroen Basalt) ಜನಪ್ರಿಯ ಕೂಪೆ ಎಸ್‌ಯುವಿಯಾಗಿದೆ. ಹೆಚ್ಚು ಅತ್ಯಾಧುನಿಕವಾದ ವಿನ್ಯಾಸ ಹಾಗೂ ಉತ್ತಮವಾದ ವೈಶಿಷ್ಟ್ಯಗಳನ್ನು ಹೊಂದಿದೆ. ಕೈಗೆಟುಕುವ ಬೆಲೆಯಲ್ಲಿ ಕೂಡ ಲಭ್ಯವಿದೆ. ಅದರ ಹೊರತಾಗಿಯೂ ಈ ಕಾರಿನ ಮಾರಾಟ ಸಂಖ್ಯೆ ದಿನದಿಂದ ದಿನಕ್ಕೆ ಕುಸಿತವಾಗುತ್ತಿತ್ತು. ಪವಾಡ ಸದೃಶವೆಂಬಂತೆ ಇದೇ 'ಬಸಾಲ್ಟ್' ಮಾರಾಟ ಪ್ರಮಾಣವು ಈ ಜೂನ್ ತಿಂಗಳು ಸುಧಾರಿಸಿದೆ. ಒಟ್ಟು 214 ಯುನಿಟ್‌ಗಳನ್ನು ಮಾರಾಟ ಮಾಡಲಾಗಿದೆ.
ಇದೇ ವರ್ಷದ ಮೊದಲ 5 ತಿಂಗಳಲ್ಲೂ 'ಸಿಟ್ರನ್ ಬಸಾಲ್ಟ್' ಎಸ್‌ಯುವಿ ಮಾರಾಟದಲ್ಲಿ ಹಲವು ಏರಿಳಿತವನ್ನು ಕಾಣಲಾಗಿದೆ. ಮೇನಲ್ಲಿ 95 ಯುನಿಟ್, ಏಪ್ರಿಲ್‌ನಲ್ಲಿ 66 ಯುನಿಟ್, ಮಾರ್ಚ್‌ನಲ್ಲಿ 100 ಯುನಿಟ್, ಫೆಬ್ರವರಿಯಲ್ಲಿ 37 ಯುನಿಟ್ ಹಾಗೂ ಜನವರಿಯಲ್ಲಿ 61 ಯುನಿಟ್‌ಗಳನ್ನು ಮಾತ್ರ ಮಾರಾಟಗೊಳಿಸಲಾಗಿತ್ತು.

ಸಿಟ್ರನ್ ಬಸಾಲ್ಟ್ ವಿಶೇಷತೆಗಳೇನು:
ಈ ಎಸ್‌ಯುವಿಯು ಬಜೆಟ್ ಬೆಲೆಯಲ್ಲಿ ಸಿಗಲಿದ್ದು, ಮಧ್ಯಮ ಹಾಗೂ ಶ್ರೀಮಂತ ವರ್ಗದ ಗ್ರಾಹಕರು ಸುಲಭವಾಗಿ ಕೊಂಡುಕೊಳ್ಳಬಹುದು. ಅದಕ್ಕೆ ತಕ್ಕಂತೆ ರೂ.8.32 ಲಕ್ಷದಿಂದ ರೂ.14.10 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ಬಸಾಲ್ಟ್ 1.2ಪಿ ಯು, ಬಸಾಲ್ಟ್ ಪ್ಲಸ್, ಬಸಾಲ್ಟ್ ಟರ್ಬೊ ಪ್ಲಸ್, ಬಸಾಲ್ಟ್ ಟರ್ಬೊ ಎಟಿ ಪ್ಲಸ್ ಹಾಗೂ ಬಸಾಲ್ಟ್ ಟರ್ಬೊ ಮ್ಯಾಕ್ಸ್ ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ.
ಇದು ಹೊರಭಾಗದಲ್ಲಿ ತುಂಬಾ ಚೆನ್ನಾಗಿರುವ ವಿನ್ಯಾಸವನ್ನು ಹೊಂದಿದೆ. ಸ್ಪ್ಲಿಟ್ ಹೆಡ್‌ಲೈಟ್ ಸೆಟಪ್, ವಿ-ಆಕಾರಕ್ಕೆ ಹೋಲಿಕೆಯಾಗಬಲ್ಲ ಸ್ಪ್ಲಿಟ್ ಎಲ್ಇಡಿ ಡಿಆರ್‌ಎಲ್‌ಗಳು, ಟೈಲ್‌ಲೈಟ್‌ಗಳು & ಡುಯಲ್ ಟೋನ್ ಅಲಾಯ್ ವೀಲ್‌ಗಳನ್ನು ಪಡೆದಿದೆ. ಪೋಲಾರ್ ವೈಟ್, ಸ್ಟೀಲ್ ಗ್ರೇ, ಪ್ಲಾಟಿನಂ ಗ್ರೇ ಮತ್ತು ಕಾಸ್ಮೊ ಬ್ಲೂ ಒಳಗೊಂಡಂತೆ ಹಲವು ಬಣ್ಣಗಳೊಂದಿಗೂ ದೊರೆಯುತ್ತದೆ.

ನೂತನ ಬಸಾಲ್ಟ್ 5 ಆಸನಗಳನ್ನು ಒಳಗೊಂಡಿದೆ. ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಓಡಾಟ ನಡೆಸಬಹುದು. ವಾರಾಂತ್ಯ ಹಾಗೂ ರಜಾದಿನಗಳಲ್ಲಿ ಪ್ರವಾಸಕ್ಕೆ ಹೋಗುವ ಸಂದರ್ಭದಲ್ಲಿ ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು 470 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಪಡೆದಿದೆ. ಜೊತೆಗೆ 4,352 ಎಂಎಂ ಉದ್ದ, 1,765 ಎಂಎಂ ಅಗಲ, 1593 ಎಂಎಂ ಎತ್ತರ ಹಾಗೂ 2,651 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿದೆ.
ಈ ಕಾರು ಬಲಿಷ್ಠವಾದ ಪವರ್‌ಟ್ರೇನ್ ಆಯ್ಕೆಯನ್ನು ಪಡೆದಿದೆ. 1.2-ಲೀಟರ್ ನ್ಯಾಚುರಲ್ ಆಸ್ಪಿರೇಟೆಡ್ ಪೆಟ್ರೋಲ್ & 1.2-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 5-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಹೊಂದಿದೆ. 18 ರಿಂದ 19.5 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ.

ಹೊಸ ಬಸಾಲ್ಟ್ ಕ್ಯಾಬಿನ್ ವಿನ್ಯಾಸವು ಅಚ್ಚುಕಟ್ಟಾಗಿದೆ. 10.2-ಇಂಚಿರುವ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 7-ಇಂಚಿರುವ ಡಿಜಿಟಲ್ ಡ್ರೈವರ್ಸ್ ಡಿಸ್‌ಪ್ಲೇ, ವೈರ್‌ಲೆಸ್ ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ವೈರ್‌ಲೆಸ್ ಫೋನ್ ಚಾರ್ಜರ್, ಪುಶ್ ಬಟನ್ ಸ್ಟಾರ್ಟ್, ಸ್ಟೀರಿಂಗ್ ಮೌಂಟೆಡ್ ಆಡಿಯೋ ಕಂಟ್ರೋಲ್‌ಗಳು ಮತ್ತು ಪವರ್ ವಿಂಡೋ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ.
ಇದು ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆಯನ್ನು ಒದಗಿಸುತ್ತದೆ. ದೇಶದ ವಾಹನಗಳಿಗೆ ಸುರಕ್ಷತಾ ಪರೀಕ್ಷೆ ನಡೆಸುವ ಭಾರತ್ ಎನ್‌ಸಿಎಪಿ (Bharat NCAP) 'ಬಸಾಲ್ಟ್'ಗೆ 4-ಸ್ಟಾರ್ ಸೇಫ್ಟಿ ರೇಟಿಂಗ್‌ನ್ನು ನೀಡಿದೆ. 6 ಏರ್‌ಬ್ಯಾಗ್, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್) ಹಾಗೂ ರೇರ್ ಪಾರ್ಕಿಂಗ್ ಸೆನ್ಸರ್ಸ್ ಒಳಗೊಂಡಂತೆ ಹಲವು ರಕ್ಷಣಾತ್ಮಕ ವೈಶಿಷ್ಟ್ಯಗಳನ್ನು ಹೊಂದಿದೆ.


Click it and Unblock the Notifications








