Citroen: 19.5 Km ಮೈಲೇಜ್.. 5-ಸೀಟರ್, 8 ಲಕ್ಷ.. ಕಾಮಧೇನುವಾದ ಸಿಟ್ರನ್ ಬಸಾಲ್ಟ್!

ಸಿಟ್ರನ್ ಬಸಾಲ್ಟ್ (Citroen Basalt) ಜನಪ್ರಿಯ ಕೂಪೆ ಎಸ್‌ಯುವಿಯಾಗಿದ್ದು, ಟಾಟಾ ಕರ್ವ್ (TATA Curvv) ಕಾರಿಗೆ ಪ್ರಬಲವಾದ ಪ್ರತಿಸ್ಪರ್ಧಿಯಾಗಿದೆ. ಇದು ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿದ್ದು, ಕೈಗೆಟುಕುವ ಬೆಲೆಯಲ್ಲಿಯೂ ಸಿಗುತ್ತದೆ. ಆದರೂ ಈ ಕಾರಿನ ಮಾರಾಟ ಸಂಖ್ಯೆ ದಿನದಿಂದ ದಿನಕ್ಕೆ ಕುಸಿತವಾಗುತ್ತಿತ್ತು... ಇದೇ ಮಾರ್ಚ್ ತಿಂಗಳಲ್ಲಿ ಮಾರಾಟ ಪ್ರಮಾಣ ಧಿಡೀರನೇ ಏರಿಕೆಯಾಗಿದೆ. ಬನ್ನಿ, ಆ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಿಳಿಯೋಣ.

ಕಳೆದ ತಿಂಗಳು (ಮಾರ್ಚ್-2025) ಸಿಟ್ರನ್ ಇಂಡಿಯಾ (Citroen India), ಬರೋಬ್ಬರಿ 100 ಯುನಿಟ್ 'ಬಸಾಲ್ಟ್' ಕೂಪೆ ಎಸ್‌ಯುವಿಗಳನ್ನು ಮಾರಾಟಗೊಳಿಸಿದೆ. ಅದೇ ಫೆಬ್ರವರಿಯಲ್ಲಿ 37 ಯುನಿಟ್‌ಗಳನ್ನು ಮಾರಾಟ ಮಾಡಲಾಗಿತ್ತು. ಈ ಅಂಕಿ ಸಂಖ್ಯೆಗೆ ಹೋಲಿಕೆ ಮಾಡಿದರೆ, ಮಾರಾಟ ಪ್ರಮಾಣ ತಿಂಗಳಿಂದ ತಿಂಗಳಿಗೆ (MoM) ಶೇಕಡ 170.27% ಪ್ರಗತಿಯಾಗಿದೆ. ಜನವರಿಯಲ್ಲಿಯೂ ಮಾರಾಟ ಸಂಖ್ಯೆ ಎರಡಂಕಿಯನ್ನು ದಾಟಿಲ್ಲ. ಕೇವಲ 61 ಯುನಿಟ್‌ಗಳನ್ನು ಮಾತ್ರ ಮಾರಲಾಗಿತ್ತು.

Citroen Basalt Suv March 2025 Sales Details

ಹೋದ ವರ್ಷವು 'ಸಿಟ್ರನ್ ಬಸಾಲ್ಟ್' ಕಾರಿನ ಮಾರಾಟ ಪ್ರಮಾಣವು ಹೇಳಿಕೊಳ್ಳುವ ಮಟ್ಟಿಗೆ ಅಷ್ಟಾಗಿ ಉತ್ತಮವಾಗಿರಲಿಲ್ಲ. ಡಿಸೆಂಬರ್‌ನಲ್ಲಿ 79 ಯುನಿಟ್, ನವೆಂಬರ್‌ನಲ್ಲಿ 47 ಯುನಿಟ್ ಹಾಗೂ ಅಕ್ಟೋಬರ್‌ ತಿಂಗಳಲ್ಲಿ 221 ಯುನಿಟ್‌ಗಳನ್ನು ಮಾರಾಟಗೊಳಿಸಲಾಗಿತ್ತು. ಸದ್ಯ ಮಾರಾಟ ಸಂಖ್ಯೆ ನಿಧಾನವಾಗಿ ಚೇತರಿಸಿಕೊಳ್ಳುವ ಹಾದಿಯಲ್ಲಿದೆ.

ಸಿಟ್ರನ್ ಬಸಾಲ್ಟ್ ಕೂಪೆ ಎಸ್‌ಯುವಿ ವಿಶೇಷತೆಗಳೇನು: ಈ ಕಾರು ಕನಿಷ್ಠ ರೂ.8.32 ಲಕ್ಷ ಮತ್ತು ಗರಿಷ್ಠ ರೂ.14.10 ಲಕ್ಷ (ಎಕ್ಸ್-ಶೋರೂಂ) (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಇದರಲ್ಲಿ 5 ಆಸನಗಳಿದ್ದು, ಪ್ರಯಾಣಿಕರು ಸುಲಭವಾಗಿ ಸಂಚರಿಸಬಹುದು. ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು 470 ಲೀ.ನಷ್ಟು ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ.

Citroen Basalt Suv March 2025 Sales Details

ನೂತನ ಸಿಟ್ರನ್ ಬಸಾಲ್ಟ್ ಎಸ್‌ಯುವಿ ಹೊರಭಾಗದಲ್ಲಿ ಆಕರ್ಷಕವಾದ ವಿನ್ಯಾಸವನ್ನು ಪಡೆದಿದೆ. ಪೋಲಾರ್ ವೈಟ್, ಸ್ಟೀಲ್ ಗ್ರೇ, ಪ್ಲಾಟಿನಂ ಗ್ರೇ ಮತ್ತು ಕಾಸ್ಮೊ ಬ್ಲೂ ಒಳಗೊಂಡಂತೆ ಹಲವು ಬಣ್ಣಗಳೊಂದಿಗೂ ದೊರೆಯುತ್ತದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ಸ್ ಡಿಸ್‌ಪ್ಲೇ, ವೈರ್‌ಲೆಸ್ ಫೋನ್ ಚಾರ್ಜರ್, ಪುಶ್ ಬಟನ್ ಸ್ಟಾರ್ಟ್, ಸ್ಟೀರಿಂಗ್ - ಮೌಂಟೆಡ್ ಆಡಿಯೋ ಕಂಟ್ರೋಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.

ಈ ಬಸಾಲ್ಟ್ ಕಾರು 1.2-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಹಾಗೂ 1.2-ಲೀಟರ್ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಪಡೆದಿದೆ. 5-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 18 ರಿಂದ 19.5 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.

Citroen Basalt Suv March 2025 Sales Details

ಹೊಸ ಸಿಟ್ರನ್ ಬಸಾಲ್ಟ್ ಎಸ್‌ಯುವಿ ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆಯನ್ನು ಒದಗಿಸಿತ್ತದೆ. ಸುರಕ್ಷತೆಯ ದೃಷ್ಟಿಯಿಂದ 6-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿ - ಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್) ಹಾಗೂ ರೇರ್ ಪಾರ್ಕಿಂಗ್ ಸೆನ್ಸರ್ಸ್ ಸೇರಿದಂತೆ ಹಲವು ರಕ್ಷಣಾತ್ಮಕ ವೈಶಿಷ್ಟ್ಯಗಳನ್ನು ಹೊಂದಿದೆ.

ಒಟ್ಟಾರೆಯಾಗಿ ಸಿಟ್ರನ್ ಬಸಾಲ್ಟ್ ಕೂಪೆ ಎಸ್‌ಯುವಿಯು ಕಂಪನಿಗೆ ಕಾಮಧೇನುವಾಗಿ ಮಾರ್ಪಟ್ಟಿದೆ. ಇದು ಹೆಚ್ಚು ಆಕರ್ಷಕವಾಗಿದ್ದು, ಈ ಏಪ್ರಿಲ್ ತಿಂಗಳು ಮಾರಾಟ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ನಿರೀಕ್ಷೆಯಿದೆ. ಮುಂಬರುವ ದಿನಗಳಲ್ಲಿ ಬಸಾಲ್ಟ್ ಎಸ್‌ಯುವಿಗೆ ದೇಶೀಯ ಗ್ರಾಹಕರಿಂದ ಯಾವ ರೀತಿಯ ಪ್ರತಿಕ್ರಿಯೆ ವ್ಯಕ್ತವಾಗುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ.

ಡ್ರೈವ್‌ ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋ ಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Monday, April 21, 2025, 13:16 [IST]
English summary
Citroen basalt suv march 2025 sales details
Read more on citroen india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+