Citroen: ಟಾಟಾ ಕರ್ವ್ ಪ್ರತಿಸ್ಪರ್ಧಿ.. ಹೊಸ ಸಿಟ್ರನ್ ಬಸಾಲ್ಟ್ ಎಕ್ಸ್ ಬಿಡುಗಡೆ, 7.95 ಲಕ್ಷ ಬೆಲೆ.. ಲಕ್ಷುರಿ ಫೀಚರ್ಸ್!
ಬಹುನಿರೀಕ್ಷಿತ ಸಿಟ್ರನ್ ಬಸಾಲ್ಟ್ ಎಕ್ಸ್ (Citroen Basalt X) ಕೂಪೆ ಎಸ್‌ಯುವಿ ಶುಕ್ರವಾರ ಅದ್ದೂರಿಯಾಗಿ ಬಿಡುಗಡೆಗೊಂಡಿದೆ. ವಿಶೇಷವಾಗಿ 'ಸಿಟ್ರನ್ 2.0 ಸ್ಟ್ರಾಟರ್ಜಿ' ಹೆಸರಿನ ಬ್ಯುಸಿನೆಸ್ ಮಾಡೆಲ್ ಭಾಗವಾಗಿ ಈ ಕಾರನ್ನು ಮಾರಾಟಕ್ಕೆ ತರಲಾಗಿದೆ. ವಿನ್ಯಾಸದಲ್ಲಿ ಸಣ್ಣ-ಪುಟ್ಟ ಮಾರ್ಪಾಡುಗಳನ್ನು ಹೊಂದಿದ್ದು, ಟಾಟಾ ಕರ್ವ್ ಕಾರಿಗೆ ಪ್ರಬಲವಾದ ಸ್ಪರ್ಧೆಯೊಡ್ಡಲಿದೆ. ಬನ್ನಿ, ನೂತನ 'ಬಸಾಲ್ಟ್ ಎಕ್ಸ್'ನ ಬೆಲೆ ಹಾಗೂ ವಿಶೇಷತೆಗಳ ಕುರಿತಂತೆ ಸಂಪೂರ್ಣವಾದ ವಿವರಗಳನ್ನು ತಿಳಿಯೋಣ.
ಹೊಚ್ಚ ಹೊಸ ಸಿಟ್ರನ್ ಬಸಾಲ್ಟ್ ಎಕ್ಸ್ ಎಸ್‌ಯುವಿಯನ್ನು ಕೈಗೆಟುಕುವ ದರದಲ್ಲಿ ಪರಿಚಯಿಸಲಾಗಿದ್ದು, ರೂ.7.95 ಲಕ್ಷದಿಂದ ರೂ.12.90 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ಯು (You), ಪ್ಲಸ್ (Plus) ಹಾಗೂ ಮ್ಯಾಕ್ಸ್ (Max) ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ.

ಈ ಕಾರಿನ ಹೊರಭಾಗದ ವಿನ್ಯಾಸವು ಸ್ಟ್ಯಾಂಡರ್ಡ್ 'ಸಿಟ್ರನ್ ಬಸಾಲ್ಟ್'ಗೆ ಹೋಲಿಕೆಯಾಗುತ್ತದೆ. ಪ್ರೊಜೆಕ್ಟರ್ ಎಲ್ಇಡಿ ಹೆಡ್‌ಲೈಟ್‌ಗಳು, 'ವಿ' ಆಕಾರಕ್ಕೆ ಹೋಲಿಕೆಯಾಗುವ ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್ ಲೈಟ್‌ಗಳು ಹಾಗೂ 16 ಇಂಚಿನ ಡುಯಲ್ ಟೋನ್ ಅಲಾಯ್ ವೀಲ್‌ಗಳನ್ನು ಪಡೆದಿದೆ. ಇದರೊಂದಿಗೆ ಗ್ರಿಲ್‌ನಲ್ಲಿ ಲೈಟಿಂಗ್ ಸ್ಟ್ರಿಪ್‌ಗಳು ಹಾಗೂ ಟೈಲ್‌ಗೇಟ್‌ನಲ್ಲಿ 'ಬಸಾಲ್ಟ್ ಎಕ್ಸ್' ಬ್ಯಾಡ್ಜಿಂಗ್‌ನ್ನು ಪಡೆದಿದೆ.
ಇದರ ಗಾತ್ರದಲ್ಲಿಯೂ ಯಾವುದೇ ವ್ಯತ್ಯಯವಾಗಿಲ್ಲ. 4,371 ಎಂಎಂ ಉದ್ದ, 1,907 ಎಂಎಂ ಅಗಲ ಹಾಗೂ 1,627 ಎಂಎಂ ಎತ್ತರವು ಇದೆ. 207 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,775 ಎಂಎಂ ವೀಲ್‌ಬೇಸ್‌ನ್ನು ಹೊಂದಿದ್ದು, 1,233 ಕೆಜಿ ತೂಕವಿದೆ.
ನೂತನ ಬಸಾಲ್ಟ್ ಎಕ್ಸ್ ಎಸ್‌ಯುವಿಯು 5 ಆಸನ ಆಯ್ಕೆ ವ್ಯವಸ್ಥೆಯನ್ನು ಒಳಗೊಂಡಿದೆ. ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸುಲಭವಾಗಿ ಓಡಾಟ ನಡೆಸಬಹುದು. ವಾರಾಂತ್ಯ ಹಾಗೂ ರಜಾ ದಿನಗಳಲ್ಲಿ ದೂರದ ಊರುಗಳಿಗೆ ಹೋಗುವಾಗ ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು ಸಾಧ್ಯವಾಗುವಂತೆ 470 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಹೊಂದಿದೆ.
ಈ ಕಾರಿನ ಒಳಭಾಗದ ಕ್ಯಾಬಿನ್ ವಿನ್ಯಾಸದಲ್ಲಿ ಬೆರಳೆಣಿಕೆಯಷ್ಟು ಬದಲಾವಣೆಗಳಾಗಿವೆ. ಬ್ಲ್ಯಾಕ್ & ಟ್ಯಾನ್ ಪೇಂಟ್ ಸ್ಕೀಮ್‌ನ್ನು ಪಡೆದಿದೆ. ಇದು ಪ್ರೀಮಿಯಂ ಲುಕ್ ಒದಗಿಸುತ್ತದೆ. 10.2 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 7 ಇಂಚಿನ ಡಿಜಿಟಲ್ ಡ್ರೈವರ್ಸ್ ಡಿಸ್‌ಪ್ಲೇ, ವೈರ್‌ಲೆಸ್ ಫೋನ್ ಚಾರ್ಜರ್, ಪುಶ್ ಬಟನ್ ಸ್ಟಾರ್ಟ್, ಸ್ಟೀರಿಂಗ್ ಮೌಂಟೆಡ್ ಆಡಿಯೋ ಕಂಟ್ರೋಲ್‌ಗಳು ರೇರ್ ಸೆಂಟರ್ ಆರ್ಮ್‌ರೆಸ್ಟ್ ಹಾಗೂ ಕಪ್‌ಹೋಲ್ಡರ್‌ಗಳು ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.
ಹೊಸ ಬಸಾಲ್ಟ್ ಎಕ್ಸ್ ಶಕ್ತಿಯುತವಾದ ಎರಡು ಪವರ್‌ಟ್ರೇನ್‌ನ್ನು ಪಡೆದಿದೆ. ಇದರ 1.2-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಒಳಗೊಂಡಿದೆ. 82 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 115 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನ್ನು ಹೊಂದಿದೆ.
ಮತ್ತೊಂದು 1.2-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್, 110 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 190 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 18 ರಿಂದ 19 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ. 45 ಲೀಟರ್ ಸಾಮರ್ಥ್ಯದ ಫ್ಯುಯೆಲ್ ಟ್ಯಾಂಕ್‍ನ್ನು ಒಳಗೊಂಡಿದೆ.
ಇದು ಸುರಕ್ಷತೆಗೂ ಹೆಸರುವಾಸಿಯಾಗಿದೆ. ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ಒದಗಿಸುತ್ತದೆ. 6 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿ - ಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಸಿ (ಎಲೆಕ್ಟ್ರಾನಿಕ್ - ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ರೇರ್ ಪಾರ್ಕಿಂಗ್ ಸೆನ್ಸರ್ಸ್ ಹಾಗೂ ರೇರ್ ಪಾರ್ಕಿಂಗ್ ಕ್ಯಾಮೆರಾವನ್ನು ಹೊಂದಿದೆ.


Click it and Unblock the Notifications








