19 ಕಿ.ಮೀ ಮೈಲೇಜ್.. 5-ಸೀಟರ್, ಈ ಬ್ರ್ಯಾಂಡ್‌ನ ಹೊಸ ಕಾರು ಸೆ.5ಕ್ಕೆ ಬಿಡುಗಡೆ.. ಬೆಲೆಯೂ ಅಗ್ಗವೇ, ವಿಶೇಷತೆಗಳೇನು?

ಫ್ರಾನ್ಸ್ ಮೂಲದ ಪ್ರಮುಖ ವಾಹನ ತಯಾರಕ ಕಂಪನಿ 'ಸಿಟ್ರನ್' ಭಾರತ ಕಾರು ಮಾರುಕಟ್ಟೆಯಲ್ಲಿ ಅಂಬೆಗಾಲು ಇಡುತ್ತಿದ್ದು, ತನ್ನದೇಯಾದ ಛಾಪನ್ನು ಮೂಡಿಸಲು ಪ್ರಯತ್ನಿಸುತ್ತಿದೆ. 'ಸಿಟ್ರನ್ 2.0 ಸ್ಟ್ರಾಟರ್ಜಿ' ಹೆಸರಿನ ಬ್ಯುಸಿನೆಸ್ ಮಾಡೆಲ್‌ನ್ನು ಪ್ರಕಟಿಸಿದೆ. ಅದರ ಭಾಗವಾಗಿ ನವೀನ ರೂಪದಲ್ಲಿ 'ಸಿ3ಎಕ್ಸ್' ಹ್ಯಾಚ್‌ಬ್ಯಾಕ್‌ನ್ನು ಮಾರಾಟಕ್ಕೆ ತರಲಾಗಿತ್ತು. ಎಲ್ಲವು ಅಂದುಕೊಂಡಂತೆ ನಡೆದರೆ, ಅತಿ ಶೀಘ್ರದಲ್ಲೇ ಹೊಚ್ಚ ಹೊಸ 'ಬಸಾಲ್ಟ್ ಎಕ್ಸ್' ಎಸ್‌ಯುವಿಯು ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ಬನ್ನಿ, ಈ ಕಾರಿನ ನಿರೀಕ್ಷಿತ ಬೆಲೆ ಎಷ್ಟಿರಲಿದೆ.. ವಿಶೇಷತೆಗಳೇನು ಎಂಬುದರ ಕುರಿತಂತೆ ಪ್ರಮುಖ ವಿವರಗಳನ್ನು ತಿಳಿಸಿಕೊಟ್ಟಿದ್ದೇವೆ.

ವಿನ್ಯಾಸ (Design):

ಸಿಟ್ರನ್ ಬಸಾಲ್ಟ್ ಎಕ್ಸ್ (Citroen Basalt X) ಎಸ್‌ಯುವಿಯು ಹೊರಭಾಗದಲ್ಲಿ ಆಕರ್ಷಕವಾದ ವಿನ್ಯಾಸ ಹೊಂದಿರಲಿದೆ. ಇದು ಸ್ಟ್ಯಾಂಡರ್ಡ್ 'ಬಸಾಲ್ಟ್'ಗೆ ಹೋಲಿಕೆಯಾಗಲಿದೆ. ಆದರೆ ಕೆಲವೊಂದು ಬದಲಾವಣಿಗಳನ್ನು ಪಡೆದಿರಲಿದ್ದು, ಬಹುಮುಖ್ಯವಾಗಿ ಆಲ್-ಬ್ಲ್ಯಾಕ್ ಪೇಂಟ್ ಸ್ಕೀಮ್‌ನ್ನು ಹೊಂದಿರಲಿದೆ. ಇದರೊಂದಿಗೆ ಉತ್ತಮ ಸ್ಪ್ಲಿಟ್ ಹೆಡ್‌ಲೈಟ್ ಸೆಟಪ್, ಎಲ್ಇಡಿ ಡಿಆರ್‌ಎಲ್‌ಗಳು, ಟೈಲ್‌ಲೈಟ್‌ಗಳು ಮತ್ತು ಅಲಾಯ್ ವೀಲ್‌ಗಳನ್ನು ಒಳಗೊಂಡಿರಲಿದೆ.

Citroen Basalt X Suv Launch On September 5 In India Expected Price Mileage And Features Details

ಸುತ್ತಳತೆ (Dimensions):

ಈ ಕಾರಿನ ಗಾತ್ರದಲ್ಲೂ ಯಾವುದೇ ಮಾರ್ಪಾಡುಗಳನ್ನು ಮಾಡಲಾಗಿಲ್ಲ. 4,371 ಎಂಎಂ ಉದ್ದ, 1,907 ಎಂಎಂ ಅಗಲ ಮತ್ತು 1,627 ಎಂಎಂ ಎತ್ತರ ಕೂಡ ಇರಲಿದೆ. 207 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,775 ಎಂಎಂ ವೀಲ್‌ಬೇಸ್‌ನ್ನು ಪಡೆದಿರಲಿದೆ. 1233 ಕೆಜಿ ತೂಕವನ್ನು ಹೊಂದಿರಲಿದೆ.

ಆಸನ ಆಯ್ಕೆ & ಬೂಟ್ ಸ್ಪೇಸ್ (Seating Capacity & Boot Space):

ಹೊಸ ಸಿಟ್ರನ್ ಬಸಾಲ್ಟ್ ಎಕ್ಸ್ ಎಸ್‌ಯುವಿಯು 5 ಆಸನಗಳನ್ನು ಹೊಂದಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ದೂರದ ಊರುಗಳಿಗೆ ಓಡಾಟ ನಡೆಸಬಹುದು. ಪ್ರವಾಸಕ್ಕೆ ಹೋಗುವ ಸಂದರ್ಭದಲ್ಲಿ ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 470 ಲೀಟರ್‌ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಪಡೆದುಕೊಂಡಿರಲಿದೆ.

Citroen Basalt X Suv Launch On September 5 In India Expected Price Mileage And Features Details

ಕಾರ್ಯಕ್ಷಮತೆ (Performance):

ಇದರ ಪವರ್‌ಟ್ರೇನ್‌ ಬಲಿಷ್ಠವಾಗಿರಲಿದ್ದು, ಸಾಧ್ಯವಿರುವ 'ಬಸಾಲ್ಟ್'ನಂತೆ 1.2-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್‌ನ್ನು ಪಡೆದಿರಲಿದೆ. 82 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 115 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸಲಿದೆ. 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನ್ನು ಒಳಗೊಂಡಿರಲಿದೆ ಎನ್ನಲಾಗಿದೆ.

ಮತ್ತೊಂದು 1.2-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್‌, 110 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 190 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕಲಿದೆ. 6-ಸ್ಪೀಡ್ ಮ್ಯಾನುವಲ್/ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಹೊಂದಿರಲಿದೆ. ಈ ಕಾರು 18 ರಿಂದ 19 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. 45 ಲೀಟರ್‌ನಷ್ಟು ಫ್ಯುಯೆಲ್ ಟ್ಯಾಂಕ್‍ನ್ನು ಪಡೆದಿದೆ.

ವೈಶಿಷ್ಟ್ಯಗಳು (Features):

ಈ ಕಾರಿನ ಕ್ಯಾಬಿನ್ ವಿನ್ಯಾಸವು ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಹೊಂದಿರಲಿದೆ. ಪ್ರೀಮಿಯಂ ಲುಕ್ ಒದಗಿಸಲು ಡುಯಲ್-ಟೋನ್ ಬ್ಲ್ಯಾಕ್ & ಟ್ಯಾನ್ ಪೇಂಟ್ ಸ್ಕೀಮ್‌ನ್ನು ಪಡೆದಿರಲಿದೆ. 10.2-ಇಂಚಿರುವ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 7-ಇಂಚಿರುವ ಡಿಜಿಟಲ್ ಡ್ರೈವರ್ಸ್ ಡಿಸ್‌ಪ್ಲೇ, ವೈರ್‌ಲೆಸ್ ಫೋನ್ ಚಾರ್ಜರ್, ಪುಶ್ ಬಟನ್ ಸ್ಟಾರ್ಟ್, ರೇರ್-ಸೆಂಟರ್ ಆರ್ಮ್‌ರೆಸ್ಟ್, ಕಪ್‌ಹೋಲ್ಡರ್‌ಗಳು ಹಾಗೂ ಸ್ಟೀರಿಂಗ್ ಮೌಂಟೆಡ್ ಆಡಿಯೋ ಕಂಟ್ರೋಲ್‌ಗಳನ್ನು ಹೊಂದಿರುವ ನಿರೀಕ್ಷೆಯಿದೆ.

ಸುರಕ್ಷತಾ ವೈಶಿಷ್ಟ್ಯಗಳು (Safety Features):

ಹೊಸ ಸಿಟ್ರನ್ ಬಸಾಲ್ಟ್ ಎಕ್ಸ್ ಎಸ್‌ಯುವಿಯು ಸುರಕ್ಷತೆಗೂ ಹೆಸರುವಾಸಿಯಾಗಿರಲಿದ್ದು, ಪ್ರಯಾಣಿಕರಿಗೆ ಗರಿಷ್ಠವಾದ ರಕ್ಷಣೆ ಒದಗಿಸಬಲ್ಲದು. ಅದಕ್ಕಾಗಿ 6-ಏರ್‌ಬ್ಯಾಗ್‌, ಎಬಿಎಸ್ (ಆಂಟಿ - ಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್) ಮತ್ತು ರೇರ್ ಪಾರ್ಕಿಂಗ್ ಸೆನ್ಸರ್ಸ್ ಸೇರಿದಂತೆ ಹಲವು ರಕ್ಷಣಾತ್ಮಕ ವೈಶಿಷ್ಟ್ಯಗಳನ್ನು ಪಡೆದಿರಲಿದೆ.

ಬೆಲೆ & ಅನಾವರಣ ಕುರಿತ ವಿವರಗಳು (Price & Launch Details):

ನೂತನ 'ಬಸಾಲ್ಟ್ ಎಕ್ಸ್' ರೂ.10 ಲಕ್ಷ ಆರಂಭಿಕ ಬೆಲೆಯನ್ನು ಹೊಂದಿರಲಿದ್ದು, ಸೆಪ್ಟೆಂಬರ್ 5ರಂದು ಮಾರಾಟಕ್ಕೆ ಬರಲಿದೆ. ಪ್ರಿ-ಬುಕ್ಕಿಂಗ್‌ನ್ನು ತೆರೆಯಲಾಗಿದ್ದು, ಆಸಕ್ತರು, ಕಂಪನಿಯ ಅಧಿಕೃತ ವೆಬ್‌ಸೈಟ್‌ ಅಥವಾ ಹತ್ತಿರದ ಡೀಲರ್‌ಶಿಪ್‌ಗೆ ಭೇಟಿ ನೀಡಿ, ರೂ.11,000 ಮುಂಗಡ ಮೊತ್ತವನ್ನು ಪಾವತಿಸುವುದರೊಂದಿಗೆ ಕಾಯ್ದಿರಿಸಬಹುದು. ಈ ಕಾರಿಗೆ 'ಟಾಟಾ ಕರ್ವ್' ಪ್ರಬಲವಾದ ಎದುರಾಳಿಯಾಗಿದೆ.

More from DriveSpark

Article Published On: Saturday, August 30, 2025, 8:39 [IST]
English summary
Citroen basalt x suv launch on september 5 in india expected price mileage and features details
Read more on citroen india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+