8 ಲಕ್ಷ.. 18.5 ಕಿ.ಮೀ ಮೈಲೇಜ್, ಭಾರತದಲ್ಲಿ ಈ ವಿದೇಶಿ ಕಾರಿಗೆ 5-ಸ್ಟಾರ್ ಸೇಫ್ಟಿ ರೇಟಿಂಗ್!

ಫ್ರಾನ್ಸ್ ದೇಶಕ್ಕೆ ಸೇರಿರುವ ಸಿಟ್ರನ್ (Citroen) ಪ್ರಮುಖ ವಾಹನ ತಯಾರಕ ಕಂಪನಿಯಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ 'ಸಿ3 ಏರ್‌ಕ್ರಾಸ್' ಕಾರನ್ನು ಮಾರಾಟಗೊಳಿಸುತ್ತಿದೆ. ಇದೊಂದು ಮಿಡ್-ಸೈಜ್ ಎಸ್‌ಯುವಿಯಾಗಿದೆ. ತುಂಬಾ ಅಚ್ಚುಕಟ್ಟಾದ ವಿನ್ಯಾಸ ಹಾಗೂ ಹತ್ತಾರು ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಸದ್ಯ ದೇಶದ ವಾಹನಗಳಿಗೆ ಸುರಕ್ಷತಾ ಪರೀಕ್ಷೆ ನಡೆಸುವ ಸಂಸ್ಥೆ ಭಾರತ್ ಎನ್‌ಸಿಎಪಿ (Bharat NCAP), 5 ಆಸನಗಳ 'ಸಿ3 ಏರ್‌ಕ್ರಾಸ್'ನ್ನು ಅತ್ಯಂತ ಸುರಕ್ಷಿತ ಕಾರೆಂದು ತೀರ್ಮಾನಿಸಿದ್ದು, 5-ಸ್ಟಾರ್ ಸೇಫ್ಟಿ ರೇಟಿಂಗ್‌ನ್ನು ನೀಡಿದೆ. ಬನ್ನಿ.. ಆ ಬಗ್ಗೆ ಹೆಚ್ಚಿನ ವಿವರಗಳನ್ನು ತಿಳಿಯೋಣ.

ಭಾರತ್ ಎನ್‌ಸಿಎಪಿಯು ಸಿಟ್ರನ್ ಸಿ3 ಏರ್‌ಕ್ರಾಸ್ (Citroen C3 Aircross) ಎಸ್‌ಯುವಿಯನ್ನು ವಿವಿಧ ಸುರಕ್ಷತಾ ಮಾನದಂಡಗಳ ಅನ್ವಯ ಪರೀಕ್ಷಿಸಿದೆ. ಈ ಕಾರಿಗೆ ವಯಸ್ಕರ ರಕ್ಷಣೆ ವಿಭಾಗದಲ್ಲಿ (Adult Occupant Protection) 32ಕ್ಕೆ 27.05 ಅಂಕಗಳನ್ನು ನೀಡಲಾಗಿದ್ದು, 5-ಸ್ಟಾರ್ ಸೇಫ್ಟಿ ರೇಟಿಂಗ್‌ನ್ನು ಹೊಂದುವಲ್ಲಿ ಯಶಸ್ವಿಯಾಗಿದೆ. ಅದೇ ರೀತಿಯಲ್ಲಿ ಮಕ್ಕಳ ರಕ್ಷಣೆ ವಿಭಾಗದಲ್ಲಿ (Child Occupant Protection) 49ಕ್ಕೆ 40 ಅಂಕಗಳನ್ನು ಕೊಡಲಾಗಿದ್ದು, 4-ಸ್ಟಾರ್ ಸೇಫ್ಟಿ ರೇಟಿಂಗ್‌ನ್ನು ಗಳಿಸುವಲ್ಲಿ ಸಫಲವಾಗಿದೆ.

Citroen C3 Aircross Suv Gets 5 Star Safety Rating In Bharat Ncap Test Details

ಇದು ಗರಿಷ್ಠ ಸುರಕ್ಷತಾ ವೈಶಿಷ್ಟ್ಯಗಳನ್ನು ಹೊಂದಿದೆ. 6 ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಹಿಲ್ ಹೋಲ್ಡ್ ಅಸಿಸ್ಟ್, 3-ಪಾಯಿಂಟ್ ಸೀಟ್‌ಬೆಲ್ಟ್‌ಗಳು, ರೇರ್ ಪಾರ್ಕಿಂಗ್ ಸೆನ್ಸರ್‌ಗಳು ಹಾಗೂ ರೇರ್ ಪಾರ್ಕಿಂಗ್ ಕ್ಯಾಮೆರಾಗಳನ್ನು ತನ್ನದಾಗಿಸಿಕೊಂಡಿದೆ.

ಸಿಟ್ರನ್ ಸಿ3 ಏರ್‌ಕ್ರಾಸ್ ಎಸ್‌ಯುವಿ ರೂ.8.32 ಲಕ್ಷದಿಂದ ರೂ.14.10 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಯು, ಪ್ಲಸ್, ಮ್ಯಾಕ್ಸ್, ಟರ್ಬೊ ಪ್ಲಸ್, ಟರ್ಬೊ ಮ್ಯಾಕ್ಸ್ ಹಾಗೂ ಡಾರ್ಕ್ ಎಡಿಷನ್ ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ. ಅತ್ಯಾಧುನಿಕ ವಿನ್ಯಾಸವನ್ನು ಹೊಂದಿದೆ. ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು ಮತ್ತು 17 ಇಂಚಿನ ಡುಯಲ್-ಟೋನ್ ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ.

ಈ ಕಾರು ಪೋಲಾರ್ ವೈಟ್, ಸ್ಟೀಲ್ ಗ್ರೇ, ಪ್ಲಾಟಿನಂ ಗ್ರೇ, ಕಾಸ್ಮೊ ಬ್ಲೂ, ಬ್ಲ್ಯಾಕ್ ಹಾಗೂ ಗಾರ್ನೆಟ್ ರೆಡ್ ಸೇರಿದಂತೆ ವಿವಿಧ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. 4,323 ಎಂಎಂ ಉದ್ದ, 1,796 ಎಂಎಂ ಅಗಲ ಹಾಗೂ 1,669 ಎಂಎಂ ಎತ್ತರವಿದೆ. 200 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,671 ಎಂಎಂ ವೀಲ್‌ಬೇಸ್‌ನ್ನು ಹೊಂದಿದೆ.

ಹೊಸ ಸಿಟ್ರನ್ ಸಿ3 ಏರ್‌ಕ್ರಾಸ್ ಕಾರು 2 ಪವರ್‌ಟ್ರೇನ್‌ನ್ನು ಒಳಗೊಂಡಿದೆ. ಇದರ 1.2-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್, 82 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 115 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನ್ನು ತನ್ನದಾಗಿಸಿಕೊಂಡಿದೆ.

ಮತ್ತೊಂದು 1.2-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್, 110 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 205 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 6-ಸ್ಪೀಡ್ ಮ್ಯಾನುವಲ್/ 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದಿದೆ. ಈ ಕಾರು 17.5 ರಿಂದ 18.5 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. 45 ಲೀಟರ್ ಸಾಮರ್ಥ್ಯದ ಫ್ಯುಯೆಲ್ ಟ್ಯಾಂಕ್‍ನ್ನು ಒಳಗೊಂಡಿದೆ.

ಈ ಕಾರು 5 ಆಸನಗಳೊಂದಿಗೆ 5+2 ಆಸನ ವ್ಯವಸ್ಥೆಯನ್ನು ಪಡೆದಿದೆ. ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 511 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಕೂಡ ಹೊಂದಿದೆ. 10.2 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, 7 ಇಂಚಿನ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಹೈಟ್ ಅಡ್ಜಸ್ಟಬಲ್ ಡ್ರೈವರ್ ಸೀಟ್ ಹಾಗೂ ಸ್ಟೀರಿಂಗ್ ಮೌಂಟೆಡ್ ಆಡಿಯೋ ಕಂಟ್ರೋಲ್‌ಗಳು ಒಳಗೊಂಡಂತೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ.

More from DriveSpark

Article Published On: Tuesday, September 30, 2025, 8:30 [IST]
English summary
Citroen c3 aircross suv gets 5 star safety rating in bharat ncap test details
Read more on citroen india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+