ದೀಪಾವಳಿ 2025: ಶ್ರೀಸಾಮಾನ್ಯರು ತೆಗೆದುಕೊಳ್ಳಬಹುದಾದ ಕಾರುಗಳಿವು.. 3.50 ಲಕ್ಷ ಆರಂಭಿಕ ಬೆಲೆ, ನಾವೇಕೆ ಖರೀದಿಸಬೇಕು?

ಹಿಂದೂಗಳಿಗೆ ದೀಪಾವಳಿ (Diwali) ಮಹತ್ವದ ಹಬ್ಬವಾಗಿದೆ. ಇದು ಕತ್ತಲಿನಿಂದ ಬೆಳಕಿನೆಡೆಗೆ ಸಾಗುವ ಹಬ್ಬ ಎಂದೇ ಹೆಸರುವಾಸಿಯಾಗಿದೆ. ಕಾರ್ತಿಕ ಮಾಸದಲ್ಲಿ ಸಂಭ್ರಮ ಸಡಗರದಿಂದ ದೀಪಾವಳಿ ಆಚರಿಸಲಾಗುತ್ತದೆ. ಬಹುತೇಕರು ಈ ಹಬ್ಬಕ್ಕೆ ಹೊಚ್ಚ ಹೊಸ ಕಾರು ಖರೀದಿಸುವುದು ಶುಭ ಎಂದು ಭಾವಿಸುತ್ತಾರೆ. ನೀವು ಅದೇ ಆಲೋಚನೆಯಲ್ಲಿದ್ದೀರಾ, ಹಾಗಾದರೆ ಮಾರುತಿ ಸುಜುಕಿ ಎಸ್-ಪ್ರೆಸ್ಸೊ, ಟಾಟಾ ಆಲ್ಟ್ರೋಜ್, ಮಾರುತಿ ಸುಜುಕಿ ಇಕೋ, ರೆನಾಲ್ಟ್ ಟ್ರೈಬರ್ ಹಾಗೂ ನಿಸ್ಸಾನ್ ಮ್ಯಾಗ್ನೈಟ್‌ಗಳು ಅತ್ಯುತ್ತಮವಾದ ಆಯ್ಕೆಯಾಗಲಿವೆ. ಇಲ್ಲಿ ಈ ಕಾರುಗಳನ್ನು ಏಕೆ ಖರೀದಿಸಬೇಕು, ಅವುಗಳು ಬೆಲೆ ಎಷ್ಟು ಮತ್ತು ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಕ್ಷಿಪ್ತವಾಗಿ ತಿಳಿಸಿಕೊಟ್ಟಿದ್ದೇವೆ.

ಮಾರುತಿ ಸುಜುಕಿ ಎಸ್-ಪ್ರೆಸ್ಸೊ (Maruti Suzuki S-Presso):

ಇದೊಂದು ಹ್ಯಾಚ್‌ಬ್ಯಾಕ್ ಆಗಿದೆ. ದೇಶೀಯ ಮಾರುಕಟ್ಟೆಯಲ್ಲಿ ಅತಿ ಕಡಿಮೆ ಬೆಲೆಗೆ ಖರೀದಿ ಲಭ್ಯವಿದೆ. ನೋಡಲು ಪುಟ್ಟ ಗಾತ್ರದಲ್ಲಿದೆ. ಆದರೂ ಎಸ್‌ಯುವಿಯಂತೆ ಭಾಸವಾಗುತ್ತದೆ. ನಗರ ಪ್ರದೇಶದ ಚಾಲನೆಗೆ ಹೇಳಿ ಮಾಡಿಸಿದ ರೀತಿಯಲ್ಲಿದೆ. ವಿಶಿಷ್ಟ ವಿನ್ಯಾಸ ಹಾಗೂ ಉತ್ತಮವಾದ ಕಾರ್ಯಕ್ಷಮತೆಯಿಂದಲೂ ಮನೆ ಮಾತಾಗಿದೆ.

Diwali 2025 These Are The Best Cars For Common People Starting Price Rs 3 50 Lakh Why Should We Buy

ಹೊಸ 'ಎಸ್-ಪ್ರೆಸ್ಸೊ' ರೂ.3.50 ಲಕ್ಷದಿಂದ ರೂ.5.25 ಲಕ್ಷ (ಎಕ್ಸ್-ಶೋರೂಂ) ದರವನ್ನು ಹೊಂದಿದೆ. 1-ಲೀ. ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್‌ನ್ನು ಪಡೆದಿದೆ. ರೂಪಾಂತರಗಳಿಗೆ (ವೇರಿಯೆಂಟ್) ಅನುಗುಣವಾಗಿ 24 ರಿಂದ 33 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ. 5 ಆಸನಗಳನ್ನು ತನ್ನದಾಗಿಸಿಕೊಂಡಿದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ & 2-ಏರ್‌ಬ್ಯಾಗ್‌ಗಳು ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಟಾಟಾ ಆಲ್ಟ್ರೋಜ್ (Tata Altroz):

ಈ ಕಾರು ಅಗ್ಗದ ದರದಲ್ಲಿ ಸಿಗಲಿದ್ದು, ಪ್ರೀಮಿಯಂ ಹ್ಯಾಚ್‌ಬ್ಯಾಕ್ ಎಂದೇ ಹೆಸರುವಾಸಿಯಾಗಿದೆ. ಇದರೊಂದಿಗೆ ಎಲ್ಲ ವರ್ಗದ ಗ್ರಾಹಕರಿಗೂ ಸುಲಭವಾಗಿ ಕೈಗೆಟುಕಲಿದೆ. ತುಂಬಾ ಅಚ್ಚುಕಟ್ಟಾದ ವಿನ್ಯಾಸ ಹೊಂದಿದ್ದು, ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಯ ದೃಷ್ಟಿಯಿಂದ ಇದೇ 'ಆಲ್ಟ್ರೋಜ್' ಭಾರತ್ ಎನ್‌ಸಿಎಪಿಯಿಂದ 5-ಸ್ಟಾರ್ ಸೇಫ್ಟಿ ರೇಟಿಂಗ್‌ನ್ನು ಪಡೆದಿದೆ.

Diwali 2025 These Are The Best Cars For Common People Starting Price Rs 3 50 Lakh Why Should We Buy

ಹೊಸ 'ಆಲ್ಟ್ರೋಜ್' ಹ್ಯಾಚ್‌ಬ್ಯಾಕ್ ರೂ.6.30 ಲಕ್ಷದಿಂದ ರೂ.10.51 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 1.2-ಲೀ. ಪೆಟ್ರೋಲ್, 1.2-ಲೀ. ಸಿಎನ್‌ಜಿ & 1.5-ಲೀ. ಡೀಸೆಲ್ ಎಂಜಿನ್‌ನ್ನು ಹೊಂದಿದೆ. 19 ರಿಂದ 26 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ. ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್ ಮತ್ತು 6-ಏರ್‌ಬ್ಯಾಗ್‌ಗಳನ್ನು ತನ್ನದಾಗಿಸಿಕೊಂಡಿದೆ.

ಮಾರುತಿ ಸುಜುಕಿ ಇಕೋ (Maruti Suzuki Eeco):

ಇದು ಬಜೆಟ್ ಬೆಲೆಯಲ್ಲಿ ದೊರೆಯುವ ಎಂಪಿವಿಯಾಗಿದೆ. ಎಲ್ಲ ವರ್ಗದ ಗ್ರಾಹಕರಿಗೆ ಸುಲಭವಾಗಿ ಕೈಗೆಟುಕುತ್ತದೆ. ವಿಶ್ವಾಸಾರ್ಹತೆ ಹಾಗೂ ಅಗ್ಗದ ನಿರ್ವಹಣಾ ವೆಚ್ಚಗಳಿಂದಲೂ ಹೆಚ್ಚಿನ ಸಂಖ್ಯೆಯಲ್ಲಿ ಖರೀದಿದಾರನ್ನು ಆಕರ್ಷಿಸಿದ್ದು, ದೊಡ್ಡ ಕುಟುಂಬಗಳಿಗೆ ಸೂಕ್ತವಾಗಬಲ್ಲದು. ಈ ಕಾರನ್ನು ವೈಯಕ್ತಿಕ ಬಳಕೆಗೆ ಮಾತ್ರವಲ್ಲದೆ, ವಾಣಿಜ್ಯ ಉದ್ದೇಶಗಳಿಗೂ ವ್ಯಾಪಕವಾಗಿ ಉಪಯೋಗ ಮಾಡಲಾಗುತ್ತಿದೆ.

Diwali 2025 These Are The Best Cars For Common People Starting Price Rs 3 50 Lakh Why Should We Buy

ನೂತನ 'ಇಕೋ' ರೂ.5.21 ಲಕ್ಷದಿಂದ ರೂ.6.36 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 1.2-ಲೀ. ಪೆಟ್ರೋಲ್ & ಸಿಎನ್‌ಜಿ ಎಂಜಿನ್‌ನ್ನು ಒಳಗೊಂಡಿದೆ. 19 ರಿಂದ 27 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ. 5/ 6 ಆಸನಗಳನ್ನು ಹೊಂದಿದೆ. ಸೆಮಿ ಡಿಜಿಟಲ್ ಸ್ಪೀಡೋಮೀಟರ್, 12ವಿ ಚಾರ್ಜಿಂಗ್ ಸಾಕೆಟ್ ಹಾಗೂ 6 ಏರ್‌ಬ್ಯಾಗ್‌ಗಳು ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.

ರೆನಾಲ್ಟ್ ಟ್ರೈಬರ್ (Renault Triber):

ಈ ಕಾರು ಕೈಗೆಟುಕುವ ಬೆಲೆಯಲ್ಲಿ ಲಭ್ಯವಿದ್ದು, ಕಾಂಪ್ಯಾಕ್ಟ್ ಎಂಪಿವಿ ವಿಭಾಗದಲ್ಲಿ ತನ್ನದೆಯಾದ ಛಾಪನ್ನು ಮೂಡಿಸಿದೆ. ಫ್ಯಾಮಿಲಿ ಕಾರನ್ನು ಹುಡುಕುತ್ತಿರುವವರಿಗೆ ತುಂಬಾ ಚೆನ್ನಾಗಿ ಹೊಂದಾಣಿಕೆಯಾಗಬಲ್ಲದು. ಅದಕ್ಕೆ ತಕ್ಕಂತೆ ನಿರ್ವಹಣಾ ವೆಚ್ಚವು ಅಗ್ಗವಾಗಿದ್ದು, ಉತ್ತಮವಾದ ಇಂಧನ ದಕ್ಷತೆಯಿಂದಲೂ ಗುರುತಿಸಿಕೊಂಡಿದೆ. ದೂರದ ಊರುಗಳಿಗೆ ಪ್ರವಾಸಕ್ಕೆ ಹೋಗುವಾಗಲೂ ಸುಲಭವಾಗಿ ಬಳಕೆ ಮಾಡಬಹುದು.

Diwali 2025 These Are The Best Cars For Common People Starting Price Rs 3 50 Lakh Why Should We Buy

ಹೊಸ 'ಟ್ರೈಬರ್' ರೂ.5.76 ಲಕ್ಷದಿಂದ ರೂ.8.60 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 1-ಲೀ. ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 20 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. 7 ಆಸನಗಳನ್ನು ತನ್ನದಾಗಿಸಿಕೊಂಡಿದೆ. ಪ್ಲೋಟಿಂಗ್ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಹಾಗೂ 6 ಏರ್‌ಬ್ಯಾಗ್‌ಗಳನ್ನು ಒಳಗೊಂಡಿದೆ.

ನಿಸ್ಸಾನ್ ಮ್ಯಾಗ್ನೈಟ್ (Nissan Magnite):

ಇದು ಸಬ್-ಕಾಂಪ್ಯಾಕ್ಟ್ ಎಸ್‌ಯುವಿಯಾಗಿದ್ದು, ಸ್ಪರ್ಧಾತ್ಮಕ ಬೆಲೆಯಲ್ಲಿ ಗ್ರಾಹಕರ ಖರೀದಿಗೆ ಲಭ್ಯವಿದೆ. ವಿಶೇಷವಾಗಿ ನಗರ ಪ್ರದೇಶದ ಗ್ರಾಹಕರನ್ನು ಗುರಿಯಾಗಿಸಿಕೊಂಡು ಈ ಕಾರನ್ನು ವಿನ್ಯಾಸಗೊಳಿಸಲಾಗಿದೆ. ಗೇಮ್ ಚೇಂಜರ್ ಎಸ್‌ಯುವಿ ಎಂದು ಹೆಸರುವಾಸಿಯಾಗಿದ್ದು, ಕಡಿಮೆ ಜಾಗದಲ್ಲೂ ಸುಲಭವಾಗಿ ಪಾರ್ಕಿಂಗ್ ಮಾಡಲು ಸಾಧ್ಯವಾಗಲಿದೆ.

Diwali 2025 These Are The Best Cars For Common People Starting Price Rs 3 50 Lakh Why Should We Buy

ನೂತನ 'ಮ್ಯಾಗ್ನೈಟ್' ರೂ.5.62 ಲಕ್ಷದಿಂದ ರೂ.10.76 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 1-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ & 1-ಲೀ. ಟರ್ಬೊ ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿದೆ. 17 ರಿಂದ 20 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ. 5 ಆಸನಗಳನ್ನು ತನ್ನದಾಗಿಸಿಕೊಂಡಿದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಮತ್ತು 6 ಏರ್‌ಬ್ಯಾಗ್‌ಗಳು ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

Article Published On: Wednesday, October 15, 2025, 11:15 [IST]
English summary
Diwali 2025 these are the best cars for common people starting price rs 3 50 lakh why should we buy
Read more on offbeat india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+