ಭಾರತೀಯ ಸೇನೆಯಿಂದ 2,978 ಯುನಿಟ್‌ಗಳ ಬೃಹತ್ ಆರ್ಡರ್ ಬಾಚಿಕೊಂಡ ಫೋರ್ಸ್ ಮೋಟಾರ್ಸ್!

ಭಾರತೀಯ ಸೇನಾ ಪಡೆಗಳಿಂದ ಫೋರ್ಸ್ ಮೋಟಾರ್ಸ್ ಲಿಮಿಟೆಡ್ ಬೃಹತ್ ಆರ್ಡರ್ ಪಡೆದುಕೊಂಡಿದೆ. 2,978 ಯುನಿಟ್‌ 'ಫೋರ್ಸ್ ಗೂರ್ಖಾ' ಲೈಟ್ ವೆಹಿಕಲ್‌ನ್ನು (ಜಿಎಸ್ 4X4 800 ಕೆಜಿ ಸಾಫ್ಟ್ ಟಾಪ್) ಪೂರೈಸಲು ಕಂಪನಿಯು ಒಪ್ಪಂದವನ್ನು ಮಾಡಿಕೊಂಡಿದೆ. ಈ ಗೂರ್ಖಾ ಮಾಡೆಲ್‌ಗಳನ್ನು ಸೇನೆಗೆ ಗರಿಷ್ಠ ಮೂರು ವರ್ಷಗಳಲ್ಲಿ ಹಂತ ಹಂತವಾಗಿ ಹಸ್ತಾಂತರ ಮಾಡಲಾಗುತ್ತದೆ. ನೂತನ ಫೋರ್ಸ್ ಗೂರ್ಖಾ ವೆಹಿಕಲ್‌ನ್ನು ಭೂ ಸೇನೆ ಹಾಗೂ ವಾಯು ಸೇನೆಗಳಲ್ಲಿ ಬಳಕೆ ಮಾಡಲಾಗುತ್ತದೆ ಎಂಬ ಮಾಹಿತಿ ಲಭ್ಯವಾಗಿದೆ.

ಸದ್ಯ, ಭಾರತೀಯ ಸೇನಾ ಪಡೆಗಳಿಗೆ 'ಫೋರ್ಸ್ ಗೂರ್ಖಾ'ದ ಯಾವ ಮಾಡೆಲ್‌ನ್ನು ವಿತರಿಸಲಾಗುತ್ತದೆ ಎಂಬ ವಿಚಾರವನ್ನು ಬಹಿರಂಗಪಡಿಸಲಾಗಿಲ್ಲ. ಇದೊಂದು ಜನಪ್ರಿಯ ಆಫ್-ರೋಡ್ ಎಸ್‌ಯುವಿಯಾಗಿದ್ದು, ಮಹೀಂದ್ರಾ ಥಾರ್ ರಾಕ್ಸ್‌ ಹಾಗೂ ಮಾರುತಿ ಸುಜುಕಿ ಜಿಮ್ನಿಗೆ ನೇರ ಎದುರಾಳಿಯಾಗಿದೆ. ಸಾಮಾನ್ಯ ಗ್ರಾಹಕರಿಗೆ ಕೊಂಚ ಹೆಚ್ಚಿನ ಬೆಲೆಯಲ್ಲಿ ಖರೀದಿಗೆ ಲಭ್ಯವಿದೆ.

Force motors bags 2 900 Unit Gurkha SUVs Supply Order From Defence Ministry Details

ಹೊಚ್ಚ ಹೊಸ ಫೋರ್ಸ್ ಗೂರ್ಖಾ (Force Gurkha) ಎಸ್‌ಯುವಿ, ಕನಿಷ್ಠ ರೂ.16.75 ಲಕ್ಷ ಹಾಗೂ ಗರಿಷ್ಠ ರೂ.18 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಇದರ 5 ಡೋರ್ ಒಳಗೊಂಡಿರುವ ಮಾಡೆಲ್, 7 ಸೀಟ್‌ಗಳನ್ನು ಹೊಂದಿದೆ. ಅದೇ ರೀತಿಯಲ್ಲಿ 3 ಡೋರ್ ಪಡೆದುಕೊಂಡಿರುವ ಮಾಡೆಲ್, 4 ಸೀಟ್‌ಗಳನ್ನು ಪಡೆದಿದೆ.

ಈ ಫೋರ್ಸ್ ಗೂರ್ಖಾ ಎಸ್‌ಯುವಿ 2.6-ಲೀಟರ್ ಸಾಮರ್ಥ್ಯದ ಡೀಸೆಲ್ ಎಂಜಿನ್ ಆಯ್ಕೆಯನ್ನು ಒಳಗೊಂಡಿದೆ. 140 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 320 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ಹೊಂದಿದ್ದು, 9.5 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಜೊತೆಗೆ 4ಡಬ್ಲ್ಯೂಡಿ (4-ವೀಲ್ ಡ್ರೈವ್) ಟೆಕ್ನಾಲಜಿಯನ್ನು ಒಳಗೊಂಡಿದೆ.

Force motors bags 2 900 Unit Gurkha SUVs Supply Order From Defence Ministry Details

ನೂತನ ಗೂರ್ಖಾ ಎಸ್‌ಯುವಿ, ಗ್ರೀನ್, ರೆಡ್, ವೈಟ್ ಹಾಗೂ ಬ್ಲ್ಯಾಕ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಹಾಗೂ ಮ್ಯಾನುವಲ್ ಎಸಿಯಂತಹ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ ಡುಯಲ್ ಫ್ರಂಟ್ ಏರ್‌ಬ್ಯಾಗ್‌ಗಳು, ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಹಾಗೂ ರೇರ್ ಪಾರ್ಕಿಂಗ್ ಸೇನಾರ್ಸ್ ಅನ್ನು ತನ್ನದಾಗಿಸಿಕೊಂಡಿದೆ.

ಈ ಫೋರ್ಸ್ ಗೂರ್ಖಾಗೆ ಮಹೀಂದ್ರಾ ಥಾರ್ ರಾಕ್ಸ್‌ ಎಸ್‌ಯುವಿ ಪ್ರಬಲವಾದ ಪ್ರತಿಸ್ಪರ್ಧಿಯಾಗಿದೆ. ಇದು ರೂ.12.99 ರಿಂದ 23.09 ಲಕ್ಷ (ಎಕ್ಸ್- ಶೋರೂಂ) ಬೆಲೆಯನ್ನು ಪಡೆದಿದೆ. 2-ಲೀ. ಟರ್ಬೊ ಪೆಟ್ರೋಲ್ ಹಾಗೂ 2-ಲೀ. ಡೀಸೆಲ್ ಎಂಜಿನ್‌ ಆಯ್ಕೆಯನ್ನು ಒಳಗೊಂಡಿದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ.

Force motors bags 2 900 Unit Gurkha SUVs Supply Order From Defence Ministry Details

ಗೂರ್ಖಾಗೆ 'ಥಾರ್ ರಾಕ್ಸ್‌'ನೊಂದಿಗೆ ಮಾರುತಿ ಸುಜುಕಿ ಜಿಮ್ನಿ ಕೂಡ ನೇರವಾದ ಎದುರಾಳಿಯಾಗಿದೆ. ಈ ಕಾರು ಕನಿಷ್ಠ ರೂ.12.76 ಲಕ್ಷ ಮತ್ತು ಗರಿಷ್ಠ ರೂ.15.05 ಲಕ್ಷ (ಎಕ್ಸ್-ಶೋರೂಂ) ದರವನ್ನು ಒಳಗೊಂಡಿದೆ. 1.5-ಲೀ. ಸಾಮರ್ಥ್ಯದ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್ ಒಳಗೊಂಡಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Friday, March 28, 2025, 13:23 [IST]
English summary
Force motors bags 2900 unit gurkha suvs supply order from defence ministry details
Read more on force motors india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+