ಅತ್ಯುತ್ತಮ ಫ್ಯಾಮಿಲಿ ಕಾರುಗಳಿವು.. 7-ಸೀಟರ್.. ಪ್ರಯಾಣ ಹೆಚ್ಚು ಆರಾಮದಾಯಕ!

ಹೊಸ ಕಾರು ಖರೀದಿ ಮಾಡಬೇಕು ಎಂಬುದು ಸಾವಿರಾರು ಜನರ ಕನಸು.. ಆದರೆ ಯಾವ ಕಾರನ್ನು ಮನೆಗೆ ತರಬೇಕು ಎಂಬ ಗೊಂದಲ ಹಲವರಲ್ಲಿ ಇರುತ್ತದೆ. ನಿಮ್ಮ ಕುಟುಂಬಕ್ಕಾಗಿ ಹೊಚ್ಚ ಹೊಸ ಫ್ಯಾಮಿಲಿ ಕಾರನ್ನು ಖರೀದಿ ಮಾಡಲು ಆಲೋಚಿಸಿದ್ದೀರಾ.. ಹಾಗಾದರೆ, ಟೊಯೋಟಾ ಇನ್ನೋವಾ ಕ್ರಿಸ್ಟಾ (Toyota Innova Crysta), ಮಾರುತಿ ಸುಜುಕಿ ಇನ್ವಿಕ್ಟೋ (Maruti Suzuki Invicto) ಹಾಗೂ ಮಹೀಂದ್ರಾ ಸ್ಕಾರ್ಪಿಯೋ ಎನ್ (Mahindra Scorpio N) ಕಾರುಗಳು ಉತ್ತಮ ಆಯ್ಕೆಯಾಗಲಿವೆ. ಇವು ಆಕರ್ಷಕ ವಿನ್ಯಾಸ ಮತ್ತು ವೈಶಿಷ್ಟ್ಯಗಳನ್ನು ಒಳಗೊಂಡಿವೆ. ಬನ್ನಿ.. ಈ ಕಾರುಗಳ ಬೆಲೆ ಹಾಗೂ ವಿಶೇಷತೆ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ತಿಳಿಯೋಣ.

ಟೊಯೋಟಾ ಇನ್ನೋವಾ ಕ್ರಿಸ್ಟಾ: ಇದು ಎಂಪಿವಿಯಾಗಿದ್ದು, ರೂ.19.99 ಲಕ್ಷದಿಂದ ರೂ.26.82 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಒಳಗೊಂಡಿದೆ. ಈ ಕಾರು 2.4-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಹೊಂದಿದ್ದು, 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 13 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಈ ಕಾರು 7 ಅಥವಾ 8 ಆಸನದೊಂದಿಗೆ ದೊರೆಯುತ್ತದೆ.

Good Family Cars In India Toyota Innova Crysta Maruti Suzuki Invicto And Mahindra Scorpio N

ನೂತನ ಟೊಯೋಟಾ ಇನ್ನೋವಾ ಕ್ರಿಸ್ಟಾ ಎಂಪಿವಿ 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ರೇರ್ ಎಸಿ ವೆಂಟ್‌ಗಳು, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಹಾಗೂ ಆಂಬಿಯೆಂಟ್ ಲೈಟಿಂಗ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಪ್ರಯಾಣಿಕರ ರಕ್ಷಣೆಗಾಗಿ 7 ಏರ್‌ಬ್ಯಾಗ್‌ಗಳು, ವಿಎಸ್‌ಸಿ (ವೆಹಿಕಲ್ ಸ್ಟೆಬಿಲಿಟಿ ಕಂಟ್ರೋಲ್) ಮತ್ತು ರೇರ್ ಪಾರ್ಕಿಂಗ್ ಸೇನಾರ್ಸ್ ಅನ್ನು ಹೊಂದಿದೆ.

ಮಾರುತಿ ಸುಜುಕಿ ಇನ್ವಿಕ್ಟೋ: ಈ ಎಂಪಿವಿ ರೂ.25.21 ಲಕ್ಷದಿಂದ ರೂ.28.92 ಲಕ್ಷ (ಎಕ್ಸ್ ಶೋರೂಂ) ದರವನ್ನು ಒಳಗೊಂಡಿದೆ. 2-ಲೀಟರ್ ಹೈಬ್ರಿಡ್ (ಪೆಟ್ರೋಲ್ + ಪೆಟ್ರೋಲ್) ಎಂಜಿನ್ ಆಯ್ಕೆಯನ್ನು ಪಡೆದಿದ್ದು, ಇ-ಸಿವಿಟಿ ಗೇರ್‌ಬಾಕ್ಸ್‌ನ್ನು ಹೊಂದಿದೆ. 23.24 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಇದರಲ್ಲಿ 7/ 8 ಆಸನಗಳಿವೆ.

Good Family Cars In India Toyota Innova Crysta Maruti Suzuki Invicto And Mahindra Scorpio N

ಹೊಸ ಇನ್ವಿಕ್ಟೋ ಎಂಪಿವಿಯಲ್ಲಿ 10.1-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, 7-ಇಂಚಿನ ಡಿಜಿಟಲ್ ಡ್ರೈವರ್ಸ್ ಡಿಸ್‌ಪ್ಲೇ, ಡುಯಲ್-ಝೋನ್ ಕ್ಲೇಮೇಟ್ ಕಂಟ್ರೋಲ್, ಸನ್‌ರೂಫ್ ಮತ್ತು ವೈರ್‌ಲೆಸ್ ಚಾರ್ಜಿಂಗ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್‌ಗಳು, ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಮತ್ತು 360 ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.

ಮಹೀಂದ್ರಾ ಸ್ಕಾರ್ಪಿಯೋ ಎನ್: ಇದು ಎಸ್‌ಯುವಿಯಾಗಿದ್ದು, ರೂ.13.85 ಲಕ್ಷದಿಂದ ರೂ.24.54 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. 2-ಲೀಟರ್ ಟರ್ಬೊ ಪೆಟ್ರೋಲ್ ಮತ್ತು 2.2-ಲೀಟರ್ ಎಂಜಿನ್ ಆಯ್ಕೆಯನ್ನು ಪಡೆದಿದೆ. 6-ಸ್ಪೀಡ್ ಮ್ಯಾನುವಲ್/ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 12.12 ರಿಂದ 15.94 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.

Good Family Cars In India Toyota Innova Crysta Maruti Suzuki Invicto And Mahindra Scorpio N

ಈ ಕಾರು 6/ 7 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ. 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡುಯಲ್-ಝೋನ್ ಕ್ಲೇಮೇಟ್ ಕಂಟ್ರೋಲ್, ಕ್ರೂಸ್ ಕಂಟ್ರೋಲ್ ಹಾಗೂ ವೈರ್‌ಲೆಸ್ ಫೋನ್ ಚಾರ್ಜಿಂಗ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಯಾಣಿಕರ ರಕ್ಷಣೆಗಾಗಿ 6 ಏರ್‌ಬ್ಯಾಗ್‌ಗಳು ಮತ್ತು ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಅನ್ನು ಒಳಗೊಂಡಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Wednesday, January 15, 2025, 11:00 [IST]
English summary
Good family cars in india toyota innova crysta maruti suzuki invicto and mahindra scorpio n
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+