30 Km ಮೈಲೇಜ್.. 5-ಸೀಟರ್.. ಕಡಿಮೆ ಬೆಲೆಗೆ ಸಿಗುವ ಜನಪ್ರಿಯ ಕಂಪನಿಗಳ ಹ್ಯಾಚ್‌ಬ್ಯಾಕ್‌ಗಳಿವು!

ಭಾರತದಲ್ಲಿ ಅವಿಭಕ್ತ ಕುಟುಂಬಗಳ ಸಂಖ್ಯೆ ಹೆಚ್ಚಿದ್ದು, ತಂದೆ - ತಾಯಿ ಹಾಗೂ ಇಬ್ಬರು ಮಕ್ಕಳು ವಾಸಿಸುತ್ತಾರೆ. ಬಹುತೇರು ತಮ್ಮ ಈ ಪುಟ್ಟ ಫ್ಯಾಮಿಲಿಗಾಗಿ ಹೊಚ್ಚ ಹೊಸ ಕಾರನ್ನು ತೆಗೆದುಕೊಳ್ಳಲು ಪ್ಲ್ಯಾನ್ ಮಾಡುತ್ತಾರೆ. ಆದರೆ, ಎಸ್‌ಯುವಿ, ಸೆಡಾನ್ ಹಾಗೂ ಹ್ಯಾಚ್‌ಬ್ಯಾಕ್‌ಗಳಲ್ಲಿ ಯಾವುದನ್ನು ತೆಗೆದುಕೊಳ್ಳಬೇಕು ಎಂಬ ಗೊಂದಲದಲ್ಲಿರುತ್ತಾರೆ. ಅಂತಹವರಿಗೆ ಆಕರ್ಷಕ ವಿನ್ಯಾಸ ಮತ್ತು ವೈಶಿಷ್ಟ್ಯಗಳನ್ನು ಹೊಂದಿರುವ ಜನಪ್ರಿಯ ಟೊಯೊಟಾ ಗ್ಲಾನ್ಜಾ, ಮಾರುತಿ ಸುಜುಕಿ ಬಲೆನೊ ಮತ್ತು ಹ್ಯುಂಡೈ ಗ್ರ್ಯಾಂಡ್ ಐ10 ನಿಯೋಸ್ ಕಾರುಗಳು ಉತ್ತಮವಾದ ಆಯ್ಕೆಯಾಗಲಿವೆ. ಬನ್ನಿ.. ಆ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಿಳಿಯೋಣ.

ಟೊಯೊಟಾ ಗ್ಲಾನ್ಜಾ (Toyota Glanza): ಇದು ಪ್ರೀಮಿಯಂ ಹ್ಯಾಚ್‌ಬ್ಯಾಕ್‌ ಆಗಿದ್ದು, ರೂ.6.86 ಲಕ್ಷದಿಂದ ರೂ.10 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ಈ ಕಾರು 1.2-ಲೀಟರ್ ಪೆಟ್ರೋಲ್ & ಸಿಎನ್‌ಜಿ ಆಯ್ಕೆಯನ್ನು ಹೊಂದಿದೆ. ರೂಪಾಂತರಗಳಿಗೆ (ವೇರಿಯೆಂಟ್) ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್ ಹಾಗೂ 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 22.35 ರಿಂದ 30.61 ಕೆಎಂಪಿಎಲ್‌ವರೆಗೂ ಮೈಲೇಜ್ ನೀಡುತ್ತದೆ.

Good Hatchbacks Under Rs 7 Lakh Toyota Glanza Maruti Suzuki Baleno Hyundai Grand i10 Nios

ಈ ಟೊಯೊಟಾ ಗ್ಲಾನ್ಜಾ ಕಾರಿನಲ್ಲಿ 5 ಜನರು ಓಡಾಟ ನಡೆಸಬಹುದು. 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಆಟೋ ಕ್ಲೇಮೇಟ್ ಕಂಟ್ರೋಲ್ ಹಾಗೂ ಕ್ರೂಸ್ ಕಂಟ್ರೋಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಯ ದೃಷ್ಟಿಯಿಂದ 6-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್) ಮತ್ತು 360-ಡಿಗ್ರಿ ಕ್ಯಾಮೆರಾಗಳನ್ನು ಒಳಗೊಂಡಿದೆ.

ಮಾರುತಿ ಸುಜುಕಿ ಬಲೆನೊ (Maruti Suzuki Baleno): ಈ ಹ್ಯಾಚ್‌ಬ್ಯಾಕ್‌ ರೂ.6.66 ಲಕ್ಷದಿಂದ ರೂ.9.83 ಲಕ್ಷ ಎಕ್ಸ್ ಶೋರೂಂ ದರವನ್ನು ಹೊಂದಿದೆ. 1.2-ಲೀಟರ್ ಪೆಟ್ರೋಲ್ & ಸಿಎನ್‌ಜಿ ಎಂಜಿನ್‌ನ್ನು ಪಡೆದಿದೆ. 5-ಸ್ಪೀಡ್ ಮ್ಯಾನುವಲ್ ಮತ್ತು 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 22.35 ರಿಂದ 30.61 ಕೆಎಂಪಿಎಲ್‌ವರೆಗೂ ಮೈಲೇಜ್ ಕೊಡುತ್ತದೆ. ಇದು 5 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದೆ.

Good Hatchbacks Under Rs 7 Lakh Toyota Glanza Maruti Suzuki Baleno Hyundai Grand i10 Nios

ನೂತನ ಬಲೆನೊ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (9-ಇಂಚು), ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಪುಶ್ ಬಟನ್ ಸ್ಟಾರ್ಟ್/ ಸ್ಟಾಪ್, ಕೀಲೆಸ್ ಎಂಟ್ರಿ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಪ್ರಯಾಣಿಯರ ರಕ್ಷಣೆಗಾಗಿ 6 ಏರ್‌ಬ್ಯಾಗ್‌ಗಳು, ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), 3-ಪಾಯಿಂಟ್ ಸೀಟ್‌ಬೆಲ್ಟ್‌ಗಳು ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.

ಹ್ಯುಂಡೈ ಗ್ರ್ಯಾಂಡ್ ಐ10 ನಿಯೋಸ್ (Hyundai Grand i10 Nios): ಇದು ರೂ.5.98 ಲಕ್ಷದಿಂದ ರೂ.8.62 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ಈ ಕಾರು 1.2-ಲೀಟರ್ ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್‌ ಆಯ್ಕೆಯನ್ನು ಹೊಂದಿದೆ. 5-ಸ್ಪೀಡ್ ಮ್ಯಾನುವಲ್/ 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ತನ್ನದಾಗಿಸಿಕೊಂಡಿದೆ. 16 ರಿಂದ 27 ಕೆಎಂಪಿಎಲ್‌ವರೆಗೂ ಮೈಲೇಜ್ ನೀಡುತ್ತದೆ.

Good Hatchbacks Under Rs 7 Lakh Toyota Glanza Maruti Suzuki Baleno Hyundai Grand i10 Nios

ಈ ಹ್ಯುಂಡೈ ಗ್ರ್ಯಾಂಡ್ ಐ10 ನಿಯೋಸ್ ಹ್ಯಾಚ್‌ಬ್ಯಾಕ್‌ 5 ಆಸನಗಳನ್ನು ಪಡೆದಿದೆ. 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ವೈರ್‌ಲೆಸ್ ಫೋನ್ ಚಾರ್ಜರ್, ಆಟೋಮೆಟಿಕ್ ಎಸಿ, ಕ್ರೂಸ್ ಕಂಟ್ರೋಲ್, ಪುಶ್-ಬಟನ್ ಎಂಜಿನ್ ಸ್ಟಾರ್ಟ್/ ಸ್ಟಾಪ್ ಒಳಗೊಂಡಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್‌ಗಳು ಮತ್ತು ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಅನ್ನು ಪಡೆದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Thursday, January 30, 2025, 22:19 [IST]
English summary
Good hatchbacks under rs 7 lakh toyota glanza maruti suzuki baleno hyundai grand i10 nios
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+