ಬಡವರು ತೆಗೆದುಕೊಳ್ಳಬಹುದು.. 33+ ಕಿ.ಮೀ ಮೈಲೇಜ್, GST ಪರಿಷ್ಕರಣೆ ಬಳಿಕ 5 ಲಕ್ಷದೊಳಗೆ ಲಭ್ಯವಿರುವ ಕಾರುಗಳಿವು!
ಸೆ.22 ರಿಂದ ಪರಿಷ್ಕೃತ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ದರಗಳು ಜಾರಿಗೊಂಡಿವೆ. 1200-ಸಿಸಿ ವರೆಗಿನ ಪೆಟ್ರೋಲ್, ಎಲ್‌ಪಿಜಿ, ಸಿಎನ್‌ಜಿ & 1500-ಸಿಸಿ ವರೆಗಿನ ಡೀಸೆಲ್ ಎಂಜಿನ್‌ನ್ನು ಹೊಂದಿರುವ ಕಾರುಗಳ ಖರೀದಿ ಮೇಲಿನ ಜಿಎಸ್‌ಟಿ ಪ್ರಮಾಣವನ್ನು ಶೇಕಡ 28% ರಿಂದ 18%ಗೆ ಇಳಿಕೆಯಾಗಿದೆ. ಜೊತೆಗೆ ಶೇಕಡ 1-3% ವರೆಗೆ ಹೆಚ್ಚುವರಿಯಾಗಿ ವಿಧಿಸುವ ಸೆಸ್‌ನ್ನು ತೆಗೆದು ಹಾಕಲಾಗಿದೆ. ಇದರ ಸಂಪೂರ್ಣ ಲಾಭವನ್ನು ವಾಹನ ತಯಾರಕ ಕಂಪನಿಗಳು ಗ್ರಾಹಕರಿಗೆ ವರ್ಗಾಯಿಸಿವೆ. ನಾವಿಲ್ಲಿ 33 ಕಿ.ಮೀಗೂ ಅಧಿಕ ಮೈಲೇಜ್ ನೀಡಬಲ್ಲ ರೂ.5 ಲಕ್ಷದೊಳಗೆ ಲಭ್ಯವಿರುವ ಪ್ರಮುಖ ಐದು ಕಾರುಗಳ ಕುರಿತಂತೆ ಸಂಕ್ಷಿಪ್ತವಾಗಿ ತಿಳಿಸಿಕೊಟ್ಟಿದ್ದೇವೆ.
ಮಾರುತಿ ಸುಜುಕಿ ಎಸ್-ಪ್ರೆಸ್ಸೊ (Maruti Suzuki S-Presso):
ಇದೊಂದು ಹ್ಯಾಚ್‌ಬ್ಯಾಕ್ ಆಗಿದೆ. ದೇಶೀಯವಾಗಿ ಅತಿ ಕಡಿಮೆ ಬೆಲೆಯಲ್ಲಿ ಸಿಗುತ್ತದೆ. ರೂ.3.50 ಲಕ್ಷದಿಂದ ರೂ.5.25 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ತುಂಬಾ ಚೆನ್ನಾಗಿರುವ ವಿನ್ಯಾಸವನ್ನು ಹೊಂದಿದೆ. ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು ಮತ್ತು 14 ಇಂಚಿನ ವೀಲ್‌ಗಳನ್ನು ಒಳಗೊಂಡಿದೆ. ಮೆಟಾಲಿಕ್ ಗ್ರಾನೈಟ್ ಗ್ರೇ, ಸಾಲಿಡ್ ಫೈರ್ ರೆಡ್ ಹಾಗೂ ಮೆಟಾಲಿಕ್ ಸಿಲ್ಕಿ ಸಿಲ್ವರ್ ಸೇರಿದಂತೆ ವಿವಿಧ ಬಣ್ಣಗಳೊಂದಿಗೂ ಸಿಗುತ್ತದೆ. 180 ಎಂಎಂ ಗ್ರೌಂಡ್ ಕ್ಲಿಯರೆನ್ಸ್ & 2,380 ಎಂಎಂ ವೀಲ್‌ಬೇಸ್‌ನ್ನು ಪಡೆದಿದೆ.

ಈ ಕಾರು 1-ಲೀ. ಪೆಟ್ರೋಲ್ ಮತ್ತು 1-ಲೀ. ಸಿಎನ್‌ಜಿ ಎಂಜಿನ್‌ನ್ನು ಹೊಂದಿದೆ. 24 ರಿಂದ 33 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ. 5 ಆಸನಗಳನ್ನು ಒಳಗೊಂಡಿದ್ದು, ಪ್ರಯಾಣಿಕರು ಸುಲಭವಾಗಿ ಸಂಚಾರ ಮಾಡಬಹುದು. ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್, ಸೆಮಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಹಾಗೂ ಯುಎಸ್‌ಬಿ ಕನೆಕ್ಟಿವಿಟಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಪ್ರಯಾಣಿಕರ ರಕ್ಷಣೆಗಾಗಿ 2 ಏರ್‌ಬ್ಯಾಗ್‌ಗಳು & ರೇರ್ ಪಾರ್ಕಿಂಗ್ ಸೆನ್ಸರ್‌ಗಳನ್ನು ತನ್ನದಾಗಿಸಿಕೊಂಡಿದೆ.
ಮಾರುತಿ ಸುಜುಕಿ ಆಲ್ಟೊ ಕೆ10 (Maruti Suzuki Alto K10):
ಇದು ಕೂಡ ಜನಪ್ರಿಯ ಹ್ಯಾಚ್‌ಬ್ಯಾಕ್ ಎಂದೇ ಹೆಸರುವಾಸಿಯಾಗಿದೆ. ರೂ.3.70 ಲಕ್ಷದಿಂದ ರೂ.5.45 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿದೆ. ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು ಹಾಗೂ 13 ಇಂಚಿನ ವೀಲ್‌ಗಳನ್ನು ಹೊಂದಿದೆ. ಮೆಟಾಲಿಕ್ ಸಿಜ್ಲಿಂಗ್ ರೆಡ್, ಮೆಟಾಲಿಕ್ ಸಿಲ್ಕಿ ಸಿಲ್ವರ್ ಮತ್ತು ಮೆಟಾಲಿಕ್ ಗ್ರಾನೈಟ್ ಗ್ರೇ ಒಳಗೊಂಡಂತೆ ಹಲವು ಬಣ್ಣಗಳೊಂದಿಗೂ ಲಭ್ಯವಿದೆ. 167 ಗ್ರೌಂಡ್ ಕ್ಲಿಯರೆನ್ಸ್ & 2,380 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿದೆ.

ನೂತನ 'ಆಲ್ಟೊ' 1-ಲೀ. ಪೆಟ್ರೋಲ್ & 1-ಲೀ. ಸಿಎನ್‌ಜಿ ಎಂಜಿನ್‌ನ್ನು ಪಡೆದಿದೆ. 24 ರಿಂದ 34 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. 5 ಆಸನಗಳನ್ನು ತನ್ನದಾಗಿಸಿಕೊಂಡಿದೆ. ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್, ಸೆಮಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಪವರ್ ಸ್ಟೀರಿಂಗ್, ಕೀಲೆಸ್ ಎಂಟ್ರಿ ಹಾಗೂ 4 ಸ್ಪೀಕರ್ ಮ್ಯೂಸಿಕ್ ಸಿಸ್ಟಮ್ ಒಳಗೊಂಡಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್‌ಗಳು, ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ) ಮತ್ತು 3 ಪಾಯಿಂಟ್ ಸೀಟ್ ಬೆಲ್ಟ್‌ಗಳನ್ನು ಪಡೆದಿದೆ.
ಟಾಟಾ ಟಿಯಾಗೊ (Tata Tiago):
ಈ ಹ್ಯಾಚ್‌ಬ್ಯಾಕ್ ರೂ.4.57 ಲಕ್ಷದಿಂದ ರೂ.8.09 ಲಕ್ಷ (ಎಕ್ಸ್-ಶೋರೂಂ) ದರವನ್ನು ಹೊಂದಿದೆ. 1.2-ಲೀ. ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್‌ನ್ನು ಹೊಂದಿದೆ. 19 ರಿಂದ 28 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ. 5 ಆಸನಗಳನ್ನು ಒಳಗೊಂಡಿದೆ. 10.25 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಪ್ರಯಾಣಿಕರ ರಕ್ಷಣೆಗಾಗಿ ಡುಯಲ್ ಫ್ರಂಟ್ ಏರ್‌ಬ್ಯಾಗ್‌ಗಳನ್ನು ಹೊಂದಿದೆ.

ರೆನಾಲ್ಟ್ ಕ್ವಿಡ್ (Renault Kwid):
ಇದೊಂದು ಹ್ಯಾಚ್‌ಬ್ಯಾಕ್ ಆಗಿದೆ. ರೂ.4.30 ಲಕ್ಷದಿಂದ ರೂ.5.90 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 1-ಲೀ. ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 21 ರಿಂದ 22 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. 5 ಆಸನ ಆಯ್ಕೆ ವ್ಯವಸ್ಥೆಯಿದೆ. 8 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್, ಕೀ ಲೆಸ್ ಎಂಟ್ರಿ ಮತ್ತು ಮ್ಯಾನುವಲ್ ಎಸಿ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ ಡುಯಲ್ ಫ್ರಂಟ್ ಏರ್‌ಬ್ಯಾಗ್‌ಗಳನ್ನು ಒಳಗೊಂಡಿದೆ.

ಮಾರುತಿ ಸುಜುಕಿ ಸೆಲೆರಿಯೊ (Maruti Suzuki Celerio):
ಈ ಹ್ಯಾಚ್‌ಬ್ಯಾಕ್ ರೂ.4.70 ಲಕ್ಷದಿಂದ ರೂ.6.73 ಲಕ್ಷ (ಎಕ್ಸ್-ಶೋರೂಂ) ಪಡೆದಿದೆ. 1-ಲೀ. ಪೆಟ್ರೋಲ್ ಮತ್ತು 1-ಲೀ. ಸಿಎನ್‌ಜಿ ಎಂಜಿನ್‌ನ್ನು ಹೊಂದಿದೆ. 24 ರಿಂದ 34 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ. 5 ಆಸನಗಳನ್ನು ತನ್ನದಾಗಿಸಿಕೊಂಡಿದೆ. 7 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್, ಅಡ್ಜಸ್ಟಬಲ್ ಹೆಡ್‌ರೆಸ್ಟ್‌ಗಳು ಹಾಗೂ ರೇರ್ ಎಸಿ ವೆಂಟ್‌ಗಳು ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಯಾಣಿಕರ ರಕ್ಷಣೆಗಾಗಿ 6 ಏರ್‌ಬ್ಯಾಗ್‌ಗಳನ್ನು ಪಡೆದಿದೆ.


Click it and Unblock the Notifications