Hero Xoom 160: ಬಹುನಿರೀಕ್ಷಿತ ಹೀರೋ ಜೂಮ್ 160 ಸ್ಕೂಟರ್‌ಗೆ ಬುಕ್ಕಿಂಗ್ ಶುರು, ಬೆಲೆ ಎಷ್ಟು.. ವಿಶೇಷತೆಗಳೇನು?

ನಂ.1 ದ್ವಿಚಕ್ರ ವಾಹನ (Two-Wheeler) ತಯಾರಕ ಕಂಪನಿಯಾಗಿ ಹೀರೋ ಮೋಟೋಕಾರ್ಪ್ (Hero MotoCorp) ಜನಪ್ರಿಯತೆ ಗಳಿಸಿದೆ. ಮೋಟಾರ್‌ಸೈಕಲ್ ವಿಭಾಗದಲ್ಲಿ ಮುಂಚೂಣಿಯಾಗಿದೆ. ಸ್ಕೂಟರ್ ವಿಭಾಗದಲ್ಲೂ ತನ್ನದೇಯಾದ ವಿಶಿಷ್ಟವಾದ ಛಾಪನ್ನು ಮೂಡಿಸಲು ಹಣಿಯಾಗುತ್ತಿದೆ. ಕಳೆದ ಜನವರಿಯಲ್ಲಿ ಮುಕ್ತಾಯಗೊಂಡ ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋದಲ್ಲಿ ಹೊಚ್ಚ ಹೊಸ ಜೂಮ್ 160 (Xoom 160) ಮ್ಯಾಕ್ಸಿ ಸ್ಕೂಟರ್‌ನ್ನು ಬಿಡುಗಡೆಗೊಳಿಸಿತ್ತು. ಆದರೆ, 6 ತಿಂಗಳು ಕಳೆದರೂ ಬುಕ್ಕಿಂಗ್ ಹಾಗೂ ವಿತರಣೆಯನ್ನು ಶುರು ಮಾಡಿರಲಿಲ್ಲ.

ಸದ್ಯ, ನೂತನ ಹೀರೋ ಜೂಮ್ 160 (Hero Xoom 160) ಸ್ಕೂಟರ್‌ಗಾಗಿ ಕಂಪನಿಯು ಬುಕ್ಕಿಂಗ್ ತೆಗೆಯುಕೊಳ್ಳುವುದಕ್ಕೆ ಶುರು ಮಾಡಿದೆ ಎಂದು ವರದಿಯಾಗಿದೆ. ಆಸಕ್ತ ಗ್ರಾಹಕರು ಸಮೀಪದ ಶೋರೂಂಗೆ ತೆರಳಿ, ಮಾಹಿತಿ ಪಡೆಯಬಹುದು. ಎಲ್ಲವು ಅಂದುಕೊಂಡಂತೆ ನಡೆದರೆ, ಈ ಆಗಸ್ಟ್ ತಿಂಗಳಾಂತ್ಯದ ವೇಳೆಗೆ ವಿತರಣೆಗಳು ಪ್ರಾರಂಭವಾಗುವ ನಿರೀಕ್ಷೆಯಿದೆ.

Hero Xoom 160 Scooter Booking Starts Details

ಹೊಸ ಹೀರೋ ಜೂಮ್ 160 ಮ್ಯಾಕ್ಸಿ ಸ್ಕೂಟರ್ ಎಂದೇ ಹೆಸರುವಾಗಿದ್ದು, ಕೊಂಚ ಮಟ್ಟಿಗೆ ದುಬಾರಿ ಬೆಲೆಯನ್ನು ಪಡೆದಿದೆ. ರೂ.1.48 ಲಕ್ಷ ಎಕ್ಸ್-ಶೋರೂಂ ದರವನ್ನು ಹೊಂದಿದ್ದು, ರೂ.1.89 ಲಕ್ಷ ಆನ್-ರೋಡ್ ಬೆಲೆಯಲ್ಲಿ ಲಭ್ಯವಾಗಲಿದ್ದು, ಎಲ್ಲ ವರ್ಗದ ಗ್ರಾಹಕರು ಸುಲಭವಾಗಿ ಕೊಂಡುಕೊಳ್ಳಬಹುದು.

ಈ ಸ್ಕೂಟರ್ ತುಂಬಾ ಚೆನ್ನಾಗಿರುವ ವಿನ್ಯಾಸವನ್ನು ಒಳಗೊಂಡಿದೆ. ವಿಂಡ್‌ಸ್ಕ್ರೀನ್‌ ಮತ್ತು ಸ್ಪ್ಲಿಟ್ ಎಲ್ಇಡಿ ಹೆಡ್‌ಲೈಟ್‌ನ್ನು ಹೊಂದಿದೆ. ಸೀಟ್‌ಗಳು ಕೂಡ ಉತ್ತಮವಾಗಿದ್ದು, ಆರಾಮದಾಯಕ ಪ್ರಯಾಣಕ್ಕೆ ನೆರವಾಗಲಿದೆ. ಕ್ಯಾಸ್ಟ್ ವೋಲ್ಕಾನಿಕ್ ಗ್ರೇ, ಕ್ಯಾಸ್ಟ್ ಪರ್ಲ್ ಸಮ್ಮಿಟ್ ವೈಟ್ ಹಾಗೂ ಕ್ಯಾಸ್ಟ್ ಕ್ಯಾನ್ಯನ್ ರೆಡ್ ಎಂಬ 3 ಬಣ್ಣಗಳೊಂದಿಗೂ ದೊರೆಯುತ್ತದೆ.

ಇದು ಬಲಿಷ್ಠವಾದ ಪವರ್‌ಟ್ರೇನ್‌ನ್ನು ಪಡೆದಿದೆ. 156-ಸಿಸಿ ಸಿಂಗಲ್ ಸಿಲಿಂಡರ್ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಒಳಗೊಂಡಿದೆ. 14 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 13.7 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುವ ಸಾಮರ್ಥ್ಯವನ್ನು ಹೊಂದಿದೆ. 40 ಕಿ.ಮೀ ವರೆಗೆ ಮೈಲೇಜ್ ನೀಡಬಹುದು ಎಂದು ಅಂದಾಜಿಸಲಾಗಿದೆ.

ನೂತನ ಹೀರೋ ಜೂಮ್ 160 ಮ್ಯಾಕ್ಸಿ ಸ್ಕೂಟರ್ 1983 ಎಂಎಂ ಉದ್ದ, 772 ಎಂಎಂ ಅಗಲ, 1214 ಎಂಎಂ ಎತ್ತರವು ಇದೆ. ಜೊತೆಗೆ 155 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 1348 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿದೆ. 142 ಕೆಜಿ ತೂಕವಿದ್ದು, 7 ಲೀಟರ್‌ನಷ್ಟು ಫ್ಯುಯೆಲ್ ಟ್ಯಾಂಕ್‌ನ್ನು ತನ್ನದಾಗಿಸಿಕೊಂಡಿದೆ.

ಈ ಸ್ಕೂಟರ್ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. ಬಹುಮುಖ್ಯವಾಗಿ ಎಲ್‌ಸಿಡಿ ಇನ್ಸ್ಟ್ರುಮೆಂಟ್ ಕನ್ಸೋಲ್‌, ಐ3ಎಸ್ ಸಿಸ್ಟಮ್, ಸೈಲೆಂಟ್ ಸ್ಟಾರ್ಟರ್, ಸ್ಮಾರ್ಟ್ ಕೀ ವಿತ್ ಕೀಲೆಸ್ ಇಗ್ನಿಷನ್, ಟರ್ನ್-ಬೈ-ಟರ್ನ್ ನ್ಯಾವಿಗೇಷನ್, ರಿಮೋಟ್ ಸೀಟ್ ಓಪನಿಂಗ್ ಸ್ವಿಚ್, ಯುಎಸ್‌‍ಬಿ ಚಾರ್ಜಿಂಗ್ ಪೋರ್ಟ್ ಹಾಗೂ ಬ್ಲೂಟೂತ್ ಕನೆಕ್ಟಿವಿಟಿಯನ್ನು ಪಡೆದಿದೆ.

ಇದು ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ ಮತ್ತು ಹಿಂಭಾಗ (ರೇರ್) ಟ್ವಿನ್ ಶಾಕ್ ಅಬ್ಸಾರ್ಬರ್ಸ್ ಸಸ್ಪೆನ್ಷನ್ ಸೆಟಪ್‌ನ್ನು ಒಳಗೊಂಡಿದೆ. ಸವಾರರ ರಕ್ಷಣೆಗಾಗಿ ಸಿಂಗಲ್ - ಚಾನೆಲ್ ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಡಿಸ್ಕ್ ಬೈಕ್‌ಗಳನ್ನು ತನ್ನದಾಗಿಸಿಕೊಂಡಿದೆ. ಇದರೊಂದಿಗೆ 12-ಇಂಚಿರುವ ಅಲಾಯ್ ವೀಲ್‌ಗಳನ್ನು ಹೊಂದಿದೆ.

ಒಟ್ಟಾರೆಯಾಗಿ ಹೊಸ 'ಹೀರೋ ಜೂಮ್ 160' ಮ್ಯಾಕ್ಸಿ ಸ್ಕೂಟರ್‌ಗಾಗಿ ಬುಕ್ಕಿಂಗ್ ಆರಂಭಿಸಿರುವುದು ದೇಶೀಯ ಗ್ರಾಹಕರಿಗೆ ಹೆಚ್ಚಿನ ಖುಷಿ ನೀಡಿದೆ. ಇದು ಹೆಚ್ಚು ಅತ್ಯಾಧುನಿಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿದ್ದು, ಕೈಗೆಟುಕುವ ಬೆಲೆಯಲ್ಲಿಯೂ ಸಿಗುವ ನಿರೀಕ್ಷೆಯಿದೆ. ಮುಂಬರುವ ದಿನಗಳಲ್ಲಿ ಅಂದರೆ ವಿತರಣೆಗಳು ಆರಂಭವಾದ ಮೇಲೆ ಖರೀದಿದಾರರಿಂದ ಯಾವ ರೀತಿಯ ಪ್ರತಿಕ್ರಿಯೆ ವ್ಯಕ್ತವಾಗುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ.

More from DriveSpark

Article Published On: Wednesday, July 30, 2025, 15:52 [IST]
English summary
Hero xoom 160 scooter booking starts details
Read more on hero motocorp india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+