Honda: 7.41 ಲಕ್ಷ.. 19 Km ಮೈಲೇಜ್, 5-ಸ್ಟಾರ್ ಹೋಂಡಾ ಕಾರಿನ ಕುರಿತ ಪ್ರಮುಖಾಂಶಗಳು!

ಹೋಂಡಾ ಅಮೇಜ್ (Honda Amaze) ಪ್ರಮುಖ ಸೆಡಾನ್ ಆಗಿದೆ. ಇದು ನೋಡಲು ತುಂಬಾ ಚೆನ್ನಾಗಿದೆ. ಪ್ರತಿ ತಿಂಗಳು ಸ್ಪರ್ಧಾತ್ಮಕ ಸಂಖ್ಯೆಯಲ್ಲಿ ಮಾರಾಟವಾಗುತ್ತಿದೆ. ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿ ಮಾಡುತ್ತಿದ್ದಾರೆ. ನೀವು ಹೊಚ್ಚ ಹೊಸ ಕಾರೊಂದನ್ನು ಮನೆಗೆ ತರಲು ಆಲೋಚಿಸಿದ್ದೀರಾ.. ಹಾಗಾದರೆ ಇದೇ 'ಅಮೇಜ್' ಸೆಡಾನ್ ಬೆಸ್ಟ್ ಚಾಯ್ಸ್ ಆಗಲಿದೆ. ಬನ್ನಿ, ಈ ಕಾರಿನ ಬೆಲೆ ಎಷ್ಟು.. ವಿಶೇಷತೆಗಳೇನು ಎಂಬುದರ ಕುರಿತಾದ ಪ್ರಮುಖಾಂಶಗಳನ್ನು ತಿಳಿಯೋಣ.

ಬೆಲೆ & ರೂಪಾಂತರಗಳು (Price & Variants):

ನೂತನ 'ಹೋಂಡಾ ಅಮೇಜ್' ಸೆಡಾನ್, ಕೈಗೆಟುಕುವ ಬೆಲೆಯಲ್ಲಿ ಗ್ರಾಹಕರ ಖರೀದಿಗೆ ದೊರೆಯುತ್ತದೆ. ರೂ.7.41 ಲಕ್ಷದಿಂದ ರೂ.10 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಎಲ್ಲ ವರ್ಗದ ಗ್ರಾಹಕರು ಸುಲಭವಾಗಿ ಕೊಂಡುಕೊಳ್ಳಲು ಸಾಧ್ಯವಾಗಲಿದೆ. ವಿ (V), ವಿಎಕ್ಸ್ (VX) ಹಾಗೂ ಝಡ್ಎಕ್ಸ್ (ZX) ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ.

Honda Amaze Sedan Price Design Mileage Features And All Top Things

ವಿನ್ಯಾಸ & ಬಣ್ಣಗಳು (Design & Colors):

ಇದು ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಹೊಂದಿದೆ. ಉತ್ತಮವಾದ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಫಾಗ್ ಲೈಟ್‌ಗಳು, ಎಲ್ಇಡಿ ಟೈಲ್‌ ಲೈಟ್‌ಗಳು ಹಾಗೂ 15 ಇಂಚಿನ ಡುಯಲ್-ಟೋನ್ ಅಲಾಯ್ ವೀಲ್‌ಗಳನ್ನು ಪಡೆದಿದೆ. ಮೆಟಿರೊಯ್ಡ್ ಗ್ರೇ ಮೆಟಾಲಿಕ್, ಅಬ್ಸಿಡಿಯನ್ ಬ್ಲೂ ಪರ್ಲ್, ರೇಡಿಯಂಟ್ ರೆಡ್ ಮೆಟಾಲಿಕ್, ಗೋಲ್ಡನ್ ಬ್ರೌನ್ ಮೆಟಾಲಿಕ್, ಪ್ಲಾಟಿನಂ ವೈಟ್ ಪರ್ಲ್ ಮತ್ತು ಲೂನಾರ್ ಸಿಲ್ವರ್ ಮೆಟಾಲಿಕ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.

ಸುತ್ತಳತೆ (Dimensions):

ಈ ಕಾರು ಸಾಕಷ್ಟು ವಿಶಾಲವಾಗಿದೆ. 3,995 ಮಿ.ಮೀ ಉದ್ದ, 1,733 ಮಿ.ಮೀ ಅಗಲ ಹಾಗೂ 1,500 ಮಿ.ಮೀ ಎತ್ತರವಿದೆ. 172 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,470 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿದೆ. ಸರಿ ಸುಮಾರು 986 ಕೆಜಿ ತೂಕವಿದೆ.

Honda Amaze Sedan Price Design Mileage Features And All Top Things

ಆಸನ ಆಯ್ಕೆ & ಬೂಟ್ ಸ್ಪೇಸ್ (Seating Capacity & Boot Space):

ನೂತನ 'ಅಮೇಜ್' 5 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ. ಪ್ರಯಾಣಿಕರು ದೂರದ ಊರುಗಳಿಗೆ ಸುಲಭವಾಗಿ ಓಡಾಟ ನಡೆಸಬಹುದು. ವಾರಾಂತ್ಯ ಹಾಗೂ ರಜಾ ದಿನಗಳಲ್ಲಿ ಪ್ರವಾಸಕ್ಕೆ ಹೋಗುವ ಸಂದರ್ಭದಲ್ಲಿ ಹೆಚ್ಚಿನ ಲಗೇಜ್ ಕೊಂಡೊಯ್ಯಲು ಸಾದ್ಯವಾಗುವಂತೆ 416 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ.

ಕಾರ್ಯಕ್ಷಮತೆ (Performance):

ಇದು ಶಕ್ತಿಶಾಲಿಯಾದ ಪವರ್‌ಟ್ರೇನ್‌ನ್ನು ಹೊಂದಿದೆ. 1.2-ಲೀಟರ್ 4-ಸಿಲಿಂಡರ್ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಪಡೆದಿದೆ. 6,000 ಆರ್‌ಪಿಎಂನಲ್ಲಿ 90 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 4,800 ಆರ್‌ಪಿಎಂನಲ್ಲಿ 110 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 5-ಸ್ಪೀಡ್ ಮ್ಯಾನುವಲ್ ಹಾಗೂ ಸಿವಿಟಿ ಗೇರ್‌ಬಾಕ್ಸ್‌ನ್ನು ತನ್ನದಾಗಿಸಿಕೊಂಡಿದೆ. 18.65 ರಿಂದ 19.46 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ.

Honda Amaze Sedan Price Design Mileage Features And All Top Things

ಒಳಾಂಗಣ & ವೈಶಿಷ್ಟ್ಯಗಳು (Interior & Features):

ಈ ಕಾರಿನ ಕ್ಯಾಬಿನ್ ವಿನ್ಯಾಸವು ಅದ್ಬುತವಾಗಿದೆ. 8 ಇಂಚಿನ ಫ್ಲೋಟಿಂಗ್ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಸೆಮಿ-ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ವೈರ್‌ಲೆಸ್ ಫೋನ್ ಚಾರ್ಜರ್, 3-ಸ್ಪೋಕ್ ಸ್ಟೀರಿಂಗ್ ವೀಲ್, 2-ಕಪ್‌ ಹೋಲ್ಡರ್‌ಗಳು ಮತ್ತು ಪ್ಯಾಡಲ್ ಶಿಫ್ಟರ್‌ಗಳು ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. 160 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಕೇವಲ 15 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ.

ಸುರಕ್ಷತಾ ವೈಶಿಷ್ಟ್ಯಗಳು (Safety Features):

ನೂತನ ಅಮೇಜ್ ಸುರಕ್ಷತೆಗೂ ಹೆಸರುವಾಸಿಯಾಗಿದೆ. ಭಾರತ್ ಎನ್‌ಸಿಎಪಿಯಿಂದ 5-ಸ್ಟಾರ್ ಸೇಫ್ಟಿ ರೇಟಿಂಗ್‌ನ್ನು ಹೊಂದುವಲ್ಲಿಯೂ ಯಶಸ್ವಿಯಾಗಿದೆ. 6-ಏರ್‌ಬ್ಯಾಗ್‌ಗಳು, ಎಡಿಎಸ್ಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) & 3 ಪಾಯಿಂಟ್ ಸೀಟ್‌ಬೆಲ್ಟ್‌ಗಳನ್ನು ಹೊಂದಿದೆ.

More from DriveSpark

Article Published On: Monday, December 8, 2025, 18:32 [IST]
English summary
Honda amaze sedan price design mileage features and all top things
Read more on honda india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+