ಹೋಂಡಾ ಅಮೇಜ್ Vs ಮಾರುತಿ ಡಿಜೈರ್: ಬೆಲೆ ಮೊದಲೇ ಅಗ್ಗ.. ಸೇಫ್ಟಿಯಲ್ಲಿ ರಾಜಿಯಿಲ್ಲ! ಫಲಿತಾಂಶ ಹೋಲಿಕೆ

ಹೋಂಡಾ ಅಮೇಜ್ (Honda Amaze) ಹಾಗೂ ಮಾರುತಿ ಸುಜುಕಿ ಡಿಜೈರ್ (Maruti Suzuki Dzire) ಜನಪ್ರಿಯ ಸೆಡಾನ್ ಆಗಿವೆ. ಪ್ರತಿ ತಿಂಗಳು ಉತ್ತಮ ಸಂಖ್ಯೆಯಲ್ಲಿಯೂ ಮಾರಾಟಗೊಳ್ಳುತ್ತಿವೆ. ಇವು ಹೆಚ್ಚು ಅತ್ಯಾಧುನಿಕವಾಗಿದ್ದು, ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿವೆ. ಕೈಗೆಟುಕುವ ಬೆಲೆಯಲ್ಲಿಯೂ ಲಭ್ಯವಿವೆ. ದೇಶದ ವಾಹನಗಳಿಗೆ ಸುರಕ್ಷತಾ ಪರೀಕ್ಷೆ ನಡೆಸುವ ಸಂಸ್ಥೆ ಭಾರತ್ ಎನ್‌ಸಿಎಪಿ (Bharat NCAP), ಅಮೇಜ್ ಮತ್ತು ಡಿಜೈರ್‌ನ್ನು ಅತ್ಯಂತ ಸುರಕ್ಷಿತ ಕಾರುಗಳೆಂದು ನಿರ್ಣಯಿಸಿದೆ. ಇಲ್ಲಿ ಫಲಿತಾಂಶದ ಕುರಿತಂತೆ ಸಮಗ್ರವಾದ ಹೋಲಿಕೆ ಮಾಡಿದ್ದೇವೆ. ಬನ್ನಿ, ಆ ಬಗ್ಗೆ ಹೆಚ್ಚಿನ ವಿವರಗಳನ್ನು ತಿಳಿಯೋಣ.

ಕಳೆದ ಜೂನ್‌ನಲ್ಲಿ 'ಮಾರುತಿ ಡಿಜೈರ್' ಭಾರತ್ ಎನ್‌ಸಿಎಪಿ ನಡೆಸಿದ ಸುರಕ್ಷತಾ ಪರೀಕ್ಷೆಯ ವಯಸ್ಕರ ರಕ್ಷಣೆ ವಿಭಾಗದಲ್ಲಿ (Adult Occupant Protection) 32ಕ್ಕೆ 29.46 ಅಂಕಗಳನ್ನು ಗಳಿಸಿತ್ತು. ಮಕ್ಕಳ ರಕ್ಷಣೆ ವಿಭಾಗದಲ್ಲಿ (Child Occupant Protection) 49ಕ್ಕೆ 41.57 ಅಂಕಗಳನ್ನು ಪಡೆದಿತ್ತು. ಈ ಮೂಲಕ ಎರಡು ವಿಭಾಗದಲ್ಲಿ 5-ಸ್ಟಾರ್ ಸೇಫ್ಟಿ ರೇಟಿಂಗ್‌ನ್ನು ಪಡೆಯುವಲ್ಲಿ ಯಶಸ್ವಿಯಾಗಿತ್ತು.

Honda Amaze Vs Maruti Suzuki Dzire Sedan Bharat NCAP Result Comparison

ಈಚೆಗೆ 'ಹೋಂಡಾ ಅಮೇಜ್' ಕೂಡ ಭಾರತ್ ಎನ್‌ಸಿಎಪಿ ಜರುಗಿಸಿದ ಸುರಕ್ಷತಾ ಪರೀಕ್ಷೆಯ ವಯಸ್ಕರ ರಕ್ಷಣೆ ವಿಭಾಗದಲ್ಲಿ (Adult Occupant Protection) 32ಕ್ಕೆ 28.33 ಅಂಕಗಳನ್ನು ಪಡೆದಿದೆ. ಇದರೊಂದಿಗೆ ಈ ವಿಭಾಗದಲ್ಲಿ 5-ಸ್ಟಾರ್ ಸೇಫ್ಟಿ ರೇಟಿಂಗ್‌ನ್ನು ಪಡೆದಿದೆ. ಮಕ್ಕಳ ರಕ್ಷಣೆ ವಿಭಾಗದಲ್ಲಿ (Child Occupant Protection) 49ಕ್ಕೆ 40.81 ಅಂಕಗಳನ್ನು ಗಳಿಸಿದ್ದು, 4-ಸ್ಟಾರ್ ಸೇಫ್ಟಿ ರೇಟಿಂಗ್‌ನ್ನು ಹೊಂದಿದೆ.

ಇದೇ ಭಾರತ್ ಎನ್‌ಸಿಎಪಿ ಫಲಿತಾಂಶವನ್ನು ಹೋಲಿಕೆ ಮಾಡಿದಾಗ, ವಯಸ್ಕರ ರಕ್ಷಣೆ ವಿಭಾಗದಲ್ಲಿ 'ಅಮೇಜ್ ಕಾರಿಗಿಂತ ಡಿಜೈರ್ 1.13 ಅಂಕ ಮುಂದಿದೆ. ಮಕ್ಕಳ ರಕ್ಷಣೆ ವಿಭಾಗದಲ್ಲೂ ಡಿಜೈರ್‌ಗಿಂತ ಅಮೇಜ್ 0.76 ಕಡಿಮೆ ಅಂಕಗಳನ್ನು ಪಡೆದಿದೆ. ಇದರನ್ವಯ ಡಿಜೈರ್‌ ಸ್ವಲ್ಪ ಮಟ್ಟಿಗೆ ಹೆಚ್ಚು ಸುರಕ್ಷಿತವಾಗಿದೆ.

Honda Amaze Vs Maruti Suzuki Dzire Sedan Bharat NCAP Result Comparison

ಮಾರುತಿ ಸುಜುಕಿ ಡಿಜೈರ್ & ಹೋಂಡಾ ಅಮೇಜ್ ಹೊಂದಿರುವ ಸುರಕ್ಷತಾ ವೈಶಿಷ್ಟ್ಯಗಳೇನು:

'ಮಾರುತಿ ಡಿಜೈರ್' ಗರಿಷ್ಠ ಸುರಕ್ಷತೆಗೂ ಹೆಸರುವಾಸಿಯಾಗಿದೆ. ಪ್ರಯಾಣಿಕರ ರಕ್ಷಣೆಗಾಗಿ 6 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಕ್ರೂಸ್ ಕಂಟ್ರೋಲ್ ಮತ್ತು 360 ಡಿಗ್ರಿ ಕ್ಯಾಮೆರಾದಂತಹ ಹಲವು ರಕ್ಷಣಾತ್ಮಕ ವೈಶಿಷ್ಟ್ಯಗಳನ್ನು ಪಡೆದಿದೆ.

'ಹೋಂಡಾ ಅಮೇಜ್' ಸಹ ಪ್ರಯಾಣಿಕರಿಗೆ ಹೆಚ್ಚಿನ ರಕ್ಷಣೆ ಒದಗಿಸಬಲ್ಲದು. ಅದಕ್ಕಾಗಿ 6 ಏರ್‌ಬ್ಯಾಗ್‌ಗಳು, ಎಡಿಎಸ್ಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಮತ್ತು 3-ಪಾಯಿಂಟ್ ಸೀಟ್‌ಬೆಲ್ಟ್‌ಗಳನ್ನು ಒಳಗೊಂಡಿದೆ.

Honda Amaze Vs Maruti Suzuki Dzire Sedan Bharat NCAP Result Comparison

ಮಾರುತಿ ಸುಜುಕಿ ಡಿಜೈರ್ & ಹೋಂಡಾ ಅಮೇಜ್ ವಿಶೇಷತೆಗಳ ಕುರಿತ ಸಂಕ್ಷಿಪ್ತ ವಿವರ:

'ಮಾರುತಿ ಸುಜುಕಿ ಡಿಜೈರ್' ರೂ.6.26 ಲಕ್ಷದಿಂದ ರೂ.9.31 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 1.2-ಲೀ. ಪೆಟ್ರೋಲ್ ಹಾಗೂ ಸಿಎನ್‌ಜಿ ಎಂಜಿನ್‌ನ್ನು ಒಳಗೊಂಡಿದೆ. 24.79 ರಿಂದ 33.73 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. 5 ಆಸನಗಳನ್ನು ತನ್ನದಾಗಿಸಿಕೊಂಡಿದೆ. 9 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ವೈರ್‌ಲೆಸ್ ಫೋನ್ ಚಾರ್ಜರ್ ಹಾಗೂ ಸನ್‌ರೂಫ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.

'ಹೋಂಡಾ ಅಮೇಜ್' ರೂ.7.41 ಲಕ್ಷದಿಂದ ರೂ.10 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 1.2-ಲೀಟರ್ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 19.46 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ. 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್, ಸೆಮಿ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ವೈರ್‌ಲೆಸ್ ಫೋನ್ ಚಾರ್ಜರ್, 3-ಸ್ಪೋಕ್ ಸ್ಟೀರಿಂಗ್ ವೀಲ್ ಮತ್ತು ಪ್ಯಾಡಲ್ ಶಿಫ್ಟರ್‌ಗಳು ಒಳಗೊಂಡಂತೆ ಹತ್ತಾರು ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ.

More from DriveSpark

Article Published On: Tuesday, December 2, 2025, 15:36 [IST]
English summary
Honda amaze vs maruti suzuki dzire sedan bharat ncap result comparison
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+