Honda: ಹಬ್ಬಕ್ಕೆ ಗುಡ್‌ನ್ಯೂಸ್.. ತಕ್ಷಣ ಶೋರೂಂಗೆ ಹೋಗಿ, ಹೋಂಡಾ ಕಾರುಗಳಿಗೆ 1.51 ಲಕ್ಷವರೆಗೆ ಆಫರ್ ಘೋಷಣೆ!

ಹೋಂಡಾ ಕಾರ್ಸ್ ಇಂಡಿಯಾ (Honda Cars India), ತನ್ನ ಗ್ರಾಹಕರಿಗೆ ಭರ್ಜರಿ ಸಿಹಿಸುದ್ದಿ ನೀಡಿದೆ. ದೀಪಾವಳಿ ಪ್ರಯುಕ್ತ ಈ ಅಕ್ಟೋಬರ್ ತಿಂಗಳು ವಿವಿಧ ಕಾರುಗಳು ಖರೀದಿ ಮೇಲೆ ದೊಡ್ಡ ಮಟ್ಟದಲ್ಲಿ ಹಣಕಾಸಿನ ಪ್ರಯೋಜನಗಳನ್ನು ಘೋಷಣೆ ಮಾಡಿದೆ. ಬನ್ನಿ.. ಯಾವ ಕಾರಿಗೆ ಎಷ್ಟು ಆಫರ್ ಇದೆ.. ಜೊತೆಗೆ ಎಕ್ಸ್-ಶೋರೂಂ ದರವೆಷ್ಟು.. ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಕ್ಷಿಪ್ತವಾದ ವಿವರಗಳನ್ನು ತಿಳಿಯೋಣ.

ಹೋಂಡಾ ಅಮೇಜ್ (Honda Amaze):

ಇದೊಂದು ಸೆಡಾನ್ ಆಗಿದ್ದು, ರೂ.68,000 ವರೆಗೆ ಹಣಕಾಸಿನ ಪ್ರಯೋಜನಗಳನ್ನು ಪಡೆದಿದೆ. ಕನಿಷ್ಠ ರೂ.7.41 ಲಕ್ಷ ಹಾಗೂ ಗರಿಷ್ಠ ರೂ.10 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಒಳಗೊಂಡಿದೆ. ರೇಡಿಯಂಟ್ ರೆಡ್ ಮೆಟಾಲಿಕ್, ಅಬ್ಸಿಡಿಯನ್ ಬ್ಲೂ ಪರ್ಲ್, ಗೋಲ್ಡನ್ ಬ್ರೌನ್ ಮೆಟಾಲಿಕ್ & ಮೆಟಿರೊಯ್ಡ್ ಗ್ರೇ ಮೆಟಾಲಿಕ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.

Honda Cars Have UpTo Rs 1 51 Lakh Offers In October 2025 Amaze Elevate And City

ಈ ಕಾರು ಹೆಚ್ಚು ಬಲಿಷ್ಠವಾದ ಪವರ್‌ಟ್ರೇನ್‌ನ್ನು ಪಡೆದಿದೆ. 1.2-ಲೀ. ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. ರೂಪಾಂತರಗಳಿಗೆ ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್ ಹಾಗೂ ಸಿವಿಟಿ ಗೇರ್‌ಬಾಕ್ಸ್‌ನ್ನು ತನ್ನದಾಗಿಸಿಕೊಂಡಿದೆ. 19.46 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. 215 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಕೇವಲ 15 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ.

ನೂತನ 'ಅಮೇಜ್' 5 ಆಸನಗಳನ್ನು ಒಳಗೊಂಡಿದೆ. ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು ಸಾಧ್ಯವಾಗುವಂತೆ 416 ಲೀ.ನಷ್ಟು ಬೂಟ್ ಸ್ಪೇಸ್‌ನ್ನು ಹೊಂದಿದೆ. 8 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್, ಸೆಮಿ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ ಮತ್ತು 3-ಸ್ಪೋಕ್ ಸ್ಟೀರಿಂಗ್ ವೀಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್‌ಗಳು, ಎಡಿಎಸ್ಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಹಾಗೂ 3-ಪಾಯಿಂಟ್ ಸೀಟ್‌ಬೆಲ್ಟ್‌ಗಳನ್ನು ತನ್ನದಾಗಿಸಿಕೊಂಡಿದೆ.

Honda Cars Have UpTo Rs 1 51 Lakh Offers In October 2025 Amaze Elevate And City

ಹೋಂಡಾ ಎಲಿವೇಟ್ (Honda Elevate):

ಈ ಮಿಡ್-ಸೈಜ್ ಎಸ್‌ಯುವಿಯು ರೂ.1.51 ಲಕ್ಷವರೆಗೆ ಆಫರ್‌ನ್ನು ಪಡೆದಿದ್ದು, ರೂ.11 ರಿಂದ ರೂ.16.15 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ಅತ್ಯಾಧುನಿಕವಾದ ವಿನ್ಯಾಸವನ್ನು ಪಡೆದಿದೆ. ಫೀನಿಕ್ಸ್ ಆರೆಂಜ್ ಪರ್ಲ್, ಗೋಲ್ಡನ್ ಬ್ರೌನ್ ಮೆಟಾಲಿಕ್, ಅಬ್ಸಿಡಿಯನ್ ಬ್ಲೂ ಪರ್ಲ್, ರೇಡಿಯಂಟ್ ರೆಡ್ ಮೆಟಾಲಿಕ್ ಮತ್ತು ಪ್ಲಾಟಿನಂ ವೈಟ್ ಪರ್ಲ್ ಎಂಬ ಬಣ್ಣಗಳೊಂದಿಗೂ ಲಭ್ಯವಿದೆ.

ಹೊಸ 'ಎಲಿವೇಟ್' ಶಕ್ತಿಶಾಲಿಯಾದ 1.5-ಲೀ. ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 15 ರಿಂದ 17 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ. 5 ಆಸನಗಳನ್ನು ತನ್ನದಾಗಿಸಿಕೊಡಿದೆ. 10.25 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ವೈರ್‌ಲೆಸ್ ಫೋನ್ ಚಾರ್ಜರ್ & ಸನ್‌ರೂಫ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಯಾಣಿಕರ ರಕ್ಷಣೆಗಾಗಿ 6 ಏರ್‌ಬ್ಯಾಗ್‌ಗಳನ್ನು ಪಡೆದಿದೆ.

Honda Cars Have UpTo Rs 1 51 Lakh Offers In October 2025 Amaze Elevate And City

ಹೋಂಡಾ ಸಿಟಿ (Honda City):

ಇದು ಜನಪ್ರಿಯ ಸೆಡಾನ್ ಆಗಿ ಹೊರಹೊಮ್ಮಿದೆ. ರೂ.1.27 ಲಕ್ಷವರೆಗೆ ಹಣಕಾಸು ಪ್ರಯೋಜನಗಳನ್ನು ಹೊಂದಿದೆ. ಈ ಕಾರು ಕನಿಷ್ಠ ರೂ.11.95 ಲಕ್ಷ ಮತ್ತು ಗರಿಷ್ಠ ರೂ.16.07 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಅತ್ಯುತ್ತಮವಾದ ವಿನ್ಯಾಸವನ್ನು ಒಳಗೊಂಡಿದೆ. ಅಬ್ಸಿಡಿಯನ್ ಬ್ಲೂ ಪರ್ಲ್, ರೇಡಿಯಂಟ್ ರೆಡ್ ಮೆಟಾಲಿಕ್, ಪ್ಲಾಟಿನಮ್ ವೈಟ್ ಪರ್ಲ್, ಮೆಟಿಯೊರಾಯ್ಡ್ ಗ್ರೇ ಮೆಟಾಲಿಕ್, ಗೋಲ್ಡನ್ ಬ್ರೌನ್ ಮೆಟಾಲಿಕ್ & ಲೂನಾರ್ ಸಿಲ್ವರ್ ಮೆಟಾಲಿಕ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.

ನೂತನ 'ಸಿಟಿ' ಸೆಡಾನ್ 1.5-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿದೆ. 18.40 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದೆ. 8 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ವೈರ್‌ಲೆಸ್ ಆಂಡ್ರಾಯ್ಡ್ ಆಟೋ & ಆಪಲ್ ಕಾರ್‌ಪ್ಲೇ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್‌ಗಳನ್ನು ಒಳಗೊಂಡಿದೆ.

More from DriveSpark

Article Published On: Thursday, October 16, 2025, 17:08 [IST]
English summary
Honda cars have upto rs 1 51 lakh offers in october 2025 amaze elevate and city
Read more on honda india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+