Honda: 17 ಕಿ.ಮೀ ಮೈಲೇಜ್.. 5-ಸೀಟರ್, 11.91 ಲಕ್ಷ.. ಈ ಹೋಂಡಾ ಎಸ್‌ಯುವಿಗೆ ಫುಲ್ ಡಿಮ್ಯಾಂಡ್!
ಹೋಂಡಾ ಎಲಿವೇಟ್ (Honda Elevate) ಮಿಡ್-ಸೈಜ್ ಎಸ್‌ಯುವಿಯಾಗಿದೆ. ಇದು ತುಂಬಾ ಅಚ್ಚುಕಟ್ಟಾದ ವಿನ್ಯಾಸ ಹಾಗೂ ಹತ್ತಾರು ಆಕರ್ಷಕ ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿ ಮಾಡುತ್ತಿದ್ದಾರೆ. ಈ ಜುಲೈನಲ್ಲೂ 'ಎಲಿವೇಟ್' ಕಾರು ಭಾರೀ ಸಂಖ್ಯೆಯಲ್ಲಿ ಮಾರಾಟಗೊಂಡಿದೆ. ಒಟ್ಟು 1,395 ಯುನಿಟ್‌ಗಳನ್ನು ವಿವರಣೆ ಮಾಡಲಾಗಿದೆ. ಈ ಮೂಲಕ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ 4% ಪ್ರಗತಿಯಾಗಿದೆ. 2024ರ ಇದೇ ಅವಧಿಯಲ್ಲಿ 1,340 ಯುನಿಟ್‌ಗಳನ್ನು ಮಾರಲಾಗಿತ್ತು.
ಈ ವರ್ಷದ ಫೆಬ್ರವರಿಯಿಂದ ಜೂನ್ ತಿಂಗಳವರೆಗೂ ಇದೇ 'ಹೋಂಡಾ ಎಲಿವೇಟ್' ಎಸ್‌ಯುವಿಯು ಸ್ಪರ್ಧಾತ್ಮಕ ಸಂಖ್ಯೆಯಲ್ಲಿ ಮಾರಾಟಗೊಂಡಿದೆ. ಒಟ್ಟು 7,970 ಯುನಿಟ್‌ಗಳನ್ನು ಮಾರಾಟ ಮಾಡಲಾಗಿದೆ. ಈ ಅಂಕಿ ಸಂಖ್ಯೆಯನ್ನು ವಿಶ್ಲೇಷಣೆ ಮಾಡಿದಾಗ ಪ್ರತಿ ತಿಂಗಳು ಸರಾಸರಿ 1,594 ಯುನಿಟ್‌ಗಳು ಮಾರಾಟವಾಗಿವೆ.

ಹೋಂಡಾ ಎಲಿವೇಟ್ ವಿಶೇಷತೆಗಳೇನು:
ಇದು ಕನಿಷ್ಠ ರೂ.11.91 ಲಕ್ಷ ಹಾಗೂ ಗರಿಷ್ಠ ರೂ.16.73 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ಹೀಗಾಗಿ, ಎಲ್ಲ ವರ್ಗದ ಖರೀದಿದಾರರು ಸುಲಭವಾಗಿ ಮನೆಗೆ ತರಲು ಸಾಧ್ಯವಾಗಲಿದೆ. ಜೊತೆಗೆ ಎಸ್‌ವಿ, ವಿ, ವಿಎಕ್ಸ್ ಹಾಗೂ ಝಡ್ಎಕ್ಸ್ ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿ ಸಹ ಲಭ್ಯವಾಗಲಿದೆ.
ಈ ಕಾರು ನೋಡುಗರನ್ನು ಸೆಳೆಯುವಂತಹ ವಿನ್ಯಾಸವನ್ನು ಹೊಂದಿದೆ. ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಫಾಗ್ ಲ್ಯಾಂಪ್‌ಗಳು, ಕನೆಕ್ಟ್ಡ್ ಟೈಲ್ ಲ್ಯಾಂಪ್ ಹಾಗೂ 17-ಇಂಚಿರುವ ಡ್ಯುಯಲ್ ಟೋನ್ ಅಲಾಯ್ ವೀಲ್‌ಗಳನ್ನು ಪಡೆದಿದೆ. ಫೀನಿಕ್ಸ್ ಆರೆಂಜ್ ಪರ್ಲ್, ಗೋಲ್ಡನ್ ಬ್ರೌನ್ ಮೆಟಾಲಿಕ್, ಅಬ್ಸಿಡಿಯನ್ ಬ್ಲೂ ಪರ್ಲ್, ಮೆಟಿಯೊರಾಯ್ಡ್ ಗ್ರೇ ಮೆಟಾಲಿಕ್, ರೇಡಿಯಂಟ್ ರೆಡ್ ಮೆಟಾಲಿಕ್, ಲೂನಾರ್ ಸಿಲ್ವರ್ ಮೆಟಾಲಿಕ್ ಮತ್ತು ಪ್ಲಾಟಿನಂ ವೈಟ್ ಪರ್ಲ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.
ನೂತನ ಎಲಿವೇಟ್ ಎಸ್‌ಯುವಿಯು 4312 ಎಂಎಂ ಉದ್ದ, 1790 ಎಂಎಂ ಅಗಲ ಹಾಗೂ 1650 ಎಂಎಂ ಎತ್ತರವು ಇದೆ. 220 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2650 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿದೆ. 5 ಆಸನಗಳನ್ನು ಹೊಂದಿದೆ. ಪ್ರಯಾಣಿಕರು ಆರಾಮದಾಯಕವಾಗಿ ಓಡಾಟ ನಡೆಸಬಹುದು. 458 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಪಡೆದಿದೆ.
ಇದು ಶಕ್ತಿಯುತವಾದ ಪವರ್‌ಟ್ರೇನ್‌ನ್ನು ಹೊಂದಿದೆ. 1.5-ಲೀಟರ್ ಸಾಮರ್ಥ್ಯದ ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿದೆ. 121 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 145 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುವ ಸಾಮರ್ಥ್ಯವನ್ನು ಪಡೆದಿದೆ. 6-ಸ್ಪೀಡ್ ಮ್ಯಾನುವಲ್/ ಸಿವಿಟಿ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ತನ್ನದಾಗಿಸಿಕೊಂಡಿದೆ. 15 ರಿಂದ 17 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ.
ಹೊಸ ಎಲಿವೇಟ್ 40 ಲೀಟರ್ ಸಾಮರ್ಥ್ಯದ ಫ್ಯುಯೆಲ್ ಟ್ಯಾಂಕ್‍ನ್ನು ಹೊಂದಿದೆ. 160 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ. ಕೇವಲ 10.92 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ. ಎಫ್‌ಡಬ್ಲ್ಯೂಡಿ (ಫ್ರಂಟ್ ವೀಲ್ ಡ್ರೈವ್) ಆಯ್ಕೆಯನ್ನು ತನ್ನದಾಗಿಸಿಕೊಂಡಿದೆ.
ಈ ಕಾರಿನ ಕ್ಯಾಬಿನ್ ವಿನ್ಯಾಸವು ಅತ್ಯಾಧುನಿಕವಾಗಿದೆ. 10.25-ಇಂಚಿರುವ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, 7-ಇಂಚಿರುವ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಹೈಟ್ ಅಡ್ಜಸ್ಟೇಬಲ್ ಡ್ರೈವರ್ ಸೀಟ್, ರೇರ್ ಎಸಿ ವೆಂಟ್‌ಗಳು, ವೈರ್‌ಲೆಸ್ ಫೋನ್ ಚಾರ್ಜರ್, ಕಪ್ ಹೋಲ್ಡರ್‌ಗಳು ಮತ್ತು ಸನ್‌ರೂಫ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ.
ನೂತನ ಎಲಿವೇಟ್ ಎಸ್‌ಯುವಿ ಸುರಕ್ಷತೆಗೂ ಹೆಸರುವಾಸಿಯಾಗಿದೆ. ಪ್ರಯಾಣಿಕರಿಗೂ ಗರಿಷ್ಠ ಒದಗಿಸುತ್ತದೆ. 6 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಹಿಲ್ ಸ್ಟಾರ್ಟ್ ಅಸಿಸ್ಟ್, ಬ್ರೇಕ್ ಅಸಿಸ್ಟ್ ಹಾಗೂ ಟ್ರಾಕ್ಷನ್ ಕಂಟ್ರೋಲ್‌ನ್ನು ಪಡೆದಿದೆ. ಇದಕ್ಕೆ ಕಿಯಾ ಸೆಲ್ಟೋಸ್, ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ ಮತ್ತು ಸ್ಕೋಡಾ ಕುಶಾಕ್ ಎಸ್‌ಯುವಿಗಳು ಪ್ರಬಲವಾದ ಎದುರಾಳಿಯಾಗಿವೆ.


Click it and Unblock the Notifications








