Honda: ಸದ್ದಿಲ್ಲದೇ ಜನಪ್ರಿಯ ಹೋಂಡಾ ಎಲಿವೇಟ್ ಕಾರಿನ ಬೆಲೆ ಏರಿಕೆ.. ಎಷ್ಟಾಗಿದೆ?
ಹೋಂಡಾ ಎಲಿವೇಟ್ (Honda Elevate) ಜನಪ್ರಿಯ ಎಸ್‌ಯುವಿಯಾಗಿ ಹೊರಹೊಮ್ಮಿದೆ . ದೇಶೀಯ ಮಾರುಕಟ್ಟೆಯಲ್ಲಿ 2023ರ ಸೆಪ್ಟೆಂಬರ್‌ನಲ್ಲಿ ಈ ಕಾರನ್ನು ಅದ್ದೂರಿಯಾಗಿ ಬಿಡುಗಡೆಗೊಳಿಸಲಾಗಿತ್ತು. ಇದು ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಹೊಂದಿರುವುದರಿಂದ ಉತ್ತಮ ಸಂಖ್ಯೆಯಲ್ಲಿಯೂ ಮಾರಾಟವಾಗುತ್ತಿದೆ. ಜೊತೆಗೆ ಗ್ರಾಹಕರ ಮೆಚ್ಚಿನ ಕಾರಾಗಿಯೂ ಹೆಸರುವಾಸಿಯಾಗಿದೆ. ಸದ್ಯ ನೂತನ ಎಲಿವೇಟ್ ಎಸ್‌ಯುವಿ ಬೆಲೆ ಏರಿಕೆಯಾಗಿದೆ ಎಂದು ತಿಳಿದುಬಂದಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.
ಸದ್ಯ ಹೊಚ್ಚ ಹೊಸ ಹೋಂಡಾ ಎಲಿವೇಟ್ ಎಸ್‌ಯುವಿ ಬೆಲೆ ರೂ.20,000 ವರೆಗೆ ಹೆಚ್ಚಳಗೊಂಡಿದೆ. ಇದರೊಂದಿಗೆ ಈ ಕಾರು, ಕನಿಷ್ಠ ರೂ.11.79 ಲಕ್ಷ ಮತ್ತು ಗರಿಷ್ಠ ರೂ.16.93 ಲಕ್ಷ ಎಕ್ಸ್-ಶೋರೂಂ ದರವನ್ನು ಪಡೆದಿದೆ. ಆದರೂ, ಈ ಬೆಲೆ ಏರಿಕೆ ಸ್ವಲ್ಪ ಮಟ್ಟಿಗೆ ಆಗಿರುವುದರಿಂದ ಗ್ರಾಹಕರು ಕೂಡ ನಿರಾಳರಾಗಿದ್ದಾರೆ.

ನೂತನ ಹೋಂಡಾ ಎಲಿವೇಟ್ ಕಾರು ಹೊರಭಾಗದಲ್ಲಿ ಹೆಚ್ಚು ಅತ್ಯಾಧುನಿಕವಾಗಿರುವ ವಿನ್ಯಾಸವನ್ನು ಒಳಗೊಂಡಿದೆ. ವಿ, ವಿಎಕ್ಸ್ ಮತ್ತು ಝಡ್ಎಕ್ಸ್ ಸೇರಿದಂತೆ ವಿವಿಧ ರೂಪಾಂತರಗಳ (ವೇರಿಯೆಂಟ್) ಆಯ್ಕೆಯನ್ನು ಪಡೆದಿದೆ. ಜೊತೆಗೆ ಫೀನಿಕ್ಸ್ ಆರೆಂಜ್ ಪರ್ಲ್, ರೇಡಿಯಂಟ್ ರೆಡ್ ಮೆಟಾಲಿಕ್ ಹಾಗೂ ಪ್ಲಾಟಿನಂ ವೈಟ್ ಪರ್ಲ್ ಎಂಬ ಬಣ್ಣಗಳೊಂದಿಗೂ ಸಿಗುತ್ತದೆ.
ಈ ಕಾರು, 1.5-ಲೀಟರ್ ಸಾಮರ್ಥ್ಯದ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 121 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 145 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. ರೂಪಾಂತರಗಳಿಗೆ ಅನುಗುಣವಾಗಿ 6-ಸ್ಪೀಡ್ ಮ್ಯಾನುವಲ್ ಅಥವಾ ಸಿವಿಟಿ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 15.31 ರಿಂದ 16.92 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.

ಹೊಸ ಹೋಂಡಾ ಎಲಿವೇಟ್ ಎಸ್‌ಯುವಿ 5 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ. ಇದರಲ್ಲಿ ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ದೂರದ ಊರುಗಳಿಗೆ ಓಡಾಟ ನಡೆಸಬಹುದು. ಪ್ರವಾಸ ವೇಳೆಯಲ್ಲಿ ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 458 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ.
ನೂತನ ಕಾರು ಹತ್ತಾರು ಆಕರ್ಷಕ ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಮುಖವಾಗಿ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (10.25-ಇಂಚು), ಸೆಮಿ-ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ (7-ಇಂಚು), ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ವೈರ್‌ಲೆಸ್ ಫೋನ್ ಚಾರ್ಜರ್, ಆಂಬಿಯೆಂಟ್ ಲೈಟಿಂಗ್ ಹಾಗೂ ಸನ್‌ರೂಫ್ ಅನ್ನು ಪಡೆದಿದೆ.
ಈ ಕಾರು ಪ್ರಯಾಣಿಕರಿಗೂ ಗರಿಷ್ಠ ರಕ್ಷಣೆ ಒದಗಿಸುತ್ತದೆ. ಸುರಕ್ಷತೆಯ ದೃಷ್ಟಿಯಿಂದ 6 ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್) ಅನ್ನು ಹೊಂದಿದೆ. ಇದು ಮಾತ್ರವಲ್ಲದೆ ಅಡಾಪ್ಟಿವ್ ಕ್ರೂಸ್ ಕಂಟ್ರೋಲ್, ಹಿಲ್ ಸ್ಟಾರ್ಟ್ ಅಸಿಸ್ಟ್, ಲೇನ್ ವಾಚ್ ಅಸಿಸ್ಟ್, ವೆಹಿಕಲ್ ಸ್ಟೆಬಿಲಿಟಿ ಅಸಿಸ್ಟ್, ರೇರ್ ಪಾರ್ಕಿಂಗ್ ಕ್ಯಾಮೆರಾದಂತಹ ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ವೈಶಿಷ್ಟ್ಯಗಳನ್ನು ಒಳಗೊಂಡಿದೆ.
ಇನ್ನು, ಹೊಸ ಹೋಂಡಾ ಎಲಿವೇಟ್ ಎಸ್‌ಯುವಿಗೆ ಕಿಯಾ ಸೆಲ್ಟೋಸ್, ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ, ಟೊಯೊಟಾ ಫಾರ್ಚುನರ್, ಸಿಟ್ರಸ್ ಸಿ3 ಏರ್‌ಕ್ರಾಸ್, ಸ್ಕೋಡಾ ಕುಶಾಕ್ ಕಾರುಗಳು ಅತಿದೊಡ್ಡ ಎದುರಾಳಿಯಾಗಿವೆ. ಈ ತಿಂಗಳ ಆರಂಭದಲ್ಲಿ ಹೋಂಡಾ ಕಂಪನಿಯು ಬ್ಲ್ಯಾಕ್ ಎಡಿಷನ್ ಎಲಿವೇಟ್ ಕಾರನ್ನು ಪರಿಚಯಿಸಿತ್ತು. ಇದು ರೂ.15.51 ಲಕ್ಷ ಆರಂಭಿಕ ದರವನ್ನು ಪಡೆದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








