7-ಸೀಟರ್.. 20 ಕಿ.ಮೀ ಮೈಲೇಜ್.. ಈ ಆನೆ ಗಾತ್ರದ Hyundai SUVಗೆ ಫುಲ್ ಡಿಮ್ಯಾಂಡ್.. ಜನ ಮುಗಿಬಿದ್ದು ಖರೀದಿ!

ಹ್ಯುಂಡೈ ಅಲ್ಕಾಜರ್ (Hyundai Alcazar) ಪ್ರಮುಖ ಎಸ್‌ಯುವಿಯಾಗಿದೆ. ಇದು ತುಂಬಾ ಅಚ್ಚುಕಟ್ಟಾದ ವಿನ್ಯಾಸ ಹಾಗೂ ಹತ್ತಾರು ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಗ್ರಾಹಕರು ಕೂಡ ನಾ ಮುಂದು - ತಾ ಮುಂದು ಎಂಬಂತೆ ಖರೀದಿ ಮಾಡುತ್ತಿದ್ದಾರೆ. ಅದಕ್ಕೆ ತಕ್ಕಂತೆ 'ಅಲ್ಕಾಜರ್' ಉತ್ತಮ ಸಂಖ್ಯೆಯಲ್ಲಿಯೂ ಮಾರಾಟಗೊಂಡಿದೆ. ಒಟ್ಟು 1,187 ಯುನಿಟ್‌ಗಳನ್ನು ವಿತರಣೆ ಮಾಡಲಾಗಿದೆ. 2025ರ ಇದೇ ಅವಧಿಯಲ್ಲಿ 1,105 ಯುನಿಟ್‌ಗಳನ್ನು ಮಾರಲಾಗಿತ್ತು. ಈ ಅಂಕಿಸಂಖ್ಯೆಯನ್ನು ವಿಶ್ಲೇಷಣೆ ಮಾಡಿಗೊಂಡ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ 7.42% ಬೆಳವಣಿಗೆಯಾಗಿದೆ.

ಹ್ಯುಂಡೈ ಅಲ್ಕಾಜರ್ ವಿಶೇಷತೆಗಳೇನು:

ಇದೊಂದು ಫ್ಯಾಮಿಲಿ ಎಸ್‌ಯುವಿಯಾಗಿ ಹೊರಹೊಮ್ಮಿದೆ. ಕನಿಷ್ಠ ರೂ.14.47 ಲಕ್ಷ ಮತ್ತು ಗರಿಷ್ಠ ರೂ.21.10 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಎಲ್ಲ ವರ್ಗದ ಖರೀದಿದಾರರಿಗೂ ಸುಲಭವಾಗಿ ಕೈಗೆಟುಕಲಿದೆ. ಎಕ್ಸಿಕ್ಯೂಟಿವ್, ಪ್ರೆಸ್ಟೀಜ್, ಕಾರ್ಪೊರೇಟ್, ಪ್ಲಾಟಿನಂ ಹಾಗೂ ಸಿಗ್ನೇಚರ್ ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ.

Hyundai Alcazar Suv August 2025 Sales Report

ಈ ಕಾರು ಕಣ್ಣು ಕುಕ್ಕುವಂತಹ ವಿನ್ಯಾಸವನ್ನು ಪಡೆದಿದೆ. ಎಲ್ಇಡಿ ಹೆಡ್‌ಲ್ಯಾಂಪ್‌ಗಳು, 'ಹೆಚ್' ಆಕಾರಕ್ಕೆ ಹೋಲಿಕೆಯಾಗಬಲ್ಲ ಎಲ್‌ಇಡಿ ಡಿಆರ್‌ಎಲ್‌ಗಳು, 18 ಇಂಚಿನ ಡೈಮಂಡ್ ಕಟ್ ಅಲಾಯ್ ವೀಲ್‌ಗಳು ಹಾಗೂ ಎಲ್ಇಡಿ ಟೈಲ್‌ಲ್ಯಾಂಪ್‌ಗಳನ್ನು ಹೊಂದಿದೆ. ಅಬಿಸ್ ಬ್ಲ್ಯಾಕ್ ಪರ್ಲ್, ಫಿಯರಿ ರೆಡ್, ಸ್ಟಾರಿ ನೈಟ್ ಹಾಗೂ ಟೈಟಾನ್ ಗ್ರೇ ಮ್ಯಾಟ್ ಒಳಗೊಂಡಂತೆ ಹಲವು ಬಣ್ಣಗಳೊಂದಿಗೂ ದೊರೆಯುತ್ತದೆ.

ನೂತನ 'ಅಲ್ಕಾಜರ್' ಎಸ್‌ಯುವಿಯು ಹೆಚ್ಚು ವಿಶಾಲ ಗಾತ್ರದಲ್ಲಿದೆ. 4,560 ಎಂಎಂ ಉದ್ದ, 1,800 ಎಂಎಂ ಅಗಲ ಹಾಗೂ 1,710 ಎಂಎಂ ಎತ್ತರವಿದೆ. ಜೊತೆಗಿದು 190 ಎಂಎಂ ಗ್ರೌಂಡ್ ಕ್ಲಿಯರೆನ್ಸ್, 2,760 ಎಂಎಂ ವೀಲ್‌ಬೇಸ್‌ನ್ನು ಹೊಂದಿದೆ. 1485 ಎಂಎಂ ಕೆಜಿ ತೂಕವಿದೆ.

Hyundai Alcazar Suv August 2025 Sales Report

ಇದು 6/ 7 ಆಸನಗಳನ್ನು ಒಳಗೊಂಡಿದ್ದು, ಪ್ರಯಾಣಿಕರು ಸುಲಭವಾಗಿ ಸಂಚರಿಸಬಹುದು. ವಾರಾಂತ್ಯ ಹಾಗೂ ರಜಾ ದಿನಗಳಲ್ಲಿ ಪ್ರವಾಸಕ್ಕೆ ಹೋಗುವ ಸಂದರ್ಭದಲ್ಲಿ ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 180 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಹೊಂದಿದೆ. ನಾರ್ಮಲ್, ಇಕೋ & ಸ್ಪೋರ್ಟ್ ಎಂಬ 3 ಡ್ರೈವಿಂಗ್ ಮೋಡ್‌ಗಳನ್ನು ಪಡೆದಿದೆ.

ಈ ಎಸ್‌ಯುವಿ ಎರಡು ಪವರ್‌ಟ್ರೇನ್‌ನ್ನು ಒಳಗೊಂಡಿದೆ. 1.5-ಲೀಟರ್ ಜಿಡಿಟಿ ಟರ್ಬೊ ಪೆಟ್ರೋಲ್ ಎಂಜಿನ್, 158 ಬಿಹೆಚ್‍ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 253 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುವ ಸಾಮರ್ಥ್ಯವನ್ನು ಪಡೆದಿದೆ. 6-ಸ್ಪೀಡ್ ಮ್ಯಾನುವಲ್ ಹಾಗೂ 7-ಸ್ಪೀಡ್ ಡಿಸಿಟಿ ಆಟೊಮೇಟಿಕ್ ಗೇರ್‌ಬಾಕ್ಸ್‌ನ್ನು ಹೊಂದಿದೆ.

ಮತ್ತೊಂದು 1.5-ಲೀಟರ್ ಡೀಸೆಲ್ ಎಂಜಿನ್, 113 ಬಿಹೆಚ್‍ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 250 ಎನ್ಎಂಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಒಳಗೊಂಡಿದೆ. 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದಿದೆ.

ನೂತನ 'ಹ್ಯುಂಡೈ ಅಲ್ಕಾಜರ್' ಕಾರು ಉತ್ತಮವಾದ ಇಂಧನ ದಕ್ಷತೆಯನ್ನು ಒಳಗೊಂಡಿದೆ. 17 ರಿಂದ 20 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. 50 ಲೀಟರ್ ಸಾಮರ್ಥ್ಯದ ಫ್ಯುಯೆಲ್ ಟ್ಯಾಂಕ್‍ನ್ನು ಹೊಂದಿದೆ. 190 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿದೆ. ಕೇವಲ 10 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಹೊಂದಲಿದೆ.

ಈ ಕಾರಿನ ಕ್ಯಾಬಿನ್ ವಿನ್ಯಾಸವು ತುಂಬಾ ಚೆನ್ನಾಗಿದೆ. ಇನ್ಫೋಟೈನ್‌ಮೆಂಟ್ ಸಿಸ್ಟಮ್ & ಇನ್ಸ್ಟ್ರುಮೆಂಟ್ ಕ್ಲಸ್ಟರ್‌ಗಾಗಿ 10.25-ಇಂಚಿನ ಡಿಸ್‌ಪ್ಲೇಗಳು, ಪನೊರೊಮಿಕ್ ಸನ್‌ರೂಫ್‌, ಡುಯಲ್ ಝೋನ್ ಕ್ಲೇಮೇಟ್ ಕಂಟ್ರೋಲ್, ವೈರ್‌ಲೆಸ್ ಫೋನ್ ಚಾರ್ಜರ್, 8-ಸ್ಪೀಕರ್ ಬೋಸ್ ಸೌಂಡ್ ಸಿಸ್ಟಮ್, ವಾಯ್ಸ್ ಕಮಾಂಡ್ಸ್ ಹಾಗೂ ಯುಎಸ್‌ಬಿ ಚಾರ್ಜರ್‌ಗಳು ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ.

ಇದು ಸುರಕ್ಷತೆಗೂ ಹೆಸರುವಾಸಿಯಾಗಿದ್ದು, ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆ ಒದಗಿಸುತ್ತದೆ. ಅದಕ್ಕಾಗಿ 6 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಲೆವೆಲ್ 2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಟ್ರಾಕ್ಷನ್ ಕಂಟ್ರೋಲ್, ಹಿಲ್ ಅಸಿಸ್ಟ್, ಹಿಲ್ ಡಿಸೆಂಟ್ ಕಂಟ್ರೋಲ್ ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.

More from DriveSpark

Article Published On: Sunday, September 28, 2025, 15:31 [IST]
English summary
Hyundai alcazar suv august 2025 sales report
Read more on hyundai india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+