ಹೊಸ ಹ್ಯುಂಡೈ ಕಾರಿಗೆ ಫುಲ್ ಡಿಮ್ಯಾಂಡ್: ಜನವರಿಯಲ್ಲಿ 18,000 ಕಾರುಗಳ ಮಾರಾಟ!
ಹ್ಯುಂಡೈ ಕ್ರೆಟಾ ಭಾರತೀಯ ಎಸ್‌ಯುವಿ ಮಾರುಕಟ್ಟೆಯಲ್ಲಿ ಹೊಸ ದಾಖಲೆ ನಿರ್ಮಿಸಿದೆ. ಜನವರಿ 2025 ರಲ್ಲಿ, ಕ್ರೆಟಾದ ಮಾರಾಟ ಅಂಕಿಅಂಶಗಳು ಪ್ರತಿಸ್ಪರ್ಧಿಗಳ ನಿದ್ದೆಗೆಡಿಸಿದೆ. ಹೌದು, ಜನವರಿ 2025 ರಲ್ಲಿ ಬರೋಬ್ಬರಿ 18,522 ಯುನಿಟ್ ಹ್ಯುಂಡೈ ಕ್ರೆಟಾ ಕಾರುಗಳು ಮಾರಾಟವಾಗಿವೆ. ಭಾರತದಲ್ಲಿ ಇದು ಹ್ಯುಂಡೈ ಕ್ರೆಟಾದ ಹಿಂದೆಂದಿಗಿಂತ ಅತಿ ಹೆಚ್ಚು ಮಾಸಿಕ ಮಾರಾಟವಾಗಿದೆ. ಈ ಎಸ್‌ಯುವಿ ಫೇಸ್‌ಲಿಫ್ಟ್ ಆಗಿ ಬಿಡುಗಡೆಯಾದ ನಂತರ ಭಾರತದಲ್ಲಿ ಅಪಾರ ಜನಪ್ರಿಯತೆಯನ್ನು ಗಳಿಸಿದೆ. ಇದು ಭಾರತದಲ್ಲಿ ಹ್ಯುಂಡೈನ ಯಶಸ್ಸಿಗೆ ಮೂಲಾಧಾರವಾಗಿದೆ.
ಅಂದಹಾಗೆ ಹ್ಯುಂಡೈ ಕ್ರೆಟಾ ಜನವರಿಯಲ್ಲಿ ದೇಶೀಯ ಮಾರುಕಟ್ಟೆಯಲ್ಲಿ 18,522 ಯುನಿಟ್ ಕಾರುಗಳನ್ನು ಮಾರಾಟದೊಂದಿಗೆ ತನ್ನ ಅತ್ಯುತ್ತಮ ಮಾಸಿಕ ಮಾರಾಟವನ್ನು ದಾಖಲಿಸಿದೆ. 2015 ರಲ್ಲಿ ಬಿಡುಗಡೆಯಾದಾಗಿನಿಂದ, ಹ್ಯುಂಡೈ ಕ್ರೆಟಾ ದೇಶೀಯವಾಗಿ ಮತ್ತು ಅಂತರರಾಷ್ಟ್ರೀಯವಾಗಿ ಉತ್ತಮ ಪ್ರತಿಕ್ರಿಯೆಯನ್ನು ಪಡೆದಿದೆ. ಸವಾಲಿನ ಸಂದರ್ಭಗಳ ಹೊರತಾಗಿಯೂ, ಕ್ರೆಟಾ ಅನೇಕ ಕಾರು ಉತ್ಸಾಹಿಗಳ ಮನಗೆದ್ದಿದೆ.

ಹ್ಯುಂಡೈ ಕ್ರೆಟಾ ವಿಶೇಷತೆಗಳು: ಹೊಚ್ಚ ಹೊಸ ಹ್ಯುಂಡೈ ಕ್ರೆಟಾ ಕಾರು, ಬೇಸ್ ವೇರಿಯೆಂಟ್ ರೂ.11 ಲಕ್ಷದಿಂದ ಆರಂಭವಾಗಿ ಟಾಪ್ ವೇರಿಯೆಂಟ್ ರೂ.20.42 ಲಕ್ಷ (ಎಕ್ಸ್-ಶೋರೂಂ) ದರವನ್ನು ಹೊಂದಿದೆ. ಹ್ಯುಂಡೈ ಕ್ರೆಟಾ ಎಲೆಕ್ಟ್ರಿಕ್ ಕಾರಿನ ವಿಷಯಕ್ಕೆ ಬಂದರೆ ರೂ.17.99 ಲಕ್ಷದಿಂದ ಆರಂಭವಾಗಿ ರೂ.24.38 ಲಕ್ಷ ಎಕ್ಸ್-ಶೋರೂಂ ಬೆಲೆಯನ್ನು ಹೊಂದಿದೆ.
42 Kwh & 51.4 Kwh ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಹೊಂದಿದೆ. ಒಮ್ಮೆ ಪೂರ್ಣ ಚಾರ್ಜ್ ಮಾಡಿದರೆ 390 ರಿಂದ 473 ಕಿ.ಮೀ ಕ್ರಮಿಸುವ ಸಾಮರ್ಥ್ಯವನ್ನು ಹೊಂದಿದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ & ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್‌ಗಾಗಿ 10.25 - ಇಂಚಿನ ಡ್ಯುಯಲ್ ಸ್ಕ್ರೀನ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.

ಹೊಸ ಕ್ರೆಟಾ ಕಾರು ಸುರಕ್ಷತೆ ವಿಷಯಕ್ಕೆ ಬಂದರೆ ಪ್ರಯಾಣಿಕರ ರಕ್ಷಣೆಗಾಗಿ 6 ಏರ್‌ಬ್ಯಾಗ್‌ಗಳು, ವಿಎಸ್‌ಸಿ (ವೆಹಿಕಲ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ADAS (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಮತ್ತು ಹಿಲ್ ಸ್ಟಾರ್ಟ್ ಅಸಿಸ್ಟ್‌ಗಳನ್ನು ಒಳಗೊಂಡಿದೆ.
ಪೆಟ್ರೋಲ್ ಚಾಲಿತ ಹ್ಯುಂಡೈ ಕಾರು ಹೆಚ್ಚಿನ ಲಗೇಜ್‌ಗಾಗಿ 433 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ. ಇನ್ಫೋಟೈನ್‌ಮೆಂಟ್ ಸಿಸ್ಟಮ್ & ಇನ್ಸ್ಟ್ರುಮೆಂಟ್ ಕ್ಲಸ್ಟರ್‌ಗಾಗಿ 10.25 - ಇಂಚಿನ ಡುಯಲ್ ಡಿಸ್‌ಪ್ಲೇ, ಡುಯಲ್ ಝೋನ್ ಎಸಿ, 8-ಸ್ಪೀಕರ್ ಬೋಸ್ ಸೌಂಡ್ ಸಿಸ್ಟಮ್ ಮತ್ತು ಸನ್‌ರೂಫ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.

1.5-ಲೀಟರ್ ಟರ್ಬೊ ಪೆಟ್ರೋಲ್, 1.5-ಲೀಟರ್ ಡೀಸೆಲ್ ಎಂಜಿನ್, 1.5-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಆಯ್ಕೆಯನ್ನು ಹೊಂದಿದೆ. 6-ಸ್ಪೀಡ್ ಎಂಟಿ (ಮ್ಯಾನುವಲ್ ಟ್ರಾಸ್ಮಿಷನ್)/ ಎಟಿ (ಆಟೋಮೆಟಿಕ್ ಟ್ರಾಸ್ಮಿಷನ್) & 7-ಸ್ಪೀಡ್ ಡಿಸಿಟಿ (ಡುಯಲ್-ಕ್ಲಚ್ ಟ್ರಾಸ್ಮಿಷನ್) ಗೇರ್‌ಬಾಕ್ಸ್‌ನ್ನು ಪಡೆದಿದೆ. ರೂಪಾಂತರಗಳಿಗೆ ಅನುಗುಣವಾಗಿ 17.4 ಕೆಎಂಪಿಎಲ್ ರಿಂದ 21.8 ಕೆಎಂಪಿಎಲ್‌ವರೆಗೂ ಮೈಲೇಜ್ ಕೊಡುತ್ತದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಇನ್ನು ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಹಂಚಿಕೊಳ್ಳುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ. ಜೊತೆಗೆ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ.


Click it and Unblock the Notifications








