ಹ್ಯುಂಡೈ ಕ್ರೆಟಾ ಎಲೆಕ್ಟ್ರಿಕ್ ಕಾರಿನ ಬಿಡುಗಡೆಗೆ ಭರದ ಸಿದ್ಧತೆ.. 5-ಸೀಟರ್, 400 Km+ ರೇಂಜ್.. ಬೆಲೆ ಇಷ್ಟೇನಾ?
ಭಾರತದ ಮಾರುಕಟ್ಟೆಯಲ್ಲಿ ಹ್ಯುಂಡೈ ಮೋಟಾರ್ ಇಂಡಿಯಾ (Hyundai Motor India), ಮಾರಾಟಗೊಳಿಸುವ 'ಕ್ರೆಟಾ' ಜನಪ್ರಿಯ ಎಸ್‌ಯುವಿಯಾಗಿ ಹೊರಹೊಮ್ಮಿದೆ. ಇದು ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಒಳಗೊಂಡಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿ ಮಾಡುತ್ತಿದ್ದಾರೆ. ನವದೆಹಲಿಯಲ್ಲಿ ಜನವರಿ 17ರಿಂದ ಆಯೋಜಿಸಿರುವ 'ಭಾರತ್ ಮೊಬಿಲಿಟಿ ಎಕ್ಸ್‌ಪೋ'ದಲ್ಲಿ ಇದೇ ಕ್ರೆಟಾವನ್ನು ಎಲೆಕ್ಟ್ರಿಕ್ ರೂಪದಲ್ಲಿ ಮಾರಾಟಕ್ಕೆ ತರುವುದಾಗಿ ಕಂಪನಿಯು ಖಚಿತಪಡಿಸಿದೆ. ನೂತನ ಕಾರಿನ ಕುರಿತಂತೆ ಮೊದಲ ಟೀಸರ್‌ನ್ನು ಸಹ ಸಾಮಾಜಿಕ ಜಾಲತಾಣದಲ್ಲಿ ಬಿಡುಗಡೆಗೊಳಿಸಲಾಗಿದೆ.
ವಿನ್ಯಾಸ (Design): ಹ್ಯುಂಡೈ ಕ್ರೆಟಾ ಇವಿ (Hyundai Creta EV) ಹೊರಭಾಗದಲ್ಲಿ ಅತ್ಯಾಧುನಿಕ ವಿನ್ಯಾಸವನ್ನು ಪಡೆದುಕೊಂಡಿರಲಿದೆ ಎಂಬುದು ಸದ್ಯ ದೃಢಪಟ್ಟಿದೆ. ಅದು ಇಂಧನ ಚಾಲಿತ ಕ್ರೆಟಾಗೂ ಹೋಲಿಕೆಯಾಗಲಿದೆ. ಈಗಾಗಲೇ, ನೂತನ ಎಲೆಕ್ಟ್ರಿಕ್ ಕಾರು ಹಲವಾರು ಬಾರಿ ಟೆಸ್ಟ್ ಡ್ರೈವ್ ನಡೆಸುವಾಗಲು ಕಾಣಿಸಿಕೊಂಡಿದೆ. ಇದು ವಿನೂತನ ಶೈಲಿಯ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು & ಎಲ್ಇಡಿ ಟೈಲ್ ಲ್ಯಾಂಪ್‌ಗಳನ್ನು ಹೊಂದುರುವ ಸಾಧ್ಯತೆಯಿದೆ.

ಕಾರ್ಯಕ್ಷಮತೆ (Performance): ಮುಂಬರಲಿರುವ ಈ ಎಲೆಕ್ಟ್ರಿಕ್ ಎಸ್‌ಯುವಿ, ಹೆಚ್ಚಿನ ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ಪಡೆದುಕೊಂಡಿರಲಿದೆ ಎಂದು ತಿಳಿದುಬಂದಿದೆ. ಬಹುತೇಕ 45 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಹೊಂದಿರುವ ನೀರಿಕ್ಷೆಯಿದ್ದು, ಭರ್ತಿ ಚಾರ್ಜ್‌ನಲ್ಲಿ 400 ಕಿಲೋಮೀಟರ್‌ವರೆಗೂ ಅಧಿಕ ರೇಂಜ್ (ಮೈಲೇಜ್) ಕೊಡಬಹುದು ಎಂದು ಅಂದಾಜಿಸಲಾಗಿದೆ.
ವೈಶಿಷ್ಟ್ಯಗಳು (Features): ಹೊಚ್ಚ ಹೊಸ ಹ್ಯುಂಡೈ ಕ್ರೆಟಾ ಇವಿ, ಇಂಧನ ಚಾಲಿತ ಕ್ರೆಟಾದಂತೆ ಹತ್ತಾರು ನವೀನ ವೈಶಿಷ್ಟ್ಯಗಳನ್ನು ಒಳಗೊಂಡಿರಲಿದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್-ಇನ್ಸ್ಟ್ರುಮೆಂಟ್ ಕ್ಲಸ್ಟರ್, ಡುಯಲ್-ಝೋನ್ ಕ್ಲೇಮೇಟ್ ಕಂಟ್ರೋಲ್, ವೈರ್‌ಲೆಸ್ ಫೋನ್ ಚಾರ್ಜಿಂಗ್, ಸನ್‌ರೂಫ್ ಮತ್ತು ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳನ್ನು ಹೊಂದಿರಲಿದೆ ಎನ್ನಲಾಗಿದೆ.

ಆಸನ ಆಯ್ಕೆ (Seating Capacity): ಈ ಕಾರು 5 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದುಕೊಂಡಿರಲಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ದೂರದ ಊರುಗಳಿಗೆ ಓಡಾಟ ನಡೆಸಬಹುದು. ವಾರಾಂತ್ಯ ಹಾಗೂ ರಜಾದಿನಗಳಲ್ಲಿ ಪ್ರವಾಸಕ್ಕೆ ಹೋಗುವಾಗ ಹೆಚ್ಚಿನ ಲಗೇಜ್ ಸಾಗಿಸಲು ದೊಡ್ಡ ಗಾತ್ರದ ಬೂಟ್ ಸ್ಪೇಸ್‌ನ್ನು ಒಳಗೊಂಡಿರುವ ನಿರೀಕ್ಷೆಯಿದೆ. ಜೊತೆಗೆ ಆಕರ್ಷಕ ಬಣ್ಣಗಳೊಂದಿಗೂ ಖರೀದಿಗೆ ದೊರೆಬಹುದು ಎಂದು ಹೇಳಲಾಗಿದೆ.
ಸುರಕ್ಷತಾ ವೈಶಿಷ್ಟ್ಯಗಳು (Safety Features): ನೂತನ ಹ್ಯುಂಡೈ ಕ್ರೆಟಾ ಇವಿ ಹೆಚ್ಚಿನ ಸುರಕ್ಷತೆಯನ್ನು ಒದಗಿಸಲಿದೆ ಎಂದು ತಿಳಿದುಬಂದಿದೆ. ಈ ಕಾರು ಪ್ರಯಾಣಿಕರ ರಕ್ಷಣೆಗಾಗಿ 6 ಏರ್‌ಬ್ಯಾಗ್‌ಗಳು, ಲೆವೆಲ್-2 (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್) ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಹೊಂದಿರಲಿದೆ ಎಂದು ತಿಳಿದುಬಂದಿದೆ.

ಬೆಲೆ (Price): ಈ ಎಲೆಕ್ಟ್ರಿಕ್ ಕಾರು ಸ್ಪರ್ಧಾತ್ಮಕ ಬೆಲೆಯಲ್ಲಿ ಖರೀದಿಗೆ ದೊರೆಯುವ ಸಾಧ್ಯತೆಯಿದೆ. ರೂ.20 ಲಕ್ಷ ಎಕ್ಸ್ ಶೋರೂಂ ದರವನ್ನು ಪಡೆದಿರಬಹುದು ಎಂದು ಅಂದಾಜಿಸಲಾಗಿದೆ. ಹೊಸ ಕ್ರೆಟಾಗೆ ಮಾರುತಿ ಸುಜುಕಿ ಇ ವಿಟಾರಾ, ಟಾಟಾ ಕರ್ವ್ ಇವಿ ಹಾಗೂ ಎಂಜಿ ಜಡ್ಎಸ್ ಇವಿಗಳು ಪ್ರಬಲವಾದ ಸ್ಪರ್ಧೆಯೊಡ್ಡಲಿವೆ ಎಂದು ಹೇಳಲಾಗಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








