ಹ್ಯುಂಡೈ ಬ್ರಹ್ಮಾಸ್ತ್ರವಿದು... ಫುಲ್ ಡಿಮ್ಯಾಂಡ್... ರಣ ಹದ್ದಿನಂತಹ ಎಸ್‌ಯುವಿಗಾಗಿ ಮುಗಿಬಿದ್ದ ಜನ

ಭಾರತೀಯ ಕಾರು ಮಾರುಕಟ್ಟೆಯು ವಿಶ್ವದಲ್ಲೇ ಅತಿ ವೇಗವಾಗಿ ಬೆಳೆಯುತ್ತಿದೆ, ಜಗತ್ತಿನ ಬಹುತೇಕ ಬ್ರಾಂಡ್‌ಗಳು ಭಾರತದಲ್ಲಿ ಉತ್ತಮ ಲಾಭವನ್ನು ಗಳಿಸುತ್ತಿವೆ. ದೇಶೀಯ ಬ್ರಾಂಡ್‌ಗಳಾದ ಟಾಟಾ, ಮಹೀಂದ್ರಾ ಬ್ರಾಂಡ್‌ಗಳಿಗೆ ಸಮನಾಗಿ ವಿದೇಶಿ ಬ್ರಾಂಡ್‌ಗಳ ಹ್ಯುಂಡೈ, ಕಿಯಾದಂತಹ ಕಂಪನಿಗಳು ಭಾರತದಲ್ಲಿ ಹೆಚ್ಚಿನ ಕಾರುಗಳನ್ನು ಮಾರಾಟ ಮಾಡುವ ಮೂಲಕ ಮುನ್ನುಗ್ಗುತ್ತಿವೆ. ಹ್ಯುಂಡೈಗೆ ಮೊದಲಿನಿಂದಲೂ ಬ್ರಹ್ಮಾಸ್ತ್ರದಂತೆ ಕೈ ಹಿಡಿದಿರುವ ಮಿಡ್‌ಸೈಜ್ ಎಸ್‌ಯುವಿ 'ಕ್ರೆಟಾ' ನವೆಂಬರ್‌ನಲ್ಲಿ ದಾಖಲೆಯ ಮಾರಾಟವನ್ನು ಕಂಡಿದೆ. ದೇಶದಲ್ಲಿ ಅತ್ಯುತ್ತಮ ಮಾರಾಟವಾದ ಕಾರುಗಳ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ.

ಹ್ಯುಂಡೈ ಕ್ರೆಟಾ ನವೆಂಬರ್ 2025 ರಲ್ಲಿ ಬರೋಬ್ಬರಿ 17,344 ಯುನಿಟ್‌ ಕಾರುಗಳ ಮಾರಾಟವನ್ನು ದಾಖಲಿಸಿದೆ, ಈ ಅಂಕಿ ಅಂಶವು ಈ ತಿಂಗಳಿನಲ್ಲಿ ಹುಂಡೈನ ಅತಿ ಹೆಚ್ಚು ಮಾರಾಟವಾದ ಮಾಡಲ್‌ ಆಗಿ ಸ್ಥಾನ ಪಡೆದಿದೆ. ಇದು ಹ್ಯುಂಡೈನ ಒಟ್ಟಾರೆ ನವೆಂಬರ್ ಮೊತ್ತಕ್ಕೆ ಗಮನಾರ್ಹವಾಗಿ ಕೊಡುಗೆ ನೀಡಿದೆ. ಬಿಡುಗಡೆಯಾದಾಗಿನಿಂದ ಇಲ್ಲಿಯವರೆಗಿನ ಪ್ರವೃತ್ತಿಗಳು ಸ್ಥಿರವಾದ ಬೇಡಿಕೆಯನ್ನು ತೋರಿಸಿವೆ.

hyundai-creta-november-2026-sales-report

ಹ್ಯುಂಡೈ ಕ್ರೆಟಾ ವಿಶೇಷತೆಗಳು: ಹ್ಯುಂಡೈ ಕ್ರೆಟಾ ಪೆಟ್ರೋಲ್, ಟರ್ಬೊ-ಪೆಟ್ರೋಲ್, ಡೀಸೆಲ್ ಮತ್ತು ಎಲೆಕ್ಟ್ರಿಕ್ ಆಯ್ಕೆಗಳಲ್ಲಿ ಸಿಗುತ್ತದೆ. ಈ ಕಾರು 1.5-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್, 1.5-ಲೀ. ಟರ್ಬೊ ಪೆಟ್ರೋಲ್ ಹಾಗೂ 1.5-ಲೀ. ಡೀಸೆಲ್ ಎಂಜಿನ್‌ನ್ನು ಪಡೆದಿದೆ. 17.4 ರಿಂದ 21.8 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಇದರಲ್ಲಿ 5 ಆಸನ ಆಯ್ಕೆ ವ್ಯವಸ್ಥೆ ಇದ್ದು, ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು 433 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಹೊಂದಿದೆ.

ಹುಂಡೈ ಕ್ರೆಟಾ ಎಲೆಕ್ಟ್ರಿಕ್ ಅನ್ನು 42KWh ಮತ್ತು 51.4kWh ಎಂಬ ಎರಡು ಬ್ಯಾಟರಿ ಪ್ಯಾಕ್ ಆಯ್ಕೆಗಳೊಂದಿಗೆ ನೀಡಲಾಗುತ್ತದೆ. ಚಿಕ್ಕ ಬ್ಯಾಟರಿ ಪ್ಯಾಕ್ 390 ಕಿ.ಮೀ ರೇಂಜ್ ಹಾಗೂ ದೊಡ್ಡದು MIDC ಪರೀಕ್ಷೆಯಲ್ಲಿ 473 ಕಿ.ಮೀ ರೇಂಜ್ ಹೊಂದಿದೆ. ಎರಡೂ ಬ್ಯಾಟರಿ ಪ್ಯಾಕ್‌ಗಳನ್ನು ಮುಂಭಾಗದ ಆಕ್ಸಲ್‌ಗೆ ಲಿಂಕ್ ಮಾಡಲಾದ ಒಂದೇ ಎಲೆಕ್ಟ್ರಿಕ್ ಮೋಟರ್‌ನೊಂದಿಗೆ ಜೋಡಿಸಲಾಗಿದೆ.

hyundai-creta-november-2026-sales-report

ಇದು 133bhp (42kWh ಬ್ಯಾಟರಿ ಪ್ಯಾಕ್) ಪವರ್ ಅಥವಾ ದೊಡ್ಡ 51.2kWh ಬ್ಯಾಟರಿ ಪ್ಯಾಕ್‌ನೊಂದಿಗೆ 169bhp ಪವರ್ ಅನ್ನು ಉತ್ಪಾದಿಸುತ್ತದೆ. ಕ್ರೆಟಾದ ಈ ಹೆಚ್ಚು ಶಕ್ತಿಶಾಲಿ ದೀರ್ಘ-ಶ್ರೇಣಿಯ ಆವೃತ್ತಿಯು 7.9 ಸೆಕೆಂಡುಗಳಲ್ಲಿ 0-100km/h ವೇಗವನ್ನು ತಲುಪುವ ಸಾಮರ್ಥ್ಯವನ್ನು ಹೊಂದಿದೆ. ಕ್ರೆಟಾದ ಬ್ಯಾಟರಿ ಪ್ಯಾಕ್ ಕೇವಲ 58 ನಿಮಿಷಗಳಲ್ಲಿ ಶೇ80 ರಷ್ಟು ಚಾರ್ಜ್ ಮಾಡಬಹುದು ಎಂದು ಹ್ಯುಂಡೈ ಹೇಳಿಕೊಂಡಿದೆ.

ಹ್ಯುಂಡೈ ಕ್ರೆಟಾ ಫೇಸ್‌ಲಿಫ್ಟ್ ಎಸ್‍ಯುವಿಯಲ್ಲಿ 10.25-ಇಂಚಿನ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಪರಿಷ್ಕೃತ ಕ್ಲೈಮೆಟ್ ಕಂಟ್ರೋಲ್ ಪ್ಯಾನಲ್, 360-ಡಿಗ್ರಿ ಕ್ಯಾಮೆರಾ ಮತ್ತು ಸುಧಾರಿತ ಡ್ರೈವರ್ ಅಸಿಸ್ಟ್ ಸಿಸ್ಟಂಗಳೊಂದಿಗೆ (ADAS) ಡ್ಯುಯಲ್-ಜೋನ್ AC ಒದಗಿಸಲಾಗಿದೆ. ಇದರೊಂದಿಗೆ ಪನಾರಮಿಕ್ ಸನ್‌ರೂಫ್, ವೈರ್‌ಲೆಸ್ ಫೋನ್ ಚಾರ್ಜಿಂಗ್, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು ಮತ್ತು 8-ಸ್ಪೀಕರ್ ಬಾಸ್ ಸೌಂಡ್ ಸಿಸ್ಟಮ್ ಹೊಂದಿದೆ.

hyundai-creta-november-2026-sales-report

ಹೊಸ ಹುಂಡೈ ಕ್ರೆಟಾ ಎಸ್‍ಯುವಿ ಒಳಭಾಗದ ಹಿಂದಿನ ಸೀಟ್ 2 - ಸ್ಟೆಪ್ ರಿಕ್ಲೈನ್ ಫಂಕ್ಷನ್ ಸೇರಿದಂತೆ ಸೌಕರ್ಯ ಮತ್ತು ಅನುಕೂಲಕ್ಕಾಗಿ ಕ್ಯಾಬಿನ್‌ನಲ್ಲಿ ಸಾಕಷ್ಟು ಸ್ಥಳಾವಕಾಶವನ್ನು ನೀಡಲಾಗಿದೆ. ಇನ್ನು ಸುರಕ್ಷತೆಯ ವಿಷಯದಲ್ಲಿ ಹ್ಯುಂಡೈ ಕ್ರೆಟಾ ಎಸ್‍ಯುವಿಯು ಆರು ಏರ್‌ಬ್ಯಾಗ್‌ಗಳು, ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್ (TPMS), ISOFIX ಚೈಲ್ಡ್ ಸೀಟ್ ಆಂಕರೇಜ್‌ಗಳು ಮತ್ತು ಎಲೆಕ್ಟ್ರಾನಿಕ್ ಸ್ಟೆಬಿಲಿಟಿಯಂತಹ ಆಧುನಿಕ ಫೀಚರ್ಸ್ ಒಳಗೊಂಡಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Sunday, December 14, 2025, 12:48 [IST]
English summary
Hyundai creta november 2026 sales report
Read more on hyundai india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+