21 Km ಮೈಲೇಜ್, 5-ಸೀಟರ್.. Hyundai SUVಗೆ ಮುಗಿಬಿದ್ದ ಗ್ರಾಹಕರು.. ರೆಕಾರ್ಡ್ ಸಂಖ್ಯೆಯಲ್ಲಿ ಮಾರಾಟ, ಕಾರಣವೇನು?

ದಕ್ಷಿಣ ಕೊರಿಯಾ ಮೂಲದ ಹ್ಯುಂಡೈ (Hyundai) ಜನಪ್ರಿಯ ಕಾರು ತಯಾರಕ ಕಂಪನಿಯಾಗಿ ಹೊರಹೊಮ್ಮಿದೆ. ದೇಶೀಯ ಮಾರುಕಟ್ಟೆಯಲ್ಲಿ ಕ್ರೆಟಾ (Creta) ಎಸ್‌ಯುವಿಯನ್ನು ಮಾರಾಟಗೊಳಿಸುತ್ತಿದೆ. ಇದು ಹೆಚ್ಚು ಆಕರ್ಷಕವಾಗಿದ್ದು, ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿ ಮಾಡುತ್ತಿದ್ದಾರೆ. ಇದೀಗ ಸತತ ಎರಡನೇ ತಿಂಗಳು ಅಂದರೆ ಏಪ್ರಿಲ್‌ನಲ್ಲಿಯೂ 'ಪ್ರಯಾಣಿಕ ವಾಹನ' ವಿಭಾಗದಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟಗೊಂಡ ಕಾರಾಗಿ ಹೊರಹೊಮ್ಮಿದೆ. ಬನ್ನಿ, ಆ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಿಳಿಯೋಣ.

ಕಳೆದ ತಿಂಗಳು (ಏಪ್ರಿಲ್ - 2025) ಹ್ಯುಂಡೈ ಕಂಪನಿಯು ಸರಿ ಸುಮಾರು 17,016 ಯುನಿಟ್ 'ಕ್ರೆಟಾ' ಯಶಸ್ವಿಯಾಗಿ ಮಾರಾಟಗೊಳಿಸಿದೆ. 2024ರ ಇದೇ ಅವಧಿಯಲ್ಲಿ 15,447 ಯುನಿಟ್‌ಗಳನ್ನು ಮಾರಾಟ ಮಾಡಿತ್ತು. ಅದಕ್ಕೆ ಹೋಲಿಸಿದರೆ, ಮಾರಾಟ ಪ್ರಮಾಣ ವರ್ಷದಿಂದ ವರ್ಷಕ್ಕೆ (YoY) ಶೇಕಡ 10.2% ಪ್ರಗತಿಯಾಗಿದೆ.

Hyundai Creta Suv April 2025 Sales Details

ಅದೇ ರೀತಿಯಲ್ಲಿ ಮಾರ್ಚ್‌ನಲ್ಲಿಯೂ 'ಹ್ಯುಂಡೈ ಕ್ರೆಟಾ' ಎಸ್‌ಯುವಿಗಳನ್ನು ಭಾರೀ ಸಂಖ್ಯೆಯಲ್ಲಿ ಮಾರಾಟ ಮಾಡಲಾಗಿದೆ. ಬರೋಬ್ಬರಿ 18,059 ಯುನಿಟ್‌ಗಳನ್ನು ಗ್ರಾಹಕರು ಕೊಂಡುಕೊಂಡಿದ್ದಾರೆ. ಹಾಗೆಯೇ, ಈ ವರ್ಷದ ಮೊದಲೆರಡು ತಿಂಗಳು ಸಹ 'ಕ್ರೆಟಾ' ಕಾರುಗಳು ಉತ್ತಮ ಸಂಖ್ಯೆಯಲ್ಲಿ ಮಾರಾಟವಾಗಿವೆ. ಫೆಬ್ರವರಿಯಲ್ಲಿ 16,317 ಯುನಿಟ್ ಹಾಗೂ ಜನವರಿಯಲ್ಲಿ 18,522 ಯುನಿಟ್‌ಗಳನ್ನು ಮಾರಲಾಗಿದೆ.

ಹ್ಯುಂಡೈ ಕ್ರೆಟಾ ಎಸ್‌ಯುವಿ ದೊಡ್ಡ ಸಂಖ್ಯೆಯಲ್ಲಿ ಮಾರಾಟವಾಗಲು ನಾನಾ ಕಾರಣಗಳಿವೆ. ಬಹುಮುಖ್ಯವಾಗಿ ಈ ಕಾರು, ಬೆಲೆಗೆ ತಕ್ಕಂತೆ ಅತ್ಯಾಧುನಿಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಹೊಂದಿದೆ. ಜೊತೆಗೆ ಕೈಗೆಟುಕುವ ಬೆಲೆಯಲ್ಲಿಯೂ ಸಿಗುವುದರಿಂದ ಗ್ರಾಹಕರು ಕೂಡ ಮುಗಿಬಿದ್ದು ಕೊಂಡುಕೊಳ್ಳುತ್ತಿದ್ದಾರೆ ಎಂದು ಮಾರುಕಟ್ಟೆ ತಜ್ಞರ ವಿಶ್ಲೇಷಣೆಯಾಗಿದೆ.

Hyundai Creta Suv April 2025 Sales Details

ಹ್ಯುಂಡೈ ಕ್ರೆಟಾ (Hyundai Creta) ಎಸ್‌ಯುವಿ ವಿಶೇಷತೆಗಳೇನು: ಈ ಕಾರು ಅತ್ಯಂತ ಕೈಗೆಟುಕುವ ಬೆಲೆಯಲ್ಲಿ ಸಿಗುತ್ತದೆ. ಇದು ರೂ.11 ಲಕ್ಷದಿಂದ ರೂ.20 ಲಕ್ಷವರೆಗೆ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಪೆಟ್ರೋಲ್ & ಡೀಸೆಲ್ ಎಂಜಿನ್‌ನ್ನು ಒಳಗೊಂಡಿದೆ. 17 ರಿಂದ 21 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಇದರಲ್ಲಿ 5 ಜನರು ಓಡಾಟ ನಡೆಬಹುದು.

ನೂತನ ಹ್ಯುಂಡೈ ಕ್ರೆಟಾ ಎಸ್‌ಯುವಿ ಹೊರಭಾಗದಲ್ಲಿ ಅತ್ಯತ್ತಮವಾದ ವಿನ್ಯಾಸವನ್ನು ಹೊಂದಿದೆ. ಅಟ್ಲಾಸ್ ವೈಟ್, ಅಬಿಸ್ ಬ್ಲಾಕ್ ಮತ್ತು ಟೈಟಾನ್ ಗ್ರೇ ಸೇರಿದಂತೆ ವಿವಿಧ ಬಣ್ಣಗಳ ಆಯ್ಕೆಯಲ್ಲಿಯೂ ದೊರೆಯುತ್ತದೆ. ಇನ್ಫೋಟೈನ್‌ಮೆಂಟ್ ಸಿಸ್ಟಮ್‌ & ಇನ್ಸ್ಟ್ರುಮೆಂಟ್ ಕ್ಲಸ್ಟರ್‌ಗಾಗಿ ಡುಯಲ್ ಡಿಸ್‌ಪ್ಲೇ, 8-ಸ್ಪೀಕರ್ ಬೋಸ್ ಸೌಂಡ್ ಸಿಸ್ಟಮ್ ಮತ್ತು ಸನ್‌ರೂಫ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಯಾಗಿ 6 ಏರ್‌ಬ್ಯಾಗ್‌ಗಳನ್ನು ಹೊಂದಿದೆ.

ಹ್ಯುಂಡೈ ಕ್ರೆಟಾ ಎಲೆಕ್ಟ್ರಿಕ್ (Hyundai Creta Electric) ಕೂಡ ಖರೀದಿಗೆ ಲಭ್ಯ: ಈ ಎಲೆಕ್ಟ್ರಿಕ್ ಎಸ್‌ಯುವಿ ರೂ.18 ಲಕ್ಷದಿಂದ ರೂ.23 ಲಕ್ಷವರೆಗೆ (ಎಕ್ಸ್- ಶೋರೂಂ) ಬೆಲೆಯನ್ನು ಒಳಗೊಂಡಿದೆ. 42 ಕೆಡಬ್ಲ್ಯೂಹೆಚ್ ಮತ್ತು 51.4 ಕೆಡಬ್ಲ್ಯೂಹೆಚ್ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಹೊಂದಿದೆ. ಭರ್ತಿ ಚಾರ್ಜ್‌ನಲ್ಲಿ 390 ರಿಂದ 473 ಕಿ.ಮೀ ರೇಂಜ್ ಕೊಡುತ್ತದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ & ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್‌ಗಾಗಿ ಡುಯಲ್ ಸ್ಕ್ರೀನ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Saturday, May 3, 2025, 14:03 [IST]
English summary
Hyundai creta suv april 2025 sales details
Read more on hyundai india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+