21 Km ಮೈಲೇಜ್, 5-ಸೀಟರ್.. ಈ ರಣ ಹದ್ದಿನಂತಹ Hyundai Suv ಕೊಳ್ಳಲು ಗ್ರಾಹಕರು ಹಿಂದೇಟು, ಯಾಕೆ ಗೊತ್ತಾ?

ಹ್ಯುಂಡೈ ಕ್ರೆಟಾ (Hyundai Creta) ಜಗಮೆಚ್ಚಿದ ಎಸ್‌ಯುವಿಯಾಗಿ ಹೊರಹೊಮ್ಮಿದೆ. ಇದು ತುಂಬಾ ಅಚ್ಚುಕಟ್ಟಾದ ವಿನ್ಯಾಸ ಹಾಗೂ ಹಲವು ನವೀನ ವೈಶಿಷ್ಟ್ಯಗಳನ್ನು ಹೊಂದಿದೆ. ಗ್ರಾಹಕರು ಸಹ ಮುಗಿಬಿದ್ದು ಕೊಂಡುಕೊಳ್ಳುತ್ತಿದ್ದಾರೆ. ಸದ್ಯ, ಈ 2025ರ ಆಗಸ್ಟ್ ತಿಂಗಳ ಪ್ರಮುಖ 10 ಕಾರುಗಳ ಮಾರಾಟದ ವರದಿ ಪ್ರಕಟಗೊಂಡಿದೆ. 'ಕ್ರೆಟಾ' ಮಾರಾಟ ಸಂಖ್ಯೆಯಲ್ಲಿ ಕುಸಿತವಾಗಿದೆ. ಆದರೂ ಮೂರನೇ ಸ್ಥಾನದಲ್ಲಿದೆ. ಒಟ್ಟು 15,925 ಯುನಿಟ್‌ಗಳನ್ನು ಮಾರಾಟಗೊಳಿಸಲಾಗಿದೆ. 2024ರ ಇದೇ ಅವಧಿಯಲ್ಲಿ 16,762 ಯುನಿಟ್‌ಗಳನ್ನು ಮಾರಲಾಗಿತ್ತು. ಈ ಅಂಕಿಸಂಖ್ಯೆಯನ್ನು ಲೆಕ್ಕ ಹಾಕಿದಾಗ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ -5% ಇಳಿಕೆಯಾಗಿದೆ. ಮೊದಲ ಸ್ಥಾನದಲ್ಲಿ ಮಾರುತಿ ಸುಜುಕಿ ಎರ್ಟಿಗಾ (18,445 ಯುನಿಟ್) ಹಾಗೂ ಎರಡನೇ ಸ್ಥಾನದಲ್ಲಿ ಮಾರುತಿ ಸುಜುಕಿ ಡಿಜೈರ್ (16,509 ಯುನಿಟ್) ಇದೆ.

ನೂತನ 'ಹ್ಯುಂಡೈ ಕ್ರೆಟಾ' ಮಾರಾಟ ಸಂಖ್ಯೆ ಇಳಿಮುಖವಾಗಲು ಹಲವು ಕಾರಣಗಳಿವೆ. ಈ ಕಾರಿನ ಎಕ್ಸ್-ಶೋರೂಂ ಬೆಲೆ ಕೊಂಚ ಹೆಚ್ಚಿದೆ. ಖರೀದಿದಾರರು ರೂ.10 ಲಕ್ಷದೊಳಗಿನ ಕಾರುಗಳಿಗೆ ದೊಡ್ಡ ಮಟ್ಟದಲ್ಲಿ ಆದ್ಯತೆ ನೀಡುತ್ತಿದ್ದಾರೆ. ಜೊತೆಗೆ ಆಗಸ್ಟ್ ತಿಂಗಳಲ್ಲೇ ಕಾರುಗಳ ಮೇಲೆ ಜಿಎಸ್‌ಟಿ ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗುತ್ತದೆ ಎಂಬ ಸುಳಿವು ಲಭ್ಯವಾಗಿತ್ತು. ಹೀಗಾಗಿ, ಕ್ರೆಟಾ ಮಾರಾಟವು ಕಡಿಮೆಯಾಗಿದೆ ಎಂದು ವಿಶ್ಲೇಷಣೆ ಮಾಡಲಾಗುತ್ತಿದೆ.

Hyundai Creta Suv August 2025 Sales Details

ಸ್ಟ್ಯಾಂಡರ್ಡ್ ಹ್ಯುಂಡೈ ಕ್ರೆಟಾ ವಿಶೇಷತೆಗಳೇನು:

ಇದೊಂದು ಎಸ್‌ಯುವಿಯಾಗಿದೆ. ಪ್ರಸ್ತುತ ಕನಿಷ್ಠ ರೂ.11.11 ಲಕ್ಷ ಹಾಗೂ ಗರಿಷ್ಠ ರೂ.20.50 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಕೇಂದ್ರ ಸರ್ಕಾರ ಕಾರುಗಳ ಖರೀದಿ ಮೇಲೆ ವಿಧಿಸುತ್ತಿದ್ದ ಜಿಎಸ್‌ಟಿ ಪ್ರಮಾಣವನ್ನು ಕಡಿತಗೊಳಿಸಿದೆ. ಪರಿಷ್ಕೃತ ಹೊಸ ದರಗಳು ಸೆಪ್ಟೆಂಬರ್ 22 ರಿಂದ ಜಾರಿಗೆ ಬರಲಿದೆ. ಆ ಬಳಿಕ ಇದೇ 'ಕ್ರೆಟಾ' ಬೆಲೆ ಸಾಕಷ್ಟು ಇಳಿಕೆಯಾಗಲಿದೆ.

ಈ ಕಾರು ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಹೊಂದಿದೆ. ಅಟ್ಲಾಸ್ ವೈಟ್, ಅಬಿಸ್ ಬ್ಲಾಕ್, ಟೈಟಾನ್ ಗ್ರೇ ಮತ್ತು ರೇಂಜರ್ ಖಾಕಿ ಸೇರಿದಂತೆ ವಿವಿಧ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. 4330 ಎಂಎಂ ಉದ್ದ,1790 ಎಂಎಂ ಅಗಲ ಹಾಗೂ 1635 ಎಂಎಂ ಎತ್ತರವಿದೆ. ಜೊತೆಗೆ 190 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2610 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿದೆ.

Hyundai Creta Suv August 2025 Sales Details

ನೂತನ ಕ್ರೆಟಾ ಶಕ್ತಿಶಾಲಿಯಾದ ಮೂರು ಪವರ್‌ಟ್ರೇನ್‌ನ್ನು ಪಡೆದಿದೆ. 1.5-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್, 1.5-ಲೀಟರ್ ಟರ್ಬೊ ಪೆಟ್ರೋಲ್ ಹಾಗೂ 1.5-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಪಡೆದಿದೆ. ರೂಪಾಂತರಗಳಿಗೆ ಅನುಗುಣವಾಗಿ (ವೇರಿಯೆಂಟ್) 6-ಸ್ಪೀಡ್ ಮ್ಯಾನುವಲ್/ಆಟೋಮೆಟಿಕ್, ಸಿವಿಟಿ ಮತ್ತು 7-ಸ್ಪೀಡ್ ಡಿಸಿಟಿ ಗೇರ್‌ಬಾಕ್ಸ್‌ನ್ನು ತನ್ನದಾಗಿಸಿಕೊಂಡಿದೆ. 17 ರಿಂದ 21.8 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. 50 ಲೀಟರ್‌ನಷ್ಟು ಫ್ಯುಯೆಲ್ ಟ್ಯಾಂಕ್‌ನ್ನು ಹೊಂದಿದೆ.

ಇದು 5 ಆಸನಗಳನ್ನು ಒಳಗೊಂಡಿದೆ. ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು ಸಾಧ್ಯವಾಗುವಂತೆ 433 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇನ್‌ನ್ನು ಪಡೆದಿದೆ. 10.25 ಇಂಚಿನ ಡುಯಲ್ ಡಿಸ್‌ಪ್ಲೇ (ಇನ್ಫೋಟೈನ್‌ಮೆಂಟ್ ಸಿಸ್ಟಮ್‌ & ಇನ್ಸ್ಟ್ರುಮೆಂಟ್ ಕ್ಲಸ್ಟರ್) ಡುಯಲ್ ಝೋನ್ ಎಸಿ, ಸನ್‌ರೂಫ್ ಮತ್ತು ವೈರ್‌ಲೆಸ್ ಫೋನ್ ಚಾರ್ಜಿಂಗ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಪ್ರಯಾಣಿಕರ ರಕ್ಷಣೆಗಾಗಿ 6 ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಮತ್ತು ಹಿಲ್ ಸ್ಟಾರ್ಟ್ ಅಸಿಸ್ಟ್‌ಗಳನ್ನು ಪಡೆದಿದೆ.

ಹ್ಯುಂಡೈ ಕ್ರೆಟಾ ಎಲೆಕ್ಟ್ರಿಕ್ (Hyundai Creta Electric) ಕೂಡ ಖರೀದಿಗೆ ಲಭ್ಯ:

ಈ ಎಲೆಕ್ಟ್ರಿಕ್ ಎಸ್‌ಯುವಿಯು ರೂ.17.99 ಲಕ್ಷದಿಂದ ರೂ.24.55 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ನೋಡಲು ತುಂಬಾ ಚೆನ್ನಾಗಿದೆ. ಟೈಟಾನ್ ಗ್ರೇ ಮ್ಯಾಟ್, ಸ್ಟಾರಿ ನೈಟ್, ಫಿಯರಿ ರೆಡ್, ಅಟ್ಲಾಸ್ ವೈಟ್ & ಓಷನ್ ಬ್ಲೂ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. 5 ಆಸನಗಳನ್ನು ತನ್ನದಾಗಿಸಿಕೊಂಡಿದೆ.

ನೂತನ ಕ್ರೆಟಾ ಎಲೆಕ್ಟ್ರಿಕ್ 42 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಮತ್ತು 51.4 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಪಡೆದಿದೆ. ಭರ್ತಿ ಚಾರ್ಜ್‌ನಲ್ಲಿ 390 ರಿಂದ 473 ಕಿಲೋಮೀಟರ್ ರೇಂಜ್ (ಮೈಲೇಜ್) ನೀಡುತ್ತದೆ. ಇನ್ಫೋಟೈನ್‌ಮೆಂಟ್ ಸಿಸ್ಟಮ್ & ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್‌ಗಾಗಿ 10.25-ಇಂಚಿನ ಡುಯಲ್ ಸ್ಕ್ರೀನ್, ಪನೋರಮಿಕ್ ಸನ್‌ರೂಫ್, 6 ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಹಾಗೂ ರಿವರ್ಸ್ ಪಾರ್ಕಿಂಗ್ ಕ್ಯಾಮೆರಾ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ.

More from DriveSpark

Article Published On: Thursday, September 11, 2025, 8:30 [IST]
English summary
Hyundai creta suv august 2025 sales details
Read more on hyundai india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+