11 ಲಕ್ಷ.. ಈ ಚಿರತೆಯಂತ Hyundai SUV ಬಿಡುಗಡೆಯಾಗಿ 10 ವರ್ಷಗಳಾಯ್ತು.. 12 ಲಕ್ಷ ಜನರಿಂದ ಖರೀದಿ!
ಹ್ಯುಂಡೈ ಕ್ರೆಟಾ (Hyundai Creta) ಜನಪ್ರಿಯ ಎಸ್‌ಯುವಿಯಾಗಿದೆ. ಇದು ವಿಶ್ವಾಸಾರ್ಹತೆ ಹಾಗೂ ಉತ್ತಮ ಕಾರ್ಯಕ್ಷಮತೆಯಿಂದಲೂ ಮನೆ ಮಾತಾಗಿದೆ. ಅತ್ಯಂತ ಕೈಗೆಟುಕುವ ಬೆಲೆಯಲ್ಲಿಯೂ ಸಿಗಲಿದ್ದು, ಉತ್ತಮ ಸಂಖ್ಯೆಯಲ್ಲಿಯೂ ಮಾರಾಟವಾಗುತ್ತಿದೆ. ಗ್ರಾಹಕರು ಕೂಡ ಮುಗಿಬಿದ್ದು ಖರೀದಿ ಮಾಡುತ್ತಿದ್ದಾರೆ. ಸದ್ಯ ದೇಶೀಯ ಮಾರುಕಟ್ಟೆಯಲ್ಲಿ ಇದೇ 'ಕ್ರೆಟಾ' ಕಾರನ್ನು ಪರಿಚಯಿಸಿ 10 ವರ್ಷಗಳಿವೆ. ಬನ್ನಿ, ಆ ಬಗ್ಗೆ ಹೆಚ್ಚಿನ ವಿವರಗಳನ್ನು ತಿಳಿಯೋಣ.
ಭಾರತದಲ್ಲಿ ಮೊದಲ ಬಾರಿಗೆ 'ಹ್ಯುಂಡೈ ಕ್ರೆಟಾ' ಎಸ್‌ಯುವಿಯನ್ನು 2015ರ ಜುಲೈ 21ರಂದು ಮಾರಾಟಕ್ಕೆ ತರಲಾಯಿತು. ಇಂದಿಗೆ ಈ ಕಾರು ಬಿಡುಗಡೆಯಾಗಿ 10 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದೆ. ಸರಿ ಸುಮಾರು 12 ಲಕ್ಷ ಗ್ರಾಹಕರು ಸಹ 'ಕ್ರೆಟಾ' ಎಸ್‌ಯುವಿಯನ್ನು ಖರೀದಿ ಮಾಡಿದ್ದಾರೆ.

2020ರ ಒಂದಷ್ಟು ನವೀಕರಣಕ್ಕೆ ಒಳಪಟ್ಟ ಎರಡನೇ ತಲೆಮಾರಿನ ಹ್ಯುಂಡೈ ಕ್ರೆಟಾವನ್ನು ಪರಿಚಯಿಸಲಾಯಿತು. ಕಳೆದ ವರ್ಷ (2024) ಮೂರನೇ ತಲೆಮಾರಿನ ಕಾರನ್ನು ಮಾರಾಟಕ್ಕೆ ತರಲಾಯಿತು. ಈಗಲೂ ಇದೇ 'ಕ್ರೆಟಾ' ಪ್ರತಿ ತಿಂಗಳು ದೇಶೀಯವಾಗಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟಗೊಳ್ಳುವ ಪ್ರಮುಖ 10 ಕಾರುಗಳ ಪಟ್ಟಿಯಲ್ಲಿರುತ್ತದೆ. ಅದಕ್ಕೆ ಸಾಕ್ಷಿ ಎಂಬಂತೆ ಕಳೆದ ತಿಂಗಳು (ಜೂನ್) ಮೊದಲ ಸ್ಥಾನದಲ್ಲಿದೆ. ಒಟ್ಟು 15,786 ಯುನಿಟ್‌ಗಳನ್ನು ಮಾರಲಾಗಿದೆ.
ಹ್ಯುಂಡೈ ಕ್ರೆಟಾ ವಿಶೇಷತೆಗಳೇನು:
ಈ ಎಸ್‌ಯುವಿ ರೂ.11.11 ಲಕ್ಷದಿಂದ ರೂ.20.50 ಲಕ್ಷ (ಎಕ್ಸ್-ಶೋರೂಂ) ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ. ಹೊರಭಾಗದಲ್ಲೂ ಅತ್ಯಾಕರ್ಷಕವಾದ ವಿನ್ಯಾಸವನ್ನು ಹೊಂದಿದೆ. ಅಟ್ಲಾಸ್ ವೈಟ್, ಅಬಿಸ್ ಬ್ಲಾಕ್, ಟೈಟಾನ್ ಗ್ರೇ ಮತ್ತು ರೇಂಜರ್ ಖಾಕಿ ಸೇರಿದಂತೆ ವಿವಿಧ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. 4,330 ಎಂಎಂ ಉದ್ದ, 1,790 ಅಗಲ ಹಾಗೂ 1,635 ಎತ್ತರವು ಇದೆ.

ನೂತನ ಕ್ರೆಟಾ ಕಾರಿನಲ್ಲಿ 5 ಆಸನಗಳಿದ್ದು, ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು. 1.5-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್, 1.5-ಲೀಟರ್ ಟರ್ಬೊ ಪೆಟ್ರೋಲ್ ಹಾಗೂ 1.5-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಒಳಗೊಂಡಿದೆ. 17 ರಿಂದ 21.8 ಕಿ.ಮೀವರೆಗೂ ಮೈಲೇಜ್ ಕೊಡುತ್ತದೆ.
ಇದರ ಕ್ಯಾಬಿನ್ ವಿನ್ಯಾಸವು ತುಂಬಾ ಚೆನ್ನಾಗಿದೆ. ಇನ್ಫೋಟೈನ್‌ಮೆಂಟ್ ಸಿಸ್ಟಮ್ & ಇನ್ಸ್ಟ್ರುಮೆಂಟ್ ಕ್ಲಸ್ಟರ್‌ಗಾಗಿ 10.25-ಇಂಚಿರುವ ಡುಯಲ್ ಡಿಸ್‌ಪ್ಲೇ, ಡುಯಲ್ ಝೋನ್ ಎಸಿ, 8-ಸ್ಪೀಕರ್ ಬೋಸ್ ಸೌಂಡ್ ಸಿಸ್ಟಮ್ ಮತ್ತು ಸನ್‌ರೂಫ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಯ ದೃಷ್ಟಿಯಿಂದ 6 ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಹಾಗೂ ಹಿಲ್ ಸ್ಟಾರ್ಟ್ ಅಸಿಸ್ಟ್‌ಗಳನ್ನು ಪಡೆದಿದೆ.
ಹ್ಯುಂಡೈ ಕ್ರೆಟಾ ಎಲೆಕ್ಟ್ರಿಕ್ ಕೂಡ ಖರೀದಿಗೆ ಲಭ್ಯ:
ಈ ಎಲೆಕ್ಟ್ರಿಕ್ ಚಾಲಿತ ಎಸ್‌ಯುವಿಯು ರೂ.17.99 ಲಕ್ಷದಿಂದ ರೂ.24.38 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 42 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಹಾಗೂ 51.4 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಪಡೆದಿದೆ. ಪೂರ್ತಿ ಚಾರ್ಜ್‌ನಲ್ಲಿ 390 ಕಿಲೋಮೀಟರ್ ರೇಂಜ್ (ಮೈಲೇಜ್) ರೇಂಜ್ ನೀಡುತ್ತದೆ.
ನೂತನ ಕ್ರೆಟಾ ಎಲೆಕ್ಟ್ರಿಕ್ ಅಚ್ಚುಕಟ್ಟಾದ ವಿನ್ಯಾಸವನ್ನು ಹೊಂದಿದ್ದು, 5 ಆಸನಗಳನ್ನು ಒಳಗೊಂಡಿದೆ. ಅಟ್ಲಾಸ್ ವೈಟ್, ಸ್ಟಾರಿ ನೈಟ್, ಓಷನ್ ಬ್ಲೂ ಮ್ಯಾಟ್, ಟೈಟಾನ್ ಗ್ರೇ ಮ್ಯಾಟ್ & ಅಬಿಸ್ ಬ್ಲ್ಯಾಕ್ ಪರ್ಲ್ ಸೇರಿದಂತೆ ಹಲವು ಬಣ್ಣಗಳನ್ನು ಪಡೆದಿದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್‌ಗಾಗಿ 10.25-ಇಂಚಿರುವ ಡುಯಲ್ ಸ್ಕ್ರೀನ್, ಪನೋರಮಿಕ್ ಸನ್‌ರೂಫ್, 6 ಏರ್‌ಬ್ಯಾಗ್‌ಗಳು& ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಒಳಗೊಂಡಂತೆ ಹತ್ತಾರು ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ.


Click it and Unblock the Notifications








