Creta: 21 Km ಮೈಲೇಜ್, 5-ಸೀಟರ್.. ಹ್ಯುಂಡೈ ಕ್ರೆಟಾ ಅಂದ್ರೆ ಗ್ರಾಹಕರಿಗೆ ಪಂಚಪ್ರಾಣ.. ಮಾರಾಟದಲ್ಲೂ ಧೂಳ್!

ಹ್ಯುಂಡೈ ಕ್ರೆಟಾ (Hyundai Creta) ವಿಶ್ವಾಸಾರ್ಹ ಎಸ್‌ಯುವಿಯಾಗಿದೆ. ಇದು ಹೆಚ್ಚು ಅತ್ಯಾಧುನಿಕವಾದ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಹೊಂದಿದ್ದು, ಉತ್ತಮ ಸಂಖ್ಯೆಯಲ್ಲಿ ಕೂಡ ಮಾರಾಟವಾಗುತ್ತಿದೆ. ಅದಕ್ಕೆ ತಕ್ಕಂತೆ ಈ ಕಾರು ಗ್ರಾಹಕರಿಗೂ ಪಂಚಪ್ರಾಣವಾಗಿದ್ದು, ನಾಮುಂದು - ತಾಮುಂದು ಎಂಬಂತೆ ಖರೀದಿ ಮಾಡುತ್ತಿದ್ದಾರೆ. ಇತ್ತೀಚೆಗೆ, ಪ್ರಮುಖ ವಾಹನ ತಯಾರಕ ಕಂಪನಿಗಳು ಫೆಬ್ರವರಿ ತಿಂಗಳ ಮಾರಾಟದ ಅಂಕಿಅಂಶಗಳ ವರದಿಯನ್ನು ಪ್ರಕಟಿಸಿದ್ದು, ಎಸ್‌ಯುವಿ ವಿಭಾಗದಲ್ಲಿ ಹ್ಯುಂಡೈ ಕ್ರೆಟಾ ಭಾರೀ ವೇಗದಲ್ಲಿ ಮುನ್ನುಗ್ಗುತ್ತಿದ್ದು, ಎರಡನೇ ಸ್ಥಾನದಲ್ಲಿದೆ. ಮಾರುತಿ ಸುಜುಕಿ ಫ್ರಾಂಕ್ಸ್ (21,461 ಯುನಿಟ್) ಮೊದಲ ಸ್ಥಾನದಲ್ಲಿದೆ.

ಕಳೆದ ತಿಂಗಳು (ಫೆಬ್ರವರಿ - 2025) ಹ್ಯುಂಡೈ ಮೋಟಾರ್ ಇಂಡಿಯಾ, ಬರೋಬ್ಬರಿ 16,317 ಕ್ರೆಟಾ ಎಸ್‌ಯುವಿಗಳನ್ನು ಮಾರಾಟ ಮಾಡಿದೆ. 2024ರ ಇದೇ ಅವಧಿಯಲ್ಲಿ ಮಾರಾಟಗೊಳಿಸಿದ 15,276 ಯುನಿಟ್‌ಗಳಿಗೆ ಹೋಲಿಸಿದರೆ, ವರ್ಷದಿಂದ ವರ್ಷಕ್ಕೆ (YoY) ಶೇಕಡ 7% ಪ್ರಗತಿ ಸಾಧಿಸಲಾಗಿದೆ. ಈ ಜನವರಿಯಲ್ಲಿಯೂ 18,522 ಕ್ರೆಟಾ ಎಸ್‌ಯುವಿಗಳನ್ನು ಮಾರಲಾಗಿತ್ತು.

Hyundai Creta Suv February 2025 Sales Details

2024ರ ದ್ವಿತೀಯಾರ್ಧದಲ್ಲೂ ಹ್ಯುಂಡೈ ಕ್ರೆಟಾ ಎಸ್‌ಯುವಿಗಳು ದಾಖಲೆ ಸಂಖ್ಯೆಯಲ್ಲಿ ಮಾರಾಟವಾಗಿದ್ದವು. ಡಿಸೆಂಬರ್‌ನಲ್ಲಿ 12,608 ಯುನಿಟ್, ನವೆಂಬರ್‌ನಲ್ಲಿ 15,452 ಯುನಿಟ್, ಅಕ್ಟೋಬರ್‌ನಲ್ಲಿ 17,497 ಹಾಗೂ ಸೆಪ್ಟೆಂಬರ್‌ನಲ್ಲಿ 15,902 ಯುನಿಟ್‌ಗಳನ್ನು ಯಶಸ್ವಿಯಾಗಿ ಮಾರಾಟ ಮಾಡಲಾಗಿತ್ತು. ಈಚೆಗೆ ಇದೇ ಕ್ರೆಟಾ ಎಸ್‌ಯುವಿಯ ವಿವಿಧ ರೂಪಾಂತರಗಳ (ವೇರಿಯೆಂಟ್) ದರವನ್ನು ರೂ.13,000 ವರೆಗೆ ಏರಿಕೆ ಮಾಡಲಾಗಿದೆ.

ನೂತನ ಹ್ಯುಂಡೈ ಕ್ರೆಟಾ ಎಸ್‌ಯುವಿ ವಿಶೇಷತೆಗಳೇನು: ಈ ಕಾರು ರೂ.11 ಲಕ್ಷದಿಂದ ರೂ.20.42 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಇ, ಇಎಕ್ಸ್, ಎಸ್, ಎಸ್(ಒ) ಹಾಗೂ ಎಸ್ಎಕ್ಸ್ ಸೇರಿದಂತೆ 7 ಆಕರ್ಷಕ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ದೊರೆಯುತ್ತದೆ. ಅಟ್ಲಾಸ್ ವೈಟ್, ಅಬಿಸ್ ಬ್ಲಾಕ್ ಮತ್ತು ಟೈಟಾನ್ ಗ್ರೇ ಒಳಗೊಂಡಂತೆ ಹಲವು ಬಣ್ಣಗಳನ್ನು ತನ್ನದಾಗಿಸಿಕೊಂಡಿದೆ.

Hyundai Creta Suv February 2025 Sales Details

ಈ ಕಾರು 1.5-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್, 1.5-ಲೀ. ಟರ್ಬೊ ಪೆಟ್ರೋಲ್ ಹಾಗೂ 1.5-ಲೀ. ಡೀಸೆಲ್ ಎಂಜಿನ್‌ನ್ನು ಪಡೆದಿದೆ. 17.4 ರಿಂದ 21.8 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಇದರಲ್ಲಿ 5 ಆಸನ ಆಯ್ಕೆ ವ್ಯವಸ್ಥೆ ಇದ್ದು, ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು 433 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಹೊಂದಿದೆ.

ಹೊಸ ಕ್ರೆಟಾ ಎಸ್‌ಯುವಿ ಇನ್ಫೋಟೈನ್‌ಮೆಂಟ್ ಸಿಸ್ಟಮ್‌ & ಇನ್ಸ್ಟ್ರುಮೆಂಟ್ ಕ್ಲಸ್ಟರ್‌ಗಾಗಿ ಡುಯಲ್ ಡಿಸ್‌ಪ್ಲೇ, ಡುಯಲ್-ಝೋನ್ ಎಸಿ, 8-ಸ್ಪೀಕರ್ ಬೋಸ್ ಸೌಂಡ್ ಸಿಸ್ಟಮ್ ಹಾಗೂ ಸನ್‌ರೂಫ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಯ ದೃಷ್ಟಿಯಿಂದ 6 ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಹಾಗೂ ಹಿಲ್ ಸ್ಟಾರ್ಟ್ ಅಸಿಸ್ಟ್‌ಗಳನ್ನು ಒಳಗೊಂಡಿದೆ.

Hyundai Creta Suv February 2025 Sales Details

ಹ್ಯುಂಡೈ ಕ್ರೆಟಾ ಇವಿಯು ಖರೀದಿಗೆ ಲಭ್ಯ: ಈ ಎಲೆಕ್ಟ್ರಿಕ್ ಕಾರು ರೂ.17.99 ಲಕ್ಷದಿಂದ ರೂ.24.38 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 42 ಕೆಡಬ್ಲ್ಯೂಹೆಚ್ & 51.4 ಕೆಡಬ್ಲ್ಯೂಹೆಚ್ ಬ್ಯಾಟರಿ ಪ್ಯಾಕ್ ಹೊಂದಿದ್ದು, ಭರ್ತಿ ಚಾರ್ಜ್‌ನಲ್ಲಿ 390 ರಿಂದ 473 ಕಿ.ಮೀ ಕ್ರಮಿಸುತ್ತದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ & ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್‌ಗಾಗಿ ಡುಯಲ್ ಡಿಸ್‌ಪ್ಲೇಯಂತಹ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Wednesday, March 12, 2025, 11:13 [IST]
English summary
Hyundai creta suv february 2025 sales details
Read more on hyundai india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+