Hyundai: 21 ಕಿ.ಮೀ ಮೈಲೇಜ್, 5-ಸೀಟರ್.. ಜನಪ್ರಿಯ ಹ್ಯುಂಡೈ ಕ್ರೆಟಾ ಕಾರಿನ ಬೆಲೆ ಏರಿಕೆ.. ಎಷ್ಟಾಗಿದೆ?
ಹ್ಯುಂಡೈ ಮೋಟಾರ್ ಇಂಡಿಯಾ (Hyundai Motor India), ದೇಶೀಯ ಮಾರುಕಟ್ಟೆಯಲ್ಲಿ 'ಕ್ರೆಟಾ' ಎಸ್‌ಯುವಿಯನ್ನು ಯಶಸ್ವಿಯಾಗಿ ಮಾರಾಟಗೊಳಿಸುತ್ತಿದೆ. ಇದು ಹೆಚ್ಚು ಅತ್ಯಾಧುನಿಕವಾದ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಹೊಂದಿದ್ದು, ಕೈಗಟುಕುವ ಬೆಲೆಯಲ್ಲಿಯೂ ಖರೀದಿಗೆ ಲಭ್ಯವಿದೆ. ಇದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿ ಮಾಡುತ್ತಿದ್ದಾರೆ. ಸದ್ಯ ಈ ಕಾರಿನ ಆ ಬೆಲೆ ಏರಿಕೆಯಾಗಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.
ನೂತನ ಹ್ಯುಂಡೈ ಕ್ರೆಟಾ (Hyundai Creta) ಎಸ್‌ಯುವಿಯ ಆಯ್ದ ರೂಪಾಂತರಗಳ (ವೇರಿಯೆಂಟ್) ದರವನ್ನು ರೂ.13,000 ವರೆಗೆ ಹೆಚ್ಚಿಸಲಾಗಿದೆ. ಇದರ ಹೊರತಾಗಿ ಇ 1.5 ಪೆಟ್ರೋಲ್ ಎಂಟಿ, ಎಸ್ 1.5 ಡೀಸೆಲ್ ಎಂಟಿ, ಎಸ್ಎಕ್ಸ್ (ಒ) 1.5 ಡೀಸೆಲ್ ಎಟಿ ಹಾಗೂ ಎಸ್ಎಕ್ಸ್ (ಒ) 1.5 ಡೀಸೆಲ್ ಎಟಿ ಡುಯಲ್-ಟೋನ್ ಒಳಗೊಂಡಂತೆ ಕೆಲವು ರೂಪಾಂತರಗಳ ಬೆಲೆಗಳು ಬದಲಾಗದೆ ಹಿಂದಿನಂತೆಯೇ ಇದೆ.

ಹೊಚ್ಚ ಹೊಸ ಹ್ಯುಂಡೈ ಕ್ರೆಟಾ ಕಾರು, ಕನಿಷ್ಠ ರೂ.11 ಲಕ್ಷ ಮತ್ತು ಗರಿಷ್ಠ ರೂ.20.42 ಲಕ್ಷ (ಎಕ್ಸ್-ಶೋರೂಂ) ದರವನ್ನು ಒಳಗೊಂಡಿದೆ. ಅಟ್ಲಾಸ್ ವೈಟ್, ಅಬಿಸ್ ಬ್ಲಾಕ್, ಟೈಟಾನ್ ಗ್ರೇ ಮತ್ತು ರೇಂಜರ್ ಖಾಕಿ ಸೇರಿದಂತೆ ವಿವಿಧ ಆಕರ್ಷಕ ಬಣ್ಣಗಳ ಆಯ್ಕೆಯಲ್ಲಿಯೂ ಖರೀದಿಗೆ ದೊರೆಯುತ್ತದೆ.
ಈ ಕಾರು, ಶಕ್ತಿಯುತವಾದ ಮೂರು ಪವರ್‌ಟ್ರೇನ್‌ನ್ನು ಹೊಂದಿದೆ. 1.5-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್, 1.5-ಲೀಟರ್ ಟರ್ಬೊ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಹೊಂದಿದೆ. 6-ಸ್ಪೀಡ್ ಎಂಟಿ (ಮ್ಯಾನುವಲ್ ಟ್ರಾಸ್ಮಿಷನ್)/ ಎಟಿ (ಆಟೋಮೆಟಿಕ್ ಟ್ರಾಸ್ಮಿಷನ್) & 7-ಸ್ಪೀಡ್ ಡಿಸಿಟಿ (ಡುಯಲ್-ಕ್ಲಚ್ ಟ್ರಾಸ್ಮಿಷನ್) ಗೇರ್‌ಬಾಕ್ಸ್‌ನ್ನು ಪಡೆದಿದೆ. ರೂಪಾಂತರಗಳಿಗೆ ಅನುಗುಣವಾಗಿ 17.4 ಕೆಎಂಪಿಎಲ್ ರಿಂದ 21.8 ಕೆಎಂಪಿಎಲ್‌ವರೆಗೂ ಮೈಲೇಜ್ ಕೊಡುತ್ತದೆ.

ನೂತನ ಹ್ಯುಂಡೈ ಕ್ರೆಟಾ ಎಸ್‌ಯುವಿ, 5 ಆಸನ ಆಯ್ಕೆ ವ್ಯವಸ್ಥೆಯನ್ನು ಒಳಗೊಂಡಿದ್ದು, ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು ಸಾಧ್ಯವಾಗುವಂತೆ 433 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ. ಇನ್ಫೋಟೈನ್‌ಮೆಂಟ್ ಸಿಸ್ಟಮ್ & ಇನ್ಸ್ಟ್ರುಮೆಂಟ್ ಕ್ಲಸ್ಟರ್‌ಗಾಗಿ 10.25-ಇಂಚಿನ ಡುಯಲ್ ಡಿಸ್‌ಪ್ಲೇ, ಡುಯಲ್ ಝೋನ್ ಎಸಿ, 8-ಸ್ಪೀಕರ್ ಬೋಸ್ ಸೌಂಡ್ ಸಿಸ್ಟಮ್ ಮತ್ತು ಸನ್‌ರೂಫ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.
ಹೊಸ ಕ್ರೆಟಾ ಕಾರು ಸುರಕ್ಷತೆಗೂ ಹೆಸರುವಾಸಿಯಾಗಿದೆ. ಪ್ರಯಾಣಿಕರ ರಕ್ಷಣೆಗಾಗಿ 6 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ವಿಎಸ್‌ಸಿ (ವೆಹಿಕಲ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಮತ್ತು ಹಿಲ್ ಸ್ಟಾರ್ಟ್ ಅಸಿಸ್ಟ್‌ಗಳನ್ನು ಒಳಗೊಂಡಿದೆ.

ಹ್ಯುಂಡೈ ಕ್ರೆಟಾ ಎಲೆಕ್ಟ್ರಿಕ್ (Hyundai Creta Electric) ಕೂಡ ಖರೀದಿಗೆ ಲಭ್ಯ: ಇದು ರೂ.17.99 ಲಕ್ಷದಿಂದ ರೂ.24.38 ಲಕ್ಷ ಎಕ್ಸ್-ಶೋರೂಂ ಬೆಲೆಯನ್ನು ಹೊಂದಿದೆ. 42 ಕೆಡಬ್ಲ್ಯೂಹೆಚ್ & 51.4 ಕೆಡಬ್ಲ್ಯೂಹೆಚ್ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಪಡೆದಿದೆ. ಭರ್ತಿ ಚಾರ್ಜ್‌ನಲ್ಲಿ 390 ರಿಂದ 473 ಕಿ.ಮೀ ಓಡುತ್ತದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ & ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್‌ಗಾಗಿ 10.25-ಇಂಚಿನ ಡುಯಲ್ ಸ್ಕ್ರೀನ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








