ಸಾಮಾನ್ಯರಿಂದ ಹಿಡಿದು ಸೆಲೆಬ್ರಿಟಿಗಳು ಮುಗಿಬೀಳುವರು: 11 ಲಕ್ಷ.. ಈ Hyundai SUV ಭಾರೀ ಸಂಖ್ಯೆಯಲ್ಲಿ ಮಾರಾಟ!
ಹ್ಯುಂಡೈ ಕ್ರೆಟಾ (Hyundai Creta) ಪ್ರಮುಖ ಎಸ್‌ಯುವಿಯಾಗಿದೆ. ಇದು ಹೆಚ್ಚು ಅತ್ಯಾಧುನಿಕವಾಗಿದ್ದು, ಸ್ಪರ್ಧಾತ್ಮಕ ಬೆಲೆಯಲ್ಲಿಯೂ ಖರೀದಿ ಲಭ್ಯವಿದೆ. ಇದರಿಂದಾಗಿ ಗ್ರಾಹಕರು ಕೂಡ ತಾಮುಂದು - ನಾಮುಂದು ಎಂಬಂತೆ ಖರೀದಿ ಮಾಡುತ್ತಿದ್ದಾರೆ. ಈ 'ಮೇ'ನಲ್ಲಿ ಕಂಪನಿಯು ಒಟ್ಟು 43,861 ಕಾರುಗಳನ್ನು ಮಾರಾಟ ಮಾಡಿದೆ. ಅದರಲ್ಲೂ ಇದೇ 'ಕ್ರೆಟಾ' ಗೇಮ್ ಚೇಂಜರ್ ಎಸ್‌ಯುವಿಯಾಗಿ ಹೊರಹೊಮ್ಮಿದ್ದು, ಅತಿ ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟಗೊಂಡಿದೆ. ಬನ್ನಿ, ಆ ಬಗ್ಗೆ ಹೆಚ್ಚಿನ ವಿವರಗಳನ್ನು ತಿಳಿಯೋಣ.
ಕಳೆದ ತಿಂಗಳು (ಮೇ-2025) ಹ್ಯುಂಡೈ ಮೋಟಾರ್ ಇಂಡಿಯಾ, ಬರೋಬ್ಬರಿ 14,860 ಯುನಿಟ್ 'ಕ್ರೆಟಾ' ಎಸ್‌ಯುವಿಗಳನ್ನು ಮಾರಾಟಗೊಳಿಸಿದೆ. 2024ರ ಇದೇ ಅವಧಿಯಲ್ಲಿ 14,662 ಯುನಿಟ್‌ಗಳನ್ನು ಮಾರಾಟ ಮಾಡಲಾಗಿತ್ತು. ಈ ಅಂಕಿಸಂಖ್ಯೆಗೆ ಹೋಲಿಕೆ ಮಾಡಿದರೆ, ಮಾರಾಟ ಪ್ರಮಾಣ ವರ್ಷದಿಂದ ವರ್ಷಕ್ಕೆ ಸ್ಥಿರವಾದ ಅಂದರೇ ಶೇಕಡ 1% ಬೆಳವಣಿಗೆಯಾಗಿದೆ.

ಇದೇ ವರ್ಷದ ಮೊದಲ 4 ತಿಂಗಳಲ್ಲೂ 'ಹ್ಯುಂಡೈ ಕ್ರೆಟಾ' ಎಸ್‌ಯುವಿಯು ಭಾರೀ ಸಂಖ್ಯೆಯಲ್ಲಿಯೇ ಮಾರಾಟಗೊಂಡಿದೆ. ಏಪ್ರಿಲ್‌ನಲ್ಲಿ 17,016 ಯುನಿಟ್, ಮಾರ್ಚ್‌ನಲ್ಲಿ 18,059 ಯುನಿಟ್, ಫೆಬ್ರವರಿಯಲ್ಲಿ 16,317 ಯುನಿಟ್ ಹಾಗೂ ಜನವರಿಯಲ್ಲಿ 18,522 ಯುನಿಟ್‌ಗಳನ್ನು ಕಂಪನಿಯು ಯಶಸ್ವಿಯಾಗಿ ಮಾರಾಟ ಮಾಡಿದೆ.
ಈ ಅಂಕಿ ಸಂಖ್ಯೆಯನ್ನು ಲೆಕ್ಕ ಹಾಕಿದಾಗ ಪ್ರತಿ ತಿಂಗಳು ಸರಾಸರಿ 15,000 ಯುನಿಟ್ 'ಹ್ಯುಂಡೈ ಕ್ರೆಟಾ' ಕಾರುಗಳು ಮಾರಾಟಗೊಳಿಸಲಾಗಿದೆ. ಹಲವು ತಿಂಗಳಿಂದ 'ಕ್ರೆಟಾ' ಮಾರಾಟ ಪ್ರಮಾಣ ಉತ್ತಮವಾಗಿರಲು ನಾನಾ ಕಾರಣಗಳಿವೆ. ಇದು ಜನ ಮೆಚ್ಚುವ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿರುವುದರಿಂದ ದಾಖಲೆ ಸಂಖ್ಯೆಯಲ್ಲಿ ಮಾರಾಟವಾಗುತ್ತಿದೆ ಎಂದು ಹೇಳಲಾಗಿದೆ.

ಹ್ಯುಂಡೈ ಕ್ರೆಟಾ ವಿಶೇಷತೆಗಳೇನು..
ಇದೊಂದು ಜನಪ್ರಿಯ ಎಸ್‌ಯುವಿಯಾಗಿದೆ. ರೂ.11 ಲಕ್ಷದಿಂದ ರೂ.20 ಲಕ್ಷವರೆಗೆ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ಇದರಲ್ಲಿ 5 ಆಸನಗಳಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚಾರ ನಡೆಸಬಹುದು. ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 433 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ.
ಈ ಕಾರು ಬಲಿಷ್ಠವಾದ ಪವರ್‌ಟ್ರೇನ್ ಆಯ್ಕೆಯನ್ನು ಹೊಂದಿದೆ. 1.5-ಲೀಟರ್ ಟರ್ಬೊ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್‌ನ್ನು ಪಡೆದಿದೆ. 6-ಸ್ಪೀಡ್ ಮ್ಯಾನುವಲ್, ಆಟೋಮೆಟಿಕ್, ಸಿವಿಟಿ ಹಾಗೂ 7-ಸ್ಪೀಡ್ ಡಿಸಿಟಿ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. ಯಾವ ಬೈಕ್‌ಗೂ ಕಡಿಮೆ ಇಲ್ಲದ ರೀತಿಯಲ್ಲಿ 17 ರಿಂದ 22 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.

ಇದು ಹೊರಭಾಗದಲ್ಲಿ ಉತ್ತಮವಾದ ವಿನ್ಯಾಸವನ್ನು ಹೊಂದಿದೆ. ಅಟ್ಲಾಸ್ ವೈಟ್, ಅಬಿಸ್ ಬ್ಲಾಕ್ ಹಾಗೂ ಟೈಟಾನ್ ಗ್ರೇ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. ಇನ್ಫೋಟೈನ್‌ಮೆಂಟ್ ಸಿಸ್ಟಮ್ & ಇನ್ಸ್ಟ್ರುಮೆಂಟ್ ಕ್ಲಸ್ಟರ್‌ಗಾಗಿ ಡುಯಲ್ ಡಿಸ್‌ಪ್ಲೇ, 8-ಸ್ಪೀಕರ್ ಬೋಸ್ ಸೌಂಡ್ ಸಿಸ್ಟಮ್ ಮತ್ತು ಸನ್‌ರೂಫ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್‌ಗಳನ್ನು ಪಡೆದಿದೆ.
ಹ್ಯುಂಡೈ ಕ್ರೆಟಾ ಎಲೆಕ್ಟ್ರಿಕ್ (Hyundai Creta Electric) ಕೂಡ ಖರೀದಿಗೆ ಲಭ್ಯ..
ಈ ಎಲೆಕ್ಟ್ರಿಕ್ ಕಾರು ಕನಿಷ್ಠ ರೂ.18 ಲಕ್ಷ ಮತ್ತು ಗರಿಷ್ಠ ರೂ.24 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಹೆಚ್ಚು ಶಕ್ತಿಯುತವಾದ 42 & 51 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಪಡೆದಿದೆ. ಸಂಪೂರ್ಣ ಚಾರ್ಜ್‌ನಲ್ಲಿ 390 ರಿಂದ 473 ಕಿಲೋಮೀಟರ್ ಓಡುತ್ತದೆ. ಜೊತೆಗೆ ಹತ್ತಾರು ಆಕರ್ಷಕ ವೈಶಿಷ್ಟ್ಯಗಳನ್ನು ಒಳಗೊಂಡಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








