ಬೈಕ್ ಕನಸನ್ನು ಬಿಡಿ.. 'ಹ್ಯುಂಡೈ ಎಕ್ಸ್‌ಟರ್' ಕಾರಿನ ಹೊಸ ವೇರಿಯೆಂಟ್‌ಗಳು ಬಿಡುಗಡೆ, ಬೆಲೆ ಎಷ್ಟು?

ಹ್ಯುಂಡೈ ಎಕ್ಸ್‌ಟರ್ (Hyundai Exter) ಜನಪ್ರಿಯ ಮೈಕ್ರೋ ಎಸ್‌ಯುವಿಯಾಗಿ ಹೊರಹೊಮ್ಮಿದೆ. ಈ ಕಾರನ್ನು ಟಾಟಾ ಪಂಚ್‌ಗೆ ಪ್ರತಿಸ್ಪರ್ಧಿಯಾಗಿ ಮಾರಾಟಗೊಳಿಸಲಾಗುತ್ತದೆ. ಅದಕ್ಕೆ ತಕ್ಕಂತೆ ಅತ್ಯಂತ ಕೈಗೆಟುವ ಬೆಲೆಯಲ್ಲಿಯೂ ಸಿಗುತ್ತದೆ. ಇದು ಹೆಚ್ಚು ಅತ್ಯಾಧುನಿಕವಾದ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿದ್ದು, ಗ್ರಾಹಕರು ಕೂಡ ಇಷ್ಟಪಟ್ಟು ಕೊಂಡುಕೊಳ್ಳುತ್ತಿದ್ದಾರೆ. ಸದ್ಯ, ಇದೇ ಎಸ್‌ಯುವಿಯತ್ತ ಇನ್ನಷ್ಟು ಖರೀದಿದಾರರನ್ನು ಸೆಳೆಯಲು ಕಂಪನಿಯು ಮುಂದಾಗಿದೆ. ಈ ನಿಟ್ಟಿನಲ್ಲಿ ಹೊಚ್ಚ ಹೊಸ ರೂಪಾಂತರಗಳನ್ನು (ವೇರಿಯೆಂಟ್) ಬಿಡುಗಡೆಗೊಳಿಸಿದೆ. ಬನ್ನಿ, ಆ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಿಳಿಯೋಣ.

ಹ್ಯುಂಡೈ ಎಕ್ಸ್‌ಟರ್ ಕಾರಿನ ಎಸ್ ಸ್ಮಾರ್ಟ್ (S Smart) ಮತ್ತು ಎಸ್ಎಕ್ಸ್ ಸ್ಮಾರ್ಟ್ (SX Smart) ಎಂಬ ಎರಡು ನೂತನ ರೂಪಾಂತರಗಳನ್ನು ಅದ್ದೂರಿಯಾಗಿ ಮಾರಾಟಕ್ಕೆ ತರಲಾಗಿದೆ. ಇವೆರೆಡು ರೂಪಾಂತರಗಳು ಕ್ರಮವಾಗಿ ರೂ.7.68 ಲಕ್ಷ ಮತ್ತು ರೂ.8.16 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿವೆ.

Hyundai Exter New S Smart And SX Smart Variant Launched In India Rs 7 68 Lakh Starting Price Details

ಹೊಸ 'ಎಸ್ ಸ್ಮಾರ್ಟ್' ರೂಪಾಂತರವು ಹಲವು ಹೊಸತನಗಳಿಗೆ ಸಾಕ್ಷಿಯಾಗಿದ್ದು, ಗ್ರಾಹಕರನ್ನು ಸಹ ಆಕರ್ಷಿಸಬಲ್ಲದು. ಇದು ಎಲೆಕ್ಟ್ರಿಕ್ ಸನ್‌ರೂಫ್, ರೇರ್ ಎಸಿ ವೆಂಟ್‌ಗಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಟಿಪಿಎಂಎಸ್ (ಟೈರ್ - ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಹಾಗೂ 15-ಇಂಚಿನ ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ.

ಮತ್ತೊಂದು ರೂಪಾಂತರವಾಗಿರುವ 'ಎಸ್ಎಕ್ಸ್ ಸ್ಮಾರ್ಟ್' ಕೂಡ ತುಂಬಾ ಚೆನ್ನಾಗಿದೆ. ಇದು ಬಟನ್ - ಸ್ಟಾರ್ಟ್, ಎಲೆಕ್ಟ್ರಿಕ್ ಸನ್‌ರೂಫ್, 15-ಇಂಚಿನ ಸ್ಟೀಲ್ ವೀಲ್‌ಗಳು, ಟಿಪಿಎಂಎಸ್ (ಟೈರ್ - ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಪ್ರೊಜೆಕ್ಟರ್ ಹೆಡ್‌ಲ್ಯಾಂಪ್‌ಗಳು ಹಾಗೂ ಶಾರ್ಕ್‌ಫಿನ್ ಆಂಟೆನಾವನ್ನು ಹೊಂದಿದೆ.

Hyundai Exter New S Smart And SX Smart Variant Launched In India Rs 7 68 Lakh Starting Price Details

ಗ್ರಾಹಕರು ಹೆಚ್ಚುವರಿಯಾಗಿ ರೂ.14,999 ಪಾವತಿಸಿದರೆ, ಇವೆರೆಡು ಹೊಸ ರೂಪಾಂತರಗಳಲ್ಲಿ ಮತ್ತಷ್ಟು ವಿನೂತನವಾದ ವೈಶಿಷ್ಟ್ಯಗಳು (ಫೀಚರ್ಸ್) ಸಹ ಲಭ್ಯವಾಗಲಿವೆ. ಬಹುಮುಖ್ಯವಾಗಿ 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ ಮತ್ತು ರೇರ್ ಪಾರ್ಕಿಂಗ್ ಕ್ಯಾಮೆರಾದಂತಹ ವೈಶಿಷ್ಟ್ಯಗಳು ಕೂಡ ಸಿಗಲಿವೆ.

ಹ್ಯುಂಡೈ ಎಕ್ಸ್‌ಟರ್ ಎಸ್‌ಯುವಿಯ ನೂತನ ರೂಪಾಂತರಗಳಾಗಿರುವ ಎಸ್ ಸ್ಮಾರ್ಟ್ & ಎಸ್ಎಕ್ಸ್ ಸ್ಮಾರ್ಟ್ ಪವರ್‌ಟ್ರೇನ್ ಆಯ್ಕೆಯಲ್ಲಿಯೂ ಯಾವುದೇ ಬದಲಾವಣೆಗಳನ್ನು ಮಾಡಲಾಗಿಲ್ಲ. ಇದರ 1.2-ಲೀಟರ್, 4-ಸಿಲಿಂಡರ್ ಪೆಟ್ರೋಲ್ ಎಂಜಿನ್, 81.8 ಬಿಹೆಚ್‍ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 113.8 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 5-ಸ್ಪೀಡ್ ಮ್ಯಾನುವಲ್ ಮತ್ತು 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ.

Hyundai Exter New S Smart And SX Smart Variant Launched In India Rs 7 68 Lakh Starting Price Details

ಇನ್ನೊಂದು 1.2-ಲೀಟರ್ ಸಿಎನ್‌ಜಿ ಎಂಜಿನ್‌ನ್ನು ಹೊಂದಿದೆ. ಆದರೆ, 67.7 ಬಿಹೆಚ್‍ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 95.2 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. ಜೊತೆಗೆ 5-ಮ್ಯಾನುವಲ್ ಗೇರ್‌ಬಾಕ್ಸ್‌ ಆಯ್ಕೆಯನ್ನು ಪಡೆದಿದೆ. ಯಾವ ಬೈಕ್‌ಗೂ ಕಮ್ಮಿಯಿಲ್ಲದ ರೀತಿಯಲ್ಲಿ 19.2 ರಿಂದ 27.1 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.

ಇವೆರೆಡು ರೂಪಾಂತರಗಳಲ್ಲಿಯೂ ಆರಾಮದಾಯಕವಾದ 5 ಆಸನಗಳಿದ್ದು, ಪ್ರಯಾಣಿಕರು ಸುಲಭವಾಗಿ ದೂರದ ಉರುಗಳಿಗೆ ಪ್ರಯಾಣಿಬಹುದು. ಜೊತೆಗೆ ವಾರಂತ್ಯ ಹಾಗೂ ರಜಾದಿನಗಳಲ್ಲಿ ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 391 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ. ಸುರಕ್ಷತೆಯ ದೃಷ್ಟಿಯಿಂದ 6 ಏರ್‌ಬ್ಯಾಗ್‌ಗಳನ್ನು ಹೊಂದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Wednesday, May 7, 2025, 10:22 [IST]
English summary
Hyundai exter new s smart and sx smart variant launched in india rs 7 68 lakh starting price details
Read more on hyundai india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+