ಇತ್ತೀಚೆಗೆ ಬಿಡುಗಡೆ.. ಅಗ್ಗದ 'Hyundai Exter' ಕಾರಿನ ಹೊಸ ವೇರಿಯೆಂಟ್‌ಗಳ ಕುರಿತ ಪ್ರಮುಖಾಂಶಗಳಿವು!
ಹ್ಯುಂಡೈ ಎಕ್ಸ್‌ಟರ್ (Hyundai Exter) ಪ್ರಮುಖ ಎಸ್‌ಯುವಿಯಾಗಿದೆ. ಇದು ಹೆಚ್ಚು ಆಕರ್ಷಕವಾಗಿದ್ದು, ಕೈಗೆಟುಕುವ ಬೆಲೆಯಲ್ಲಿಯೂ ಸಿಗುತ್ತದೆ. ಗ್ರಾಹಕರು ಕೂಡ ತಾಮುಂದು - ನಾಮುಂದು ಎಂಬಂತೆ ಕೊಂಡುಕೊಳ್ಳುತ್ತಿದ್ದಾರೆ. ಈಚೆಗೆ ಕಂಪನಿಯು ಇದೇ ಕಾರಿನ ಎಸ್ ಸ್ಮಾರ್ಟ್ (S Smart) ಹಾಗೂ ಎಸ್ಎಕ್ಸ್ ಸ್ಮಾರ್ಟ್ (SX Smart) ಎಂಬ 2 ಎರಡು ಹೊಸ ರೂಪಾಂತರಗಳನ್ನು (ವೇರಿಯೆಂಟ್) ಬಿಡುಗಡೆಗೊಳಿಸಿತ್ತು. ಬನ್ನಿ, ಇವುಗಳ ಬೆಲೆ ಮತ್ತು ವಿಶೇಷತೆಗಳ ಕುರಿತಂತೆ ಪ್ರಮುಖಾಂಶಗಳು ಏನೆಂಬುದನ್ನು ತಿಳಿಯೋಣ.
ಬೆಲೆ (Price): ಹ್ಯುಂಡೈ ಎಕ್ಸ್‌ಟರ್ ಕಾರಿನ ನೂತನ ರೂಪಾಂತರಗಳು ಅತ್ಯಂತ ಬಜೆಟ್ ಬೆಲೆಯಲ್ಲಿ ಖರೀದಿಗೆ ಲಭ್ಯವಿದ್ದು, ಮಧ್ಯಮ ವರ್ಗದ ಜನರು ಸಹ ಸುಲಭವಾಗಿ ಮನೆಗೆ ತರಬಹುದು.'ಎಸ್ ಸ್ಮಾರ್ಟ್' ರೂ.7.68 ದರವನ್ನು ಹೊಂದಿದ್ದರೆ, 'ಎಸ್ಎಕ್ಸ್ ಸ್ಮಾರ್ಟ್' ರೂ.8.16 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ.

ಹೊಸ ಎಸ್ ಸ್ಮಾರ್ಟ್ (S Smart) ರೂಪಾಂತರದ ವಿಶೇಷತೆಗಳೇನು: ಇದು ಎಲೆಕ್ಟ್ರಿಕ್ ಸನ್‌ರೂಫ್, ರೇರ್ ಎಸಿ ವೆಂಟ್‌ಗಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಮತ್ತು 15-ಇಂಚಿನ ಅಲಾಯ್ ವೀಲ್‌ನಂತಹ ಹತ್ತಾರು ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಹೊಂದಿದೆ.
ನೂತನ ಎಸ್ಎಕ್ಸ್ ಸ್ಮಾರ್ಟ್ (SX Smart) ರೂಪಾಂತರ ಹೇಗಿದೆ: ಈ ರೂಪಾಂತರವು (ವೇರಿಯೆಂಟ್) ಕೂಡ ಸಾಕಷ್ಟು ಉತ್ತಮವಾಗಿದೆ. ಬಟನ್ ಸ್ಟಾರ್ಟ್, ಎಲೆಕ್ಟ್ರಿಕ್ ಸನ್‌ರೂಫ್, 15-ಇಂಚಿನ ಸ್ಟೀಲ್ ವೀಲ್‌ಗಳು, ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಪ್ರೊಜೆಕ್ಟರ್ ಹೆಡ್‌ಲ್ಯಾಂಪ್‌ಗಳು ಮತ್ತು ಶಾರ್ಕ್‌ಫಿನ್ ಆಂಟೆನಾ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಕಾರ್ಯಕ್ಷಮತೆ (Performance): ಇವೆರೆಡು ರೂಪಾಂತರಗಳು ಶಕ್ತಿಯುತವಾದ ಎರಡು ಪವರ್‌ಟ್ರೇನ್ ಆಯ್ಕೆಯನ್ನು ಹೊಂದಿವೆ. 1.2-ಲೀ. 4-ಸಿಲಿಂಡರ್ ಪೆಟ್ರೋಲ್ ಎಂಜಿನ್, 81 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 113 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 5-ಸ್ಪೀಡ್ ಮ್ಯಾನುವಲ್ & 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್ ಆಯ್ಕೆಯನ್ನು ಪಡೆದಿದೆ.
ಮತ್ತೊಂದು 1.2-ಲೀ. ಸಿಎನ್‌ಜಿ ಎಂಜಿನ್‌ನ್ನು ಒಳಗೊಂಡಿದೆ. ಆದರೆ, 67 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 95.2 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಇದರೊಟ್ಟಿಗೆ 5-ಮ್ಯಾನುವಲ್ ಗೇರ್‌ಬಾಕ್ಸ್‌ನ್ನು ಹೊಂದಿದೆ. 19.2 ರಿಂದ 27 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.

ಮತ್ತೇನಿದೆ: ಹ್ಯುಂಡೈ ಎಕ್ಸ್‌ಟರ್ ಕಾರಿನ ಹೊಸ ರೂಪಾಂತರಗಳು 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ ಹಾಗೂ ರೇರ್ ಪಾರ್ಕಿಂಗ್ ಕ್ಯಾಮೆರಾದಂತಹ ವೈಶಿಷ್ಟ್ಯಗಳನ್ನು ಹಲವು ಹೊಂದಿವೆ. ಇವುಗಳಲ್ಲಿ 5 ಆಸನಗಳಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಓಡಾಟ ನಡೆಸಬಹುದು. 391 ಲೀ.ನಷ್ಟು ಬೂಟ್ ಸ್ಪೇಸ್‌ನ್ನು ಪಡೆದಿವೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್‌ಗಳನ್ನು ಹೊಂದಿವೆ.
ಒಟ್ಟಾರೆಯಾಗಿ ಹ್ಯುಂಡೈ ಎಕ್ಸ್‌ಟರ್ ಕಾರಿನ ಹೊಚ್ಚ ಹೊಸ ರೂಪಾಂತರಗಳು ಬಿಡುಗಡೆಯಾಗಿರುವುದು ದೇಶೀಯ ಗ್ರಾಹಕರಿಗೆ ಹೆಚ್ಚು ಖುಷಿ ನೀಡಿದೆ. ಇವೆರೆಡು ರೂಪಾಂತರಗಳು ಹೆಚ್ಚು ಆಕರ್ಷಕವಾಗಿದ್ದು, ಬಜೆಟ್ ಬೆಲೆಯಲ್ಲಿ ಸಹ ಖರೀದಿಗೆ ದೊರೆಯುತ್ತವೆ. ಮುಂಬರುವ ದಿನಗಳಲ್ಲಿ ಈ ರೂಪಾಂತರಗಳಿಗೆ ಖರೀದಿದಾರರಿಂದ ಯಾವ ರೀತಿಯ ಪ್ರತಿಕ್ರಿಯೆ ವ್ಯಕ್ತವಾಗುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








