ಆಕರ್ಷಕ ಫೀಚರ್ಸ್, ಗರಿಷ್ಠ ಸೇಫ್ಟಿ ಇರುವ ಪುಟ್ಟ ಕಾರಿನ ಬೆಲೆ ಏರಿಕೆ ಮಾಡಿ ಶಾಕ್ ಕೊಟ್ಟ ಹ್ಯುಂಡೈ
ದಕ್ಷಿಣ ಕೊರಿಯಾದ ಜನಪ್ರಿಯ ಕಾರು ನಿರ್ಮಾಣ ಕಂಪನಿಯಾದ ಹ್ಯುಂಡೈ, ಭಾರತದಲ್ಲಿ ಎಕ್ಸ್‌ಟರ್ ಎಂಬ ಮೈಕ್ರೋ ಎಸ್‌ಯುವಿಯೊಂದನ್ನು ಬಿಡುಗಡೆ ಮಾಡಿತ್ತು. ಟಾಟಾ ಪಂಚ್‌ನ ಎದುರಾಳಿಯಾಗಿ ಮಾರುಕಟ್ಟೆಗೆ ಬಂದ ಈ ಎಕ್ಸ್‌ಟರ್, ಆನಂತರ ನಡೆದಿದ್ದೆಲ್ಲಾ ಇತಿಹಾಸ. ಈ ಕಾರು ಮಾರುಕಟ್ಟೆಯಲ್ಲಿ ಉತ್ತಮ ಹೆಸರು ಪಡೆದಿದ್ದು, ಅತ್ಯುತ್ತಮ ಮಾರಾಟವಾಗುತ್ತಿದೆ. ಈ ಹ್ಸೊಸ ವರ್ಷದಿಂದ ಹ್ಯುಂಡೈ ಎಕ್ಸ್‌ಟರ್ ಕಾರು ಬೆಲೆ ಏರಿಕೆಯನ್ನು ಪಡೆದುಕೊಂಡಿದೆ. ಈ ಹ್ಯುಂಡೈ ಎಕ್ಸ್‌ಟರ್ ಮಾದರಿಯ ಬೆಲೆಯು ರೂ.9,700 ರೂ.ವರೆಗೆ ಹೆಚ್ಚಾಗಿದೆ.
ಹ್ಯುಂಡೈ ಎಕ್ಸ್‌ಟರ್ ಮಾದರಿ ಮಾರಾಟದ ವರದಿಯನ್ನು ಬಹಿರಂಗಪಡಿಸಿದೆ. ಆದರೆ ಕಳೆದ ತಿಂಗಳ ಮಾರಾಟದಲ್ಲಿ ಕುಸಿತವನ್ನು ಕಂಡಿದೆ. ಹ್ಯುಂಡೈ ಎಕ್ಸ್‌ಟರ್ (Hyundai Exter) ಕಳೆದ ತಿಂಗಳಿನ ಮಾರಾಟದ ಅಂಕಿ ಅಂಶಗಳು ಬಹಿರಂಗವಾಗಿವೆ. 2024ರ ಡಿಸೆಂಬರ್ ತಿಂಗಳಿನಲ್ಲಿ ಹ್ಯುಂಡೈ ಎಕ್ಸ್‌ಟರ್ ಮಾದರಿಯು 5,270 ಯುನಿಟ್ ಗಳು ಮಾರಾಟವಾಗಿವೆ. ಇನ್ನು ಕಳೆದ ವರ್ಷದ ಡಿಸೆಂಬರ್ ತಿಂಗಳಿನಲ್ಲಿ ಹ್ಯುಂಡೈ ಎಕ್ಸ್‌ಟರ್ ಮಾದರಿಯು 7,516 ಯುನಿಟ್ ಗಳು ಮಾರಾಟವಾಗಿತ್ತು.

ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಶೇ.30 ರಷ್ಟು ಕುಸಿತವನ್ನು ಕಂಡಿದೆ. ಟಾಟಾ ಪಂಚ್ ಪ್ರಬಲ ಪೈಪೋಟಿ ಮತ್ತು ಪ್ರಾರಂಭದಲ್ಲಿ ಮೂಡಿಸಿದ ಸಂಚಲನದ ಬಳಿಕ ಜನರು ಖರಿದಿಸುವರ ಸಂಖ್ಯೆ ಕಡಿಮೆಯಾಗಿದೆ. ಇದೇ ಕಾರ್ ವಿಭಾಗದಲ್ಲಿ ಇತರ ಆಯ್ಕೆಗಳು ಇರುವುದರಿಂದ ಈ ಹ್ಯುಂಡೈ ಕಾರಿನ ಮಾರಾಟದಲ್ಲಿ ಕಡಿಮೆಯಾಗಿದೆ. ಹ್ಯುಂಡೈ ಎಕ್ಸ್‌ಟರ್ ಸೀಟುಗಳು ಲೆಥೆರೆಟ್ ಅಪ್‌ಹೋಲ್‌ಸ್ಟರಿ ಫೀಚರ್ಸ್ ಹೊಂದಿದ್ದು, ಎಲ್ಲ ವಯಸ್ಸಿನವರು ಆರಾಮದಾಯಕವಾಗಿ ಪ್ರಯಾಣಿಸಬಹುದು.
ಸುರಕ್ಷತೆಯ ದೃಷ್ಟಿಯಿಂದ ಈ ಕಾರು ಅತ್ಯುತ್ತಮವಾಗಿದೆ. ಈ ಹ್ಯುಂಡೈ ಎಕ್ಸ್‌ಟರ್ ಕಾರಿನಲ್ಲಿ ಸುರಕ್ಷತೆಗಾಗಿ, 6 ಏರ್‌ಬ್ಯಾಗ್ಸ್, ESC (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಹಿಲ್ ಅಸಿಸ್ಟ್ ಕಂಟ್ರೋಲ್, EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಸೀಟ್‌ಬೆಲ್ಟ್ ರಿಮೈಂಡರ್, ISOFIX ಚೈಲ್ಡ್ ಸೀಟ್ ಆಂಕರ್ ಹೊಂದಿದೆ. ಈ ಹ್ಯುಂಡೈ ಎಕ್ಸ್‌ಟರ್ ಕಾರು 6 ಮೊನೊಟೋನ್ ಮತ್ತು 3 ಡ್ಯುಯಲ್-ಟೋನ್ ಬಾಹ್ಯ ಬಣ್ಣ ಆಯ್ಕೆಗಳಲ್ಲಿ ನೀಡುತ್ತಿದೆ.

ಹ್ಯುಂಡೈ ಎಕ್ಸ್‌ಟರ್ ಕಾರು, 3,815 ಎಂಎಂ ಉದ್ದ, 1,710 ಎಂಎಂ ಅಗಲ ಮತ್ತು 1,631 ಎಂಎಂ ಎತ್ತರವನ್ನು ಹೊಂದಿದೆ. ವೀಲ್‌ಬೇಸ್ 2,450 ಎಂಎಂ ಉದ್ದವಿದ್ದು, ಗ್ರೌಂಡ್ ಕ್ಲಿಯರೆನ್ಸ್ 185 ಎಂಎಂ ಇದೆ. ಪೆಟ್ರೋಲ್ ಆವೃತ್ತಿ 391 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್ ಪಡೆದಿದೆ. ಎಕ್ಸ್‌ಟರ್ ಕಾರಿನಲ್ಲ್ 1.2-ಲೀಟರ್, 4 ಸಿಲಿಂಡರ್ (ಪೆಟ್ರೋಲ್) ಎಂಜಿನ್ ಹೊಂದಿದ್ದು, 81.8 bhp ಗರಿಷ್ಠ ಪವರ್ ಹಾಗೂ 113.8 Nm ಪಿಕ್ ಟಾರ್ಕ್ ಉತ್ಪಾದಿಸುತ್ತದೆ.
ಸಿಎನ್‌ಜಿ ಮೋಡ್ ನಲ್ಲಿ 67.7 bhp ಪವರ್ ಮತ್ತು 95.2 Nm ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯ ಹೊಂದಿದೆ. ಪೆಟ್ರೋಲ್ ಆವೃತ್ತಿಯು ಮ್ಯಾನ್ಯುವಲ್ ಮತ್ತು AMT ಗೇರ್‌ಬಾಕ್ಸ್ ಆಯ್ಕೆಯನ್ನು ಹೊಂದಿದೆ. ಹ್ಯುಂಡೈ ಎಕ್ಸ್‌ಟರ್ ಸಿಎನ್‌ಜಿ ಆವೃತ್ತಿಯು ಮ್ಯಾನ್ಯುವಲ್ (5 ಸ್ಪೀಡ್) ಗೇರ್‌ಬಾಕ್ಸ್ ಅನ್ನು ಪಡೆದಿದೆ.

ಹ್ಯುಂಡೈ ಎಕ್ಸ್‌ಟರ್ ಕಾರಿನ ಮೈಲೇಜ್ ವಿಚಾರವಾಗಿ ಮಾತನಾಡುವದಾದರೆ, ಪೆಟ್ರೋಲ್ ಚಾಲಿತ ಕಾರು, 19.2 ಕಿ.ಮೀ - 19.4 ಕಿ.ಮೀ ಮೈಲೇಜ್ ಅನ್ನು ನೀಡುತ್ತದೆ. ಸಿಎನ್‌ಜಿ ಚಾಲಿತ ಕಾರು ಗರಿಷ್ಠ 27.1 ಕಿ.ಮೀ ಮೈಲೇಜ್ ನೀಡುತ್ತದೆ. ಈ ಕಾರಿನಲ್ಲಿ ಶಾರ್ಕ್ ಫಿನ್ ಆಂಟೆನಾ, ಫುಟ್‌ವೆಲ್ ಲೈಟಿಂಗ್, ಪ್ಯಾಡಲ್ ಶಿಫ್ಟರ್‌ಗಳು, ವೈರ್‌ಲೆಸ್ ಚಾರ್ಜಿಂಗ್ ಪ್ಯಾಡ್, ಆನ್‌ಬೋರ್ಡ್ ನ್ಯಾವಿಗೇಷನ್ ಮತ್ತು ಹೆಚ್ಚಿನವು ಸೇರಿವೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








