Hyundai: 27.1 ಕಿ.ಮೀ ಮೈಲೇಜ್.. 6 ಲಕ್ಷ ಬೆಲೆ, ಈ ಜನಪ್ರಿಯ ಹ್ಯುಂಡೈ ಕಾರಿಗೆ ಗ್ರಾಹಕರಿಂದ ನಿರೀಕ್ಷಿಸದ ಟ್ವಿಸ್ಟ್!
ಭಾರತದ ಕಾರು ಮಾರುಕಟ್ಟೆಯಲ್ಲಿ ಹ್ಯುಂಡೈ ಎಕ್ಸ್‌ಟರ್ (Hyundai Exter) ಜನಪ್ರಿಯ ಎಸ್‌ಯುವಿಯಾಗಿ ಹೊರಹೊಮ್ಮಿದೆ. ಈ ಕಾರು ಆಕರ್ಷಕ ವಿನ್ಯಾಸ ಮತ್ತು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಇತ್ತೀಚೆಗೆ ಪ್ರಮುಖ ವಾಹನ ತಯಾರಿಕ ಕಂಪನಿಗಳು, ಈ ಜನವರಿ ತಿಂಗಳ ಕಾರು ಮಾರಾಟದ ಅಂಕಿ ಅಂಶದ ವರದಿಯನ್ನು ಪ್ರಕಟಿಸಿದ್ದು, 'ಎಕ್ಸ್‌ಟರ್' ಎಸ್‌ಯುವಿ ಮಾರಾಟವು ಕೊಂಚ ಮಟ್ಟಿಗೆ ಇಳಿಕೆಯಾಗಿದೆ. ಬನ್ನಿ.. ಆ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಿಳಿಯೋಣ.
ಕಳೆದ ತಿಂಗಳು (ಜನವರಿ - 2025) ಹ್ಯುಂಡೈ ಮೋಟಾರ್ ಇಂಡಿಯಾ, ಸುಮಾರು 6,068 ಯುನಿಟ್ ಎಕ್ಸ್‌ಟರ್ ಎಸ್‌ಯುವಿಗಳನ್ನು ಮಾರಾಟಗೊಳಿಸಿದೆ. 2024 ಇದೇ ಅವಧಿಯಲ್ಲಿ 8,229 ಯುನಿಟ್‌ಗಳನ್ನು ಮಾರಲಾಗಿದ್ದು, ಅದಕ್ಕೆ ಹೋಲಿಸಿದರೆ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ (YoY) ಶೇಕಡ -26% ಇಳಿಕೆಯಾಗಿದೆ.

ಆದರೆ, 2024ರ ಡಿಸೆಂಬರ್‌ನಲ್ಲಿ ಮಾರಾಟ ಮಾಡಿದ 5,270 ಯುನಿಟ್ ಹ್ಯುಂಡೈ ಎಕ್ಸ್‌ಟರ್ ಕಾರಿಗೆ ಹೋಲಿಕೆ ಮಾಡಿದರೆ, ಈ ಜನವರಿಯಲ್ಲಿ ಮಾರಾಟ ಪ್ರಮಾಣವು ಸ್ವಲ್ಪ ಮಟ್ಟಿಗೆ ಸುಧಾರಿಸಿದೆ. ಈ ಎಸ್‌ಯುವಿಯ ಮಾರಾಟ ಅಂಕಿ ಸಂಖ್ಯೆಗಳು ಕುಸಿತವಾಗಿರುವ ಬಗ್ಗೆ ಕಂಪನಿಯು ಯಾವುದೇ ನಿಖರವಾದ ಕಾರಣವನ್ನು ಬಹಿರಂಗಪಡಿಸಿಲ್ಲ. ಮುಂಬರುವ ದಿನಗಳಲ್ಲಿ ಅದು ಸುಧಾರಿಸಿಕೊಳ್ಳುವ ನಿರೀಕ್ಷೆಯಿದೆ.
ಹ್ಯುಂಡೈ ಎಕ್ಸ್‌ಟರ್ ವಿಶೇಷತೆಗಳೇನು: ಈ ಕಾರು ರೂ.6.20 ಲಕ್ಷದಿಂದ ರೂ.10.50 ಲಕ್ಷ ಎಕ್ಸ್-ಶೋರೂಂ ದರವನ್ನು ಪಡೆದಿದೆ. ಇಎಕ್ಸ್, ಇಎಕ್ಸ್ (ಒ), ಎಸ್, ಎಸ್ ಪ್ಲಸ್, ಎಸ್ (ಒ) ಮತ್ತು ಎಸ್ಒ (ಒ) ಪ್ಲಸ್ ಸೇರಿದಂತೆ ವಿವಿಧ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿ ಸಿಗುತ್ತದೆ.

ನೂತನ ಹ್ಯುಂಡೈ ಎಕ್ಸ್‌ಟರ್ ಎಸ್‌ಯುವಿ ರೇಂಜರ್ ಖಾಕಿ, ಸ್ಟಾರಿ ನೈಟ್, ಫೈರಿ ರೆಡ್, ಅಟ್ಲಾಸ್ ವೈಟ್, ಕಾಸ್ಮಿಕ್ ಬ್ಲೂ, ಅಬಿಸ್ ಬ್ಲಾಕ್, ಶ್ಯಾಡೋ ಗ್ರೇ, ಟೈಟಾನ್ ಗ್ರೇ ಒಳಗೊಂಡಂತೆ ವಿವಿಧ ಬಣ್ಣಗಳ ಆಯ್ಕೆಯನ್ನು ಹೊಂದಿದೆ. ಇದರಲ್ಲಿ 5 ಆಸನ ವ್ಯವಸ್ಥೆಯಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಓಡಾಟ ನಡೆಸಬಹುದು.
ಈ ಕಾರು ಶಕ್ತಿಯುತವಾದ ಎರಡು ಪವರ್‌ಟ್ರೇನ್ ಆಯ್ಕೆಯನ್ನು ಹೊಂದಿದೆ. ಇದರ 1.2-ಲೀಟರ್ ನ್ಯಾಚುರಲ್ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್, 83 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 114 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಒಳಗೊಂಡಿದೆ.

ಮತ್ತೊಂದು 1.2-ಲೀಟರ್ ಸಿಎನ್‌ಜಿ ಎಂಜಿನ್, 69 ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 95 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. ಈ ಹ್ಯುಂಡೈ ಎಕ್ಸ್‌ಟರ್ ರೂಪಾಂತರಗಳಿಗೆ ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್/ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಹೊಂದಿದೆ. 19.4 ರಿಂದ 27.1 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.
ನೂತನ ಕಾರು 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಸೆಮಿ-ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಕ್ರೂಸ್ ಕಂಟ್ರೋಲ್, ವೈರ್‌ಲೆಸ್ ಫೋನ್ ಚಾರ್ಜರ್ ಹಾಗೂ ಆಟೋ ಎಸಿ ಮತ್ತು ಸನ್‌ರೂಫ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. 6-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್) ಹಾಗೂ ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಅನ್ನು ಪಡೆದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








