Hyundai: 6 ಲಕ್ಷ.. 27 ಕಿ.ಮೀ ಮೈಲೇಜ್, 5-ಸೀಟರ್.. ಈ ಜನಪ್ರಿಯ ಹ್ಯುಂಡೈ ಎಸ್‌ಯುವಿಗೆ ಬೇಡಿಕೆ ಕುಸಿತ.. ಯಾಕೆ?
ಹ್ಯುಂಡೈ ಎಕ್ಸ್‌ಟರ್ (Hyundai Exter) ಪ್ರಮುಖ ಮೈಕ್ರೋ ಎಸ್‌ಯುವಿಯಾಗಿದೆ. ಇದು ತುಂಬಾ ಅಚ್ಚುಕಟ್ಟಾದ ವಿನ್ಯಾಸ ಹಾಗೂ ಹತ್ತಾರು ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಉತ್ತಮವಾದ ಕಾರ್ಯಕ್ಷಮತೆಗೂ ಹೆಸರುವಾಸಿಯಾಗಿದೆ. ಆದರೂ ಈ ಕಾರಿನ ಮಾರಾಟ ಸಂಖ್ಯೆ ದಿನದಿಂದ ದಿನಕ್ಕೆ ಕುಸಿತವಾಗುತ್ತಿದೆ. ಅದು ಜುಲೈ ತಿಂಗಳಲ್ಲೂ ಮುಂದುವರಿದಿದೆ. ಒಟ್ಟು 5,075 ಯುನಿಟ್‌ಗಳನ್ನು ಮಾರಾಟಗೊಳಿಸಲಾಗಿದೆ. ಇದರೊಂದಿಗೆ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ -16% ಪ್ರಗತಿಯಾಗಿದೆ. 2024ರ ಇದೇ ಅವಧಿಯಲ್ಲಿ 6,037 ಯುನಿಟ್‌ಗಳನ್ನು ಮಾರಲಾಗಿತ್ತು.
ಈ ವರ್ಷದ ಮೊದಲ 6 ತಿಂಗಳಲ್ಲೂ 'ಹ್ಯುಂಡೈ ಎಕ್ಸ್‌ಟರ್' ಮಾರಾಟದಲ್ಲಿ ಹಲವು ಏರಿಳಿತಗಳನ್ನು ಕಾಣಲಾಗಿದೆ. ಬರೋಬ್ಬರಿ 33,525 ಯುನಿಟ್‌ಗಳನ್ನು ಮಾರಾಟ ಮಾಡಲಾಗಿದೆ. ಈ ಅಂಕಿ ಸಂಖ್ಯೆಯನ್ನು ವಿಶ್ಲೇಷಣೆ ಮಾಡಿದಾಗ ಪ್ರತಿ ತಿಂಗಳು ಸರಾಸರಿ 5,587 ಯುನಿಟ್‌ಗಳನ್ನು ಮಾರಾಟಗೊಳಿಸಲಾಗಿದೆ.

ಹ್ಯುಂಡೈ ಎಕ್ಸ್‌ಟರ್ ವಿಶೇಷತೆಗಳೇನು:
ಇದು ಎಸ್‌ಯುವಿಯಾಗಿದೆ. ಬಜೆಟ್ ಬೆಲೆಯಲ್ಲಿಯೂ ಖರೀದಿಗೆ ಲಭ್ಯವಿದೆ. ಮಧ್ಯಮ ವರ್ಗದ ಗ್ರಾಹಕರು ಸುಲಭವಾಗಿ ತೆಗೆದುಕೊಳ್ಳಬಹುದು. ಕನಿಷ್ಠ ರೂ.6.21 ಲಕ್ಷ ಮತ್ತು ಗರಿಷ್ಠ ರೂ.10.51 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಇಎಕ್ಸ್, ಎಸ್, ಎಸ್ ಸ್ಮಾರ್ಟ್, ಎಸ್ ಪ್ಲಸ್, ಎಸ್ಎಕ್ಸ್, ಎಸ್ಎಕ್ಸ್ ಸ್ಮಾರ್ಟ್ ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ.
ಈ ಕಾರು ಅತ್ಯಾಧುನಿಕವಾದ ವಿನ್ಯಾಸವನ್ನು ಹೊಂದಿದೆ. ಪ್ರೊಜೆಕ್ಟರ್ ಹೆಡ್‌ಲ್ಯಾಂಪ್‌ಗಳು, ಹೆಚ್ ಆಕಾರಕ್ಕೆ ಹೋಲಿಕೆಯಾಗಬಲ್ಲ ಎಲ್ಇಡಿ ಡಿಆರ್‌ಎಲ್‌ಗಳು, ಶಾರ್ಕ್ ಫಿನ್ ಆಂಟೆನಾ, ಟೈಲ್‌ಲೈಟ್‌ಗಳು, ರೂಫ್-ಮೌಂಟೆಡ್ ಸ್ಪಾಯ್ಲರ್ ಹಾಗೂ 15-ಇಂಚಿರುವ ಡೈಮಂಡ್ ಕಟ್ ಅಲಾಯ್ ವೀಲ್‌ಗಳನ್ನು ಪಡೆದಿದೆ. ಅಟ್ಲಾಸ್ ವೈಟ್, ಫೈರಿ ರೆಡ್, ರೇಂಜರ್ ಖಾಕಿ, ಸ್ಟಾರಿ ನೈಟ್ ಮತ್ತು ಟೈಟಾನ್ ಗ್ರೇ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.

ನೂತನ ಎಕ್ಸ್‌ಟರ್ 5 ಆಸನಗಳನ್ನು ಪಡೆದಿದೆ. ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು. 391 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ. 3,815 ಎಂಎಂ ಉದ್ದ, 1,710 ಎಂಎಂ ಅಗಲ ಹಾಗೂ 1,631 ಎಂಎಂ ಎತ್ತರವನ್ನು ಪಡೆದಿದೆ. 185 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,450 ಎಂಎಂ ವೀಲ್‌ಬೇಸ್‌ನ್ನು ಹೊಂದಿದೆ.
ಇದು ಎರಡು ಪವರ್‌ಟ್ರೇನ್ ಆಯ್ಕೆಯಲ್ಲಿಯೂ ಲಭ್ಯವಾಗುತ್ತದೆ. 1.2-ಲೀಟರ್, 4-ಸಿಲಿಂಡರ್ ಪೆಟ್ರೋಲ್ ಎಂಜಿನ್, 81.8 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 113.8 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 5-ಸ್ಪೀಡ್ ಮ್ಯಾನುವಲ್/ 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದಿದೆ.

ಇನ್ನೊಂದು 1.2-ಲೀಟರ್ ಪೆಟ್ರೋಲ್/ ಸಿಎನ್‌ಜಿ ಎಂಜಿನ್, 67.7 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 95.2 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯ ಒಳಗೊಂಡಿದೆ. ಕೇವಲ 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನ್ನು ಹೊಂದಿದೆ. ಈ ಕಾರು 19.2 ರಿಂದ 27.1 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ.
ಹೊಸ ಎಕ್ಸ್‌ಟರ್ ಕಾರಿನ ಕ್ಯಾಬಿನ್ ವಿನ್ಯಾಸವು ತುಂಬಾ ಅಚ್ಚುಕಟ್ಟಾಗಿದೆ. 8-ಇಂಚಿರುವ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ವೈರ್‌ಲೆಸ್ ಫೋನ್ ಚಾರ್ಜಿಂಗ್, ಆಟೋ ಎಸಿ, ಸನ್‌ರೂಫ್, ಪುಶ್ ಬಟನ್ ಸ್ಟಾರ್ಟ್/ಸ್ಟಾಪ್, ಕ್ರೂಸ್ ಕಂಟ್ರೋಲ್, ಮಲ್ಟಿ ಫಂಕ್ಷನ್ ಸ್ಟೀರಿಂಗ್ ವೀಲ್ ಹಾಗೂ ರೇರ್ ಎಸಿ ವೆಂಟ್‌ಗಳು ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ.
ಇದು ಸುರಕ್ಷತೆಗೂ ಹೆಸರುವಾಸಿಯಾಗಿದೆ. ಪ್ರಯಾಣಿಕರಿಗೆ ಗರಿಷ್ಠ ಮಟ್ಟದ ರಕ್ಷಣೆ ಒದಗಿಸುತ್ತದೆ. ಅದಕ್ಕಾಗಿ 6 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಸೀಟ್‌ಬೆಲ್ಟ್ ರಿಮೈಂಡರ್ ಮತ್ತು ಹಿಲ್ ಅಸಿಸ್ಟ್ ಕಂಟ್ರೋಲ್‌ನ್ನು ಪಡೆದಿದೆ.
ಒಟ್ಟಾರೆಯಾಗಿ, ಈ ಹ್ಯುಂಡೈ ಎಕ್ಸ್‌ಟರ್ ಮಾರಾಟ ಸಂಖ್ಯೆ ಇಳಿಕೆಯಾಗಲು ನಾನಾ ಕಾರಣಗಳಿವೆ. ಇದರ ಬೆಲೆಗೆ ಹಲವು ಕಾರುಗಳು ಖರೀದಿಗೆ ಲಭ್ಯವಿವೆ. ಗ್ರಾಹಕರು ಸಹ ಅವುಗಳ ಖರೀದಿಯತ್ತ ಮುಖ ಮಾಡಿದ್ದಾರೆ. ಜೊತೆಗೆ ಸಣ್ಣ ಗಾತ್ರದಲ್ಲಿದೆ. ಹೀಗಾಗಿ, ಎಕ್ಸ್‌ಟರ್ ಮಾರಾಟವು ಕುಸಿತವಾಗುತ್ತಿದೆ ಎಂದು ವಿಶ್ಲೇಷಣೆ ಮಾಡಲಾಗುತ್ತಿದೆ.


Click it and Unblock the Notifications








