27 Km ಮೈಲೇಜ್.. ಬರೀ 5 ಲಕ್ಷ, ಆದರೂ ಈ ಫೇಮಸ್ ಹ್ಯುಂಡೈ ಎಸ್‌ಯುವಿ ಖರೀದಿಸಲು ಜನರಿಗೆ ಮನಸಿಲ್ಲ.. ಕಾರಣವೇನು?
ಹ್ಯುಂಡೈ ಎಕ್ಸ್‌ಟರ್ (Hyundai Exter) ವಿಶ್ವಾಸಾರ್ಹ ಎಸ್‌ಯುವಿಯಾಗಿ ಹೊರಹೊಮ್ಮಿದೆ. ಇದು ನೋಡುಗರ ಕಣ್ಣು ಕುಕ್ಕುವಂತಹ ವಿನ್ಯಾಸ ಹೊಂದಿದ್ದು, ಹಲವು ಆಕರ್ಷಕ ವೈಶಿಷ್ಟ್ಯಗಳನ್ನು ಪಡೆದಿದೆ. ಕೈಗೆಟುಕುವ ಬೆಲೆಯಲ್ಲಿಯೂ ಸಿಗುತ್ತದೆ. ಆದರೂ ಈ ಸೆಪ್ಟೆಂಬರ್ ತಿಂಗಳು 'ಎಕ್ಸ್‌ಟರ್' ಕಾರಿನ ಮಾರಾಟ ಸಂಖ್ಯೆ ಕುಸಿತವಾಗಿದೆ. ಒಟ್ಟು 5,643 ಯುನಿಟ್‌ಗಳನ್ನು ಮಾತ್ರ ವಿತರಣೆ ಮಾಡಲಾಗಿದೆ. 2024ರ ಇದೇ ಅವಧಿಯಲ್ಲಿ 6,908 ಯುನಿಟ್‌ಗಳನ್ನು ಮಾರಲಾಗಿತ್ತು. ಈ ಅಂಕಿಸಂಖ್ಯೆಯನ್ನು ಲೆಕ್ಕಹಾಕಿದಾಗ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ 18.31% ಇಳಿಮುಖವಾಗಿದೆ
ಸೆಪ್ಟೆಂಬರ್‌ನಲ್ಲಿ 'ಹ್ಯುಂಡೈ ಎಕ್ಸ್‌ಟರ್' ಕಾರಿನ ಮಾರಾಟ ಸಂಖ್ಯೆ ಕುಸಿತವಾಗಲು ಒಂದಷ್ಟು ಕಾರಣಗಳಿವೆ. ಬಹುಮುಖ್ಯವಾಗಿ ಇದೇ ಕಾರಿನ ಬೆಲೆಗೆ ವಿವಿಧ ಕಂಪನಿಯ ಎಸ್‌ಯುವಿಗಳು ಖರೀದಿಗೆ ಲಭ್ಯವಿವೆ. ಜೊತೆಗೆ ಪರಿಷ್ಕೃತ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ದರಗಳು ಜಾರಿಗೊಂಡಿವೆ. ಈ ಕಾರಿನ ಬೆಲೆಯು ಕಡಿಮೆಯಾಗಿದೆ. ಆದರೆ, ಖರೀದಿದಾರರಲ್ಲಿ ನೂತನ ದರದ ಕುರಿತ ಅರಿವಿನ ಕೊರತೆಯಿಂದ 'ಎಕ್ಸ್‌ಟರ್' ಮಾರಾಟ ಪ್ರಮಾಣವು ಇಳಿಕೆಯಾಗಿದೆ ಎಂದು ವಿಶ್ಲೇಷಣೆ ಮಾಡಲಾಗಿದೆ.

ಹ್ಯುಂಡೈ ಎಕ್ಸ್‌ಟರ್ ವಿಶೇಷತೆಗಳೇನು:
ಈ ಎಸ್‌ಯುವಿಯು ಕನಿಷ್ಠ ರೂ.5.68 ಲಕ್ಷ ಹಾಗೂ ಗರಿಷ್ಠ ರೂ.9.61 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದ್ದು, ಎಲ್ಲ ವರ್ಗದ ಗ್ರಾಹಕರು ಸುಲಭವಾಗಿ ಕೊಂಡುಕೊಳ್ಳಬಹುದು. ಇಎಕ್ಸ್, ಎಸ್, ಎಸ್ ಸ್ಮಾರ್ಟ್, ಎಸ್ ಪ್ಲಸ್, ಎಸ್ಎಕ್ಸ್, ಎಸ್ಎಕ್ಸ್ ಸ್ಮಾರ್ಟ್ ಎಂಬ ಅತ್ಯಾಧುನಿಕ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ದೊರೆಯುತ್ತದೆ.
ಇದು ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಹೊಂದಿದೆ. ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಶಾರ್ಕ್ ಫಿನ್ ಆಂಟೆನಾ, ಎಲ್ಇಡಿ ಟೈಲ್‌ಲೈಟ್‌ಗಳು, ರೂಫ್ ಮೌಂಟೆಡ್ ಸ್ಪಾಯ್ಲರ್ ಮತ್ತು 15 ಇಂಚಿನ ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ. ಅಟ್ಲಾಸ್ ವೈಟ್, ರೇಂಜರ್ ಖಾಕಿ, ರೇಂಜರ್ ಖಾಕಿ, ಕಾಸ್ಮಿಕ್ ಬ್ಲೂ, ಸ್ಟಾರಿ ನೈಟ್, ಟೈಟಾನ್ ಗ್ರೇ ಹಾಗೂ ಟೈಟಾನ್ ಗ್ರೇ ಮ್ಯಾಟ್ ಎಂಬ ಬಣ್ಣಗಳೊಂದಿಗೂ ಲಭ್ಯವಿದೆ.

ನೂತನ 'ಹ್ಯುಂಡೈ ಎಕ್ಸ್‌ಟರ್' ವಿಶಾಲ ಗಾತ್ರದಲ್ಲಿದೆ. 3,815 ಮಿ.ಮೀ ಉದ್ದ, 1,710 ಮಿ.ಮೀ ಅಗಲ ಮತ್ತು 1,631 ಎಂಎಂ ಎತ್ತರವಿದೆ. 185 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ 2,450 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿದೆ. 999 ಕೆಜಿ ತೂಕವಿದೆ.
ಈ ಕಾರು ಶಕ್ತಿಶಾಲಿಯಾದ 2 ಪವರ್‌ಟ್ರೇನ್‌ನ್ನು ಹೊಂದಿದೆ. 1.2-ಲೀಟರ್, 4-ಸಿಲಿಂಡರ್ ಪೆಟ್ರೋಲ್ ಹಾಗೂ 1.2-ಲೀಟರ್ ಪೆಟ್ರೋಲ್/ಸಿಎನ್‌ಜಿ ಎಂಜಿನ್‌ನ್ನು ಒಳಗೊಂಡಿದೆ. ರೂಪಾಂತರಗಳಿಗೆ ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್ ಹಾಗೂ 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 19 ರಿಂದ 27 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ. 160 ಕೆಎಂಪಿಹೆಚ್ ಸ್ಪೀಡ್‌ನ್ನು ಒಳಗೊಂಡಿದೆ. 15.26 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ.

ಇದರ ಕ್ಯಾಬಿನ್ ವಿನ್ಯಾಸವು ಉತ್ತಮವಾಗಿದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದೆ. ಪ್ರಯಾಣಿಕರು ಆರಾಮದಾಯಕವಾಗಿ ಓಡಾಟ ನಡೆಸಬಹುದು. 391 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ತನ್ನದಾಗಿಸಿಕೊಂಡಿದೆ. 8 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ವೈರ್‌ಲೆಸ್ ಫೋನ್ ಚಾರ್ಜಿಂಗ್, ಸನ್‌ರೂಫ್, ಪುಶ್ ಬಟನ್ ಸ್ಟಾರ್ಟ್/ ಸ್ಟಾಪ್, ಕ್ರೂಸ್ ಕಂಟ್ರೋಲ್ ಮತ್ತು ರೇರ್ ಎಸಿ ವೆಂಟ್‌ಗಳು ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.
ಹೊಸ 'ಹ್ಯುಂಡೈ ಎಕ್ಸ್‌ಟರ್' ಸುರಕ್ಷತೆಗೂ ಹೆಸರುವಾಸಿಯಾಗಿದೆ. ಪ್ರಯಾಣಿಕರ ರಕ್ಷಣೆಗಾಗಿ 6 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿ - ಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ - ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಹಾಗೂ ಹಿಲ್ ಅಸಿಸ್ಟ್ ಕಂಟ್ರೋಲ್‌ನ್ನು ಹೊಂದಿದೆ.


Click it and Unblock the Notifications








