ಬರೀ 6.87 ಲಕ್ಷ.. ಹ್ಯುಂಡೈ ಐ20 ಕೊಳ್ಳಬೇಕೇ.. 50,000 ಡೌನ್-ಪೇಮೆಂಟ್ ಪಾವತಿಸಿದರೆ, ತಿಂಗಳ EMI ಎಷ್ಟು? ಸುಲಭ ಲೆಕ್ಕಾಚಾರ
ಹ್ಯುಂಡೈ ಐ20 (Hyundai i20) ಜಗಮೆಚ್ಚಿದ ಹ್ಯಾಚ್‌ಬ್ಯಾಕ್ ಆಗಿದೆ. ಇದು ತುಂಬಾ ಅಚ್ಚುಕಟ್ಟಾದ ವಿನ್ಯಾಸ ಹೊಂದಿದ್ದು, ಹತ್ತಾರು ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಕನಿಷ್ಠ ರೂ.6.87 ಲಕ್ಷ ಹಾಗೂ ಗರಿಷ್ಠ ರೂ.10.43 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ನೀವು ಹೊಚ್ಚ ಹೊಸ ಕಾರೊಂದನ್ನು ಖರೀದಿಸಲು ಪ್ಲ್ಯಾನ್ ಮಾಡಿದ್ದೀರಾ.. ಹಾಗಾದರೆ 'ಐ20' ಅತ್ಯುತ್ತಮ ಆಯ್ಕೆಯಾಗಿದೆ. ಇಲ್ಲಿ ಈ ಹ್ಯಾಚ್‌ಬ್ಯಾಕ್‌ನ ಆನ್-ರೋಡ್ ಬೆಲೆ, ಸಾಲ, ಬಡ್ಡಿ ದರ ಹಾಗೂ ತಿಂಗಳ ಇಎಂಐ ಆಯ್ಕೆಯ ಕುರಿತಂತೆ ಸಂಕ್ಷಿಪ್ತವಾಗಿ ವಿವರಿಸಿದ್ದೇವೆ.
ನೂತನ 'ಹ್ಯುಂಡೈ ಐ20' ಹಲವು ವಿಧದಲ್ಲಿ ಗ್ರಾಹಕರ ಖರೀದಿಗೆ ದೊರೆಯುತ್ತದೆ. ಇದರ 'ಮ್ಯಾಗ್ನಾ ಎಕ್ಸಿಕ್ಯುಟಿವ್' ರೂಪಾಂತರ, ರೂ.8.14 ಲಕ್ಷವರೆಗೆ ಆನ್-ರೋಡ್ ದರವನ್ನು ಪಡೆದಿದೆ. ರೂ.50,000 ಡೌನ್-ಪೇಮೆಂಟ್ ಕಟ್ಟಿ ಮನೆಗೆ ತಂದರೆ, ರೂ.7.54 ಲಕ್ಷವರೆಗೆ ಸಾಲವಿರುತ್ತದೆ. ಶೇಕಡ 8% ಬಡ್ಡಿ ದರದಲ್ಲಿ 5 ವರ್ಷಗಳಿಗೆ ಮಾಸಿಕ ರೂ.15,000 ವರೆಗೆ ಇಎಂಐ ಪಾವತಿಸಬೇಕು.

ಇನ್ನೊಂದು 'ಮ್ಯಾಗ್ನಾ' ರೂಪಾಂತರ, ರೂ.8.44 ಲಕ್ಷವರೆಗೆ ಆನ್-ರೋಡ್ ಬೆಲೆಯನ್ನು ಒಳಗೊಂಡಿದೆ. ರೂ.50,000 ಡೌನ್-ಪೇಮೆಂಟ್ ಪಾವತಿಸಿ ಕೊಂಡುಕೊಂಡಂತೆ, ರೂ.7.94 ಲಕ್ಷವರೆಗೆ ಸಾಲ ಬಾಕಿಯಿರುತ್ತದೆ. ಶೇಕಡ 8% ಬಡ್ಡಿ ಹಾಕಿ, 5 ವರ್ಷಕ್ಕೆ ತಿಂಗಳಿಗೆ ರೂ.16,000 ವರೆಗೆ ಇಎಂಐ ಕಟ್ಟಬೇಕು.
ಮತ್ತೊಂದು 'ಸ್ಪೋರ್ಟ್ಜ್' ರೂಪಾಂತರ ರೂ.9.16 ಲಕ್ಷವರೆಗೆ ಆನ್-ರೋಡ್ ದರವನ್ನು ಹೊಂದಿದೆ. ರೂ.50,000 ಡೌನ್-ಪೇಮೆಂಟ್ ಕಟ್ಟಿ ತೆಗದುಕೊಂಡರೆ, ರೂ.8.66 ಲಕ್ಷವರೆಗೆ ಸಾಲವಿರುತ್ತದೆ. ಶೇಕಡ 8% ಬಡ್ಡಿ ದರದಲ್ಲಿ 5 ವರ್ಷಗಳಿಗೆ ಮಾಸಿಕ ರೂ.17,500 ವರೆಗೆ ಇಎಂಐ ಪಾವತಿಸಬೇಕು.
ಇದೇ ಕಾರಿನ 'ಆಸ್ತಾ' ರೂಪಾಂತರ, ರೂ.10.18 ಲಕ್ಷವರೆಗೆ ಆನ್-ರೋಡ್ ಬೆಲೆಯನ್ನು ಪಡೆದಿದೆ. ರೂ.50,000 ಡೌನ್-ಪೇಮೆಂಟ್ ಪಾವತಿಸಿ ಖರೀದಿ ಮಾಡಿದರೆ, ರೂ.9.68 ಲಕ್ಷವರೆಗೆ ಸಾಲ ಬಾಕಿಯಿರುತ್ತದೆ. ಶೇಕಡ 8% ಬಡ್ಡಿ ಹಾಕಿ, 5 ವರ್ಷಕ್ಕೆ ತಿಂಗಳಿಗೆ ರೂ.19,500 ವರೆಗೆ ಇಎಂಐ ಕಟ್ಟಬೇಕು.
'ಹ್ಯುಂಡೈ ಐ20' ವಿಶೇಷತೆಗಳೇನು:
ಈ ಕಾರು ತುಂಬಾ ಅಚುಕಟ್ಟಾದ ಸರಳವಾದ ವಿನ್ಯಾಸವನ್ನು ಹೊಂದಿದೆ. ಅಮೆಜಾನ್ ಗ್ರೇ, ಫಿಯರಿ ರೆಡ್, ಅಟ್ಲಾಸ್ ವೈಟ್, ಟೈಫೂನ್ ಸಿಲ್ವರ್, ಸ್ಟಾರಿ ನೈಟ್, ಟೈಟಾನ್ ಗ್ರೇ ಹಾಗೂ ಅಬಿಸ್ ಬ್ಲ್ಯಾಕ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. ಜೊತೆಗಿದು 4,040 ಮಿ.ಮೀ ಉದ್ದ, 1,775 ಮಿ.ಮೀ ಅಗಲ ಹಾಗೂ 1,450 ಮಿ.ಮೀ ಎತ್ತರವಿದೆ. 170 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,580 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿದೆ.
ನೂತನ 'ಹ್ಯುಂಡೈ ಐ20' ಶಕ್ತಿಯುತವಾದ ಪವರ್‌ಟ್ರೇನ್‌ನ್ನು ಹೊಂದಿದೆ. 1.2-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 88 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 15 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 5-ಸ್ಪೀಡ್ ಮ್ಯಾನುವಲ್/ ಸಿವಿಟಿ ಗೇರ್‌ಬಾಕ್ಸ್‌ನ್ನು ಹೊಂದಿದೆ. 16 ರಿಂದ 20 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ. 173 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿದೆ.
ಇದು 5 ಆಸನಗಳನ್ನು ಒಳಗೊಂಡಿದ್ದು, ಪ್ರಯಾಣಿಯರು ಆರಾಮದಾಯಕವಾಗಿ ಸಂಚಾರ ಮಾಡಬಹುದು. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (10.25 ಇಂಚು), ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಸೆಮಿ ಡಿಜಿಟಲ್ ಡ್ರೈವರ್ ಡಿಸ್ಪ್ಲೇ, ಏರ್ ಪ್ಯೂರಿಫೈಯರ್ ಮತ್ತು ಸನ್‌ರೂಫ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಹಿಲ್ ಅಸಿಸ್ಟ್ ಕಂಟ್ರೋಲ್ ಹಾಗೂ 3-ಪಾಯಿಂಟ್ ಸೀಟ್‌ಬೆಲ್ಟ್‌ಗಳನ್ನು ಒಳಗೊಂಡಿದೆ.
ಗಮನಿಸಿ: ನಾವಿಲ್ಲಿ ಈ ಕಾರಿನ ಕೆಲವೇ ರೂಪಾಂತರಗಳ (ವೇರಿಯೆಂಟ್) ಆನ್-ರೋಡ್ ಬೆಲೆ ಹಾಗೂ ಇಎಂಐ ಆಯ್ಕೆಯ ಬಗ್ಗೆ ಮಾತ್ರ ತಿಳಿಸಿಕೊಟ್ಟಿದ್ದೇವೆ. ಹೆಚ್ಚಿನ ಮಾಹಿತಿಗೆ ಸಮೀಪದ ಶೋರೂಂಗೆ ಭೇಟಿ ನೀಡಿರಿ.


Click it and Unblock the Notifications








