ಈ ಜನಪ್ರಿಯ ಹ್ಯುಂಡೈ SUVಗೆ 10 ಲಕ್ಷ ರಿಯಾಯಿತಿ ಘೋಷಣೆ.. ಈಗ ಬಿಟ್ರೆ ಮತ್ತೆ ಸಿಗಲ್ಲ!
ಹ್ಯುಂಡೈ ಐಯೋನಿಕ್ 5 (Hyundai IONIQ 5) ಪ್ರೀಮಿಯಂ ಎಲೆಕ್ಟ್ರಿಕ್ ಎಸ್‌ಯುವಿ ಎಂದೇ ಹೆಸರುವಾಗಿದೆ. ಆದರೂ ಈ ಕಾರಿನ ಮಾರಾಟ ಸಂಖ್ಯೆ ಮಾತ್ರ ದಿನದಿಂದ ದಿನಕ್ಕೆ ಕುಸಿತವಾಗಿದೆ. ಈ ಅಕ್ಟೋಬರ್ ತಿಂಗಳಲ್ಲೂ ಅದು ಮುಂದುವರಿದಿದೆ. ಒಟ್ಟು 6 ಯುನಿಟ್‌ಗಳನ್ನು ಮಾರಾಟ ಮಾಡಲಾಗಿದೆ. 2024ರ ಇದೇ ಅವಧಿಯಲ್ಲಿ 32 ಯುನಿಟ್‌ಗಳನ್ನು ಮಾರಲಾಗಿತ್ತು. ಈ ಅಂಕಿ ಸಂಖ್ಯೆಯನ್ನು ಲೆಕ್ಕ ಹಾಕಿದಾಗ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ -81.25 ಕುಸಿತವಾಗಿದೆ.
ಸದ್ಯ, ವರ್ಷಾಂತ್ಯ ಸಮೀಪಿಸುತ್ತಿದೆ. ಇದೇ 'ಐಯೋನಿಕ್ 5' ಕಾರಿನ ಮಾರಾಟ ಪ್ರಮಾಣವನ್ನು ಹೆಚ್ಚಿಸಲು ಕಂಪನಿಯು ಮುಂದಾಗಿದೆ. ಅದಕ್ಕಾಗಿ ದೊಡ್ಡ ಮಟ್ಟದಲ್ಲಿ ರಿಯಾಯಿತಿ ಘೋಷಣೆ ಮಾಡಿದೆ. ಈ ಬಗ್ಗೆ ವಿವಿಧ ಮಾಧ್ಯಮಗಳು ವರದಿ ಮಾಡಿವೆ. 2024ರಲ್ಲಿ ಉತ್ಪಾದಿಸಲಾದ ಮಾಡೆಲ್, ರೂ.10 ಲಕ್ಷವರೆಗೆ ಹಣಕಾಸಿನ ಪ್ರಯೋಜನ ಹೊಂದಿದೆ. ಅದೇ ರೀತಿಯಲ್ಲಿ 2025ರಲ್ಲಿ ತಯಾರಿಸಿದ ಮಾಡೆಲ್, ರೂ.2 ಲಕ್ಷವರೆಗೆ ರಿಯಾಯಿತಿ ಪಡೆದಿದೆ.

ನೂತನ 'ಹ್ಯುಂಡೈ ಐಯೋನಿಕ್ 5' ದುಬಾರಿ ಬೆಲೆಯನ್ನು ಒಳಗೊಂಡಿದೆ. ರೂ.46.05 ಲಕ್ಷ ಎಕ್ಸ್-ಶೋರೂಂ - ನವದೆಹಲಿ) ದರದಲ್ಲಿ ಗ್ರಾಹಕರ ಖರೀದಿಗೆ ಲಭ್ಯವಿದೆ. ಈಗ ಭಾರೀ ಹಣಕಾಸಿನ ಪ್ರಯೋಜನ ಒಳಗೊಂಡಿರುವ ಹಿನ್ನೆಲೆ, ರೂ.35 ಲಕ್ಷದಿಂದ ರೂ.36 ಲಕ್ಷ ಬೆಲೆಗೆ ಸಿಗಲಿದೆ.
ಈ ಕಾರು ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಹೊಂದಿದ್ದು, ನೋಡುಗರ ಕಣ್ಣು ಕುಕ್ಕುವಂತಿದೆ. ಉತ್ತಮವಾದ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು, ಫ್ಲಶ್-ಫಿಟ್ಟಿಂಗ್ ಡೋರ್ ಹ್ಯಾಂಡಲ್‌ಗಳು ಹಾಗೂ ಡುಯಲ್-ಟೋನ್ ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ. ಅಬಿಸ್ ಬ್ಲ್ಯಾಕ್, ಲುಸಿಡ್ ಬ್ಲೂ, ಸೈಬರ್ ಗ್ರೇ, ಅಟ್ಲಾಸ್ ವೈಟ್, ಅಟ್ಲಾಸ್ ವೈಟ್ ಮ್ಯಾಟ್, ಗ್ರಾವಿಟಿ ಗೋಲ್ಡ್ ಮ್ಯಾಟ್, ಇಕಾಟ್ರಾನಿಕ್ ಗ್ರೇ ಮ್ಯಾಟ್ ಮತ್ತು ಕಾಸ್ಮಿಕ್ ಬ್ಲೂ ಪರ್ಲ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.

ಇದು ಹೆಚ್ಚು ವಿಶಾಲ ಗಾತ್ರದಲ್ಲಿದೆ. 4,635 ಮಿ.ಮೀ ಉದ್ದ, 1,890 ಮಿ.ಮೀ ಅಗಲ ಹಾಗೂ 1,625 ಮಿ.ಮೀ ಎತ್ತರವಿದೆ. 163 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಮತ್ತು 3,000 ಮಿ.ಮೀ ವೀಲ್‌ಬೇಸ್‌ನ್ನು ಹೊಂದಿದೆ. ಸರಿ ಸುಮಾರು 2,235 ಕೆಜಿ ತೂಕವಿದೆ.
ಹೊಸ 'ಹ್ಯುಂಡೈ ಐಯೋನಿಕ್' ಕಾರು 5 ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ. ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು. ವಾರಾಂತ್ಯ ಹಾಗೂ ರಜಾ ದಿನಗಳಲ್ಲಿ ದೂರದ ಊರುಗಳಿಗೆ ಪ್ರವಾಸಕ್ಕೆ ತೆರಳುವಾಗ ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 527 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಹೊಂದಿದೆ.

ಈ ಕಾರು ಬಲಿಷ್ಠವಾದ ಪವರ್‌ಟ್ರೇನ್‌ನ್ನು ಒಳಗೊಂಡಿದೆ. 72.6 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಪಡೆದಿದೆ. ಭರ್ತಿ ಚಾರ್ಜ್‌ನಲ್ಲಿ 631 ಕಿ.ಮೀವರೆಗೆ ರೇಂಜ್ (ಮೈಲೇಜ್) ಕೊಡುತ್ತದೆ. ಇದರಲ್ಲಿ ಬಳಕೆ ಮಾಡಿರುವ ಎಲೆಕ್ಟ್ರಿಕ್ ಮೋಟಾರ್, 217 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) & 350 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 185 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಕೇವಲ 8.5 ಸೆಕೆಂಡುಗಳಲ್ಲಿ 0 ರಿಂದ 60 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ.
ಇದರ ಕ್ಯಾಬಿನ್ ವಿನ್ಯಾಸವು ಉತ್ತಮವಾಗಿದೆ. 12.3 ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಮ್ & ಡ್ರೈವರ್ ಡಿಸ್‌ಪ್ಲೇಗಳು, ವೈರ್‌ಲೆಸ್ ಫೋನ್ ಚಾರ್ಜರ್, ಪನೋರಮಿಕ್ ಸನ್‌ರೂಫ್, ಆಂಬಿಯೆಂಟ್ ಲೈಟಿಂಗ್ ಹಾಗೂ ಡುಯಲ್ ಜೋನ್ ಕ್ಲೇಮೇಟ್ ಕಂಟ್ರೋಲ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಮತ್ತು 360 ಡಿಗ್ರಿ ಕ್ಯಾಮೆರಾವನ್ನು ತನ್ನದಾಗಿಸಿಕೊಂಡಿದೆ.


Click it and Unblock the Notifications








