ವರವಾದ ಜಿಎಸ್‌ಟಿ, ಹ್ಯುಂಡೈ ಕಾರುಗಳು ಬಿಸಿ ಜಿಲೇಬಿಯಂತೆ ಸೇಲ್ಸ್.. ಕ್ರೆಟಾ & ವೆನ್ಯೂ SUVಗಳಿಗಾಗಿ ಮುಗಿಬಿದ್ದ ಜನರು!
ಹುಂಡೈ ಮೋಟಾರ್ ಇಂಡಿಯಾ ಲಿಮಿಟೆಡ್ (Hyundai Motor India Limited), ಪ್ರಮುಖ ಕಾರು ತಯಾರಕ ಕಂಪನಿಯಾಗಿದೆ. ಈಗಾಗಲೇ ಪರಿಷ್ಕೃತ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ದರಗಳು ಜಾರಿಗೊಂಡಿದೆ. ಕಂಪನಿಯ ಕಾರುಗಳಿಗೆ ವಿಪರೀತ ಬೇಡಿಕೆ ಸೃಷ್ಟಿಯಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲಿ ಭಾರೀ ಸಂಖ್ಯೆಯಲ್ಲಿ ಮಾರಾಟಗೊಂಡಿವೆ. ಸರಿ ಸುಮಾರು 70,347 ಯುನಿಟ್‌ಗಳನ್ನು ಗ್ರಾಹಕರಿಗೆ ವಿತರಿಸಲಾಗಿದೆ. 2024ರ ಇದೇ ಅವಧಿಯಲ್ಲಿ 64,201 ಯುನಿಟ್‌ಗಳನ್ನು ಮಾರಲಾಗಿತ್ತು. ಈ ಅಂಕಿಸಂಖ್ಯೆಯನ್ನು ವಿಶ್ಲೇಷಣೆ ಮಾಡಿದಾಗ ಮಾರಾಟ ಪ್ರಮಾಣವು ವರ್ಷದಿಂದ ಶೇಕಡ 10% ಪ್ರಗತಿಯಾಗಿದೆ.
ಈ ಸೆಪ್ಟೆಂಬರ್‌ನ ಒಟ್ಟು ಮಾರಾಟದಲ್ಲಿ ದೇಶೀಯವಾಗಿ 51,547 ಯುನಿಟ್ ಹಾಗೂ ವಿದೇಶಕ್ಕೆ 18,800 ಯುನಿಟ್‌ಗಳನ್ನು ರಫ್ತು ಮಾಡಲಾಗಿದೆ. ವಿಶೇಷವಾಗಿ 'ಕ್ರೆಟಾ' ಕಾರನ್ನು ಗ್ರಾಹಕರು ಮುಗಿಬಿದ್ದು ಖರೀದಿ ಮಾಡಿದ್ದು, 18,861 ಯುನಿಟ್‌ಗಳನ್ನು ಮಾರಾಟಗೊಳಿಸಲಾಗಿದೆ. ಅದೇ ರೀತಿಯಲ್ಲಿ 'ವೆನ್ಯೂ' ಕಾರಿನ 11,484 ಯುನಿಟ್‌ಗಳನ್ನು ಮಾರಾಟ ಮಾಡಲಾಗಿದೆ.

ಹ್ಯುಂಡೈ ಕ್ರೆಟಾ (Hyundai Creta) ವಿಶೇಷತೆಗಳೇನು:
ಇದೊಂದು ಎಸ್‌ಯುವಿಯಾಗಿದೆ. ಕನಿಷ್ಠ ರೂ.10.73 ಲಕ್ಷ ಹಾಗೂ ಗರಿಷ್ಠ ರೂ.20.50 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಹೊಂದಿದ್ದು, ನೋಡಗರ ಕಣ್ಣು ಕುಕ್ಕುವಂತಿದೆ. ಅಟ್ಲಾಸ್ ವೈಟ್, ಅಬಿಸ್ ಬ್ಲಾಕ್, ಟೈಟಾನ್ ಗ್ರೇ & ರೇಂಜರ್ ಖಾಕಿ ಒಳಗೊಂಡಂತೆ ಹಲವು ಬಣ್ಣಗಳೊಂದಿಗೂ ಸಿಗುತ್ತದೆ. 190 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2610 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿದೆ.
ಈ ಕಾರು ಹೆಚ್ಚು ಶಕ್ತಿಯುತವಾದ ಪವರ್‌ಟ್ರೇನ್‌ನ್ನು ಹೊಂದಿದೆ. 1.5-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್, 1.5-ಲೀ. ಟರ್ಬೊ ಪೆಟ್ರೋಲ್ ಹಾಗೂ 1.5-ಲೀ. ಡೀಸೆಲ್ ಎಂಜಿನ್‌ನ್ನು ಪಡೆದಿದೆ. 17 ರಿಂದ 21.8 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ. 50 ಲೀಟರ್‌ನಷ್ಟು ಫ್ಯುಯೆಲ್ ಟ್ಯಾಂಕ್ನ್ನು ತನ್ನದಾಗಿಸಿಕೊಂಡಿದೆ. 195 ಕೆಎಂಪಿಹೆಚ್ ಸ್ಪೀಡ್‌ನ್ನು ಒಳಗೊಂಡಿದೆ. ಕೇವಲ 13.36 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ.

ನೂತನ ಕ್ರೆಟಾ 5 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ. ಜಾಸ್ತಿ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 433 ಲೀಟರ್‌ನಷ್ಟು ಬೂಟ್ ಸ್ಪೇನ್‌ನ್ನು ಒಳಗೊಂಡಿದೆ. 10.25 ಇಂಚಿನ ಡುಯಲ್ ಡಿಸ್‌ಪ್ಲೇ (ಇನ್ಫೋಟೈನ್‌ಮೆಂಟ್ ಸಿಸ್ಟಮ್ & ಇನ್ಸ್ಟ್ರುಮೆಂಟ್ ಕ್ಲಸ್ಟರ್), ಸನ್‌ರೂಫ್ & ವೈರ್‌ಲೆಸ್ ಫೋನ್ ಚಾರ್ಜಿಂಗ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಹಾಗೂ ಹಿಲ್ ಸ್ಟಾರ್ಟ್ ಅಸಿಸ್ಟ್ ಕಂಟ್ರೋಲ್‌ನ್ನು ತನ್ನದಾಗಿಸಿಕೊಂಡಿದೆ.
ಹ್ಯುಂಡೈ ಕ್ರೆಟಾ ಎಲೆಕ್ಟ್ರಿಕ್ (Hyundai Creta Electric) ಕೂಡ ಸಿಗುತ್ತದೆ.
ಈ ಎಲೆಕ್ಟ್ರಿಕ್ ಎಸ್‌ಯುವಿ ರೂ.18.02 ಲಕ್ಷದಿಂದ ರೂ.24.55 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಪಡೆದಿದೆ. 42 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಮತ್ತು 51.4 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಒಳಗೊಂಡಿದೆ. ಸಂಪೂರ್ಣ ಚಾರ್ಜ್‌ನಲ್ಲಿ 390 ರಿಂದ 473 ಕಿಲೋಮೀಟರ್ ರೇಂಜ್ (ಮೈಲೇಜ್) ಕೊಡುತ್ತದೆ
ಹ್ಯುಂಡೈ ವೆನ್ಯೂ (Hyundai Venue) ಹೇಗಿದೆ:
ಇದು ಎಸ್‌ಯುವಿಯಾಗಿದೆ. ಕನಿಷ್ಠ ರೂ.7.26 ಲಕ್ಷ ಮತ್ತು ರೂ.12.46 ಲಕ್ಷ (ಎಕ್ಸ್-ಶೋರೂಂ) ದರವನ್ನು ಹೊಂದಿದೆ. ಅತ್ಯಾಧುನಿಕವಾದ ವಿನ್ಯಾಸವನ್ನು ಹೊಂದಿದೆ. ಉತ್ತಮವಾದ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಕನೆಕ್ಟ್ಡ್ ಎಲ್ಇಡಿ ಟೈಲ್ ಲ್ಯಾಂಪ್‌ಗಳು ಹಾಗೂ ಡುಯಲ್ ಟೋನ್ ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ. ಅಟ್ಲಾಸ್ ವೈಟ್, ಅಬಿಸ್ ಬ್ಲ್ಯಾಕ್ ಪರ್ಲ್, ಟೈಟಾನ್ ಗ್ರೇ ಮತ್ತು ಲೈಟ್ ಗ್ರೇ ಎಂಬ ಬಣ್ಣಗಳೊಂದಿಗೂ ಲಭ್ಯವಿದೆ. 190 ಎಂಎಂ ಗ್ರೌಂಡ್ ಕ್ಲಿಯರೆನ್ಸ್ & 2520 ಎಂಎಂ ವೀಲ್‌ಬೇಸ್‌ನ್ನು ಪಡೆದಿದೆ.
ಇದು ಬಲಿಷ್ಠವಾದ ಪವರ್‌ಟ್ರೇನ್‌ನ್ನು ಒಳಗೊಂಡಿದೆ. 1.2-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್, 1-ಲೀ. ಟರ್ಬೊ ಪೆಟ್ರೋಲ್ ಮತ್ತು 1.5-ಲೀ. ಡಿಸೇಲ್ ಎಂಜಿನ್‌ನ್ನು ಹೊಂದಿದೆ. 17 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. 45 ಲೀಟರ್ ಸಾಮರ್ಥ್ಯದ ಫ್ಯುಯೆಲ್ ಟ್ಯಾಂಕ್ನ್ನು ತನ್ನದಾಗಿಸಿಕೊಂಡಿದೆ. 165 ಕೆಎಂಪಿಎಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ. ಕೇವಲ 12.87 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ.
ಹೊಸ ವೆನ್ಯೂ 5 ಆಸನಗಳನ್ನು ಹೊಂದಿದೆ. ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 350 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ. ಪ್ರಯಾಣಿಕರ ರಕ್ಷಣೆಗಾಗಿ 8 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಸೆಮಿ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಆಟೋಮೆಟಿಕ್ ಎಸಿ ಮತ್ತು ಸನ್‌ರೂಫ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಪ್ರಯಾಣಿಕರ ರಕ್ಷಣೆಗಾಗಿ 6 ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಮತ್ತು ರೇರ್ ವ್ಯೂ ಕ್ಯಾಮೆರಾವನ್ನು ತನ್ನದಾಗಿಸಿಕೊಂಡಿದೆ.


Click it and Unblock the Notifications