ಕಡಿಮೆ ಬೆಲೆ, ಲಕ್ಷುರಿ ಫೀಚರ್ಸ್‌ನ ಅತ್ಯುತ್ತಮ ಹ್ಯುಂಡೈ ಎಸ್‍ಯುವಿಯ ಮಾರಾಟದಲ್ಲಿ ಕುಸಿತ: ಕಾರಣ ಗೊತ್ತಾ?
ಜನಪ್ರಿಯ ಹ್ಯುಂಡೈ ಕಂಪನಿಯು ತನ್ನ ಮೊದಲ ಕಾಂಪ್ಯಾಕ್ಟ್ ಎಸ್‍ಯುವಿಯಾಗಿ ಬಿಡುಗಡೆಗೊಳಿಸಿದ ವೆನ್ಯೂ ಮಾದರಿಯು ಭಾರತದಲ್ಲಿ ಬಿಡುಗಡೆಯಾದ ಆರಂಭದಲ್ಲಿ ಹೊಸ ಸಂಚಲನವನ್ನು ಸೃಷ್ಟಿಸಿತು. ಈ ಜನಪ್ರಿಯ ಹ್ಯುಂಡೈ ವೆನ್ಯೂ (Hyundai Venue) ಎಸ್‍ಯುವಿಯು ಹಲವು ರೂಪಾಂತರಗಳು ಮತ್ತು 3 ಎಂಜಿನ್ ಆಯ್ಕೆಗಳಲ್ಲಿ ಲಭ್ಯವಿದೆ. ಅಲ್ಲದೇ ಇದರ ಆಕರ್ಷಕ ವಿನ್ಯಾಸ ಮತ್ತು ಅತ್ಯಾಧುನಿಕ ಫಿಚರ್ಸ್ ಗಳನ್ನು ಹೊಂದಿವೆ. ಈ ವರ್ಷದ ಡಿಸೆಂಬರ್ ತಿಂಗಳಿನಲ್ಲಿ ಹ್ಯುಂಡೈ ವೆನ್ಯೂ ಮಾದರಿಯ ಮಾರಾಟದ ವರದಿ ಬಹಿರಂಗವಾಗಿದೆ.
ಕಳೆದ ತಿಂಗಳು ಈ ಜನಪ್ರಿಯ ಹ್ಯುಂಡೈ ವೆನ್ಯೂ ಎಸ್‍ಯುವಿಯ ಮಾರಾಟದಲ್ಲಿ ಮತ್ತೆ ಕುಸಿತವನ್ನು ಕಂಡಿದೆ. 2024ರ ಡಿಸೆಂಬರ್ ತಿಂಗಳಿನಲ್ಲಿ ಹ್ಯುಂಡೈ ವೆನ್ಯೂ ಮಾದರಿಯ 10,265 ಯುನಿಟ್ ಗಳು ಮಾರಾಟವಾಗಿವೆ. ಆದರೆ ಕಳೆದ ವರ್ಷದ ಡಿಸೆಂಬರ್ ತಿಂಗಳಿನಲ್ಲಿ ವೆನ್ಯೂ ಮಾದರಿಯ 10,383 ಯುನಿಟ್ ಗಳು ಮಾರಾಟವಾಗಿತ್ತು. ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಶೇ.1 ರಷ್ಟು ಕುಸಿತವನ್ನು ಕಂಡಿದೆ.

ವೆನ್ಯೂ ಎಸ್‍ಯುವಿಯಲ್ಲಿ ಎಲ್ಇಡಿ ಟೈಲ್‌ಲೈಲ್, ಸಿಲ್ವರ್ ಫಾಕ್ಸ್ ಬ್ಯಾಷ್ ಪ್ಲೇಟ್ ಜೊತೆಗೆ ಸ್ಕೂಪ್-ಔಟ್‌ನೊಂದಿಗೆ ಹಿಂಭಾಗದ ಬಂಪರ್ ಮತ್ತು ನಂಬರ್ ಪ್ಲೇಟ್ ವಿಭಾಗವನ್ನು ಬ್ಲ್ಯಾಕ್ ಬಣ್ಣದ ಪ್ಲಾಸ್ಟಿಕ್‌ನೊಂದಿಗೆ ಜೋಡಿಸಲಾಗಿದೆ. ಈ ವೆನ್ಯೂ ಎಸ್‍ಯುವಿಯಲ್ಲಿ ಆಂಡ್ರಾಯ್ಡ್ ಆಟೋ ಮತ್ತು ಆ್ಯಪಲ್ ಕಾರ್ ಪ್ಲೇ ಗೆ ಬೆಂಬಲ ನೀಡುವ 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ ಜೊತೆಗೆ ಡಿಜಿಟಲ್ ಡ್ರೈವರ್ ಸೈಡ್ ಡಿಸ್ ಪ್ಲೇ ಅನ್ನು ನೀಡಲಾಗಿದೆ.
ಇದು ಈ ಹ್ಯುಂಡೈ ವೆನ್ಯೂ ಕೆಲವು ಬದಲಾವಣೆಗಳೊಂದಿಗೆ ಹೆಚ್ಚು ಪವರ್ ಫುಲ್ ಆದ ಡೀಸೆಲ್ ಎಂಜಿನ್ ಸೇರಿದಂತೆ ಕೆಲವು ನವೀಕರಣಗಳೊಂದಿಗೆ ಮಾರುಕಟ್ಟೆಗೆ ಲಗ್ಗೆ ಇಟ್ಟಿತು. ಇನ್ನು ಹ್ಯುಂಡೈ ವೆನ್ಯೂ ಎಸ್‍ಯುವಿಯಲ್ಲಿ 1.5-ಲೀಟರ್ 4-ಸಿಲಿಂಡರ್ ಟರ್ಬೊ ಡೀಸೆಲ್ ಎಂಜಿನ್ ಅನ್ನು ನೀಡಲಾಗಿದೆ. ಇದು ಕ್ರೆಟಾದಂತೆಯೇ ಪವರ್ ಮತ್ತು ಟಾರ್ಕ್ ಅನ್ನು ಉತ್ಪಾದಿಸುವಂತೆ ಅಪ್ಡೇಟ್ ಮಾಡಲಾಗಿದೆ.

ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯ ಬದಲಿಗೆ, ವೆನ್ಯೂ ಡೀಸೆಲ್ ಈಗ 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನೊಂದಿಗೆ ಲಭ್ಯವಿದೆ. ಈ ಹ್ಯುಂಡೈ ಎಸ್‍ಯುವಿಯ ಎಂಜಿನ್ 113.5 ಬಿಹೆಚ್‍ಪಿ ಪವರ್ ಮತ್ತು 250 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಇತರ ಎಂಜಿನ್ ಆಯ್ಕೆಗಳಲ್ಲಿ 1.2-ಲೀಟರ್ ನ್ಯಾಚುರಲ್-ಆಸ್ಪೈರಡ್ ಪೆಟ್ರೋಲ್ ಮತ್ತು 1.0-ಲೀಟರ್ ಟರ್ಬೊ ಪೆಟ್ರೋಲ್ ಸೇರಿವೆ.
ಇದರಲ್ಲಿ 1.2-ಲೀಟರ್ ಎಂಜಿನ್ 83 ಬಿಹೆಚ್‍ಪಿ ಪವರ್ ಮತ್ತು 114 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಇನ್ನು 1.0-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ 120 ಬಿಹೆಚ್‍ಪಿ ಪವರ್ ಮತ್ತು 172 ಎನ್ಎಂ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಇನ್ನು 1.2 ಲೀಟರ್ ಎಂಜಿನ್ ನೊಂದಿಗೆ 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನೊಂದಿಗೆ ಬರುತ್ತದೆ.

ಆದರೆ 1.0 ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಅನ್ನು 6-ಸ್ಪೀಡ್ iMT ಅಥವಾ 7-ಸ್ಪೀಡ್ DCT ಯೊಂದಿಗೆ ನೀಡಲಾಗುತ್ತದೆ. 6-ಸ್ಪೀಡ್ ಮ್ಯಾನುವಲ್ ಮತ್ತು ಆಟೋಮ್ಯಾಟಿಕ್ ಗೇರ್ ಬಾಕ್ಸ್ ಆಯ್ಕೆಗಳೊಂದಿಗೆ ಲಭ್ಯವಿರುವ ಹುಂಡೈ ಕ್ರೆಟಾ ಡೀಸೆಲ್‌ಗಿಂತ ಭಿನ್ನವಾಗಿದೆ. ಈ ಎಸ್‌ಯುವಿಯ ಡೀಸೆಲ್ ರೂಪಾಂತರವು ಪ್ರತ್ಯೇಕವಾಗಿ 6-ಸ್ಪೀಡ್ ಮ್ಯಾನ್ಯುವಲ್ ಗೇರ್ ಬಾಕ್ಸ್ ಆಯ್ಕೆಯನ್ನು ನೀಡಲಾಗಿದೆ.
ಹ್ಯುಂಡೈ ವೆನ್ಯೂ ಎಸ್‍ಯುವಿಯಲ್ಲಿ ಎಲ್ಇಡಿ ಟೈಲ್‌ಲೈಲ್, ಸಿಲ್ವರ್ ಫಾಕ್ಸ್ ಬ್ಯಾಷ್ ಪ್ಲೇಟ್ ಜೊತೆಗೆ ಸ್ಕೂಪ್-ಔಟ್‌ನೊಂದಿಗೆ ಹಿಂಭಾಗದ ಬಂಪರ್ ಮತ್ತು ನಂಬರ್ ಪ್ಲೇಟ್ ವಿಭಾಗವನ್ನು ಬ್ಲ್ಯಾಕ್ ಬಣ್ಣದ ಪ್ಲಾಸ್ಟಿಕ್‌ನೊಂದಿಗೆ ಜೋಡಿಸಲಾಗಿದೆ. ವೆನ್ಯೂ ಎಸ್‍ಯುವಿಯಲ್ಲಿ ಆಂಡ್ರಾಯ್ಡ್ ಆಟೋ ಮತ್ತು ಆ್ಯಪಲ್ ಕಾರ್ ಪ್ಲೇ ಗೆ ಬೆಂಬಲ ನೀಡುವ 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ ಜೊತೆಗೆ ಡಿಜಿಟಲ್ ಡ್ರೈವರ್ ಸೈಡ್ ಡಿಸ್ ಪ್ಲೇ ಅನ್ನು ನೀಡಲಾಗಿದೆ.
ವೆನ್ಯೂ ಎಸ್‍ಯುವಿಯಲ್ಲಿ ಎಲ್ಇಡಿ ಟೈಲ್‌ಲೈಲ್, ಸಿಲ್ವರ್ ಫಾಕ್ಸ್ ಬ್ಯಾಷ್ ಪ್ಲೇಟ್ ಜೊತೆಗೆ ಸ್ಕೂಪ್-ಔಟ್‌ನೊಂದಿಗೆ ಹಿಂಭಾಗದ ಬಂಪರ್ ಮತ್ತು ನಂಬರ್ ಪ್ಲೇಟ್ ವಿಭಾಗವನ್ನು ಬ್ಲ್ಯಾಕ್ ಬಣ್ಣದ ಪ್ಲಾಸ್ಟಿಕ್‌ನೊಂದಿಗೆ ಜೋಡಿಸಲಾಗಿದೆ. ವೆನ್ಯೂ ಎಸ್‍ಯುವಿಯಲ್ಲಿ ಆಂಡ್ರಾಯ್ಡ್ ಆಟೋ ಮತ್ತು ಆ್ಯಪಲ್ ಕಾರ್ ಪ್ಲೇ ಗೆ ಬೆಂಬಲ ನೀಡುವ 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ ಜೊತೆಗೆ ಡಿಜಿಟಲ್ ಡ್ರೈವರ್ ಸೈಡ್ ಡಿಸ್ ಪ್ಲೇ ಅನ್ನು ಹೊಂದಿದೆ.


Click it and Unblock the Notifications








