ಸನ್‌ರೂಫ್.. 7.94 ಲಕ್ಷ.. 22.7 ಕಿ.ಮೀ ಮೈಲೇಜ್, 5-ಸೀಟರ್.. ಈ ಜನಪ್ರಿಯ ಕಾರಿಗೆ ಮನೋತ ಗ್ರಾಹಕರು!

ಹ್ಯುಂಡೈ ವೆನ್ಯೂ (Hyundai Venue) ಪ್ರಖ್ಯಾತ ಎಸ್‌ಯುವಿಯಾಗಿದೆ. ಇದು ಅತ್ಯಾಧುನಿಕವಾಗಿರುವ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿದ್ದು, ಉತ್ತಮ ಸಂಖ್ಯೆಯಲ್ಲಿಯೂ ಮಾರಾಟವಾಗುತ್ತಿದೆ. ಗ್ರಾಹಕರು ಕೂಡ ಮುಗಿಬಿದ್ದು ಖರೀದಿ ಮಾಡುತ್ತಿದ್ದಾರೆ. ಇತ್ತೀಚೆಗೆ, ಈ ಫೆಬ್ರವರಿ ತಿಂಗಳ ಪ್ರಮುಖ ಎಸ್‌ಯುವಿಗಳ ಮಾರಾಟದ ಅಂಕಿಅಂಶಗಳ ವರದಿಯನ್ನು ಪ್ರಕಟಿಸಲಾಗಿದ್ದು, ಈ 'ಹ್ಯುಂಡೈ ವೆನ್ಯೂ' ಅಧಿಕ ಸಂಖ್ಯೆಯಲ್ಲಿ ಮಾರಾಟವಾಗುವುದರೊಂದಿಗೆ ಎಂಟನೇ ಸ್ಥಾನದಲ್ಲಿದೆ. ಬನ್ನಿ.. ಆ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಿಳಿಯೋಣ.

ಕಳೆದ ತಿಂಗಳು (ಫೆಬ್ರವರಿ - 2025) ಹ್ಯುಂಡೈ ಮೋಟಾರ್ ಇಂಡಿಯಾ, ಬರೋಬ್ಬರಿ 10,125 ಯುನಿಟ್ ವೆನ್ಯೂ ಎಸ್‌ಯುವಿಗಳನ್ನು ಮಾರಾಟ ಮಾಡಿದೆ. 2024ರ ಇದೇ ಅವಧಿಯಲ್ಲಿ 8,933 ಯುನಿಟ್‌ಗಳನ್ನು ಮಾರಲಾಗಿತ್ತು. ಅದಕ್ಕೆ ಹೋಲಿಕೆ ಮಾಡಿದರೆ ವರ್ಷದಿಂದ ವರ್ಷಕ್ಕೆ (YoY) ಶೇಕಡ 13% ಪ್ರಗತಿಯಾಗಿದೆ. ಈ ಜನವರಿಯಲ್ಲಿಯೂ 11,106 ವೆನ್ಯೂ ಕಾರುಗಳನ್ನು ಮಾರಾಟ ಮಾಡಲಾಗಿತ್ತು.

Hyundai Venue Suv February 2025 Sales Details

2024ರ ದ್ವಿತೀಯಾರ್ದಲ್ಲಿಯೂ ಈ ಎಸ್‌ಯುವಿಗಳು ಭಾರೀ ಸಂಖ್ಯೆಯಲ್ಲಿ ಮಾರಾಟವಾಗಿದ್ದವು. ಡಿಸೆಂಬರ್‌ನಲ್ಲಿ 10,265 ಯುನಿಟ್, ನವೆಂಬರ್‌ನಲ್ಲಿ 9,754 ಯುನಿಟ್, ಅಕ್ಟೋಬರ್‌ನಲ್ಲಿ 10,901 ಮತ್ತು ಸೆಪ್ಟೆಂಬರ್‌ ತಿಂಗಳಲ್ಲಿ 10,259 ಯುನಿಟ್‌ಗಳನ್ನು ಮಾರಾಟಗೊಳಿಸಲಾಗಿತ್ತು. ಸದ್ಯ ದೇಶೀಯವಾಗಿ ಖರೀದಿಗೆ ದೊರೆಯುವ ಹೊಚ್ಚ ಹೊಸ 'ಹ್ಯುಂಡೈ ವೆನ್ಯೂ' ಕಾರು ಕನಿಷ್ಠ ರೂ.7.94 ಲಕ್ಷ ಹಾಗೂ ಗರಿಷ್ಠ ರೂ.13.62 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ.

ಈ ಹ್ಯುಂಡೈ ವೆನ್ಯೂ ಎಸ್‌ಯುವಿಯು ಇ, ಇ ಪ್ಲಸ್, ಎಕ್ಸಿಕ್ಯೂಟಿವ್, ಎಸ್ ಮತ್ತು ಎಸ್ ಪ್ಲಸ್ ಒಳಗೊಂಡಂತೆ ಹಲವು ರೂಪಾಂತರಗಳನ್ನು (ವೇರಿಯೆಂಟ್) ಪಡೆದಿದೆ. ನೂತನ ವೆನ್ಯೂ ಕಾರು ಹೊರಭಾಗದಲ್ಲಿ ಹೆಚ್ಚು ಅತ್ಯುತ್ತಮವಾದ ವಿನ್ಯಾಸವನ್ನು ಹೊಂದಿದೆ. ಟೈಟಾನ್ ಗ್ರೇ, ಡೆನಿಮ್ ಬ್ಲೂ, ಟೈಫೂನ್ ಸಿಲ್ವರ್, ಫಿಯರಿ ರೆಡ್, ಅಟ್ಲಾಸ್ ವೈಟ್ ಮತ್ತು ಅಬಿಸ್ ಬ್ಲ್ಯಾಕ್ ಸೇರಿದಂತೆ ವಿವಿಧ ಬಣ್ಣಗಳ ಆಯ್ಕೆಯಲ್ಲಿಯೂ ದೊರೆಯುತ್ತದೆ.

Hyundai Venue Suv February 2025 Sales Details

ಹೊಸ ಹ್ಯುಂಡೈ ವೆನ್ಯೂ ಎಸ್‌ಯುವಿ ಮೂರು ಪವರ್‌ಟ್ರೇನ್‌ನೊಂದಿಗೆ ಸಿಗುತ್ತದೆ. ಇದು 1.2 ಲೀ. ಪೆಟ್ರೋಲ್, 1-ಲೀ. ಟರ್ಬೊ ಪೆಟ್ರೋಲ್ & 1.5-ಲೀ. ಡೀಸೆಲ್ ಎಂಜಿನ್ ಆಯ್ಕೆಯನ್ನು ಪಡೆದಿದೆ. 5-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಮ್ಯಾನುವಲ್ ಮತ್ತು 7-ಸ್ಪೀಡ್ ಡಿಸಿಟಿ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. ಜೊತೆಗೆ ಸರಿ ಸುಮಾರು 17 ರಿಂದ 22.7 ಕೆಎಂಪಿಎಲ್‌ವರೆಗೂ ಮೈಲೇಜ್ ಕೊಡುತ್ತದೆ.

ಇದರಲ್ಲಿ 5 ಜನರು ಓಡಾಟ ನಡೆಸಬಹುದು. ಹೆಚ್ಚಿನ ಲಗೇಜ್ ಸಾಗಿಲು 350 ಲೀ. ಬೂಟ್ ಸ್ಪೇಸ್‌ನ್ನು ಹೊಂದಿದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (8-ಇಂಚು), ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ವೆಂಟಿಲೇಟೆಡ್ ಫ್ರಂಟ್ ಸೀಟ್, ವೈರ್‌ಲೆಸ್ ಫೋನ್ ಚಾರ್ಜಿಂಗ್, ಏರ್ ಪ್ಯೂರಿಫೈಯರ್, ಸನ್‌ರೂಫ್, ಪುಶ್-ಬಟನ್ ಸ್ಟಾರ್ಟ್‌ ಮತ್ತು ಕೀಲೆಸ್ ಎಂಟ್ರಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.

Hyundai Venue Suv February 2025 Sales Details

ಈ ಕಾರು ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ಒದಗಿಸುತ್ತದೆ. ಸುರಕ್ಷತೆಯ ದೃಷ್ಟಿಯಿಂದ 6-ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಎಬಿಎಸ್ (ಆಂಟಿ - ಲಾಕ್ ಬ್ರೇಕಿಂಗ್ ಸಿಸ್ಟಮ್) ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್) ಮತ್ತು ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಅನ್ನು ಒಳಗೊಂಡಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Saturday, March 15, 2025, 21:12 [IST]
English summary
Hyundai venue suv february 2025 sales details
Read more on hyundai india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+