Hyundai: 20.6 ಕಿ.ಮೀ ಮೈಲೇಜ್.. 5-ಸೀಟರ್, ಈ ಜನಪ್ರಿಯ ಹ್ಯುಂಡೈ ಕಾರಿನ ಬೆಲೆ ಏರಿಕೆ!

ಹ್ಯುಂಡೈ ಮೋಟಾರ್ ಇಂಡಿಯಾ (Hyundai Motor India), ದೇಶೀಯ ಕಾರು ಮಾರಾಟದಲ್ಲಿ ಎರಡನೇ ಸ್ಥಾನದಲ್ಲಿದೆ. ಕಂಪನಿ ಮಾರಾಟಗೊಳಿಸುವ ಕಾರುಗಳು ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಹೊಂದಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿ ಮಾಡುತ್ತಿದ್ದಾರೆ. ಇತ್ತೀಚೆಗೆ ಹ್ಯುಂಡೈ ಕಂಪನಿಯು ಕ್ರೆಟಾ, ಅಲ್ಕಾಜರ್, ಟಕ್ಸನ್ ಮತ್ತು ಔರಾ ಕಾರುಗಳನ್ನು ಬೆಲೆಯನ್ನು ಏರಿಕೆ ಮಾಡಿದೆ. ಈ ಸಾಲಿಗೆ ವೆರ್ನಾ (Verna) ಸೆಡಾನ್ ಸಹ ಸೇರ್ಪಡೆಯಾಗಿದೆ. ಬನ್ನಿ.. ಆ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಿಳಿಯೋಣ.

ನೂತನ ಹ್ಯುಂಡೈ ವೆರ್ನಾ (Hyundai Verna) ಸೆಡಾನ್ ಬೆಲೆ ರೂ.7,000 ಏರಿಕೆಯಾಗಿದೆ. ಇದರೊಂದಿಗೆ ರೂ.11.07 ಲಕ್ಷದಿಂದ ರೂ.17.55 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಈ ಕಾರು ಇಎಕ್ಸ್, ಎಸ್, ಎಕ್ಸ್ (ಒ) ಮತ್ತು ಎಸ್ಎಕ್ಸ್ (ಒ) ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿ ಸಿಗುತ್ತದೆ.

Hyundai Verna Sedan Price Hike Details

ಈ ಕಾರು ಹೊರಭಾಗದಲ್ಲಿ ಆಕರ್ಷಕವಾದ ವಿನ್ಯಾಸವನ್ನು ಹೊಂದಿದೆ. ಅಮೆಜಾನ್ ಗ್ರೇ, ಟೈಟಾನ್ ಗ್ರೇ, ಟೈಫೂನ್ ಸಿಲ್ವರ್, ಫಿಯರಿ ರೆಡ್, ಅಟ್ಲಾಸ್ ವೈಟ್, ಅಬಿಸ್ ಬ್ಲ್ಯಾಕ್ ಮತ್ತು ಸ್ಟಾರಿ ನೈಟ್ ಸೇರಿದಂತೆ ಹಲವು ಬಣ್ಣಗಳನ್ನು ದೊರೆಯುತ್ತದೆ. ಇದರಲ್ಲಿ 5 ಮಂದಿ ಸುಲಭವಾಗಿ ಓಡಾಟ ನಡೆಸಬಹುದು. ಜೊತೆಗೆ 528 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಪಡೆದಿದೆ.

ಹೊಸ ಹ್ಯುಂಡೈ ವೆರ್ನಾ 2 ಪವರ್‌ಟ್ರೇನ್ ಆಯ್ಕೆಯನ್ನು ಹೊಂದಿದೆ. ಇದರ 1.5-ಲೀಟರ್ ಟರ್ಬೋಚಾರ್ಜ್ಡ್ ಎಂಜಿನ್, 160 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 253 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 6-ಸ್ಪೀಡ್ ಮ್ಯಾನುವಲ್ ಅಥವಾ 7-ಸ್ಪೀಡ್ ಡಿಸಿಟಿ (ಡುಯಲ್ ಕ್ಲಚ್ ಟ್ರಾಸ್ಮಿಷನ್) ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ.

Hyundai Verna Sedan Price Hike Details

ಮತ್ತೊಂದು 1.5-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್, 115 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 144 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. ಜೊತೆಗೆ 6-ಸ್ಪೀಡ್ ಮ್ಯಾನುವಲ್ ಹಾಗೂ ಸಿವಿಟಿ ಗೇರ್‌ಬಾಕ್ಸ್‌ನ್ನು ಪಡೆದಿದೆ. 18.6 ರಿಂದ 20.6 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.

ನೂತನ ಕಾರು ಹತ್ತಾರು ಆಕರ್ಷಕ ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಮುಖವಾಗಿ 10.25 - ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಸೆಮಿ-ಡಿಜಿಟಲ್ ಡ್ರೈವರ್ ಡಿಸ್​ಪ್ಲೇ, 8-ಸ್ಪೀಕರ್ ಬೋಸ್ ಸೌಂಡ್ ಸಿಸ್ಟಮ್, ಆಂಬಿಯೆಂಟ್ ಲೈಟಿಂಗ್, ಸನ್‌ರೂಫ್, ಕ್ರೂಸ್ ಕಂಟ್ರೋಲ್, ವೈರ್‌ಲೆಸ್ ಚಾರ್ಜರ್, ಸನ್‌ರೂಫ್, ಏರ್ ಪ್ಯೂರಿಫೈಯರ್ ಮತ್ತು ವೆಂಟಿಲೇಟೆಡ್ ಮತ್ತು ಹೀಟೆಡ್ ಫ್ರಂಟ್ ಸೀಟ್‌ಗಳನ್ನು ಹೊಂದಿದೆ.

ಈ ಕಾರು ಸುರಕ್ಷತೆಗೂ ಹೆಸರುವಾಸಿಯಾಗಿದೆ. ಪ್ರಯಾಣಿಕರ ರಕ್ಷಣೆಗಾಗಿ 6- ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ರೇರ್ ಪಾರ್ಕಿಂಗ್ ಸೆನ್ಸರ್‌ಗಳು, ಆಲ್-ವೀಲ್ ಡಿಸ್ಕ್ ಬ್ರೇಕ್‌ಗಳು, ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಅನ್ನು ಒಳಗೊಂಡಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Wednesday, February 19, 2025, 17:05 [IST]
English summary
Hyundai verna sedan price hike details
Read more on hyundai india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+