ಭಾರತದಲ್ಲಿ ತಯಾರಿಸಿದ ಈ ಪ್ರಖ್ಯಾತ ಕಾರಿಗೆ ಮನಸೋತ ವಿದೇಶಿ ಗ್ರಾಹಕರು.. ಭಾರೀ ಸಂಖ್ಯೆಯಲ್ಲಿ ರಫ್ತು!
ನಿಸ್ಸಾನ್ ಮೋಟಾರ್ ಇಂಡಿಯಾ (Nissan Motor India), ವಿದೇಶಗಳಿಗೆ ಗೇಮ್ ಚೇಂಜರ್ 'ಮ್ಯಾಗ್ನೈಟ್'ನ ಲೆಫ್ಟ್-ಹ್ಯಾಂಡ್ ಡ್ರೈವ್ (ಎಲ್‌ಎಚ್‌ಡಿ) ಕಾರುಗಳನ್ನು ರಫ್ತು ಮಾಡುವುದಕ್ಕೆ ಶುರು ಮಾಡಿದೆ. ಜನವರಿ ಕೊನೆಯಲ್ಲಿ ಚೆನ್ನೈನ ಕಾಮರಾಜರ್ ಬಂದರಿನಿಂದ ಲ್ಯಾಟಿನ್ ಅಮೆರಿಕ (ಎಲ್ಎಟಿಎಎಂ) ಪ್ರಾಂತ್ಯಗಳಿಗೆ ಹೊಸ ನಿಸ್ಸಾನ್ ಮ್ಯಾಗ್ನೈಟ್ ಎಸ್‌ಯುವಿಯ 2,900 ಎಲ್‌ಎಚ್‌ಡಿ ಯುನಿಟ್‌ಗಳನ್ನು ರವಾನಿಸಲಾಗಿದೆ. ಈ ಫೆಬ್ರವರಿಯಲ್ಲಿ ಮಧ್ಯಪ್ರಾಚ್ಯ, ಉತ್ತರ ಆಫ್ರಿಕಾ ಮತ್ತು ಏಷ್ಯಾ ಪೆಸಿಫಿಕ್ ಸೇರಿದಂತೆ ಇತರೆ ಆಯ್ದ ದೇಶಗಳಿಗೆ 7,100 ಯುನಿಟ್ ಮ್ಯಾಗ್ನೈಟ್ ಕಾರುಗಳನ್ನು ರಫ್ತು ಮಾಡಲಾಗುತ್ತದೆ. ಎಲ್ಲವು ಅಂದುಕೊಂಡಂತೆ ನಡೆದರೆ, ಮಾಸಾಂತ್ಯದ ವೇಳೆಗೆ ಒಟ್ಟು 10000ಕ್ಕೂ ಹೆಚ್ಚು ಲೆಫ್ಟ್ ಹ್ಯಾಂಡ್ ಡ್ರೈವ್ (ಎಲ್‌ಎಚ್‌ಡಿ) ಮ್ಯಾಗ್ನೈಟ್ ಎಸ್‌ಯುವಿಗಳನ್ನು ನಿಸ್ಸಾನ್ ರಫ್ತು ಮಾಡಲು ಉದ್ದೇಶಿಸಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ 'ನಿಸ್ಸಾನ್ ಮೋಟಾರ್ ಇಂಡಿಯಾ' ಕಂಪನಿಯ ಹಿರಿಯ ಅಧಿಕಾರಿಯೊಬ್ಬರು 'ನಿಸ್ಸಾನ್ ದೇಶೀಯ ಮಾರುಕಟ್ಟೆಯಲ್ಲಿ ಮಾತ್ರವಲ್ಲದೆ, ಜಾಗತಿಕವಾಗಿಯೂ ತನ್ನ ಮಾರುಕಟ್ಟೆಯನ್ನು ವಿಸ್ತರಣೆ ಮಾಡಲು ಶ್ರಮಿಸುತ್ತಿದೆ. ಕಳೆದ ವರ್ಷ ಘೋಷಿಸಲಾದ ನಮ್ಮ ರಫ್ತು ಯೋಜನೆಗಳಿಗೆ ಅನುಗುಣವಾಗಿ ನೂತನ 'ಮ್ಯಾಗ್ನೈಟ್'ನ ಲೆಫ್ಟ್ ಹ್ಯಾಂಡ್ ಡ್ರೈವ್ (ಎಲ್‌ಎಚ್‌ಡಿ) ಕಾರುಗಳನ್ನು ವಿದೇಶಕ್ಕೆ ರಫ್ತು ಮಾಡಲು ನಾವು ಸಂತೋಷ ಪಡುತ್ತೇವೆ' ಎಂದು ಹೇಳಿದ್ದಾರೆ.

ನಿಸ್ಸಾನ್ ಮ್ಯಾಗ್ನೈಟ್ (Nissan Magnite) ಎಸ್‌ಯುವಿ ವಿಶೇಷತೆಗಳೇನು: ದೇಶೀಯ ಮಾರುಕಟ್ಟೆಯಲ್ಲಿ ಈ ಕಾರು, ಅತ್ಯಂತ ಕೈಗೆಟುಕುವ ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ. ರೂ.6.12 ಲಕ್ಷದಿಂದ ರೂ.11.72 ಎಕ್ಸ್ ಶೋರೂಂ ದರವನ್ನು ಪಡೆದಿದೆ. ವಿಸಿಯಾ, ವಿಸಿಯಾ ಪ್ಲಸ್, ಅಸೆಂಟಾ, ಎನ್-ಕನೆಕ್ಟಾ, ಟೆಕ್ನಾ ಹಾಗೂ ಟೆಕ್ನಾ ಪ್ಲಸ್ ಎಂಬ ಆಕರ್ಷಕ ರೂಪಾಂತರಗಳ (ವೇರಿಯೆಂಟ್) ಆಯ್ಕೆಯನ್ನು ಹೊಂದಿದೆ.
ಈ ಕಾರು ಕಾಪರ್ ಆರೆಂಜ್, ಫ್ಲೇರ್ ಗಾರ್ನೆಟ್ ರೆಡ್ ಹಾಗೂ ಬ್ಲೇಡ್ ಸಿಲ್ವರ್ ಒಳಗೊಂಡಂತೆ ಹಲವು ಬಣ್ಣಗಳೊಂದಿಗೂ ಸಿಗುತ್ತದೆ. ಇದು 5 ಆಸನ ಆಯ್ಕೆ ವ್ಯವಸ್ಥೆಯನ್ನು ಒಳಗೊಂಡಿದ್ದು, ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು. ಹೆಚ್ಚಿನ ಲಗೇಜ್ ಕೊಂಡೊಯ್ಯಲು 336 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಪಡೆದಿದೆ.

ನೂತನ ನಿಸ್ಸಾನ್ ಮ್ಯಾಗ್ನೈಟ್ ಎಸ್‌ಯುವಿ ಶಕ್ತಿಯುತ ಪವರ್‌ಟ್ರೇನ್ ಆಯ್ಕೆಯನ್ನು ಹೊಂದಿದೆ. 1-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಮತ್ತು 1-ಲೀ. ಟರ್ಬೊ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಒಳಗೊಂಡಿದೆ. 5-ಸ್ಪೀಡ್ ಮ್ಯಾನುವಲ್/ ಆಟೋಮೆಟಿಕ್ ಹಾಗೂ ಸಿವಿಟಿ ಗೇರ್‌ಬಾಕ್ಸ್‌ನ್ನು ಪಡೆದಿದೆ. 17 ರಿಂದ 20 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.
ಈ ಕಾರು ಹಲವು ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಪಡೆದಿದೆ. 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 7-ಇಂಚಿನ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ವೈರ್‌ಲೆಸ್ ಫೋನ್ ಚಾರ್ಜರ್, ಆಟೋಮೆಟಿಕ್ - ಕ್ಲೇಮೇಟ್ ಕಂಟ್ರೋಲ್ ಹಾಗೂ 4-ಕಲರ್ ಆಂಬಿಯೆಂಟ್ ಲೈಟಿಂಗ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.
ಹೊಸ ಎಸ್‌ಯುವಿ ಹೆಚ್ಚಿನ ಸುರಕ್ಷತಾ ವೈಶಿಷ್ಟ್ಯಗಳನ್ನು ಪಡೆದಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಫ್ರಂಟ್ & ರೇರ್ ಪಾರ್ಕಿಂಗ್ ಸೆನ್ಸರ್‌ಗಳು, ಆಟೋ ಡಿಮ್ಮಿಂಗ್ ಐಆರ್‌ವಿಎಂ ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








