ಬಿಡುಗಡೆಗೂ ಮುನ್ನವೇ ಡಿಮ್ಯಾಂಡ್.. ಭಾರತದಲ್ಲಿ ತಯಾರಿಸಿದ ಈ Maruti Electric Suv ಸ್ವಂತ ದೇಶಕ್ಕೂ ರಫ್ತು!

ಹೊಚ್ಚ ಹೊಸ ಮಾರುತಿ ಸುಜುಕಿ ಇ-ವಿಟಾರಾ (Maruti Suzuki e Vitara) ಎಲೆಕ್ಟ್ರಿಕ್ ಎಸ್‌ಯುವಿ ಬಿಡುಗಡೆಗೆ ಕೌಂಟ್‌ಡೌನ್ ಶುರುವಾಗಿದ್ದು, ಇದೇ ಸೆಪ್ಟೆಂಬರ್‌ನಲ್ಲಿ ಅದ್ದೂರಿಯಾಗಿಯೂ ಮಾರಾಟಕ್ಕೆ ಬರಲಿದೆ. ಈ ಕಾರನ್ನು ಗುಜರಾತ್‌ನಲ್ಲಿರುವ ಕಂಪನಿಯ ಉತ್ಪಾದನಾ ಘಟಕದಲ್ಲಿ ತಯಾರಿಸಲು ಕೂಡ ತೀರ್ಮಾನಿಸಲಾಗಿದೆ. ಭಾರತದಲ್ಲಿ ಸಿದ್ದಗೊಂಡ ಇದೇ ಎಲೆಕ್ಟ್ರಿಕ್ ಎಸ್‌ಯುವಿಯನ್ನು 'ಮಾರುತಿ ಸುಜುಕಿ' ಮಾತೃ ಸಂಸ್ಥೆ ಸುಜುಕಿ ಮೋಟಾರ್ ಕಾರ್ಪೊರೇಷನ್ (Suzuki Motor Corporation), ಜಪಾನ್ ಮಾರುಕಟ್ಟೆಯಲ್ಲಿಯೂ ಪರಿಚಯಿಸಲು ಎಲ್ಲ ರೀತಿಯ ತಯಾರಿ ಮಾಡಿಕೊಳ್ಳುತ್ತಿದೆ ಎಂದು ವರದಿಯಾಗಿದೆ.

ಈಗಾಗಲೇ, ಸ್ವಂತ ದೇಶವಾದ ಜಪಾನ್‌ನಲ್ಲಿ 'ಸುಜುಕಿ ಮೋಟಾರ್ ಕಾರ್ಪೊರೇಷನ್' ಭಾರತದಲ್ಲಿ ಉತ್ಪಾದಿಸಿದ ಫ್ರಾಂಕ್ಸ್, ಬಲೆನೊ ಹಾಗೂ ಜಿಮ್ನಿ 5-ಡೋರ್ ಕಾರುಗಳನ್ನು ಯಶಸ್ವಿಯಾಗಿ ಮಾರಾಟಗೊಳಿಸುತ್ತಿದೆ. ಅಲ್ಲಿನ ಗ್ರಾಹಕರು ಈ ಕಾರುಗಳನ್ನು ತಾಮುಂದು - ನಾಮುಂದು ಎಂಬಂತೆ ಖರೀದಿ ಮಾಡುತ್ತಿದ್ದಾರೆ. ಕೆಲವೇ ತಿಂಗಳಲ್ಲಿ ಆ ಸಾಲಿಗೆ 'ಇ-ವಿಟಾರಾ'ವು ಸೇರ್ಪಡೆಗೊಳ್ಳಲಿದ್ದು, ರಫ್ತು ಸಹ ಆರಂಭವಾಗಲಿದೆ ಎನ್ನಲಾಗಿದೆ.

India Made Maruti Suzuki e-Vitara Suv Will Be Exported To Japan Details

ಜನವರಿಯಲ್ಲಿ ತೆರೆಕಂಡ 'ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋದಲ್ಲಿಯೇ 'ಮಾರುತಿ ಸುಜುಕಿ ಇ-ವಿಟಾರಾ' ಎಲೆಕ್ಟ್ರಿಕ್ ಎಸ್‌ಯುವಿ ಹೇಗಿರಲಿದೆ ಎಂಬ ಬಹುತೇಕ ವಿಚಾರಗಳನ್ನು ಕಂಪನಿಯು ಬಹಿರಂಗಪಡಿಸಿತ್ತು. ಈ ಕಾರು, ಹೊರಭಾಗದಲ್ಲಿ ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಹೊಂದಿದೆ. ಎಲ್ಇಡಿ ಹೆಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಫಾಗ್ ಲೈಟ್‌ಗಳು, ಎಲ್ಇಡಿ ಟೈಲ್ ಲೈಟ್ ಮತ್ತು ಅಲಾಯ್ ವೀಲ್‌ಗಳನ್ನು ಪಡೆದಿದೆ.

ಈ ಕಾರು ಡೆಲ್ಟಾ, ಜಿಟಾ ಮತ್ತು ಆಲ್ಫಾ ಎಂಬ 3 ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿ ಗ್ರಾಹಕರ ಖರೀದಿಗೆ ಲಭ್ಯವಾಗಲಿದೆ. ನೆಕ್ಸಾ ಬ್ಲೂ, ಗ್ರ್ಯಾಂಡಿಯರ್ ಗ್ರೇ, ಸ್ಪ್ಲೆಂಡಿಡ್ ಸಿಲ್ವರ್ ಮತ್ತು ಆರ್ಕ್ಟಿಕ್ ವೈಟ್ ಒಳಗೊಂಡಂತೆ ವಿವಿಧ ಆಕರ್ಷಕ ಬಣ್ಣಗಳನ್ನು ಒಳಗೊಂಡಿದೆ. ಇದು ನೋಡುಗರ ಕಣ್ಣು ಕುಕ್ಕುವಂತಿದೆ.

India Made Maruti Suzuki e-Vitara Suv Will Be Exported To Japan Details

ನೂತನ ಎಲೆಕ್ಟ್ರಿಕ್ ಎಸ್‌ಯುವಿಯು ಬಲಿಷ್ಠವಾದ ಪವರ್‌ಟ್ರೇನ್ ಆಯ್ಕೆಯನ್ನು ಹೊಂದಿದೆ. 49 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಮತ್ತು 61 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಒಳಗೊಂಡಿದೆ. ಭರ್ತಿ ಚಾರ್ಜ್‌ನಲ್ಲಿ 500 ಕಿಲೋಮಿಟರ್‌ವರೆಗೆ ರೇಂಜ್ (ಮೈಲೇಜ್) ನೀಡಬಹುದು ಎಂದು ಅಂದಾಜಿಸಲಾಗಿದೆ.

ಇದರಲ್ಲಿ 5 ಆಸನ ಆಯ್ಕೆ ವ್ಯವಸ್ಥೆಯಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ದೂರದ ಊರುಗಳಿಗೆ ಓಡಾಟ ನಡೆಸಬಹುದು. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (10.25-ಇಂಚು), ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ (10.1-ಇಂಚು), ಆಂಬಿಯೆಂಟ್ ಲೈಟಿಂಗ್, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು, ಪನೋರಮಿಕ್ ಸನ್‌ರೂಫ್, ಆಟೋ ಎಸಿ ಮತ್ತು ವೈರ್‌ಲೆಸ್ ಫೋನ್ ಚಾರ್ಜರ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಈ ಎಲೆಕ್ಟ್ರಿಕ್ ಎಸ್‌ಯುವಿ ಪ್ರಯಾಣಿಕರಿಗೆ ಗರಿಷ್ಠ ಮಟ್ಟದ ರಕ್ಷಣೆ ಒದಗಿಸುತ್ತದೆ. ಸುರಕ್ಷತೆಗಾಗಿ 7 ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಎಬಿಎಸ್ (ಆಂಟಿ - ಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಹಾಗೂ 360 ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.

ನೂತನ ಮಾರುತಿ ಸುಜುಕಿ ಇ-ವಿಟಾರಾ ಎಲೆಕ್ಟ್ರಿಕ್ ಎಸ್‌ಯುವಿ ಕೈಗೆಟುಕುವ ಬೆಲೆಯಲ್ಲಿಯೂ ಖರೀದಿಗೆ ಲಭ್ಯವಾಗುವ ನಿರೀಕ್ಷೆಯಿದೆ. ಇದು ರೂ.17 ಲಕ್ಷ (ಎಕ್ಸ್-ಶೋರೂಂ) ದರವನ್ನು ಹೊಂದಿರಬಹುದು ಎಂದು ಅಂದಾಜಿಸಲಾಗಿದೆ. ಈ ಕಾರಿಗೆ ಟಾಟಾ ಕರ್ವ್ ಇವಿ ಹಾಗೂ ಹ್ಯುಂಡೈ ಕ್ರೆಟಾ ಇವಿಗಳು ಪ್ರಬಲವಾದ ಪ್ರತಿಸ್ಪರ್ಧಿಯಾಗಲಿವೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Thursday, June 5, 2025, 10:49 [IST]
English summary
India made maruti suzuki e vitara suv will be exported to japan details
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+