ಆದಷ್ಟು ಬೇಗನೆ ಗ್ರಾಹಕರ ಮನಗೆದ್ದ ಕಾರುಗಳಿವು.. 5-ಸೀಟರ್, ಕಡಿಮೆ ಬೆಲೆಗೂ ಲಭ್ಯ!

ಹೊಸ ಕಾರು ಖರೀದಿಸಬೇಕು ಎಂಬುದು ಹಲವರ ಜೀವನದ ಬಹುದೊಡ್ಡ ಆಸೆಯಾಗಿರುತ್ತದೆ. ಕೆಲವೊಮ್ಮೆ ಯಾವ ಕಂಪನಿಯು ನೂತನ ಕಾರನ್ನು ಬಿಡುಗಡೆಗೊಳಿಸುತ್ತದೆ.. ಅದನ್ನೇ ಖರೀದಿ ಮಾಡಿದರೆ ಹೇಗೆ ಎಂದು ಬಹುತೇಕರು ಆಲೋಚಿಸುತ್ತಾರೆ. ಈಚೆಗೆ ದೇಶೀಯ ಮಾರುಕಟ್ಟೆಯಲ್ಲಿಯೂ ಗ್ರಾಹಕರ ಎಲ್ಲ ಅಭಿರುಚಿಯನ್ನು ಪೂರೈಸುವ ಕಿಯಾ ಸೈರೋಸ್ (Kia Syros) ಹಾಗೂ ಸ್ಕೋಡಾ ಕೈಲಾಕ್ (Skoda Kylaq) ಕಾರುಗಳು ಮಾರಾಟಕ್ಕೆ ಬಂದಿವೆ. ಇವುಗಳು ಎಸ್‌ಯುವಿಯಾಗಿದ್ದು, ಕೈಗೆಟುಕುವ ಬೆಲೆಯಲ್ಲಿ ಖರೀದಿಗೆ ದೊರೆಯುವುದರಿಂದ ಗ್ರಾಹಕರು ಕೂಡ ತಾಮುಂದು - ನಾಮುಂದು ಎಂಬಂತೆ ಖರೀದಿ ಮಾಡುತ್ತಿದ್ದಾರೆ. ಬನ್ನಿ.. ಈ ಕಾರುಗಳ ವಿಶೇಷತೆ ಬಗ್ಗೆ ಒಂದಷ್ಟು ವಿವರಗಳನ್ನು ತಿಳಿಯೋಣ.

ಕಿಯಾ ಸೈರೋಸ್: ಇದು ರೂ.8.99 ಲಕ್ಷದಿಂದ ರೂ.17.80 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಒಳಗೊಂಡಿದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಸಂಚಾರ ನಡೆಸಬಹುದು. ವಾರಾಂತ್ಯ ಹಾಗೂ ರಜಾದಿನಗಳಲ್ಲಿ ಪ್ರವಾಸಕ್ಕೆ ಹೋಗುವಾಗ ಹೆಚ್ಚಿನ ಲಗೇಜ್ ಸಾಗಿಲು 465 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ತನ್ನದಾಗಿಸಿಕೊಂಡಿದೆ.

Indian Buyers Want To Buy Kia Syros And Skoda Kylaq Details

ಈ ಕಿಯಾ ಸೈರೋಸ್ ಎಸ್‌ಯುವಿ, 1-ಲೀಟರ್ ಪೆಟ್ರೋಲ್ ಹಾಗೂ 1.5-ಲೀಟರ್ ಡೀಸೆಲ್ ಎಂಜಿನ್‌ನ್ನು ಪಡೆದಿದೆ. 17.65 ರಿಂದ 20.75 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಸ್ಪಾರ್ಕ್ಲಿಂಗ್ ಸಿಲ್ವರ್, ಗ್ರಾವಿಟಿ ಗ್ರೇ, ಇಂಪೀರಿಯಲ್ ಬ್ಲೂ, ಇಂಟೆನ್ಸ್ ರೆಡ್, ಪ್ಯೂಟರ್ ಆಲಿವ್ ಮತ್ತು ಅರೋರಾ ಬ್ಲ್ಯಾಕ್ ಪರ್ಲ್ ಒಳಗೊಂಡಂತೆ ಹಲವು ಬಣ್ಣಗಳ ಆಯ್ಕೆಯಲ್ಲಿಯೂ ಲಭ್ಯವಿದೆ.

ನೂತನ ಕಿಯಾ ಸೈರೋಸ್ ಕಾರು ಇನ್ಫೋಟೈನ್‌ಮೆಂಟ್‌ ಸಿಸ್ಟಮ್ & ಡ್ರೈವರ್ಸ್ ಡಿಸ್‌ಪ್ಲೇಗಾಗಿ ಡುಯಲ್ ಸ್ಕ್ರೀನ್‌ ಸೆಟಪ್ (12.3-ಇಂಚು), ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಮತ್ತು 8-ಸ್ಪೀಕರ್ ಹರ್ಮನ್ ಕಾರ್ಡನ್ ಸೌಂಡ್ ಸಿಸ್ಟಮ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳನ್ನು ಪಡೆದಿದೆ.

Indian Buyers Want To Buy Kia Syros And Skoda Kylaq Details

ಸ್ಕೋಡಾ ಕೈಲಾಕ್: ಈ ಎಸ್‌ಯುವಿ ರೂ.7.89 ಲಕ್ಷದಿಂದ ರೂ.14.40 ಲಕ್ಷ (ಎಕ್ಸ್-ಶೋರೂಂ) ದರದಲ್ಲಿ ಗ್ರಾಹಕರ ಖರೀದಿಗೆ ದೊರೆಯುತ್ತದೆ. ಇದರಲ್ಲಿ 5 ಮಂದಿ ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು. ಹೆಚ್ಚಿನ ಲಗೇಜ್ ಕೊಂಡೊಯ್ಯಲು 446 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಹೊಂದಿದೆ.

ಈ ಕಾರು 1.0-ಲೀಟರ್ ಟಿಎಸ್‌ಟಿ ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿದೆ. 6-ಸ್ಪೀಡ್ ಮ್ಯಾನುವಲ್/ 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 15 ರಿಂದ 18 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಬ್ರಿಲಿಯಂಟ್ ಸಿಲ್ವರ್, ಲಾವಾ ಬ್ಲೂ, ಆಲಿವ್ ಗೋಲ್ಡ್, ಕಾರ್ಬನ್ ಸ್ಟೀಲ್ ಮತ್ತು ಟೊರ್ನಾಡೊ ರೆಡ್ ಎಂಬ ಬಣ್ಣಗಳನ್ನು ತನ್ನದಾಗಿಸಿಕೊಂಡಿದೆ.

ಹೊಸ ಕೈಲಾಕ್ ಎಸ್‌ಯುವಿ ಪ್ರಯಾಣಿಕರ ಅನುಕೂಲಕ್ಕಾಗಿ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್, ಡಿಜಿಟಲ್-ಇನ್ಸ್ಟ್ರುಮೆಂಟ್ ಕ್ಲಸ್ಟರ್‌, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಟು-ಸ್ಪೋಕ್ ಸ್ಟೀರಿಂಗ್ ವೀಲ್, ಸನ್‌ರೂಫ್ & ಕೀಲೆಸ್ ಎಂಟ್ರಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಯ ದೃಷ್ಟಿಯಿಂದ 6-ಏರ್‌ಬ್ಯಾಗ್‌ಗಳು ಮತ್ತು ಡಿಸ್ಕ್/ ಡ್ರಮ್‌ ಬ್ರೇಕ್‌ಗಳನ್ನು ಪಡೆದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Friday, February 21, 2025, 8:40 [IST]
English summary
Indian buyers want to buy kia syros and skoda kylaq details
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+