ಕಡಿಮೆ ಬೆಲೆಗೆ ವಿಮಾನದಂತೆ ಸೌಕರ್ಯವಿರುವ ಕಾರಿಗೆ ಭಾರೀ ಬೇಡಿಕೆ: ಮಾರಾಟ ಕಂಡು ಬೆಚ್ಚಿಬಿದ್ದ ಟಾಟಾ!

ಭಾರತೀಯ ಮಾರುಕಟ್ಟೆಯಲ್ಲಿ ಕಾರು ಮಾರಾಟದಲ್ಲಿ ಭಾರೀ ಬೆಳವಣಿಗೆಯನ್ನು ಸಾಧಿಸುತ್ತಿದೆ. ಅದರಲ್ಲಿ ಇತ್ತೀಚೆಗೆ ಎಲೆಕ್ಟ್ರಿಕ್ ಕಾರುಗಳ ಮಾರಾಟದಲ್ಲೂ ಏರಿಕೆ ಕಾಣುತ್ತಿದೆ. ಎಲೆಕ್ಟ್ರಿಕ್ ವಾಹನ ವಿಭಾಗದಲ್ಲಿ ಎಂಜಿ ವಿಂಡ್ಸರ್ ಇವಿಯ ಪ್ರಾಬಲ್ಯದಿಂದ 2024ರ ಡಿಸೆಂಬರ್ ತಿಂಗಳ ಮಾರಾಟದಲ್ಲಿ ಗಮನಾರ್ಹ ಬೆಳವಣಿಗೆಯನ್ನು ಸಾಧಿಸಲು ನೆರವಾಯ್ತು. ವಿಂಡ್ಸರ್ ಇವಿಯು ಜೆಎಸ್‌ಡಬ್ಲ್ಯು ಎಂಜಿ ಮೋಟಾರ್‌ನ ತನ್ನ ಭಾರತದ ಪೋರ್ಟ್‌ಫೋಲಿಯೊದಲ್ಲಿ ಮೂರನೇ ಎಲೆಕ್ಟ್ರಿಕ್ ವಾಹನವಾಗಿದೆ. ಕಳೆದ ತಿಂಗಳು ಎಂಜಿ ಮೋಟಾರ್ (MG Motor) ಕಂಪನಿಯು ಒಟ್ಟು 7,516 ಯುನಿಟ್‌ಗಳನ್ನು ಮಾರಾಟ ಮಾಡಿವೆ.

2023ರ ಡಿಸೆಂಬರ್ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಕಳೆದ ತಿಂಗಳ ಕಾರು ಮಾರಾಟದಲ್ಲಿ ಶೇ.55 ರಷ್ಟು ಬೆಳವಣಿಗೆಯನ್ನು ಸಾಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಳೆದ ವರ್ಷ ಹಬ್ಬದ ಸೀಸನ್ ನಲ್ಲಿ ಎಂಜಿ ಕಂಪನಿಯು ವಿಂಡ್ಸರ್ ಎಲೆಕ್ಟ್ರಿಕ್ ಕಾರನ್ನು ಬಿಡುಗಡೆಗೊಳಿಸಿತು. ಈ ಎಲೆಕ್ಟ್ರಿಕ್ ಕಾರು ಕಡಿಮೆ ಅವಧಿಯಲಿ ಗ್ರಾಹಕರನ್ನು ಸೆಳೆಯುವಲ್ಲಿ ಯಶ್ವಸಿಯಾಗಿದ್ದಾರೆ.

MG Motor

ಡಿಸೆಂಬರ್ ತಿಂಗಳ ಮಾರಾಟದಲ್ಲಿ ಎಂಜಿ ಕಾರುಗಳ ಮಾರಾಟದಲ್ಲಿ ಅದರ ಎಲೆಕ್ಟ್ರಿಕ್ ಕಾರುಗಳು ಶೇ.70 ಪ್ರತಿಶತದಷ್ಟು ಕೊಡುಗೆಯನ್ನು ನೀಡಿದೆ ಎಂದು ಎಂಜಿ ಮೋಟಾರ್ ಕಂಪನಿ ಹೇಳಿಕೊಂಡಿದೆ. JSW ಎಂಜಿ ಮೋಟಾರ್ ಇಂಡಿಯಾವು ವಿಂಡ್ಸರ್ ಇವಿಯನ್ನು ವಾಹನ ತಯಾರಕರ ಪ್ರಮುಖ ಬೆಳವಣಿಗೆಯ ಬೂಸ್ಟರ್ ಆಗಿ ಕಾಣುತ್ತಿದೆ. ವಿಶೇಷ ಎಂದರೆ, ಜೆಎಸ್‌ಡಬ್ಲ್ಯೂ (JSW) ಹಾಗೂ ಎಂಜಿ ಮೋಟಾರ್ ಪಾಲುದಾರಿಕೆಯಲ್ಲಿ ಬಿಡುಗಡೆಯಾಗುತ್ತಿರುವ ಮೊದಲ ಕಾರು ಇದಾಗಿದೆ.

ಈ ಎಂಜಿ ವಿಂಡ್ಸರ್ ಇವಿ ಟರ್ಕೋಯಿಸ್ ಗ್ರೀನ್, ಪರ್ಲ್ ವೈಟ್, ಕ್ಲೇ ಬೀಜ್ ಹಾಗೂ ಸ್ಟಾರ್‌ಬರ್ಸ್ಟ್ ಬ್ಲ್ಯಾಕ್ ಎಂಬ ಬಣ್ಣಗಳ ಆಯ್ಕೆಗಳಲ್ಲಿ ಮಾರಾಟವಾಗುತ್ತಿದೆ. ಈ ಹೊಸ ವಿಂಡ್ಸರ್ ಇವಿ ಹೊರಭಾಗದಲ್ಲಿ ಅತ್ಯಾಕರ್ಷಕವಾದ ವಿನ್ಯಾಸವನ್ನು ಹೊಂದಿದೆ. ಈ ಎಂಜಿ ವಿಂಡ್ಸರ್ ಇವಿ ಕಾರು ಸ್ಪ್ಲಿಟ್ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಪ್ರೊಜೆಕ್ಟರ್ ಹೆಡ್‌ಲೈಟ್‌ಗಳು, ಮುಂಭಾಗ (ಫ್ರಂಟ್) ಹಾಗೂ ಹಿಂಭಾಗ (ರೇರ್) ಎಲ್ಇಡಿ ಲೈಟ್ ಬಾರ್‌ಗಳನ್ನು ಹೊಂದಿವೆ.

MG Motor

ಇದರೊಂದಿಗೆ ಎಲ್-ಆಕಾರಕ್ಕೆ ಹೋಲಿಕೆಯಾಗುವ ಎಲ್ಇಡಿ ಟೈಲ್‌ಲೈಟ್‌ಗಳು, ಫ್ಲಶ್ ಫಿಟ್ಟಿಂಗ್ ಡೋರ್ ಹ್ಯಾಂಡಲ್‌ಗಳು, 18-ಇಂಚಿನ ಅಲಾಯ್ ವೀಲ್‌ಗಳು ಮತ್ತು 215/55 ಆರ್18 ಟೈಯರ್‌ಗಳನ್ನು ಒಳಗೊಂಡಿದೆ. ಈ ಎಂಜಿ ವಿಂಡ್ಸರ್ ಇವಿ ಕಾರಿನಲ್ಲಿ 15.6-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಫುಲ್-ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಆಂಬಿಯೆಂಟ್ ಲೈಟಿಂಗ್ ಮತ್ತು ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಅನ್ನು ಹೊಂದಿದೆ.

ಇದರೊಂದಿಗೆ ಆಂಬಿಯೆಂಟ್ ಲೈಟಿಂಗ್, ವೈರ್‌ಲೆಸ್ ಫೋನ್ ಚಾರ್ಜಿಂಗ್ ಪೋರ್ಟ್, ಕೀಲೆಸ್ ಎಂಟ್ರಿ ಮತ್ತು ಪುಶ್-ಬಟನ್ ಸ್ಟಾರ್ಟ್ ಸೇರಿದಂತೆ ವಿವಿಧ ಫೀಚರ್ಸ್ ಗಳನ್ನು ಹೊಂದಿವೆ.ಈ ವಿಂಡ್ಸರ್ ಕಾರಿನಲ್ಲಿ ಇಕೋ, ಇಕೋ ಪ್ಲಸ್, ನಾರ್ಮಲ್ ಹಾಗೂ ಸ್ಪೋರ್ಟ್ ಎಂಬ ಡ್ರೈವಿಂಗ್ ಮೋಡ್‌ಗಳನ್ನು ಪಡೆದಿವೆ. ಹೊಸ ವಿಂಡ್ಸರ್ ಎಲೆಕ್ಟ್ರಿಕ್ ಕಾರು ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ಒದಗಿಸುತ್ತದೆ.

ಸುರಕ್ಷತೆಯ ಸಲುವಾಗಿ 6-ಏರ್‌ಬ್ಯಾಗ್‌ಗಳು, ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್) ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ. ಆದರೆ ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್) ಫೀಚರ್ ಹೊಂದಿಲ್ಲ. ಎಂಜಿ ಮೋಟಾರ್ ಕಂಪನಿಯು ಇದೀಗ ವಿಂಡ್ಸರ್ ಇವಿ ಕಾರಿನ ವಿತರಣೆಯನ್ನು ಪ್ರಾರಂಭಿಸಿದ್ದಾರೆ. ಒಂದೇ ಬಾರೀ ಎಂಜಿ 101 ಕಾರುಗಳನ್ನು ಡೆಲಿವರಿ ನೀಡಿದೆ. ಈ ಹೊಸ ಕ್ರಾಸ್ಒವರ್ ಯುಟಿಲಿಟಿ ವಾಹನವಾಗಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Thursday, January 2, 2025, 11:59 [IST]
English summary
Jsw mg motor car sales in december 2024
Read more on mg motor india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+