ಜೆಎಸ್‌ಡಬ್ಲ್ಯೂ ಎಂಜಿ ಮೋಟಾರ್‌ನಿಂದ ಗ್ರಾಹಕರಿಗೆ ಶಾಕ್.. ಕಾರಣವೇನು?
ಜೆಎಸ್‌ಡಬ್ಲ್ಯೂ ಎಂಜಿ ಮೋಟಾರ್ (JSW MG Motor) ಜನಪ್ರಿಯ ಕಾರು ತಯಾರಕ ಕಂಪನಿಯಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ ವಿಂಡ್ಸರ್ ಇವಿ, ಕಾಮೆಟ್ ಇವಿ, ಜಡ್ಎಸ್ ಇವಿ, ಹೆಕ್ಟರ್ ಮತ್ತು ಆಸ್ಟರ್ ಸೇರಿದಂತೆ ವಿವಿಧ ಕಾರುಗಳನ್ನು ಯಶಸ್ವಿಯಾಗಿ ಮಾರಾಟಗೊಳಿಸುತ್ತಿದೆ. ಗ್ರಾಹಕರು ಕೂಡ ಇಷ್ಟಪಟ್ಟು ಕೊಂಡುಕೊಳ್ಳುತ್ತಿದ್ದಾರೆ. ಅದಕ್ಕೆ ಸಾಕ್ಷಿ ಎಂಬಂತೆ ಕಂಪನಿಯು ಹೋದ ತಿಂಗಳು (ಮೇ-2025) 6,304 ಯುನಿಟ್ ಕಾರುಗಳನ್ನು ಮಾರಾಟ ಮಾಡಿದೆ. 2024ರ ಇದೇ ಅವಧಿಯಲ್ಲಿ 4,510 ಯುನಿಟ್‌ಗಳನ್ನು ಮಾರಾಟಗೊಳಿಸಿತ್ತು. ಈ ಅಂಕಿಸಂಖ್ಯೆಗೆ ಹೋಲಿಕೆ ಮಾಡಿದರೆ, ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ 40% ಪ್ರಗತಿಯಾಗಿದೆ.
ಸದ್ಯ, ಜೆಎಸ್‌ಡಬ್ಲ್ಯೂ ಎಂಜಿ ಮೋಟಾರ್, ವಿವಿಧ ಕಾರುಗಳ ಬೆಲೆಯನ್ನು ಶೇಕಡ 1.5% ಹೆಚ್ಚಿಸುವುದಾಗಿ ಘೋಷಣೆ ಮಾಡಿದೆ. ಪರಿಷ್ಕೃತ ದರಗಳು ಇದೇ ಜುಲೈ 1ರಿಂದ ಅಧಿಕೃತವಾಗಿ ಜಾರಿಗೆ ಬರಲಿವೆ. ತಯಾರಿಕಾ ವೆಚ್ಚಗಳ ಅಧಿಕಗೊಂಡಿದೆ. ಹೀಗಾಗಿ, ಈ ಬೆಲೆ ಏರಿಕೆ ಅನಿವಾರ್ಯವೆಂದು ಕಂಪನಿಯು ಹೇಳಿದೆ. ಕಾರುಗಳ ರೂಪಾಂತರಗಳಿಗೆ (ವೇರಿಯೆಂಟ್) ಅನುಗುಣವಾಗಿ ಹೊಸ ದರದಲ್ಲಿ ವ್ಯತ್ಯಯವಾಗಲಿದೆ.

ಈಚೆಗೆ ಎಂಜಿ ಜಡ್ಎಸ್ ಇವಿ (MG ZS EV) ದರ ಇಳಿಕೆ:
ಎಂಜಿ ಕಂಪನಿಯು 6ನೇ ವಾರ್ಷಿಕೋತ್ಸವ ಹಿನ್ನೆಲೆಯಲ್ಲಿ 'ಜಡ್ಎಸ್ ಇವಿ' ಬೆಲೆಯನ್ನು ರೂ.4.44 ಲಕ್ಷ ಕಡಿತಗೊಳಿಸಿತ್ತು. ಇದು ಸೀಮಿತ ಅವಧಿಯ ಕೊಡುಗೆಯಾಗಿದೆ. ಈ ಹೊಚ್ಚ ಹೊಸ ಎಲೆಕ್ಟ್ರಿಕ್ ಎಸ್‌ಯುವಿ ರೂ.17.99 ಲಕ್ಷದಿಂದ ರೂ.20.50 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 50.3 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್ ಹೊಂದಿದ್ದು, ಸಂಪೂರ್ಣ ಚಾರ್ಜ್‌ನಲ್ಲಿ 461 ಕಿಲೋಮೀಟರ್ ರೇಂಜ್ (ಮೈಲೇಜ್) ನೀಡುತ್ತದೆ.
ಕಳೆದ ತಿಂಗಳು ಎಂಜಿ ವಿಂಡ್ಸರ್ ಇವಿ ಪ್ರೊ (MG Windsor EV Pro) ಬಿಡುಗಡೆ:
ಇದೊಂದು ಎಲೆಕ್ಟ್ರಿಕ್ ಎಸ್‌ಯುವಿಯಾಗಿದ್ದು, ಮೇ 6ರಂದು ದೇಶೀಯ ಮಾರುಕಟ್ಟೆಯಲ್ಲಿ ಮಾರಾಟಕ್ಕೆ ತರಲಾಗಿತ್ತು. ಈ ಕಾರು ರೂ.18.31 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 52.9 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ಪಡೆದಿದ್ದು, ಪೂರ್ತಿ ಚಾರ್ಜ್‌ನಲ್ಲಿ 449 ಕಿಲೋಮೀಟರ್ ಓಡುತ್ತದೆ.

ನೂತನ ವಿಂಡ್ಸರ್ ಇವಿ ಪ್ರೊ ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿದೆ. ಸೆಲಾಡಾನ್ ಬ್ಲೂ, ಗ್ಲೇಜ್ ರೆಡ್ ಮತ್ತು ಅರೋರಾ ಸಿಲ್ವರ್ ಎಂಬ ಬಣ್ಣಗಳೊಂದಿಗೂ ಸಿಗುತ್ತದೆ. 5 ಆಸನಗಳನ್ನು ಹೊಂದಿದ್ದು, ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು. ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 604 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಪಡೆದಿದೆ.
ಈ ಕಾರು 15.6-ಇಂಚಿರುವ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್-ಇನ್ಸ್ಟ್ರುಮೆಂಟ್ ಕ್ಲಸ್ಟರ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಹಾಗೂ ವೈರ್‌ಲೆಸ್ ಚಾರ್ಜಿಂಗ್ ಪೋರ್ಟ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನುಒಳಗೊಂಡಿದೆ. ಸುರಕ್ಷತೆಯ ದೃಷ್ಟಿಯಿಂದ 6-ಏರ್‌ಬ್ಯಾಗ್‌ಗಳು, ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.
ಅತಿ ಕಡಿಮೆ ಬೆಲೆಗೆ ಎಂಜಿ ಕಾಮೆಟ್ ಇವಿ (MG Comet EV) ಲಭ್ಯ:
ಇದು ಎಲೆಕ್ಟ್ರಿಕ್ ಹ್ಯಾಚ್‌ಬ್ಯಾಕ್ ಆಗಿದೆ. ರೂ.7.36 ಲಕ್ಷದಿಂದ ರೂ.9.86 ಲಕ್ಷ (ಎಕ್ಸ್-ಶೋರೂಂ) ದರದಲ್ಲಿ ಗ್ರಾಹಕರ ಖರೀದಿಗೆ ಸಿಗುತ್ತದೆ. 17.3 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಒಳಗೊಂಡಿದೆ. ಭರ್ತಿ ಚಾರ್ಜ್‌ನಲ್ಲಿ 230 ಕಿಲೋಮೀಟರ್ ರೇಂಜ್ (ಮೈಲೇಜ್) ನೀಡುತ್ತದೆ.
ಇದರಲ್ಲಿ 4 ಆಸನಗಳಿವೆ. ಇನ್ಫೋಟೈನ್‌ಮೆಂಟ್ ಸಿಸ್ಟಮ್ & ಇನ್ಸ್ಟ್ರುಮೆಂಟ್ ಕ್ಲಸ್ಟರ್‌ಗಾಗಿ ಡುಯಲ್ 10.25-ಇಂಚಿರುವ ಸ್ಕ್ರೀನ್, 55ಕ್ಕೂ ಹೆಚ್ಚು ಕನೆಕ್ಟ್ಡ್ ಕಾರ್ ಟೆಕ್, 4-ಸ್ಪೀಕರ್ ಆಡಿಯೊ ಸಿಸ್ಟಮ್‌ಗಳು ಹಾಗೂ ಕೀಲೆಸ್ ಎಂಟ್ರಿತಂತಹ ವೈಶಿಷ್ಟ್ಯಗಳನ್ನು ಪಡೆದಿದೆ. ಪ್ರಯಾಣಿಕರ ರಕ್ಷಣೆಗಾಗಿ ಡುಯಲ್ ಫ್ರಂಟ್ ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿ-ಲಾಕ್ ಬ್ರೇಕಿಂಗ್ ಸಿಸ್ಟಮ್) ಮತ್ತು ರಿವರ್ಸ್ ಪಾರ್ಕಿಂಗ್ ಕ್ಯಾಮೆರಾವನ್ನು ಒಳಗೊಂಡಿದೆ.
ಎಂಜಿ ಹೆಕ್ಟರ್ & ಆಸ್ಟರ್ ವಿಶೇಷತೆಗಳೇನು:
ಎಂಜಿ ಹೆಕ್ಟರ್ ಎಸ್‌ಯುವಿ ರೂ.14.25 ಲಕ್ಷದಿಂದ ರೂ.23.14 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 1.5-ಲೀಟರ್ ಟರ್ಬೊ ಪೆಟ್ರೋಲ್ ಹಾಗೂ 2-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಪಡೆದಿದೆ. 15.58 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಎಂಜಿ ಆಸ್ಟರ್ ಎಸ್‌ಯುವಿ ರೂ.11.30 ಲಕ್ಷದಿಂದ ರೂ.17.56 ಲಕ್ಷ (ಎಕ್ಸ್-ಶೋರೂಂ) ದರವನ್ನು ಒಳಗೊಂಡಿದೆ. 1.3-ಲೀಟರ್ ಟರ್ಬೊ ಪೆಟ್ರೋಲ್ ಮತ್ತು 1.5-ಲೀಟರ್ ಪೆಟ್ರೋಲ್ ಎಂಜಿನ್ ಹೊಂದಿದ್ದು, 14.82 ರಿಂದ 15.43 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.


Click it and Unblock the Notifications