Kia: 7- ಸೀಟರ್‌ನ ಹೊಸ ಕಿಯಾ ಕಾರುಗಳಿಗಾಗಿ ಕ್ಯೂ ನಿಂತ ಗ್ರಾಹಕರು.. ಊಹೆಗೂ ಮೀರಿದ ಸಂಖ್ಯೆಯಲ್ಲಿ ಬುಕ್ಕಿಂಗ್!
ಕಿಯಾ ಮೋಟಾರ್ಸ್ (Kia Motors) ಪ್ರಮುಖ ವಾಹನ ತಯಾರಕ ಕಂಪನಿಯಾಗಿ ಹೊರಹೊಮ್ಮಿದೆ. ಇದೇ ಮೇನಲ್ಲಿ ಸ್ಟ್ಯಾಂಡರ್ಡ್ ಕ್ಯಾರೆನ್ಸ್ ಕ್ಲಾವಿಸ್ ಹಾಗೂ ಜುಲೈ ತಿಂಗಳಲ್ಲಿ ಕ್ಯಾರೆನ್ಸ್ ಕ್ಲಾವಿಸ್ ಇವಿಯನ್ನು ಮಾರಾಟಕ್ಕೆ ತಂದಿತ್ತು. ಈ ಎಂಪಿವಿಗಳು ಅತ್ಯಾಧುನಿಕವಾದ ವಿನ್ಯಾಸ ಹಾಗೂ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿವೆ. ಸದ್ಯ, ಈ ಕಾರುಗಳ ಬುಕ್ಕಿಂಗ್‌ನಲ್ಲಿ ಹೊಸದೊಂದು ದಾಖಲೆ ಬರೆಯಲಾಗಿದೆ. ಬನ್ನಿ, ಆ ಬಗ್ಗೆ ಹೆಚ್ಚಿನ ವಿವರಗಳನ್ನು ತಿಳಿಯೋಣ.
ನೂತನ ಕಿಯಾ ಕ್ಯಾರೆನ್ಸ್ ಕ್ಲಾವಿಸ್ ಮತ್ತು ಕ್ಯಾರೆನ್ಸ್ ಕ್ಲಾವಿಸ್ ಇವಿ ಎಂಪಿವಿಗಳಿಗೆ ಖರೀದಿದಾರರಿಂದ ನಿರೀಕ್ಷೆಗೂ ಮೀರಿದ ಪ್ರತಿಕ್ರಿಯೆ ವ್ಯಕ್ತವಾಗಿದೆ. ಒಟ್ಟು 21,000ಕ್ಕೂ ಅಧಿಕ ಬುಕ್ಕಿಂಗ್‌ಗಳನ್ನು ಪಡೆದುಕೊಂಡಿವೆ ಎಂದು ಕಂಪನಿಯು ಘೋಷಣೆ ಮಾಡಿದೆ. ಅದರಲ್ಲಿ ಸ್ಟ್ಯಾಂಡರ್ಡ್ ಕ್ಯಾರೆನ್ಸ್ ಕ್ಲಾವಿಸ್‌ಗಾಗಿ 20,000ಕ್ಕೂ ಹೆಚ್ಚಿನ ಖರೀದಿದಾರರು ಆರ್ಡರ್ ಮಾಡಿದ್ದಾರೆ. ಕ್ಯಾರೆನ್ಸ್ ಕ್ಲಾವಿಸ್ ಇವಿಗಾಗಿ 1,000ದಷ್ಟು ಬುಕ್ಕಿಂಗ್‌ಗಳಾಗಿವೆ.

ಕಿಯಾ ಕ್ಯಾರೆನ್ಸ್ ಕ್ಲಾವಿಸ್ ಹಾಗೂ ಕ್ಯಾರೆನ್ಸ್ ಕ್ಲಾವಿಸ್ ಇವಿಗಳು ಒಂದೇ ರೀತಿಯ ವಿನ್ಯಾಸವನ್ನು ಹೊಂದಿವೆ. ತ್ರೈ-ಅಂಗುಲರ್ ಶೇಪ್ಡ್ ಎಲ್ಇಡಿ ಹೆಡ್‌ಲೈಟ್‌ಗಳು, 'ಎಲ್' ಆಕಾರಕ್ಕೆ ಹೋಲಿಕೆಯಾಗುವ ಎಲ್ಇಡಿ ಡಿಆರ್‌ಎಲ್‌ಗಳು ಹಾಗೂ ಅಲಾಯ್ ವೀಲ್‌ಗಳನ್ನು ಒಳಗೊಂಡಿವೆ. ಜೊತೆಗೆ ಹಲವು ಆಕರ್ಷಕ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತವೆ.
ಸ್ಟ್ಯಾಂಡರ್ಡ್ ಕಿಯಾ ಕ್ಯಾರೆನ್ಸ್ ಕ್ಲಾವಿಸ್ ಶಕ್ತಿಯುತವಾದ ಪವರ್‌ಟ್ರೇನ್‌ನ್ನು ಹೊಂದಿದೆ. 1.5-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್, 1.5-ಲೀಟರ್ ಟರ್ಬೊ ಪೆಟ್ರೋಲ್ ಹಾಗೂ 1.5-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಒಳಗೊಂಡಿದೆ. 6-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮೆಟಿಕ್ ಮತ್ತು 7-ಸ್ಪೀಡ್ ಡಿಸಿಟಿ (ಡುಯಲ್-ಕ್ಲಚ್ ಟ್ರಾಸ್ಮಿಷನ್) ಗೇರ್‌ಬಾಕ್ಸ್‌ನ್ನು ಪಡೆದಿದೆ. 15 ರಿಂದ 19 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ.

ಕಿಯಾ ಕ್ಯಾರೆನ್ಸ್ ಕ್ಲಾವಿಸ್ ಇವಿಯು ಬಲಿಷ್ಠವಾದ ಪವರ್‌ಟ್ರೇನ್‌ನ್ನು ಒಳಗೊಂಡಿದೆ. 42 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್ ಹೊಂದಿರುವ ಮಾಡೆಲ್, ಸಂಪೂರ್ಣ ಚಾರ್ಜ್‌ನಲ್ಲಿ 404 ಕಿಲೋಮೀಟರ್ ರೇಂಜ್ (ಮೈಲೇಜ್) ನೀಡುತ್ತದೆ. ಇದರಲ್ಲಿ ಬಳಕೆ ಮಾಡಿರುವ ಎಲೆಕ್ಟ್ರಿಕ್ ಮೋಟಾರ್, 135 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 255 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ.
ಮತ್ತೊಂದು 51.4 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್ ಒಳಗೊಂಡಿರುವ ಮಾಡೆಲ್, ಪೂರ್ತಿ ಚಾರ್ಜ್‌ನಲ್ಲಿ 490 ಕಿಲೋಮೀಟರ್ ರೇಂಜ್ (ಮೈಲೇಜ್) ಕೊಡುತ್ತದೆ. ಇದರಲ್ಲಿರುವ ಎಲೆಕ್ಟ್ರಿಕ್ ಮೋಟಾರ್, 171 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 255 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರ ಹಾಕುವ ಸಾಮರ್ಥ್ಯವನ್ನು ಹೊಂದಿದೆ.
ಸ್ಟ್ಯಾಂಡರ್ಡ್ ಕಿಯಾ ಕ್ಯಾರೆನ್ಸ್ ಕ್ಲಾವಿಸ್ ಮತ್ತು ಕ್ಯಾರೆನ್ಸ್ ಕ್ಲಾವಿಸ್ ಇವಿಗಳ ಕ್ಯಾಬಿನ್ ವಿನ್ಯಾಸವು ಅಚ್ಚುಕಟ್ಟಾಗಿದೆ. ಇವೆರೆಡು ಎಂಪಿವಿಗಳು 10.25-ಇಂಚಿರುವ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಫ್ಲಾಟ್-ಬಾಟಮ್ ಸ್ಟೀರಿಂಗ್ ವೀಲ್, ಸನ್‌ರೂಫ್, ಆಂಬಿಯೆಂಟ್ ಲೈಟಿಂಗ್, 9-ಸ್ಪೀಕರ್ ಬೋಸ್ ಸೌಂಡ್ ಸಿಸ್ಟಮ್ ಹಾಗೂ ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿವೆ.
ಈ ಕಾರುಗಳು ಸುರಕ್ಷತೆಗೂ ಹೆಸರುವಾಸಿಯಾಗಿವೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್), ಇಎಸ್‌ಸಿ (ಎಲೆಕ್ಟ್ರಿಕ್ ಸ್ಟೆಬಿಲಿಟಿ ಕಂಟ್ರೋಲ್), ಎಲೆಕ್ಟ್ರಾನಿಕ್ ಪಾರ್ಕಿಂಗ್ ಬ್ರೇಕ್ ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಹೊಂದಿವೆ.
ಸ್ಟ್ಯಾಂಡರ್ಡ್ ಕಿಯಾ ಕ್ಯಾರೆನ್ಸ್ ಕ್ಲಾವಿಸ್ ರೂ.11.50 ಲಕ್ಷದಿಂದ ರೂ.21.50 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 6 & 7 ಆಸನ ಆಯ್ಕೆ ವ್ಯವಸ್ಥೆಯಲ್ಲಿ ಲಭ್ಯವಿದೆ. ಹೆಚ್ಚಿನ ಲಗೇಜ್ ಸಾಗಿಸಲು 216 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಪಡೆದಿದೆ. ಅದೇ ರೀತಿಯಲ್ಲಿ ಕ್ಯಾರೆನ್ಸ್ ಕ್ಲಾವಿಸ್ ಇವಿಯು ರೂ.17.99 ಲಕ್ಷದಿಂದ ರೂ.24.49 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 7 ಆಸನದೊಂದಿಗೆ ಮಾತ್ರ ಸಿಗುತ್ತದೆ. 216 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ತನ್ನದಾಗಿಸಿಕೊಂಡಿದೆ.


Click it and Unblock the Notifications








