6 & 7-ಸೀಟರ್.. ಹೊಸ Kia Electric Mpv ಪರಿಚಯಿಸಲು ದಿನಾಂಕ ನಿಗದಿ, 473 ಕಿ.ಮೀ ರೇಂಜ್.. ರೂ.16 ಲಕ್ಷ?

ಇತ್ತೀಚೆಗೆ ಕಿಯಾ ಮೋಟಾರ್ಸ್ (Kia Motors), ನೂತನ ಕ್ಯಾರೆನ್ಸ್ ಕ್ಲಾವಿಸ್ (Carens Clavis) ಎಂಪಿವಿ ಬಿಡುಗಡೆ ಮಾಡುವುದರೊಂದಿಗೆ ದೊಡ್ಡ ಮಟ್ಟದಲ್ಲಿ ಸಂಚಲನ ಸೃಷ್ಟಿಸಿತ್ತು. ಸದ್ಯ, ಇದೇ ಕಾರನ್ನು ಎಲೆಕ್ಟ್ರಿಕ್ ಅವತಾರದಲ್ಲೂ ಮಾರಾಟಕ್ಕೆ ತರಲು ಕಂಪನಿಯು ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಅನಾವರಣಗೊಳಿಸಲು ದಿನಾಂಕ ಕೂಡ ನಿಗದಿಪಡಿಸಿದೆ ಎಂದು ವಿವಿಧ ಮಾಧ್ಯಮಗಳು ವರದಿ ಮಾಡಿವೆ. ಬನ್ನಿ, ಆ ಬಗ್ಗೆ ಹೆಚ್ಚಿನ ವಿವರಗಳನ್ನು ತಿಳಿಯೋಣ.

ದೇಶೀಯ ಮಾರುಕಟ್ಟೆಗೆ ಹೊಚ್ಚ ಹೊಸ 'ಕಿಯಾ ಕ್ಯಾರೆನ್ಸ್ ಕ್ಲಾವಿಸ್ ಇವಿ'ಯನ್ನು ಜುಲೈ 15 ರಂದು ಪರಿಚಯಿಸಲಾಗುತ್ತದೆ ಎಂದು ಹೇಳಲಾಗಿದೆ. ಇದು ಇಂಧನ ಚಾಲಿತ ಕ್ಯಾರೆನ್ಸ್ ಕ್ಲಾವಿಸ್ ಎಂಪಿವಿಯಂತೆಯೇ ವಿನ್ಯಾಸ, ವೈಶಿಷ್ಟ್ಯಗಳು ಹಾಗೂ ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿರಲಿದೆ. ಆದರೂ ಹಲವು ಹೊಸತನಗಳಿಗೆ ಸಾಕ್ಷಿಯಾಗಿರುವ ನಿರೀಕ್ಷೆಯಿದೆ.

Kia Carens Clavis Electric Mpv Debut On July 15 Expected Price Battery Pack And Range Details

ಭಾರತದಲ್ಲಿ ಎಲೆಕ್ಟ್ರಿಕ್ ಕಾರುಗಳ ಬ್ಯಾಟರಿ ಉತ್ಪಾದನೆಗೆ ಸಂಬಂಧಿಸಿದಂತೆ ಕಿಯಾ ಹಾಗೂ ಹ್ಯುಂಡೈ ಕಂಪನಿಗಳು ಒಪ್ಪಂದ ಮಾಡಿಕೊಂಡಿವೆ. ಹೀಗಾಗಿ, ಹ್ಯುಂಡೈ ಕ್ರೆಟಾ ಎಲೆಕ್ಟ್ರಿಕ್ ಕಾರಿನಂತೆ ಕಿಯಾ ಕ್ಯಾರೆನ್ಸ್ ಕ್ಲಾವಿಸ್ ಇವಿ ಸಹ ಶಕ್ತಿಯುತವಾದ ಬ್ಯಾಟರಿ ಪ್ಯಾಕ್‌ನ್ನು ಹೊಂದಿರಲಿದೆ ಎಂದು ಅಂದಾಜಿಸಲಾಗಿದೆ.

ಪ್ರಸ್ತುತ ದೇಶೀಯವಾಗಿ ಗ್ರಾಹಕರ ಖರೀದಿಗೆ ಲಭ್ಯವಿರುವ ಹ್ಯುಂಡೈ ಕ್ರೆಟಾ ಎಲೆಕ್ಟ್ರಿಕ್, 42 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಹಾಗೂ 51.4 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯವಿರುವ ಎರಡು ಬ್ಯಾಟರಿ ಪ್ಯಾಕ್‌ನ್ನು ಪಡೆದಿದೆ. ಭರ್ತಿ ಚಾರ್ಜ್‌ನಲ್ಲಿ 390 ರಿಂದ 473 ಕಿಲೋಮೀಟರ್ ಓಡುತ್ತದೆ. ಇದರ ಬ್ಯಾಟರಿಯು ಎಸಿ ಹೋಮ್ ಚಾರ್ಜರ್‌ ಬಳಕೆಯಲ್ಲಿ ಸರಿ ಸುಮಾರು 4 ಗಂಟೆಯಲ್ಲಿ 10 ರಿಂದ 100% ಚಾರ್ಜ್ ಆಗಿ ಬಿಡುತ್ತದೆ.

ಕಿಯಾ ಕಂಪನಿಯು ನೂತನ ಕ್ಯಾರೆನ್ಸ್ ಕ್ಲಾವಿಸ್ ಇವಿಯನ್ನು ಸ್ಥಳೀಯವಾಗಿ ತಯಾರಿಸಲಿದೆ. ಇದು ಅತಿ ಕಡಿಮೆ ಬೆಲೆಯಲ್ಲಿ ಸಿಗಲಿದ್ದು, ರೂ.16 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದುಕೊಂಡಿರಬಹುದು ಎನ್ನಲಾಗಿದೆ. ಈ ಕಾರಿಗೆ ಬಿವೈಡಿ ಇಮ್ಯಾಕ್ಸ್ 7 (BYD eMax 7) ಪ್ರಬಲವಾದ ಎದುರಾಳಿಯಾಗಲಿದೆ.

ಇಂಧನ ಚಾಲಿತ ಕಿಯಾ ಕ್ಯಾರೆನ್ಸ್ ಕ್ಲಾವಿಸ್ ವಿಶೇಷತೆಗಳೇನು:

ಇದೊಂದು ಜನಪ್ರಿಯ ಎಂಪಿವಿಯಾಗಿದ್ದು, ರೂ.11.50 ಲಕ್ಷದಿಂದ ರೂ.21.50 ಲಕ್ಷ (ಎಕ್ಸ್-ಶೋರೂಂ) ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ. ಹೊರಭಾಗದಲ್ಲೂ ಹೆಚ್ಚು ಆಕರ್ಷಕವಾದ ವಿನ್ಯಾಸವನ್ನು ಹೊಂದಿದೆ. ಪ್ಯೂಟರ್ ಆಲಿವ್, ಇಂಪೀರಿಯಲ್ ಬ್ಲೂ, ಗ್ಲೇಸಿಯರ್ ವೈಟ್ ಪರ್ಲ್, ಗ್ರಾವಿಟಿ ಗ್ರೇ ಮತ್ತು ಸ್ಪಾರ್ಕ್ಲಿಂಗ್ ಸಿಲ್ವರ್ ಸೇರಿದಂತೆ ವಿವಿಧ ಬಣ್ಣಗಳೊಂದಿಗೂ ಲಭ್ಯವಿದೆ.

ಈ ಕಾರು 1.5-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್, 1.5-ಲೀ. ಟರ್ಬೊ ಪೆಟ್ರೋಲ್ ಹಾಗೂ 1.5-ಲೀ. ಡೀಸೆಲ್ ಎಂಜಿನ್‌ ಆಯ್ಕೆಯನ್ನು ಪಡೆದಿದೆ. 15.34 ರಿಂದ 19.54 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. 6/ 7 ಆಸನಗಳನ್ನು ಒಳಗೊಂಡಿದ್ದು, ಪ್ರಯಾಣಿಕರು ಸುಲಭವಾಗಿ ದೂರದ ಊರುಗಳಿಗೆ ಓಡಾಟ ನಡೆಸಬಹುದು. ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು ಸಾಧ್ಯವಾಗುವಂತೆ 216 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಪಡೆದಿದೆ.

ಇದು 10.25-ಇಂಚಿರುವ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್‌, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಫ್ಲಾಟ್ ಬಾಟಮ್ ಸ್ಟೀರಿಂಗ್ ವೀಲ್‌, ಪನೋರಮಿಕ್ - ಸನ್‌ರೂಫ್, 9-ಸ್ಪೀಕರ್ ಬೋಸ್ ಸೌಂಡ್ ಸಿಸ್ಟಮ್ ಹಾಗೂ ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು ಒಳಗೊಂಡಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಯಾಣಿಕರ ಸುರಕ್ಷತೆಯ ದೃಷ್ಟಿಯಿಂದ 6-ಏರ್‌ಬ್ಯಾಗ್‌ಗಳು, ಲೆವೆಲ್ 2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್), ಇಎಸ್‌ಸಿ (ಎಲೆಕ್ಟ್ರಿಕ್ ಸ್ಟೆಬಿಲಿಟಿ ಕಂಟ್ರೋಲ್), ಆಲ್-ವೀಲ್ ಡಿಸ್ಕ್ ಬ್ರೇಕ್‌ಗಳು ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.

More from DriveSpark

Article Published On: Friday, June 27, 2025, 11:03 [IST]
English summary
Kia carens clavis electric mpv debut on july 15 expected price battery pack and range details
Read more on kia motors india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+