ನಾಳೆಯಿಂದ ಮೇಡ್-ಇನ್-ಇಂಡಿಯಾ ಕಿಯಾ ಕ್ಯಾರೆನ್ಸ್ ಕ್ಲಾವಿಸ್ ಇವಿಗಾಗಿ ಬುಕ್ಕಿಂಗ್ ಶುರು, 7-ಸೀಟರ್.. ಬೆಲೆ ಇಷ್ಟೇನಾ?

ಇತ್ತೀಚೆಗೆ ಹೊಚ್ಚ ಹೊಸ ಕಿಯಾ ಕ್ಯಾರೆನ್ಸ್ ಕ್ಲಾವಿಸ್ ಇವಿಯನ್ನು ಅದ್ದೂರಿಯಾಗಿ ಮಾರಾಟಕ್ಕೆ ತರಲಾಗಿತ್ತು. ಇದೊಂದು ಸ್ವದೇಶಿ ನಿರ್ಮಿತ ಎಲೆಕ್ಟ್ರಿಕ್ ಎಂಪಿವಿಯಾಗಿದ್ದು, ಆಂಧ್ರ ಪ್ರದೇಶದಲ್ಲಿರುವ ಕಂಪನಿಯ ಬೃಹತ್ ಉತ್ಪಾದನಾ ಘಟಕದಲ್ಲಿ ತಯಾರಿಸಲಾಗುತ್ತಿದೆ. ಈ ಕಾರು ಅತ್ಯಾಧುನಿಕವಾದ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಕೂಡ ಪಡೆದುಕೊಂಡಿದ್ದು, ಕೈಗೆಟುಕುವ ಬೆಲೆಯಲ್ಲಿಯೂ ಖರೀದಿಗೆ ಲಭ್ಯವಿದೆ. ಹೆಚ್ಚಿನ ಆಸನಗಳನ್ನು ಹೊಂದಿರುವುದರಿಂದ 2 ಕುಟುಂಬಗಳು ಸುಲಭವಾಗಿ ಪ್ರಯಾಣ ಮಾಡಬಹುದಾಗಿದೆ.

ನಾಳೆಯಿಂದ (ಜುಲೈ 22) ಇದೇ ಕಿಯಾ ಕ್ಯಾರೆನ್ಸ್ ಕ್ಲಾವಿಸ್ ಇವಿಗಾಗಿ ಬುಕ್ಕಿಂಗ್‌ನ್ನು ತೆರೆಯಲಾಗುವುದು ಎಂದು ಕಂಪನಿಯು ಘೋಷಣೆ ಮಾಡಿದೆ. ಈ ಬಗ್ಗೆ ಪತ್ರಿಕಾ ಹೇಳಿಕೆಯನ್ನು ಬಿಡುಗಡೆಗೊಳಿಸಿದೆ. ಆಸಕ್ತ ಗ್ರಾಹಕರು ಸಮೀಪದ ಡೀಲರ್‌ಶಿಪ್‌ ಅಥವಾ ಕಂಪನಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ರೂ.25,000 ಮುಂಗಡ ಹಣ ಪಾವತಿಸುವುದರೊಂದಿಗೆ ಆರ್ಡರ್ ಮಾಡಬಹುದು. ಕೆಲವೇ ದಿನಗಳಲ್ಲಿ ವಿತರಣೆಯು ಆರಂಭವಾಗಲಿದೆ.

Kia Carens Clavis EV Booking Open Tomorrow Details

ಕಿಯಾ ಕ್ಯಾರೆನ್ಸ್ ಕ್ಲಾವಿಸ್ ಇವಿ (Kia Carens Clavis EV) ವಿಶೇಷತೆಗಳೇನು:

ಇದು ಅತಿ ಕಡಿಮೆ ಬೆಲೆಯಲ್ಲಿಯೂ ಗ್ರಾಹಕರ ಖರೀದಿಗೆ ಲಭ್ಯವಿದೆ. ರೂ.17.99 ಲಕ್ಷದಿಂದ ರೂ. 24.49 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಹೆಚ್‌ಟಿಕೆ ಪ್ಲಸ್, ಹೆಚ್‌ಟಿಎಕ್ಸ್ ಮತ್ತು ಹೆಚ್‌ಟಿಎಕ್ಸ್ ಪ್ಲಸ್ ಎಂಬ 3 ಆಕರ್ಷಕ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ.

ಈ ಎಲೆಕ್ಟ್ರಿಕ್ ಕಾರು ಅಚ್ಚುಕಟ್ಟಾದ ವಿನ್ಯಾಸವನ್ನು ಒಳಗೊಂಡಿದೆ. ತ್ರೈ-ಅಂಗುಲರ್ ಶೇಪ್ಡ್ ಎಲ್ಇಡಿ ಹೆಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಫಾಗ್ ಲ್ಯಾಂಪ್‌ಗಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು & ಅಲಾಯ್ ವೀಲ್‌ಗಳನ್ನು ಪಡೆದಿದೆ. ಗ್ರಾವಿಟಿ ಗ್ರೇ, ಅರೋರಾ ಬ್ಲ್ಯಾಕ್ ಪರ್ಲ್, ಪ್ಯೂಟರ್ ಆಲಿವ್ ಮತ್ತು ಇಂಪೀರಿಯಲ್ ಬ್ಲೂ ಒಳಗೊಂಡಂತೆ ಹಲವು ಬಣ್ಣಗಳೊಂದಿಗೂ ಸಿಗುತ್ತದೆ. 4550 ಎಂಎಂ ಉದ್ದ, 1800 ಎಂಎಂ ಅಗಲ, 1730 ಎಂಎಂ ಎತ್ತರ ಹಾಗೂ 2780 ವೀಲ್‌ಬೇಸ್‌ನ್ನು ಪಡೆದಿದೆ.

Kia Carens Clavis EV Booking Open Tomorrow Details

ನೂತನ ಕಿಯಾ ಕ್ಯಾರೆನ್ಸ್ ಕ್ಲಾವಿಸ್ ಇವಿ ಶಕ್ತಿಯುತವಾದ ಪವರ್‌ಟ್ರೇನ್‌ನ್ನು ಒಳಗೊಂಡಿದೆ. 42 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಮತ್ತು 51.4 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಪಡೆದಿದೆ. ಸಂಪೂರ್ಣ ಚಾರ್ಜ್‌ನಲ್ಲಿ 404 ರಿಂದ 490 ಕಿಲೋಮೀಟರ್ ರೇಂಜ್ (ಮೈಲೇಜ್) ನೀಡುತ್ತದೆ.

ಇದರಲ್ಲಿ 7 ಆಸನ ಆಯ್ಕೆ ವ್ಯವಸ್ಥೆಯಿದೆ. ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು. ದೂರದ ಊರುಗಳಿಗೆ ಪ್ರವಾಸಕ್ಕೆ ಹೋಗುವಾಗ ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು ಸಾಧ್ಯವಾಗುವಂತೆ 216 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಪಡೆದಿದೆ. ಇದರಲ್ಲಿರುವ ಬ್ಯಾಟರಿ ಪ್ಯಾಕ್ 100 ಕೆಡಬ್ಲ್ಯೂ ಡಿಸಿ ಫಾಸ್ಟ್ ಚಾರ್ಜರ್ ಬಳಕೆಯಲ್ಲಿ ಶೇಕಡ 10 ರಿಂದ 80% ಚಾರ್ಜ್ ಆಗಲು 39 ನಿಮಿಷಗಳನ್ನು ತೆಗದುಕೊಳ್ಳುತ್ತದೆ.

ಈ ಕಾರಿನ ಕ್ಯಾಬಿನ್ ವಿನ್ಯಾಸವು ತುಂಬಾ ಚೆನ್ನಾಗಿದೆ. 12.3-ಇಂಚಿರುವ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 12.3-ಇಂಚಿರುವ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಪನೋರಮಿಕ್ ಸನ್‌ರೂಫ್, 8-ಸ್ಪೀಕರ್ ಬೋಸ್ ಸೌಂಡ್ ಸಿಸ್ಟಮ್, ವೈರ್‌ಲೆಸ್ ಫೋನ್ ಚಾರ್ಜರ್ ಮತ್ತು ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳಂತಹ ವೈಶಿಷ್ಟ್ಯಗಳನ್ನು ಪಡೆದಿದೆ.

ಹೊಸ ಕಿಯಾ ಕ್ಯಾರೆನ್ಸ್ ಕ್ಲಾವಿಸ್ ಎಲೆಕ್ಟ್ರಿಕ್ ಎಂಪಿವಿ ಸುರಕ್ಷತೆಗೂ ಹೆಸರುವಾಸಿಯಾಗಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್), ಇಎಸ್‌ಸಿ (ಎಲೆಕ್ಟ್ರಿಕ್ ಸ್ಟೆಬಿಲಿಟಿ ಕಂಟ್ರೋಲ್) ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ತನ್ನದಾಗಿಸಿಕೊಂಡಿದೆ.

More from DriveSpark

Article Published On: Monday, July 21, 2025, 17:16 [IST]
English summary
Kia carens clavis ev booking open tomorrow details
Read more on kia motors india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+