7-ಸೀಟರ್.. ಹೊಸ ಫ್ಯಾಮಿಲಿ ಕಾರಿದು, ಅಗ್ಗದ ಕಿಯಾ ಕ್ಯಾರೆನ್ಸ್ ಕ್ಲಾವಿಸ್ ಇವಿ ಬಿಡುಗಡೆ.. ಲಕ್ಷುರಿ ಫೀಚರ್ಸ್!
ಬಹುನಿರೀಕ್ಷಿತ ಕಿಯಾ ಕ್ಯಾರೆನ್ಸ್ ಕ್ಲಾವಿಸ್ ಇವಿ (Kia Carens Clavis EV) ಮಂಗಳವಾರ ಅದ್ದೂರಿಯಾಗಿ ಬಿಡುಗಡೆಗೊಂಡಿದೆ. ಇದೊಂದು ಎಲೆಕ್ಟ್ರಿಕ್ ಎಂಪಿವಿಯಾಗಿದ್ದು, ಹಲವು ಹೊಸತನಗಳಿಗೆ ಸಾಕ್ಷಿಯಾಗಿದ್ದು, ಆಕರ್ಷಕವಾದ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಅದಕ್ಕೆ ತಕ್ಕಂತೆ ಕೈಗೆಟುಕುವ ಬೆಲೆಯಲ್ಲಿಯೂ ಲಭ್ಯವಿದ್ದು, ಒಂದು ಪರಿಪೂರ್ಣ ಫ್ಯಾಮಿಲಿ ಕಾರಾಗಿ ಹೊರಹೊಮ್ಮಿದೆ. ಬನ್ನಿ, ನೂತನ ಎಂಪಿವಿ ಬೆಲೆ ಎಷ್ಟು.. ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಪೂರ್ಣವಾದ ವಿವರಗಳನ್ನು ತಿಳಿಯೋಣ.
ನೂತನ ಕಿಯಾ ಕ್ಯಾರೆನ್ಸ್ ಕ್ಲಾವಿಸ್ ಇವಿ ದೊಡ್ಡ ಗಾತ್ರದ ಕಾರಾಗಿದ್ದರೂ ಅತ್ಯಂತ ಕಡಿಮೆ ಬೆಲೆಯಲ್ಲಿ ಮಾರಾಟಕ್ಕೆ ಬಂದಿದೆ. ಇದು ರೂ.17.99 ಲಕ್ಷದಿಂದ ರೂ. 24.49 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ಹೆಚ್‌ಟಿಕೆ ಪ್ಲಸ್, ಹೆಚ್‌ಟಿಎಕ್ಸ್ ಹಾಗೂ ಹೆಚ್‌ಟಿಎಕ್ಸ್ ಪ್ಲಸ್ ಎಂಬ 3 ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ.

ಈ ಕಾರು ಹೊರಭಾಗದಲ್ಲಿ ಆಕರ್ಷಕವಾದ ವಿನ್ಯಾಸವನ್ನು ಹೊಂದಿದ್ದು, ಬಹುತೇಕ ಇಂಧನ ಚಾಲಿತ (ಪೆಟ್ರೋಲ್/ಡೀಸೆಲ್) ಕ್ಲಾವಿಸ್‌ಗೆ ಹೋಲಿಕೆಯಾಗಿದೆ. ತ್ರೈ-ಅಂಗುಲರ್ ಶೇಪ್ಡ್ ಎಲ್ಇಡಿ ಹೆಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಫಾಗ್ ಲ್ಯಾಂಪ್‌ಗಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು ಹಾಗೂ ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ. ಗ್ಲೇಸಿಯರ್ ವೈಟ್ ಪರ್ಲ್, ಗ್ರಾವಿಟಿ ಗ್ರೇ, ಅರೋರಾ ಬ್ಲ್ಯಾಕ್ ಪರ್ಲ್, ಪ್ಯೂಟರ್ ಆಲಿವ್, ಇಂಪೀರಿಯಲ್ ಬ್ಲೂ ಹಾಗೂ ಐವರಿ ಸಿಲ್ವರ್ ಮ್ಯಾಟ್ ಎಂಬ 6 ಬಣ್ಣಗಳೊಂದಿಗೂ ದೊರೆಯುತ್ತದೆ.
ಹೊಸ ಕಿಯಾ ಕ್ಯಾರೆನ್ಸ್ ಕ್ಲಾವಿಸ್ ಇವಿ ಹೆಚ್ಚು ಶಕ್ತಿಯುತವಾದ ಪವರ್‌ಟ್ರೇನ್ ಆಯ್ಕೆಯನ್ನು ಒಳಗೊಂಡಿದೆ. ಇದರಲ್ಲಿ 42 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಹಾಗೂ 51.4 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ ಎರಡು ಬ್ಯಾಟರಿ ಪ್ಯಾಕ್‌ನ್ನು ಬಳಕೆ ಮಾಡಲಾಗಿದೆ. ಸಂಪೂರ್ಣ ಚಾರ್ಜ್‌ನಲ್ಲಿ 404 ರಿಂದ 490 ಕಿಲೋಮೀಟರ್ ರೇಂಜ್ (ಮೈಲೇಜ್) ನೀಡುತ್ತದೆ.
ನೂತನ ಕ್ಯಾರೆನ್ಸ್ ಕ್ಲಾವಿಸ್ ಎಲೆಕ್ಟ್ರಿಕ್ ಎಂಪಿವಿಯ ಬ್ಯಾಟರಿ ಪ್ಯಾಕ್, 100 ಕೆಡಬ್ಲ್ಯೂ ಫಾಸ್ಟ್ ಚಾರ್ಜರ್ ಬಳಕೆಯಲ್ಲಿ 10 ರಿಂದ 80% ಚಾರ್ಜ್ ಆಗುವುದಕ್ಕೆ ಕೇವಲ 39 ನಿಮಿಷಗಳನ್ನು ತೆಗೆದುಕೊಳ್ಳುತ್ತದೆ. ಈ ಕಾರು 7 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದ್ದು, ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು.
ಹೊಸ ಕಿಯಾ ಕ್ಯಾರೆನ್ಸ್ ಕ್ಲಾವಿಸ್ ಇವಿ ಅಚ್ಚುಕಟ್ಟಾದ ಕ್ಯಾಬಿನ್ ವಿನ್ಯಾಸವನ್ನು ಹೊಂದಿದೆ. ಜೊತೆಗೆ 12.3-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 12.3-ಇಂಚಿನ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಪನೋರಮಿಕ್ ಸನ್‌ರೂಫ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಆಂಬಿಯೆಂಟ್ ಲೈಟಿಂಗ್, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು, 8-ಸ್ಪೀಕರ್ ಬೋಸ್ ಸೌಂಡ್ ಸಿಸ್ಟಮ್ ಹಾಗೂ ವೈರ್‌ಲೆಸ್ ಫೋನ್ ಚಾರ್ಜರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.
ಈ ಎಲೆಕ್ಟ್ರಿಕ್ ಕಾರು ಸುರಕ್ಷತೆಗೂ ಹೆಸರುವಾಸಿಯಾಗಿದ್ದು, ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆ ಒದಗಿಸುತ್ತದೆ. ಅದಕ್ಕಾಗಿ 6-ಏರ್‌ಬ್ಯಾಗ್‌ಗಳು, ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್), ಇಎಸ್‌ಸಿ (ಎಲೆಕ್ಟ್ರಿಕ್ ಸ್ಟೆಬಿಲಿಟಿ ಕಂಟ್ರೋಲ್), ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಎಲೆಕ್ಟ್ರಾನಿಕ್ ಪಾರ್ಕಿಂಗ್ ಬ್ರೇಕ್ ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.
ಇಂಧನ ಚಾಲಿತ ಕಿಯಾ ಕ್ಯಾರೆನ್ಸ್ ಕ್ಲಾವಿಸ್ ವಿಶೇಷತೆಗಳೇನು:
ಈ ಎಲೆಕ್ಟ್ರಿಕ್ ಎಂಪಿವಿ ರೂ.11.50 ಲಕ್ಷದಿಂದ ರೂ.21.50 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 1.5-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್, 1.5-ಲೀಟರ್ ಟರ್ಬೊ ಪೆಟ್ರೋಲ್ ಹಾಗೂ 1.5-ಲೀಟರ್ ಡೀಸೆಲ್ ಎಂಜಿನ್‌ನ್ನು ಒಳಗೊಂಡಿದೆ. 6 ಹಾಗೂ 7 ಆಸನಗಳೊಂದಿಗೆ ದೊರೆಯುತ್ತದೆ. 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಒಳಗೊಡಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ.


Click it and Unblock the Notifications








