7-ಸೀಟರ್.. ಲಕ್ಷುರಿ ಫೀಚರ್ಸ್‌ನ ಹೊಸ 'KIa Car' ಇದೇ 23ರಂದು ಬಿಡುಗಡೆ.. 11 ಲಕ್ಷ ಬೆಲೆ?
ದಕ್ಷಿಣ ಕೊರಿಯಾ ಮೂಲದ ಕಿಯಾ ಮೋಟಾರ್ಸ್ (Kia Motors) ಪ್ರಮುಖ ವಾಹನ ತಯಾರಕ ಕಂಪನಿಯಾಗಿದೆ. ಇತ್ತೀಚೆಗೆ ದೇಶೀಯ ಮಾರುಕಟ್ಟೆಯಲ್ಲಿ ಹೊಚ್ಚ ಹೊಸ ಕ್ಯಾರೆನ್ಸ್ ಕ್ಲಾವಿಸ್ (Carens Clavis) ಎಂಪಿವಿಯನ್ನು ಅನಾವರಣಗೊಳಿಸಿತ್ತು. ಈ ಕಾರು ಹೊರಭಾಗದಲ್ಲಿ ಹೆಚ್ಚು ಆಕರ್ಷಕ ವಿನ್ಯಾಸವನ್ನು ಹೊಂದಿದ್ದು, ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಕೈಗೆಟುಕುವ ಬೆಲೆಯಲ್ಲಿಯೂ ಖರೀದಿಗೆ ದೊರೆಯುವ ನಿರೀಕ್ಷೆಯಿದ್ದು, ಇನ್ನೂ ಕೆಲವೇ ದಿನಗಳಲ್ಲಿ ಬಿಡುಗಡೆ ಕೂಡ ಆಗಲಿದೆ. ಬನ್ನಿ, ಆ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಿಳಿಯೋಣ.
ನೂತನ ಕಿಯಾ ಕ್ಯಾರೆನ್ಸ್ ಕ್ಲಾವಿಸ್ (Kia Carens Clavis) ಎಂಪಿವಿ, ಇದೇ 23ರಂದು ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ಈಗಾಗಲೇ ಬುಕ್ಕಿಂಗ್ ಶುರುವಾಗಿದ್ದು, ಆಸಕ್ತ ಗ್ರಾಹಕರು ರೂ.25,000 ಮುಂಗಡ ಹಣವನ್ನು ಪಾವತಿಸುವ ಮೂಲಕ ಆರ್ಡರ್ ಮಾಡಬಹುದು. ಈ ಕ್ಯಾರೆನ್ಸ್ ಕ್ಲಾವಿಸ್ ರೂ.11 ಲಕ್ಷದಿಂದ ರೂ.19 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಪಡೆದುಕೊಂಡಿರುವ ನಿರೀಕ್ಷೆಯಿದೆ.

ಹೊಸ ಕಿಯಾ ಕ್ಯಾರೆನ್ಸ್ ಕ್ಲಾವಿಸ್ ಎಂವಿಪಿಯು ಹೆಚ್‌ಟಿಇ, ಹೆಚ್‌ಟಿಇ (ಒ), ಹೆಚ್‌ಟಿಕೆ, ಹೆಚ್‌ಟಿಕೆ ಪ್ಲಸ್, ಹೆಚ್‌ಟಿಕೆ ಪ್ಲಸ್ (ಒ), ಹೆಚ್‌ಟಿಎಕ್ಸ್ ಹಾಗೂ ಹೆಚ್‌ಟಿಎಕ್ಸ್ ಪ್ಲಸ್ ಎಂಬ 7 ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗಲಿದೆ. ಇದು 6/ 7 ಆಸನಗಳನ್ನು ಹೊಂದಿದ್ದು, ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು.
ಈ ಕಾರು ಹೊರಭಾಗದಲ್ಲಿ ಹೆಚ್ಚು ಆಕರ್ಷಕವಾದ ವಿನ್ಯಾಸವನ್ನು ಪಡೆದಿದೆ. ಬಹುಮುಖ್ಯವಾಗಿ ತ್ರೈ-ಅಂಗುಲರ್ ಶೇಪ್ಡ್ ಎಲ್ಇಡಿ ಹೆಡ್‌ಲೈಟ್‌ಗಳು ಮತ್ತು 'ಎಲ್' ಆಕಾರಕ್ಕೆ ಹೋಲಿಕೆಯಾಗುವ ಎಲ್ಇಡಿ ಡಿಆರ್‌ಎಲ್‌ಗಳನ್ನು ಹೊಂದಿದೆ. ಐವರಿ ಸಿಲ್ವರ್ ಗ್ಲೋಸ್, ಪ್ಯೂಟರ್ ಆಲಿವ್, ಇಂಪೀರಿಯಲ್ ಬ್ಲೂ, ಗ್ಲೇಸಿಯರ್ ವೈಟ್ ಪರ್ಲ್, ಗ್ರಾವಿಟಿ ಗ್ರೇ, ಸ್ಪಾರ್ಕ್ಲಿಂಗ್ ಸಿಲ್ವರ್, ಅರೋರಾ ಬ್ಲ್ಯಾಕ್ ಪರ್ಲ್ ಹಾಗೂ ಕ್ಲಿಯರ್ ವೈಟ್ ಎಂಬ ಬಣ್ಣಗಳೊಂದಿಗೂ ಲಭ್ಯವಾಗಲಿದೆ.

ನೂತನ ಕಿಯಾ ಕ್ಯಾರೆನ್ಸ್ ಕ್ಲಾವಿಸ್ ಎಂವಿಪಿ 3 ಶಕ್ತಿಯುತವಾದ ಪವರ್‌ಟ್ರೇನ್ ಆಯ್ಕೆಯನ್ನು ಪಡೆದಿದೆ. ಇದರ 1.5-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್, 115 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 144 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ.
ಮತ್ತೊಂದು 1.5-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್, 160 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 253 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 6-ಸ್ಪೀಡ್ ಮ್ಯಾನುವಲ್ ಮತ್ತು 7-ಸ್ಪೀಡ್ ಡಿಸಿಟಿ (ಡುಯಲ್ ಕ್ಲಚ್ ಟ್ರಾಸ್ಮಿಷನ್) ಗೇರ್‌ಬಾಕ್ಸ್ ಆಯ್ಕೆಯನ್ನು ಪಡೆದಿದೆ.

ಇನ್ನೊಂದು 1.5-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಹೊಂದಿದೆ. 116 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 250 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದಿದೆ. ಈ ಕಾರು 16 ರಿಂದ 21 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುವ ನಿರೀಕ್ಷೆಯಿದೆ.
ಹೊಸ ಕಿಯಾ ಕ್ಯಾರೆನ್ಸ್ ಕ್ಲಾವಿಸ್ ಎಂವಿಪಿ ಹತ್ತಾರು ಆಕರ್ಷಕ ವೈಶಿಷ್ಟ್ಯಗಳನ್ನು ಪಡೆದಿದೆ. 12.3-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 12.3-ಇಂಚಿನ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಪನೋರಮಿಕ್ ಸನ್‌ರೂಫ್, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು, 64-ಕಲರ್ ಆಂಬಿಯೆಂಟ್ ಲೈಟಿಂಗ್ ಹಾಗೂ 9-ಸ್ಪೀಕರ್ ಬೋಸ್ ಸೌಂಡ್ ಸಿಸ್ಟಮ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.
ಈ ಕಾರು ಸುರಕ್ಷತೆಗೂ ಹೆಸರುವಾಸಿಯಾಗಿದೆ. ಪ್ರಯಾಣಿಕರ ರಕ್ಷಣೆಗಾಗಿ 6 ಏರ್‌ಬ್ಯಾಗ್‌ಗಳು, ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್), ಎಲೆಕ್ಟ್ರಾನಿಕ್ ಪಾರ್ಕಿಂಗ್ ಬ್ರೇಕ್, ಮುಂಭಾಗ (ಫ್ರಂಟ್) - ಹಿಂಭಾಗ (ರೇರ್) ಪಾರ್ಕಿಂಗ್ ಸೆನ್ಸರ್ಸ್, ಆಲ್ ವೀಲ್ ಡಿಸ್ಕ್ ಬ್ರೇಕ್‌ಗಳು ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








